Home namma chikmagalur chikamagalur ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು
chikamagalurCrime NewsHomeLatest Newsnamma chikmagalur

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Share
Share

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ ಮೇಲೆ ಅನುಮಾನ ವ್ಯಕ್ತಪಡಿಸಿ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಶಿವಮೊಗ್ಗ ಜಿಲ್ಲೆಯ ಓಟಿ ರಸ್ತೆಯ ಆಜಾದ್ ನಗರ ನಿವಾಸಿ ಹಾಗೂ ಆಟೋ ಚಾಲಕರಾದ ತನ್ವೀರ್ ಅಹಮದ್ ಅವರು ನೀಡಿದ ದೂರಿನ ಪ್ರಕಾರ, ಕಳೆದ ಮಾರ್ಚ್ 24ರಂದು ಮಾಗುಂಡಿ ಗ್ರಾಮದಲ್ಲಿ ನಡೆದ ಸಂಬಂಧಿಕರಾದ ರಫಾ ಅವರ ಮದುವೆ ಕಾರ್ಯಕ್ರಮಕ್ಕೆ ಕುಟುಂಬ ಸಮೇತರಾಗಿ ತೆರಳಿದ್ದರು. ಮದುವೆ ಹಾಗೂ ಊಟದ ಕಾರ್ಯಕ್ರಮ ಮುಗಿದ ಬಳಿಕ ಮಧ್ಯರಾತ್ರಿ ಮದರಂಗಿ ಶಾಸ್ತ್ರ ನಡೆಯುತ್ತಿದ್ದ ವೇಳೆ, ತಾವು ತಂದಿದ್ದ ಬ್ಯಾಗ್ ಅನ್ನು ಸಂಬಂಧಿಕರಾದ ಮನ್ಸೂರ್ ಅಹಮದ್ ಅವರ ಮನೆಯ ಕೊಠಡಿಯಲ್ಲಿ ಇರಿಸಲಾಗಿತ್ತು.

ಬಳಿಕ ಬ್ಯಾಗ್ ಪರಿಶೀಲಿಸಿದಾಗ ಅದರಲ್ಲಿದ್ದ ಸುಮಾರು 25 ಗ್ರಾಂ ತೂಕದ ತಾಳಿ ಸರ ಹಾಗೂ ಏಳು ಚಿನ್ನದ ಉಂಗುರಗಳು ಕಾಣೆಯಾಗಿದ್ದವು. ಕಳುವಾದ ಚಿನ್ನಾಭರಣಗಳ ಒಟ್ಟು ಮೌಲ್ಯ ಸುಮಾರು ₹3.75 ಲಕ್ಷ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಸಂಬಂಧ ತಮ್ಮ ಸಂಬಂಧಿಕರಾದ ಮುಜಾಯಿದ್ ಪಾಷಾ ಹಾಗೂ ಅವರ ಪತ್ನಿ ಶಮ್ಮಿ (ಅಕ್ತರ್ ಉನ್ನೀಸಾ) ಅವರ ಮೇಲೆ ಅನುಮಾನವಿದ್ದು, ಅವರು ಸಂಬಂಧಿಕರಾಗಿದ್ದ ಕಾರಣ ಚಿನ್ನಾಭರಣಗಳನ್ನು ಹಿಂತಿರುಗಿಸುವ ನಿರೀಕ್ಷೆಯಲ್ಲಿ ಇದುವರೆಗೆ ದೂರು ನೀಡಿರಲಿಲ್ಲ ಎಂದು ತನ್ವೀರ್ ಅಹಮದ್ ತಿಳಿಸಿದ್ದಾರೆ.

ಆದರೆ, ಹಲವು ತಿಂಗಳು ಕಳೆದರೂ ಚಿನ್ನಾಭರಣಗಳನ್ನು ಹಿಂತಿರುಗಿಸದ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರೊಂದಿಗೆ ಚರ್ಚಿಸಿ ಆಗಸ್ಟ್ 4ರಂದು ಬಾಳೆಹೊನ್ನೂರು ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

ದೂರಿನ ಆಧಾರದ ಮೇಲೆ ಬಾಳೆಹೊನ್ನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕಳುವಾದ ಚಿನ್ನಾಭರಣಗಳ ಪತ್ತೆ ಹಾಗೂ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ತನಿಖೆ ಆರಂಭಿಸಿದ್ದಾರೆ.

Gold ornaments worth ₹3.75 lakh stolen from wedding house

Share

Leave a comment

Leave a Reply

Your email address will not be published. Required fields are marked *

Don't Miss

ರಾಜ್ಯ ಮಟ್ಟದ ಕಬಡ್ಡಿಯಲ್ಲಿ ಚಿಕ್ಕಮಗಳೂರು ಮಹಿಳಾ ತಂಡಕ್ಕೆ ಚಾಂಪಿಯನ್ ಪಟ್ಟ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಸಾರಿಗೆ ಸಚಿವರಾದ ಶ್ರೀ ಬೈರತಿ ಸುರೇಶ್ ಅವರ ನೇತೃತ್ವದಲ್ಲಿ ಜುಲೈ 27ರಿಂದ 29ರವರೆಗೆ ಬೆಂಗಳೂರಿನ ದೇವಸಂದ್ರದಲ್ಲಿ ನಡೆದ ರಾಜ್ಯ ಮಟ್ಟದ ಪುರುಷ ಹಾಗೂ ಮಹಿಳೆಯರ ಕಬಡ್ಡಿ ಪಂದ್ಯಾವಳಿಯಲ್ಲಿ...

ಅಂಚೆ ಮತ ಮರು ಎಣಿಕೆ ಯಥಾಸ್ಥಿತಿ ಮುಂದುವರಿಸಲು ಸೂಚನೆ

ಶೃಂಗೇರಿ: ವಿಧಾನಸಭಾ ಕ್ಷೇತ್ರದ ಅಂಚೆ ಮತ ಮರು ಎಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಯಥಾಸ್ಥಿತಿ ಮುಂದುವರಿಸಲು ಸೂಚನೆ ನೀಡಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಆಗಸ್ಟ್‌ 19ಕ್ಕೆ ಮುಂದೂಡಿಕೆ ಮಾಡಿದೆ. 2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ...

Related Articles

ಕಾಂಗ್ರೆಸ್ ಸರ್ಕಾರದ ಸಂಪುಟ ವಿಸ್ತರಣೆ ಭ್ರಷ್ಠಚಾರಕ್ಕೆ ಬಹುಮಾನ

ಚಿಕ್ಕಮಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ವಿಸ್ತರಣೆ ಚಿಕ್ಕಮಗಳೂರು ಜಿಲ್ಲೆಗೆ...

ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು-ಸಹಾಯಕಿಯರ ಹುದ್ದೆಗಳಿಗೆ ಅರ್ಜಿ

ಚಿಕ್ಕಮಗಳೂರು: ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು...

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು...

ಬೀರೂರಿನಲ್ಲಿ ನೋಟು ಬದಲಾವಣೆ ನೆಪದಲ್ಲಿ ₹12 ಲಕ್ಷ ವಂಚನೆ

ಚಿಕ್ಕಮಗಳೂರು: ₹500 ಮುಖಬೆಲೆಯ ನೋಟುಗಳಿಗೆ ಬದಲಾಗಿ ₹100 ಮುಖಬೆಲೆಯ ನೋಟುಗಳಲ್ಲಿ ಹೆಚ್ಚಿನ ಹಣ ನೀಡುವುದಾಗಿ ನಂಬಿಸಿ...