Home namma chikmagalur chikamagalur ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆಗೆ ನಾಗರಿಕರು ಆಕ್ಷೇಪಣೆ ಸಲ್ಲಿಸ ಬೇಕು
chikamagalurHomeLatest Newsnamma chikmagalur

ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆಗೆ ನಾಗರಿಕರು ಆಕ್ಷೇಪಣೆ ಸಲ್ಲಿಸ ಬೇಕು

Share
Share

ಚಿಕ್ಕಮಗಳೂರು : ಜಿಲ್ಲೆಯ ೧೩೭ ಹಳ್ಳಿಗಳನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಣೆ ಮಾಡಿದ್ದು, ಬಗ್ಗೆ ಜನಸಾಮಾನ್ಯರು ಯಾವುದೇ ಆತಂಕಕ್ಕೆ ಒಳಗಾಗದೆ ಆ ವ್ಯಾಪ್ತಿಯ ಪ್ರತಿಯೊಬ್ಬ ನಾಗರಿಕರು ಆಕ್ಷೇಪಣೆ ಸಲ್ಲಿಸುವ ಮೂಲಕ ಪ್ರತಿರೋಧ ವ್ಯಕ್ತಪಡಿಸುವಂತೆ ಕಾಂಗ್ರೆಸ್ ಕೆಪಿಸಿಸಿ ವಕ್ತಾರಾ ಎಚ್.ಎಚ್‌ದೇವರಾಜ್ ಹೇಳಿದರು.

ನಗರದ ಪ್ರೆಸ್ ಕ್ಲಬ್ ನಲ್ಲಿ ಇಂದು ಕರೆದಿದ್ದ ಸುದ್ದಿಗೋಷಿ ಯಲ್ಲಿ ಮಾತನಾಡಿದ ಈ ಘೋಷಣೆ ಮಾಡಿರುವ ದಿನಾಂಖದಿಂದ ೬೦ ದಿನಗಳ ವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದ್ದು. ಈ ವಿಚಾರಕ್ಕೆ ಸಂಬಂಧಿಸಿದಂತೆ ಎಲ್ಲರೂ ಒಗ್ಗಟ್ಟು ಪ್ರದರ್ಶಿಸಬೇಕೆಂದರು.

ಈ ಘೋಷಣೆಯಿಂದ ಜನ ಜೀವನಕ್ಕೆ ಯಾವುದೇ ತೊಂದರೆಯಾಗುವುದಿಲ್ಲ ಎಂಬ ಭರವಸೆ ನೀಡಿದ್ದರು ಸಹ ಹೊರಡಿಸಿರುವ ಕರಡು ಅನುಸೂಚನೆಯಲ್ಲಿ ಯಾವುದೇ ಸ್ಪಷ್ಟತೆ ಇಲ್ಲದಿರುವುದು ಆತಂಕಕ್ಕೆ ಕಾರಣವಾಗಿದೆ ಎಂದು ಹೇಳಿದ ಅವರು ಪರಿಸರ ಸೂಕ್ತ ಪ್ರದೇಶ ವ್ಯಾಪ್ತಿಯ ೧೩೭ ಹಳ್ಳಿಗಳ ಜನತೆ ಧೃತಿಗೆಡುವ ಅಗತ್ಯವಿಲ್ಲ ನಿಮ್ಮೊಂದಿಗೆ ಜಿಲ್ಲೆಯ ಜನಪ್ರತಿನಿಧಿಗಳು ಬೆಂಬಲವಾಗಿ ನಿಲ್ಲಲಿದ್ದಾರೆ ಎಂದು ಅಭಯ ನೀಡಿದರು.

ಸರ್ಕಾರದ ನಿಲುವಿನ ವಿರುದ್ದ ಹೋರಾಟ ರೂಪಿಸಲು ರೈತ ಸಂಘದ ನಾಯಕತ್ವದಲ್ಲಿ ಬೆಳೆಗಾರರಸಂಘ ಡಿಎಸ್‌ಎಸ್,ಕಮ್ಯುನಿಸ್ಟ್ ಪಕ್ಷ ,ಕಾಂಗ್ರೆಸ್ ಪಕ್ಷ ದ ಮುಖಂಡರು ಶೀಘ್ರದಲ್ಲಿಯೇ ಸಭೆ ನಡೆಸಿ ಪ್ರತಿಭಟನೆಯ ರೂಪವೇಷಗಳನ್ನು ಸಿದ್ಧಪಡಿಸುತ್ತಿದ್ದು ಸಂಘಟನೆಗಳು ನಡೆಸುವ ಹೋರಾಟಕ್ಕೆ ಆ ವ್ಯಾಪ್ತಿಯ ಜನತೆ ಬೆಂಬಲಿಸಬೇಕೆಂದು ಕೋರಿದರು.

ಜನ ವಿರೋಧಿ ನಿರ್ಧಾರವಾಗಿದ್ದು ಈ ಬಗ್ಗೆ ಸಂಸದರು, ವಿಧಾನಪರಿಷತ್ ಸದಸ್ಯರು, ಶಾಸಕರು ಪಕ್ಷ ಬೇದ ಮರೆತು ಸದನಗಳಲ್ಲಿ ಧ್ವನಿ ಎತ್ತುವ ಮೂಲಕ ಜನಸಾಮಾನ್ಯರಿಗೆ ಸ್ಪಂದಿಸಬೇಕೆಂದು ಕರೆ ನೀಡಿದರು.
ಕೆಪಿಸಿಸಿ ಮಾಧ್ಯಮ ಸಮಿತಿ ರವೀಶ್ ಖ್ಯಾತನ ಬೀಡು ಮಾತನಾಡಿ ಕಸ್ತೂರಿ ರಂಗನ್ ವರದಿಯ ಯಥಾವತ್ತು ಅಂಗೀಕಾರ ಆ ಭಾಗದ ಜನರ ನಿದ್ದೆಗೆಡಿಸುವ ಹುನ್ನಾರದ ಭಾಗವಾಗಿದ್ದು, ಪರಿಸರ ಸೂಕ್ಷ್ಮಪ್ರದೇಶ ವ್ಯಾಪ್ತಿಗೆ ಚಿಕ್ಕಮಗಳೂರು ನಗರ ಮತ್ತು ಸುತ್ತಮುತ್ತಲ ಗ್ರಾಮಗಳು ಬರಲಿದ್ದು,ಈ ಬಗ್ಗೆ ನಗರಸಭೆ ಮತ್ತು ಜಿಲ್ಲಾಧಿಕಾರಿಗಳು ಗ್ರಾಮ ಪಂಚಾಯಿತಿಗಳು ಕರುಡು ನೀತಿ ವಿರೋಧಿಸಿ ನಿರ್ಣಯವನು ಕೈಗೊಂಡು ಕೇಂದ್ರ ಸರ್ಕಾರ ಮತ್ತು ನ್ಯಾಯಾಲಯಕ್ಕೆ ಕಳಿಸಿಕೊಡಬೇಕು ಎಂದು ಆಗ್ರಹಿಸಿದರು.

ನ್ಯಾಯಾಲಯದ ಮೂಲಕ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಗೊಂಡಿರುವ ಗಾಯತ್ರಿಶಾಂತಿಗೌಡರ ಚುನಾವಣಾ ಪ್ರಕ್ರಿಯೆ ನಡೆಸಿದ ಅಂದಿನ ಜಿಲ್ಲಾಧಿಕಾರಿ ರಮೇಶ್‌ರವರು ಕರ್ತವ್ಯ ಚ್ಯುತಿ ಎಸೆಗಿದ್ದು, ಅವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಂಡು ಕೂಡಲೇ ಅವರನ್ನು ಹುದ್ದೆಯಿಂದ ಒತ್ತಾಯಿಸಿದರು.

ವಿಧಾನ ಪರಿಷತ್ ಚುನಾವಣೆಯ ವಿಚಾರಣೆ ನಡೆಸಿದ ನ್ಯಾಯಾಲಯ ಕಳೆದ ಒಂದೂವರೆ ವರ್ಷಗಳ ಹಿಂದೆಯೇ ಪ್ರಕ್ರಿಯೆ ನಡೆಸುವಂತೆ ಸೂಚಿಸಿದ್ದರು ಸ್ಥಳೀಯ ಅಧಿಕಾರಿಗಳು ಮತ್ತು ರಾಜಕೀಯ ಪಕ್ಷಗಳ ಕೈವಾಡದಿಂದ ಅವರ ಪರವಾಗಿ ತೀರ್ಪು ಬರಲು ವಿಳಂಬವಾಗಿದೆ. ಈ ವಿಳಂಬ ನೀತಿಯನ್ನು ಗಮನಿಸಿದರೆ ಈ ಚುನಾವಣೆಯಲ್ಲಿಯೂ ವೋಟ್ ಚೋರಿ ನಡೆದಿರುವ ಶಂಕೆ ಇದೆ ಎಂದು ಹೇಳಿದರು.
ಈ ಗೋಷ್ಠಿಯಲ್ಲಿ ಮುಖಂಡರಾದ ರಮೇಶ್ ಸಚಿನ್ ಸಿಂಗ್ ಶಾಂತಕುಮಾರ್ ಉಪ್ಪಳ್ಳಿ ಭರತ್ ಇದ್ದರು.

Citizens should object to the declaration of an environmentally sensitive area

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ ಸಮೇತ ಪರಾರಿಯಾಗಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಬುಕ್ಕಾಂಬೂದಿ ಗ್ರಾಮದ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು ಬರ ಪಟ್ಟಿಯಿಂದ ಕೈಬಿಟ್ಟಿರುವುದು ಸರಿಯಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ...

Related Articles

ಎರಡು ತಿಂಗಳ ಸುದೀರ್ಘ ವಿರಾಮದ ಬಳಿಕ ಜಿಲ್ಲೆಯಾದ್ಯಂತ ಭರ್ಜರಿ ಮಳೆ

ಚಿಕ್ಕಮಗಳೂರು: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕಂಗಾಲಾಗಿದ್ದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಜನರಿಗೆ...

ನೀಲಕುರಿಂಜಿ ಅಲ್ಲ, ಚಂದ್ರದ್ರೋಣದಲ್ಲಿ ಅರಳಿದ್ದು ಗುರಿಂಜೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ–ಬಾಬಾಬುಡನ್‌ಗಿರಿ ಪ್ರದೇಶದಲ್ಲಿ ನೇರಳೆ ಬಣ್ಣದ ಹೂವುಗಳು ಅರಳಿ...

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ

ಚಿಕ್ಕಮಗಳೂರು: ವಿದ್ಯುತ್ ಪೂರೈಕೆಯಲ್ಲಿ ಇತ್ತೀಚೆಗೆ ಉಂಟಾದ ತಾತ್ಕಾಲಿಕ ವ್ಯತ್ಯಯವನ್ನು ದೊಡ್ಡ ಸಮಸ್ಯೆಯಾಗಿ ಬಿಂಬಿಸುವ ಅಗತ್ಯವಿಲ್ಲ. ಮುಂದಿನ...

ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು

ಚಿಕ್ಕಮಗಳೂರು: ಬರಗಾಲದ ಸಂದರ್ಭದಲ್ಲಿ ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು. ನಿಯಮಾವಳಿ...