Home namma chikmagalur chikamagalur ದ್ವಿಚಕ್ರ ವಾಹನ ಡಿಕ್ಕಿ-ಪಾದಚಾರಿ ಯುವಕ ಸಾವು
chikamagalurCrime NewsHomeLatest News

ದ್ವಿಚಕ್ರ ವಾಹನ ಡಿಕ್ಕಿ-ಪಾದಚಾರಿ ಯುವಕ ಸಾವು

Share
Share

ಚಿಕ್ಕಮಗಳೂರು: ತಾಲೂಕಿನ ಕುರುಬರಹಳ್ಳಿ ಗ್ರಾಮದ ಸಮೀಪ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಯುವಕ ಮೃತಪಟ್ಟಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಮಾಚೇನಹಳ್ಳಿ ಗ್ರಾಮದ ನಿವಾಸಿ ಸೈಯದ್ ಅರ್ಬಾಜ್ ಅವರು ಆಗಸ್ಟ್ 2ರಂದು ರಾತ್ರಿ ಸುಮಾರು 9 ಗಂಟೆಗೆ ಕುರುಬರಹಳ್ಳಿಯಲ್ಲಿರುವ ಸ್ನೇಹಿತನ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಎಸ್. ಬಿದರೆ–ಕೆ.ಬಿ. ಹಾಳ್ ಮುಖ್ಯರಸ್ತೆಯ ಕುರುಬರಹಳ್ಳಿ ಗೇಟ್ ಸಮೀಪ ಹಿಂಬದಿಯಿಂದ ಬಂದ ಕೆಎ–13–ಇಎಕ್ಸ್–4042 ಸಂಖ್ಯೆಯ ಯಮಹಾ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದೆ.

ಅಪಘಾತದ ಪರಿಣಾಮ ಸೈಯದ್ ಅರ್ಬಾಜ್ ಅವರು ರಸ್ತೆಗೆ ಬಿದ್ದು ತಲೆ, ಮುಖ ಹಾಗೂ ಕೈಕಾಲುಗಳಿಗೆ ಗಂಭೀರ ಗಾಯಗಳಾಗಿವೆ. ಅಪಘಾತದ ಬಳಿಕ ಬೈಕ್ ಚಾಲಕ ಹಾಗೂ ಸ್ಥಳೀಯರು ಗಾಯಾಳುವನ್ನು ಆಂಬುಲೆನ್ಸ್ ಮೂಲಕ ಹಾಸನದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

ಮೃತರ ತಂದೆ ಸೈಯದ್ ನುರುಲ್ಲಾ ನೀಡಿದ ದೂರಿನ ಮೇರೆಗೆ, ಬಾಣಾವರ ನಿವಾಸಿ ಇನಾಯತ್ ಎಂಬಾತ ಅತಿವೇಗ ಹಾಗೂ ಅಜಾಗರೂಕತೆಯಿಂದ ಬೈಕ್ ಚಲಾಯಿಸಿ ಅಪಘಾತಕ್ಕೆ ಕಾರಣನಾಗಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Young pedestrian dies after being hit by two-wheeler

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ ಸಮೇತ ಪರಾರಿಯಾಗಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಬುಕ್ಕಾಂಬೂದಿ ಗ್ರಾಮದ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು ಬರ ಪಟ್ಟಿಯಿಂದ ಕೈಬಿಟ್ಟಿರುವುದು ಸರಿಯಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ...

Related Articles

ಎರಡು ತಿಂಗಳ ಸುದೀರ್ಘ ವಿರಾಮದ ಬಳಿಕ ಜಿಲ್ಲೆಯಾದ್ಯಂತ ಭರ್ಜರಿ ಮಳೆ

ಚಿಕ್ಕಮಗಳೂರು: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕಂಗಾಲಾಗಿದ್ದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಜನರಿಗೆ...

ನೀಲಕುರಿಂಜಿ ಅಲ್ಲ, ಚಂದ್ರದ್ರೋಣದಲ್ಲಿ ಅರಳಿದ್ದು ಗುರಿಂಜೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ–ಬಾಬಾಬುಡನ್‌ಗಿರಿ ಪ್ರದೇಶದಲ್ಲಿ ನೇರಳೆ ಬಣ್ಣದ ಹೂವುಗಳು ಅರಳಿ...

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ

ಚಿಕ್ಕಮಗಳೂರು: ವಿದ್ಯುತ್ ಪೂರೈಕೆಯಲ್ಲಿ ಇತ್ತೀಚೆಗೆ ಉಂಟಾದ ತಾತ್ಕಾಲಿಕ ವ್ಯತ್ಯಯವನ್ನು ದೊಡ್ಡ ಸಮಸ್ಯೆಯಾಗಿ ಬಿಂಬಿಸುವ ಅಗತ್ಯವಿಲ್ಲ. ಮುಂದಿನ...

ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು

ಚಿಕ್ಕಮಗಳೂರು: ಬರಗಾಲದ ಸಂದರ್ಭದಲ್ಲಿ ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು. ನಿಯಮಾವಳಿ...