Home namma chikmagalur chikamagalur ಅರಣ್ಯ ಸಂತ್ರಸ್ತ ರೈತರ ಬೃಹತ್ ಸಮಾವೇಶ
chikamagalurHomeLatest Newsnamma chikmagalur

ಅರಣ್ಯ ಸಂತ್ರಸ್ತ ರೈತರ ಬೃಹತ್ ಸಮಾವೇಶ

Share
Share

ಚಿಕ್ಕಮಗಳೂರು : ಜಿಲ್ಲಾ ನಾಗರಿಕ ಮತ್ತು ರೈತ ಹೋರಾಟ ಸಮಿತಿ ವತಿಯಿಂದ ಚಿಕ್ಕಮಗಳೂರು ತಾಲೂಕು ಕಾಮೇಹಳ್ಳಿ ಗ್ರಾಮದಲ್ಲಿ ಆಗಸ್ಟ್ ೮ರಂದು ಬೆಳಗ್ಗೆ ೧೧ ಗಂಟೆಗೆ ಅರಣ್ಯ ಸಂತ್ರಸ್ತ ರೈತರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ಮುಖ್ಯ ಸಂಚಾಲಕ ಎಸ್ ವಿಜಯ್ ಕುಮಾರ್ ಹೇಳಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿಂದು ಕರೆದಿದ್ದ ಸುದ್ದಿ ಗೋಷ್ಟಿಯಲ್ಲಿ ಮಾತನಾಡಿದ ಅವರು ಈ ಕಾರ್ಯಕ್ರಮವನ್ನು ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಎಚ್ ಡಿ ತಮ್ಮಯ್ಯ ಉದ್ಘಾಟಿಸಲಿದ್ದು, ಕಾಮೇನಳ್ಳಿಯ ಹಿರಿಯ ರೈತ ಹೋರಾಟಗಾರ ವೀರಭದ್ರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಹೇಳಿದರು. ಎಸ್ ವಿಜಯ್ ಕುಮಾರ್ ವಿಚಾರ ಮಂಡನೆ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಬೋರಯ್ಯ, ಬೆಳೆಗಾರರ ಸಂಘದ ಅಧ್ಯಕ್ಷ ಮಿಥುನ್, ಸಂಘಟನೆಯ ಸಂಚಾಲಕರಾದ ಕೆಕೆ ರಘು ಹಾಗೂ ವಾಸು ಪೂಜಾರಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಚಿಕ್ಕಮಗಳೂರು ತಾಲ್ಲೂಕಿನ ಲಕ್ಯಾ ಹೋಬಳಿ, ಕಸಬಾ ಹೋಬಳಿ ಹಾಗೂ ಜಾಗರ ಹೋಬಳಿ ವ್ಯಾಪ್ತಿಯ ಗ್ರಾಮಗಳಾದ ಅಲ್ಲಂಪುರ, ಅರಳಗುಪ್ಪೆ, ಬೀಕನಹಳ್ಳಿ, ದಾಸರಹಳ್ಳಿ, ಲಕ್ಷ್ಮೀಪುರ, ಅರಿಶಿನಗುಪ್ಪೆ, ಚುರ್ಚೆಗುಡ್ಡ, ಹಳಸುಬಾಳು, ಕೊಂಬುಗತ್ತಿ, ನೀರುಗುಂಡಿ, ಅತ್ತಿಗಿರಿ, ಕಾಮೇನಹಳ್ಳಿ, ನಿಂಗೇನಹಳ್ಳಿ, ಗೊಣ್‌ಕಲ್, ತೊಗರಿಹಂಕಲ್, ಹೊಸೂರು, ಹೂವೇನಹಳ್ಳಿ, ಪಾದಮನೆ, ಕುಮರಗಿರಿ, ನವಗ್ರಾಮ ಸೇರಿದಂತೆ ಅನೇಕ ಗ್ರಾಮಗಳ ರೈತರು ಹಲವು ವರ್ಷಗಳಿಂದ ಅರಣ್ಯ ಹಾಗೂ ಕಂದಾಯ ಇಲಾಖೆಗೆ ಸಂಬಂಧಿಸಿದ ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.

ಅದೇ ರೀತಿ ಅರಳಗುಪ್ಪೆ, ಮಾವಿನಹಳ್ಳಿ, ಬಿಂಡಿಗ, ನಾಗೇನಹಳ್ಳಿ, ಅತ್ತಿಗಿರಿ, ದೇವರಳ್ಳಿ ಸೇರಿದಂತೆ ಗಿರಿ ತಪ್ಪಲಿನ ಅನೇಕ ಗ್ರಾಮಗಳ ಸರ್ವೇ ನಂಬರುಗಳು ಮುಳ್ಳಯ್ಯನಗಿರಿ ಸಂರಕ್ಷಿತ ಮೀಸಲು ಅರಣ್ಯ ಪ್ರದೇಶ ಯೋಜನೆ ವ್ಯಾಪ್ತಿಗೆ ಸೇರ್ಪಡೆಯಾಗಿರುವ ಪರಿಣಾಮ ರೈತರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ.

ಈ ಸಮಸ್ಯೆಯಿಂದಾಗಿ ಜಮೀನುಗಳ ಪೋಡಿ (ದುರಸ್ತಿ), ಖಾತೆ ಬದಲಾವಣೆ, ಜಮೀನು ಖರೀದಿ ಮಾರಾಟ, ಬ್ಯಾಂಕ್ ಸಾಲ, ಬೆಳೆ ಸಾಲ, ಸರ್ಕಾರಿ ಸೌಲಭ್ಯಗಳ ಪಡೆಯುವುದು ಸೇರಿದಂತೆ ವಿವಿಧ ಕಂದಾಯ ಹಾಗೂ ಕಾನೂನುಬದ್ಧ ವ್ಯವಹಾರಗಳನ್ನು ನಡೆಸಲು ತೊಂದರೆ ಉಂಟಾಗಿದೆ. ಇದರಿಂದ ಸಾವಿರಾರು ರೈತ ಕುಟುಂಬಗಳು ಆತಂಕ ಹಾಗೂ ಅನಿಶ್ಚಿತತೆಯಲ್ಲಿವೆ.

ಈ ಗಂಭೀರ ಸಮಸ್ಯೆಗಳ ಕುರಿತು ಸರ್ಕಾರದ ಮಟ್ಟದಲ್ಲಿ ಆದ ನಿರ್ಣಯಗಳು ಹಾಗೂ ಈವರೆಗೆ ರೈತ ಪರವಾಗಿ ನಡೆದಿರುವ ಆದೇಶಗಳು ನಡಾವಳಿಗಳ ಬಗ್ಗೆ, ಚುನಾಯಿತ ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅರಣ್ಯ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳ ಗಮನ ಸೆಳೆದು ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಈ ಭಾಗದ ರೈತರು ಹಾಗೂ ಗ್ರಾಮಸ್ಥರ ಬೃಹತ್ ರೈತ ಸಮಾವೇಶವನ್ನು ಆಯೋಜಿಸಲಾಗಿದೆಎಂದು ಹೇಳಿದರು.

ಈ ಭಾಗದ ಎಲ್ಲಾ ರೈತ ಬಾಂಧವರು, ಗ್ರಾಮಸ್ಥರು, ಜನಪ್ರತಿನಿಧಿಗಳು ಹಾಗೂ ರೈತಪರ ಸಂಘಟನೆಗಳ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಸಮಾವೇಶವನ್ನು ಯಶಸ್ವಿಗೊಳಿಸಿ ರೈತರ ಹಕ್ಕುಗಳ ಹೋರಾಟಕ್ಕೆ ಬಲ ತುಂಬುವಂತೆ ಕೋರಿದರು.

ಜಿಲ್ಲೆಯ ೧೩೭ ಹಳ್ಳಿಗಳನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಣೆ ಮಾಡಿರುವ ವಿಚಾರ ತೀವ್ರ ಚರ್ಚೆಗೊಳಗಾಗಿದ್ದು, ಕರಡಿಗೆ ಆಕ್ಷೇಪಣೆ ಸಲ್ಲಿಸಲು ೬೦ ದಿನಗಳ ಕಾಲಾವಕಾಶ ನೀಡಲಾಗಿದೆ. ಪೂರ್ಣ ಯೋಜನೆಯನ್ನೆ ಕೈಬಿಡುವಂತೆ ಒತ್ತಾಯಿಸುವ ಬದಲು ಕರಡಿನಲ್ಲಿರುವ ನ್ಯೂನತೆ ತಿದ್ದುಪಡಿ ಮಾಡುವಂತೆ ಒತ್ತಾಯಿಸಬೇಕಿದೆ ಆನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಸಂಘಟನೆ ಹೋರಾಟಕ್ಕಿಳಿಯಲಿದೆ ಎಂದು ಹೇಳಿದರು.

ಗೋಷ್ಟಿಯಲ್ಲಿ ಸಂಚಾಲಕರಾದ ಪೂರ್ಣೇಶ್, ಕುಮಾರ್,ರವಿಕುಮಾರ್,ವೀರಭದ್ರಪ್ಪ,ಶಾಂತಕುಮಾರ್,ಮೋಹನ್ ,ಚಂದ್ರು,ಬೀರೇಗೌಡ,ಮಲ್ಲೇಶಪ್ಪ ಇದ್ದರು.

Massive gathering of forest affected farmers

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ ಸಮೇತ ಪರಾರಿಯಾಗಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಬುಕ್ಕಾಂಬೂದಿ ಗ್ರಾಮದ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು ಬರ ಪಟ್ಟಿಯಿಂದ ಕೈಬಿಟ್ಟಿರುವುದು ಸರಿಯಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ...

Related Articles

ಎರಡು ತಿಂಗಳ ಸುದೀರ್ಘ ವಿರಾಮದ ಬಳಿಕ ಜಿಲ್ಲೆಯಾದ್ಯಂತ ಭರ್ಜರಿ ಮಳೆ

ಚಿಕ್ಕಮಗಳೂರು: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕಂಗಾಲಾಗಿದ್ದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಜನರಿಗೆ...

ನೀಲಕುರಿಂಜಿ ಅಲ್ಲ, ಚಂದ್ರದ್ರೋಣದಲ್ಲಿ ಅರಳಿದ್ದು ಗುರಿಂಜೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ–ಬಾಬಾಬುಡನ್‌ಗಿರಿ ಪ್ರದೇಶದಲ್ಲಿ ನೇರಳೆ ಬಣ್ಣದ ಹೂವುಗಳು ಅರಳಿ...

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ

ಚಿಕ್ಕಮಗಳೂರು: ವಿದ್ಯುತ್ ಪೂರೈಕೆಯಲ್ಲಿ ಇತ್ತೀಚೆಗೆ ಉಂಟಾದ ತಾತ್ಕಾಲಿಕ ವ್ಯತ್ಯಯವನ್ನು ದೊಡ್ಡ ಸಮಸ್ಯೆಯಾಗಿ ಬಿಂಬಿಸುವ ಅಗತ್ಯವಿಲ್ಲ. ಮುಂದಿನ...

ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು

ಚಿಕ್ಕಮಗಳೂರು: ಬರಗಾಲದ ಸಂದರ್ಭದಲ್ಲಿ ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು. ನಿಯಮಾವಳಿ...