Home namma chikmagalur chikamagalur ವ್ಯಸನಮುಕ್ತ ಸಮಾಜ ನಿರ್ಮಾಣದಿಂದ ಮಾತ್ರ ಸುಂದರ ಭವಿಷ್ಯ ಸಾಧ್ಯ
chikamagalurHomeLatest Newsnamma chikmagalur

ವ್ಯಸನಮುಕ್ತ ಸಮಾಜ ನಿರ್ಮಾಣದಿಂದ ಮಾತ್ರ ಸುಂದರ ಭವಿಷ್ಯ ಸಾಧ್ಯ

Share
Share

ಚಿಕ್ಕಮಗಳೂರು: ಸಮಾಜದಲ್ಲಿ ಶಾಂತಿ, ಸ್ವಾಸ್ಥ್ಯ ಮತ್ತು ಉತ್ತಮ ವಾತಾವರಣ ನಿರ್ಮಾಣವಾಗಬೇಕಾದರೆ ಪ್ರತಿಯೊಬ್ಬರೂ ವ್ಯಸನಗಳಿಂದ ದೂರವಿರಬೇಕು. ವ್ಯಸನಮುಕ್ತ ಸಮಾಜ ನಿರ್ಮಾಣದಿಂದ ಮಾತ್ರ ಸುಂದರ ಭವಿಷ್ಯ ಸಾಧ್ಯ ಎಂದು ರಾಜ್ಯ ಪರಿಸರ ಮೌಲ್ಯಮಾಪನ ಪ್ರಾಧಿಕಾರದ ಅಧ್ಯಕ್ಷ ಎ.ಎನ್. ಮಹೇಶ್ ಹೇಳಿದರು.

ನಗರದ ಡಿಎಸಿಜಿ ಸರ್ಕಾರಿ ಪಾಲಿಟೆಕ್ನಿಕ್ ಸಭಾಂಗಣದಲ್ಲಿ ಮಹಾಂತ ಶಿವಯೋಗಿಗಳ ಜನ್ಮದಿನ ಅಂಗವಾಗಿ ಶನಿವಾರ ಆಯೋಜಿಸಿದ್ದ ವ್ಯಸನಮುಕ್ತ ದಿನಾಚರಣೆ ಹಾಗೂ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿ ೧೯೭೫ರಲ್ಲಿ ಇಳಕಲ್ ಮಠದ ಶ್ರೀಗಳು ‘ಜೋಳಿಗೆ ಚಳವಳಿ’ ಮೂಲಕ ಸಮಾಜದಲ್ಲಿ ವ್ಯಸನಮುಕ್ತಿಯ ಜಾಗೃತಿ ಮೂಡಿಸಿದ ಕಾರ್ಯವನ್ನು ಸ್ಮರಿಸಿದರು. ಧಾನ್ಯ ಅಥವಾ ಹಣ ಕೇಳದೆ, ಜನರ ದುರ್ವ್ಯಸನಗಳನ್ನು ತ್ಯಜಿಸುವಂತೆ ಕರೆ ನೀಡಿದ ಶ್ರೀಗಳ ಸಮಾಜಮುಖಿ ಕಾರ್ಯ ಕ್ರಾಂತಿಕಾರಿಯಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಎಚ್.ಡಿ. ತಮ್ಮಯ್ಯ ಮಾತನಾಡಿ, ದೇಶದ ಶಕ್ತಿಯಾಗಿರುವ ಯುವಜನರು ವ್ಯಸನಗಳಿಗೆ ಬಲಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ವ್ಯಸನ ಎಂದರೆ ಕೇವಲ ಮದ್ಯ ಅಥವಾ ಮಾದಕ ವಸ್ತುಗಳಷ್ಟೇ ಅಲ್ಲ, ಮೊಬೈಲ್ ಫೋನ್ ಮತ್ತು ಸಾಮಾಜಿಕ ಜಾಲತಾಣವೂ ಗಂಭೀರ ಸಮಸ್ಯೆಯಾಗಿದೆ ಎಂದು ಹೇಳಿದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ. ಶಿವಾನಂದಸ್ವಾಮಿ ಮಾತನಾಡಿ, ಯುವಜನರು ದುಶ್ಚಟಗಳಿಗೆ ಬಲಿಯಾಗದೆ ಸಮಾಜ ಸೇವೆಯಂತಹ ಸಕಾರಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ನಿವೃತ್ತ ಉಪನ್ಯಾಸಕ ಬಿ. ತಿಪ್ಪೇರುದ್ರಪ್ಪ ಮಾತನಾಡಿ, ಬಸವಾದಿ ಶರಣರು ಸಮಾಜದಲ್ಲಿ ವೈಚಾರಿಕ ಮತ್ತು ಸಾಮಾಜಿಕ ಕ್ರಾಂತಿ ಮೂಡಿಸಿದಂತೆ, ಡಾ. ಮಹಾಂತ ಶಿವಯೋಗಿಗಳೂ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟಿದ್ದರು. ಅವರ ಜನ್ಮದಿನವನ್ನು ‘ವ್ಯಸನಮುಕ್ತ ದಿನ’ವಾಗಿ ಆಚರಿಸುವುದು ಅರ್ಥಪೂರ್ಣವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಜೆ.ಮಂಜೇಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಹೆಚ್.ಕೆ.ಮಂಜುನಾಥ್, ಡಿ.ಎ.ಸಿ.ಜಿ.ಸರ್ಕಾರಿ ಪಾಲಿಟೆಕ್ನಿಕ್‌ನ ಉಪಪ್ರಾಂಶುಪಾಲ ಶ್ರೀಧರ್ ಆಚಾರ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಡಿ.ಎ.ಸಿ.ಜಿ. ಪಾಲಿಟೆಕ್ನಿಕ್ ಉಪನ್ಯಾಸಕಿ ನಾಗಶ್ರೀ ತ್ಯಾಗರಾಜ್ ಸ್ವಾಗತ, ಜಿಲ್ಲಾ ನಿವೃತ್ತ ಗ್ರಂಥಾಲಯಾಧಿಕಾರಿ ಮಹೇಶಪ್ಪ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

A beautiful future is possible only by building an addiction-free society.

 

 

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ ಸಮೇತ ಪರಾರಿಯಾಗಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಬುಕ್ಕಾಂಬೂದಿ ಗ್ರಾಮದ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು ಬರ ಪಟ್ಟಿಯಿಂದ ಕೈಬಿಟ್ಟಿರುವುದು ಸರಿಯಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ...

Related Articles

ಎರಡು ತಿಂಗಳ ಸುದೀರ್ಘ ವಿರಾಮದ ಬಳಿಕ ಜಿಲ್ಲೆಯಾದ್ಯಂತ ಭರ್ಜರಿ ಮಳೆ

ಚಿಕ್ಕಮಗಳೂರು: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕಂಗಾಲಾಗಿದ್ದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಜನರಿಗೆ...

ನೀಲಕುರಿಂಜಿ ಅಲ್ಲ, ಚಂದ್ರದ್ರೋಣದಲ್ಲಿ ಅರಳಿದ್ದು ಗುರಿಂಜೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ–ಬಾಬಾಬುಡನ್‌ಗಿರಿ ಪ್ರದೇಶದಲ್ಲಿ ನೇರಳೆ ಬಣ್ಣದ ಹೂವುಗಳು ಅರಳಿ...

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ

ಚಿಕ್ಕಮಗಳೂರು: ವಿದ್ಯುತ್ ಪೂರೈಕೆಯಲ್ಲಿ ಇತ್ತೀಚೆಗೆ ಉಂಟಾದ ತಾತ್ಕಾಲಿಕ ವ್ಯತ್ಯಯವನ್ನು ದೊಡ್ಡ ಸಮಸ್ಯೆಯಾಗಿ ಬಿಂಬಿಸುವ ಅಗತ್ಯವಿಲ್ಲ. ಮುಂದಿನ...

ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು

ಚಿಕ್ಕಮಗಳೂರು: ಬರಗಾಲದ ಸಂದರ್ಭದಲ್ಲಿ ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು. ನಿಯಮಾವಳಿ...