Home namma chikmagalur chikamagalur ಅನಧಿಕೃತ ಜೀಪ್‌ಗಳ ಹಾವಳಿ ತಪ್ಪಿಸಲು ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ
chikamagalurHomeLatest Newsnamma chikmagalur

ಅನಧಿಕೃತ ಜೀಪ್‌ಗಳ ಹಾವಳಿ ತಪ್ಪಿಸಲು ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ

Share
Share

ಚಿಕ್ಕಮಗಳೂರು:  ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಅನಧಿಕೃತ ಮತ್ತು ಅಕ್ರಮ ಜೀಪ್ ಗಳ ಹಾವಳಿ ತಡೆಗಟ್ಟಿ ಪ್ರವಾಸಿಗರ ಸುರಕ್ಷತೆ ಕಾಪಾಡಬೇಕು ಎಂದು ಆಗ್ರಹಿಸಿ ಜಿಲ್ಲೆಯ ಸ್ಥಳೀಯ ನಾಗರೀ ಕರು ಸೋಮವಾರ ಅಪರ ಜಿಲ್ಲಾಧಿಕಾರಿ ನಂಜುಂಡೇಗೌಡ ಅವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಹೆಚ್.ಕೆ.ಕೇಶವಮೂರ್ತಿ ಜಿಲ್ಲೆ ಮುಳ್ಳಯ್ಯನಗಿರಿ, ದತ್ತಪೀಠ, ಕೆಮ್ಮಣ್ಣಗುಂಡಿ, ಝರಿ ಜಲಪಾತದ ಪರಿಸರದಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವ ಅನಧಿಕೃತ ಹಾಗೂ ಗುಣಮಟ್ಟದವಿ ಲ್ಲದೇ ಜೀಪ್ಗಳ ಸಂಚಾರ ಹಾವಳಿ ಹೆಚ್ಚಳಗೊಳ್ಳುತ್ತಿದೆ ಎಂದರು.

ದೇಶ-ವಿದೇಶಗಳಿಂದ ಮಲೆನಾಡಿನ ಪರಿಸರ ಸವಿಯಲು ಪ್ರವಾಸಿಗರು ಆಗಮಿಸುತ್ತಾರೆ. ಆದರೆ ಕೆಲ ವು ಪ್ರವಾಸಿ ತಾಣಗಳಿಗೆ ತೆರಳಲು ಜೀಪ್ ಮಾಲೀಕರು ಮತ್ತು ಚಾಲಕರು ಸಾರ್ವಜನಿಕರಿಗೆ ಹಾಗೂ ಪರಿ ಸರಕ್ಕೆ ತೀವ್ರ ತೊಂದರೆ ಉಂಟು ಮಾಡುತ್ತಿದ್ದಾರೆ ಎಂದರು.

ಗಿರಿಪ್ರದೇಶದಲ್ಲಿ ಸಂಚರಿಸುವ ಜೀಫ್‌ಗಳು ಯಾವುದೇ ಪರವಾನಗಿ ಪಡೆಯದೇ ಪ್ರವಾಸಿಗರ ಸಾಗಣೆ ಗೆ ಬಳಸಲಾಗುತ್ತಿದೆ. ಈ ವಾಹನಕ್ಕೆ ವಿಮೆ ಕೂಡಾ ಇರುವುದಿಲ್ಲ. ಅಲ್ಲದೇ ಗಿರಿಪ್ರದೇಶ ಅಪಾಯಕಾರಿ ಚಾಲ ನೆ, ಕಿರಿದಾದ ಘಾಟಿ ರಸ್ತೆಗಳಲ್ಲಿ ಜೀಪ್ ಚಾಲಕರು ಅತಿವೇಗ, ಬೇಜವಾಬ್ದಾರಿಯಿಂದ ವಾಹನ ಚಲಾಯಿಸು ವ ಮೂಲಕ ಪ್ರವಾಸಿಗರ ಜೀವಕ್ಕೆ ಕುತ್ತು ತರುತ್ತಿದ್ದಾರೆ ಎಂದರು.

ಪ್ರವಾಸಿಗರಿಗೆ ಕಿರುಕುಳ, ಸುಲಿಗೆ ಜೊತೆಗೆ ನಿಗಧೀತ ದರಕ್ಕಿಂತ ದುಪ್ಪಟ್ಟು ಹಣವನ್ನು ಪ್ರವಾಸಿ ಗರಿಂದ ವಸೂಲಿ ಮಾಡಲಾಗುತ್ತಿದೆ. ದರದ ಬಗ್ಗೆ ಪ್ರಶ್ನಿಸಿದರೆ ಪ್ರವಾಸಿಗರೊಂದಿಗೆ ಅಸಭ್ಯವಾಗಿ ವರ್ತಿಸಲಾ ಗುತ್ತಿದೆ. ಸಂಚಾರ ದಟ್ಟಣೆಯಿಂದ ಜೀಪ್‌ಗಳು ರಸ್ತೆ ಬದಿಯಲ್ಲೇ ಎಲ್ಲೆಂದರಲ್ಲಿ ಪಾರ್ಕ್ ಮಾಡುವುದರಿಂದ ವಿಪರೀತ ಜಾಮ್ ಉಂಟಾಗುತ್ತಿದೆ ಎಂದರು.

ದತ್ತಪೀಠ ಹಾಗೂ ಮುಳ್ಳಯ್ಯನಗಿರಿ ಪ್ರದೇಶಕ್ಕೆ ತೆರಳುವ ಪ್ರವಾಸಿಗರಿಂದ ತೆರಿಗೆ ರೂಪದಲ್ಲಿ ಸಾಕಷ್ಟು ಹಣ ಸಂಗ್ರಹವಾದರೂ, ಅಲ್ಲಂಪುರ ಗ್ರಾಮದಿಂದ ಹೊನ್ನಮ್ಮನಹಳ್ಳವರೆಗೂ ಜಿಲ್ಲಾಡಳಿತ ಶೌಚಾಲಯದ ವ್ಯವಸ್ಥೆ ಕಲ್ಪಿಸಿಲ್ಲ. ಹೀಗಾಗಿ ಬಗ್ಗೆ ಜಿಲ್ಲಾಧಿಕಾರಿಗಳು ಗಮನಹರಿಸಬೇಕು ಎಂದು ಒತ್ತಾಯಿಸಿದರು.

ಅನಧಿಕೃತ ಜೀಪ್‌ಗಳ ಮಾಫಿಯಾ ನಿಲ್ಲಿಸಿ ಸ್ಥಳೀಯ ಯುವಕರಿಗೆ ಅಧಿಕೃತ ಪರವಾನಗಿ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ವಿಧಾನಸಭೆಯಲ್ಲಿ ಪ್ರಶ್ನಿಸಿದ್ದಾರೆ. ಹೀಗಾಗಿ ಕೂಡಲೇ ಪರವಾನ ಗಿ ಹೊಂದಿರದ ಜೀಫ್‌ಗಳು ಜಪ್ತಿ ಮಾಡಬೇಕು. ಜಿಲ್ಲಾಡಳಿತವೇ ಅಧಿಕೃತ ದರಪಟ್ಟಿ ನಿಗಧಿಪಡಿಸಬೇಕು ಎಂ ದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ನಾಗರೀಕರಾದ ಜೆ.ಡಿ.ಲೋಕೇಶ್, ಸೀತರಾಮಭರಣ್ಯ, ಬೊಗಸೆ ವಿನೋ ದ್, ಎಸ್‌ಡಿಎಂ ಮಂಜು, ಬೆನಡಿಕ್ಟ್ ಜೇಮ್ಸ್ ಮುಂತಾದವರು ಉಪಸ್ಥಿತರಿದ್ದರು.

Appeal to the district administration to prevent the menace of unauthorized jeeps

 

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ ಸಮೇತ ಪರಾರಿಯಾಗಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಬುಕ್ಕಾಂಬೂದಿ ಗ್ರಾಮದ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು ಬರ ಪಟ್ಟಿಯಿಂದ ಕೈಬಿಟ್ಟಿರುವುದು ಸರಿಯಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ...

Related Articles

ಎರಡು ತಿಂಗಳ ಸುದೀರ್ಘ ವಿರಾಮದ ಬಳಿಕ ಜಿಲ್ಲೆಯಾದ್ಯಂತ ಭರ್ಜರಿ ಮಳೆ

ಚಿಕ್ಕಮಗಳೂರು: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕಂಗಾಲಾಗಿದ್ದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಜನರಿಗೆ...

ನೀಲಕುರಿಂಜಿ ಅಲ್ಲ, ಚಂದ್ರದ್ರೋಣದಲ್ಲಿ ಅರಳಿದ್ದು ಗುರಿಂಜೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ–ಬಾಬಾಬುಡನ್‌ಗಿರಿ ಪ್ರದೇಶದಲ್ಲಿ ನೇರಳೆ ಬಣ್ಣದ ಹೂವುಗಳು ಅರಳಿ...

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ

ಚಿಕ್ಕಮಗಳೂರು: ವಿದ್ಯುತ್ ಪೂರೈಕೆಯಲ್ಲಿ ಇತ್ತೀಚೆಗೆ ಉಂಟಾದ ತಾತ್ಕಾಲಿಕ ವ್ಯತ್ಯಯವನ್ನು ದೊಡ್ಡ ಸಮಸ್ಯೆಯಾಗಿ ಬಿಂಬಿಸುವ ಅಗತ್ಯವಿಲ್ಲ. ಮುಂದಿನ...

ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು

ಚಿಕ್ಕಮಗಳೂರು: ಬರಗಾಲದ ಸಂದರ್ಭದಲ್ಲಿ ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು. ನಿಯಮಾವಳಿ...