ಚಿಕ್ಕಮಗಳೂರು: ಮಕ್ಕಳ ಲೈಂಗಿಕ ಶೋಷಣೆ ಮತ್ತು ನಿಂದನೆಗೆ ಸಂಬಂಧಿಸಿದ (CSEAM) ವಿಡಿಯೋವನ್ನು ಸಾಮಾಜಿಕ ಜಾಲತಾಣ ಸ್ನಾಪ್‌ಚಾಟ್ ಮೂಲಕ ಹಂಚಿಕೊಂಡ ಆರೋಪದಡಿ ಚಿಕ್ಕಮಗಳೂರು ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, National Center for Missing and Exploited Children (NCMEC) ನಿಂದ ಬಂದ Cyber Tipline Report ಆಧರಿಸಿ ಪ್ರಕರಣದ ತನಿಖೆ ಕೈಗೊಳ್ಳಲಾಗಿದೆ. NCRP ಪೋರ್ಟಲ್‌ನಲ್ಲಿ ಲಭ್ಯವಿದ್ದ ವರದಿ ಹಾಗೂ ವಿಡಿಯೋ ಪರಿಶೀಲಿಸಿದಾಗ ಮಕ್ಕಳ ಲೈಂಗಿಕ ಶೋಷಣೆಗೆ ಸಂಬಂಧಿಸಿದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಡೌನ್‌ಲೋಡ್ ಅಥವಾ ಹಂಚಿಕೊಂಡಿರುವುದು ಕಂಡುಬಂದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ತಾಂತ್ರಿಕ ಮಾಹಿತಿಯ ಆಧಾರದ ಮೇಲೆ ಚಿಕ್ಕಮಗಳೂರಿನ ಟಿಪ್ಪುನಗರ ನಿವಾಸಿಯೊಬ್ಬರ ವಿರುದ್ಧ ಶಂಕೆ ವ್ಯಕ್ತವಾಗಿದ್ದು, ಆರೋಪಿತನು ಸ್ನಾಪ್‌ಚಾಟ್ ಮೂಲಕ CSEAM ವಿಡಿಯೋವನ್ನು ಹಂಚಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಪೊಲೀಸರು ವಶಪಡಿಸಿಕೊಂಡಿರುವ ಸುಮಾರು ಒಂದು ನಿಮಿಷದ ವಿಡಿಯೋದಲ್ಲಿ ಅಪ್ರಾಪ್ತ ಮಗುವಿನೊಂದಿಗೆ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ದೃಶ್ಯಗಳಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ದೂರಿನಲ್ಲಿ ಹೇಳಲಾಗಿದೆ.
ಈ ಸಂಬಂಧ ಚಿಕ್ಕಮಗಳೂರು ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಕ್ರೈಂ ನಂ. 41/2026ರಡಿ ಮಾಹಿತಿ ತಂತ್ರಜ್ಞಾನ ಕಾಯ್ದೆ (IT Act) ಕಲಂ 67B ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.
Child sexual abuse case registered
Leave a comment