Home ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು-ಸಹಾಯಕಿಯರ ಹುದ್ದೆಗಳಿಗೆ ಅರ್ಜಿ
HomeLatest Newsnamma chikmagalurTarikere

ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು-ಸಹಾಯಕಿಯರ ಹುದ್ದೆಗಳಿಗೆ ಅರ್ಜಿ

Share
Share

ಚಿಕ್ಕಮಗಳೂರು: ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಆಯಾ ಕಂದಾಯ ಗ್ರಾಮ, ನಗರ ಕಂದಾಯ ವಾರ್ಡ್‌ಗಳ ಅರ್ಹ ಅಭ್ಯರ್ಥಿಗಳಿಂದ ಜಿಲ್ಲೆಯ ಒಟ್ಟು ೨೯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ೨೦೩ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಚಿಕ್ಕಮಗಳೂರು ತಾಲ್ಲೂಕಿನಲ್ಲಿ ೦೩ ಅಂಗನವಾಡಿ ಕಾರ್ಯಕರ್ತೆಯರು, ೫೧ ಸಹಾಯಕಿಯರ ಹುದ್ದೆಗಳು, ಕಡೂರು ತಾಲ್ಲೂಕಿನಲ್ಲಿ ೮ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ೩೯ ಸಹಾಯಕಿಯರ ಹುದ್ದೆಗಳು, ತರೀಕೆರೆ ತಾಲ್ಲೂಕಿನಲ್ಲಿ ೭ ಕಾರ್ಯಕರ್ತೆಯರು, ೨೩ ಸಹಾಯಕಿಯರು, ಶೃಂಗೇರಿಯಲ್ಲಿ ೦೧ ಕಾರ್ಯಕರ್ತೆ ೧೧ ಸಹಾಯಕಿಯರು, ಕೊಪ್ಪ ತಾಲ್ಲೂಕಿನಲ್ಲಿ ೭ ಕಾರ್ಯಕರ್ತೆಯರು ಹಾಗೂ ೧೩ ಸಹಾಯಕಿಯರು, ನರಸಿಂಹರಾಜಪುರ ತಾಲ್ಲೂಕಿನಲ್ಲಿ ೦೨ ಕಾರ್ಯಕರ್ತೆಯರು, ೧೯ ಸಹಾಯಕಿಯರು ಹಾಗೂ ಮೂಡಿಗೆರೆಯಲ್ಲಿ ೦೧ ಕಾರ್ಯಕರ್ತೆ ಹಾಗೂ ೪೭ ಸಹಾಯಕಿಯರ ಹುದ್ದೆಗಳು ಖಾಲಿ ಇದ್ದು, ಇವುಗಳಿಗೆ ನೇಮಕಾತಿ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ.

ಜಿಲ್ಲೆಯ ಅರ್ಹ ಅಭ್ಯರ್ಥಿಗಳು ಸಂಬಂಧಪಟ್ಟ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೆರಿಗಳಿಂದ ಅರ್ಜಿಗಳನ್ನು ಪಡೆದು, ಭರ್ತಿ ಮಾಡಲಾದ ಅರ್ಜಿ ಮತ್ತು ಪೂರಕ ದಾಖಲೆಗಳನ್ನು ಮುಚ್ಚಿದ ಲಕೋಟೆಯಲ್ಲಿ ಆಗಸ್ಟ್ ೩೧ರ ಸಂಜೆ ೫.೩೦ರೊಳಗೆ ಆಯಾ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗಳಲ್ಲಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ಸಂಬಂಧಪಟ್ಟ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಕಚೆರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ಅಧ್ಯಕ್ಷರಾದ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Applications for the posts of Anganwadi workers and helpers in the district

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ ಸಮೇತ ಪರಾರಿಯಾಗಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಬುಕ್ಕಾಂಬೂದಿ ಗ್ರಾಮದ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು ಬರ ಪಟ್ಟಿಯಿಂದ ಕೈಬಿಟ್ಟಿರುವುದು ಸರಿಯಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ...

Related Articles

ಎರಡು ತಿಂಗಳ ಸುದೀರ್ಘ ವಿರಾಮದ ಬಳಿಕ ಜಿಲ್ಲೆಯಾದ್ಯಂತ ಭರ್ಜರಿ ಮಳೆ

ಚಿಕ್ಕಮಗಳೂರು: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕಂಗಾಲಾಗಿದ್ದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಜನರಿಗೆ...

ನೀಲಕುರಿಂಜಿ ಅಲ್ಲ, ಚಂದ್ರದ್ರೋಣದಲ್ಲಿ ಅರಳಿದ್ದು ಗುರಿಂಜೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ–ಬಾಬಾಬುಡನ್‌ಗಿರಿ ಪ್ರದೇಶದಲ್ಲಿ ನೇರಳೆ ಬಣ್ಣದ ಹೂವುಗಳು ಅರಳಿ...

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ

ಚಿಕ್ಕಮಗಳೂರು: ವಿದ್ಯುತ್ ಪೂರೈಕೆಯಲ್ಲಿ ಇತ್ತೀಚೆಗೆ ಉಂಟಾದ ತಾತ್ಕಾಲಿಕ ವ್ಯತ್ಯಯವನ್ನು ದೊಡ್ಡ ಸಮಸ್ಯೆಯಾಗಿ ಬಿಂಬಿಸುವ ಅಗತ್ಯವಿಲ್ಲ. ಮುಂದಿನ...

ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು

ಚಿಕ್ಕಮಗಳೂರು: ಬರಗಾಲದ ಸಂದರ್ಭದಲ್ಲಿ ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು. ನಿಯಮಾವಳಿ...