Home namma chikmagalur chikamagalur ಅಪಘಾತದಲ್ಲಿ ಸಾವು: ಚಾಲಕನಿಗೆ 9 ತಿಂಗಳು ಸಜೆ
chikamagalurHomeLatest Newsnamma chikmagalur

ಅಪಘಾತದಲ್ಲಿ ಸಾವು: ಚಾಲಕನಿಗೆ 9 ತಿಂಗಳು ಸಜೆ

Share
Share

ಚಿಕ್ಕಮಗಳೂರು: ಅತೀ ವೇಗ ಮತ್ತು ಅಜಾಗರೂಕತೆಯಿಂದ ಕಾರು ಚಾಲನೆ ಮಾಡಿ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಟು ಇನ್ನಿಬ್ಬರು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಚಾಲಕನಿಗೆ ನಗರದ ಒಂದನೇ ಅಧಿಕ ಹಿರಿಯ ಸಿ.ಜೆ. ಮತ್ತು ಜೆ.ಎಂ.ಎಂ.ಸಿ. ನ್ಯಾಯಾಲಯವು ೯ ತಿಂಗಳ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪಿತ್ತಿದೆ.

ಬೇಲೂರು ತಾಲ್ಲೂಕು ಬಿಳುಗುಲಿ ಗ್ರಾಮದ ಬಿ.ಎಸ್.ಮೋಹಿತ್ ಎಂಬಾತನೇ ಶಿಕ್ಷೆಗೆ ಒಳಗಾದ ವ್ಯಕ್ತಿ. ಈತ ೨೦೨೩ರ ಮಾರ್ಚ್ ೨೩ರ ರಾತ್ರಿ ವಿವೇಕ್ ಮುನ್ಸಿ, ದರ್ಶನ್ ಆರಾಧ್ಯ ಹಾಗೂ ಕಾರ್ತಿಕ್ ಎಂಬುವವರೊಂದಿಗೆ ನಗರದ ಹೌಸಿಂಗ್ ಬೋರ್ಡ್‌ನ ಟೀಚರ್‍ಸ್ ಕಾಲೋನಿಯಿಂದ ಕಣಿವೆದಾಸರಹಳ್ಳಿಗೆ ತೆರಳಿ ಮರಳುತ್ತಿದ್ದಾಗ ರಸ್ತೆಯ ಇಳಿಜಾರಿನಲ್ಲಿ ಅಜಾಗರೂಕತೆಯಿಂದ ಕಾರು ಚಲಾಯಿಸಿದ ಪರಿಣಾಮವಾಗಿ ನಿಯಂತ್ರಣ ತಪ್ಪಿದ ಕಾರು ಫಾರೆಸ್ಟ್ ಗೇಟ್ ಸಮೀಪ ಮಗುಚಿ ಬಿದ್ದಿತೆನ್ನಲಾಗಿದೆ.

ಘಟನೆಯಲ್ಲಿ ಮುಂದಿನ ಸೀಟಿನಲ್ಲಿ ಕುಳಿತಿದ್ದ ವಿವೇಕ್ ಮುನ್ಸಿ ತೀವ್ರ ಗಾಯಗೊಂಡು ಸ್ಥಳದಲ್ಲೇ ಸಾವಿಗೀಡಾದರೆ, ಹಿಂದಿನ ಸೀಟಿನಲ್ಲಿದ್ದ ದರ್ಶನ್ ಆರಾಧ್ಯ ಮತ್ತು ಕಾರ್ತಿಕ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದರು. ಈ ಬಗ್ಗೆ ಗ್ರಾಮಾಂತರ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಈ ಬಗ್ಗೆ ಒಂದನೇ ಅಧಿಕ ಹಿರಿಯ ಸಿ.ಜೆ. ಮತ್ತು ಜೆ.ಎಂ.ಎಂ.ಸಿ. ನ್ಯಾಯಾಲಯದ ನ್ಯಾಯಾಧೀಶರಾದ  ದ್ಯಾವಪ್ಪ ಅವರು ವಿಚಾರಣೆ ನಡೆಸಿದ ಸಂದರ್ಭ ಮೋಹಿತ್ ವಿರುದ್ಧ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಆಗಸ್ಟ್ ೧ ರಂದು ತೀರ್ಪು ನೀಡಿದ್ದು, ಆರೋಪಿಗೆ ೯ ತಿಂಗಳು ಕಾರಾಗೃಹ ಶಿಕ್ಷೆ ಹಾಗೂ ೪ ಸಾವಿರ ರೂ. ದಂಡ ವಿಧಿಸಿದ್ದಾರೆ. ದಂಡ ತೆರಲು ತಪ್ಪಿದಲ್ಲಿ ಮತ್ತೆ ೬೦ ದಿನಗಳ ಕಾರಾಗೃಹ ಶಿಕ್ಷೆ ಅನುಭವಿಸುವಂತೆ ತೀರ್ಪಿನಲ್ಲಿ ಆದೇಶಿಸಿದ್ದಾರೆ.

ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಕವಿತಾ ಎಚ್.ಡಿ. ಅವರು ವಾದ ಮಂಡಿಸಿದ್ದರು. ಗ್ರಾಮಾಂತರ ಪೊಲೀಸರು ಸಾಕ್ಷಿದಾರರನ್ನು ಸಮರ್ಪಕವಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಸಹಕರಿಸಿದ್ದರು.

Driver sentenced to 9 months in prison for death in accident

Share

Leave a comment

Leave a Reply

Your email address will not be published. Required fields are marked *

Don't Miss

ದ್ವೇಷ ಭಾಷಣಗಳ ಆಧಾರಲ್ಲಿಯೇ ಸಂಘಟನೆ ಕಟ್ಟಲು ಹೊರಟಿರುವುದು ಖಂಡನೀಯ

ಚಿಕ್ಕಮಗಳೂರು : ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಮತ್ತು ಉಡುಪಿ ಕ್ಷೇತ್ರದ ಶಾಸಕ ಯಶ್ಪಾಲ್ ಸುವರ್ಣ ವಿಪರೀತವಾದ ದ್ವೇಷ ಭಾಷಣಗಳ ಆಧಾರಲ್ಲಿಯೇ ಸಂಘಟನೆಯನ್ನು ಕಟ್ಟಲು ಹೊರಟಿರುವುದು ಖಂಡನೀಯ ಎಂದು ಕೆ.ಪಿ.ಸಿ.ಸಿ...

ಕಾವೇರಿ ನೀರು ತಮಿಳುನಾಡಿಗೆ ಹರಿಸದಂತೆ ಒತ್ತಾಯಿಸಿ ಪ್ರತಿಭಟನೆ

ಚಿಕ್ಕಮಗಳೂರು:  ಕಾವೇರಿ ನೀರನ್ನು ನೆರೆರಾಜ್ಯ ತಮಿಳುನಾಡಿಗೆ ಹರಿಬಿಡದೇ ರಾಜ್ಯದ ಜನರಿಗೆ ಉಳಿಸಿಕೊಡಬೇಕು ಎಂದು ಆಗ್ರಹಿಸಿ ಶನಿವಾರ ಜಿಲ್ಲಾ ಕನ್ನಡಸೇನೆ ಕಾರ್ಯಕರ್ತರು ನಗರದ ಆ ಜಾದ್‌ಪಾರ್ಕ್ ವೃತ್ತದ ಸಮೀಪ ಪ್ರತಿಭಟನೆ ನಡೆಸಿ ಆಕ್ರೋಶ...

Related Articles

ಬಿಜೆಪಿ ಮುಖಂಡರಾದ ಸಿ. ಟಿ.ರವಿರವರ ಹೇಳಿಕೆ ಹಾಸ್ಯಸ್ಪದ

ಚಿಕ್ಕಮಗಳೂರು: ಜಿಲ್ಲೆಗೆ ಮಂತ್ರಿ ಸ್ಥಾನ ಡಿ.ಕೆ.ಶಿವಕುಮಾರ್ ರವರ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಸಿಕ್ಕಿಲ್ಲ ಎಂಬ ವಿಧಾನ ಪರಿಷತ್...

ಎಂಎಲ್‌ಸಿ ಆಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ

ಬೆಂಗಳೂರು: ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ಆಯ್ಕೆಯಾದ ಕಾಂಗ್ರೆಸ್‌ನ ಎ.ವಿ. ಗಾಯತ್ರಿ ಶಾಂತೇಗೌಡ...

ಕೊಟ್ಟಿಗೆಹಾರದಲ್ಲಿ ಭೀಕರ ಅಪಘಾತದಲ್ಲಿ ಮೂವರು ಸಾವು 

ಮೂಡಿಗೆರೆ: ತಾಲೂಕಿನ ಕೊಟ್ಟಿಗೆಹಾರದ ಪೆಟ್ರೋಲ್ ಪಂಪ್ ಮುಂಭಾಗ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ...

ನೀರಿನ ಸಮಸ್ಯೆ ತಲೆದೋರದಂತೆ ಭದ್ರಾ ಮೇಲ್ದಂಡೆ ನಾಲೆ ಮೂಲಕ ನೀರು ಹರಿಸಲು ಕ್ರಮ

ಚಿಕ್ಕಮಗಳೂರು:  ತರೀಕೆರೆ, ಕಡೂರು, ಅಜ್ಜಂಪುರ ತಾಲ್ಲೂಕಿನಲ್ಲಿ ಮಳೆ ಅಭಾವದಿಂದಾಗಿ ಬರಗಾಲದ ಸ್ಥಿತಿ ತಲೆದೋರಿದೆ. ಕುಡಿಯುವ ನೀರಿನ...