ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆಯ ಜಂಟಿ ಕಾರ್ಯದರ್ಶಿ ಜೇಕಬ್ ಎಲ್. ಅವರ ಸೂಚನೆ ಹಾಗೂ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ PMGSY ಮತ್ತು PM-ಜನಮನ್ ಯೋಜನೆಯಡಿ ರಸ್ತೆ ಕಾಮಗಾರಿಗೆ ಅನುಮತಿ ನೀಡುವಂತೆ ಮನವಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಈ ಪರಿಶೀಲನೆ ಕೈಗೊಳ್ಳಲಾಯಿತು.
ಪರಿಶೀಲನೆಯಲ್ಲಿ ನಿವೃತ್ತ ಇಂಜಿನಿಯರ್ ಎಚ್.ಎಂ. ಶಿವಪ್ರಕಾಶ್, ಕರ್ನಾಟಕ ಹೌಸಿಂಗ್ ಬೋರ್ಡ್ನ ಮಾಜಿ ಅಧ್ಯಕ್ಷ ಜಿ.ಎಚ್. ಹಾಲಪ್ಪ, ಸಮಾಜಸೇವಕರಾದ ಬಿ.ಕೆ. ಲಕ್ಷ್ಮಣ್ ಕುಮಾರ್, ಮೈದಿನ್ ಗೋಕ್ಲೆ ಹಾಗೂ ಸುಂದರ್ ಪದ್ಮನಾಭ ಭಾಗವಹಿಸಿದ್ದರು. ಚಿಕ್ಕಮಗಳೂರು ಯೋಜನಾ ವಿಭಾಗದ ಕಾರ್ಯಪಾಲಕ ಎಂಜಿನಿಯರ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮತ್ತು ರಾಜ್ಯ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆಯ ಅಧಿಕಾರಿಗಳೂ ಉಪಸ್ಥಿತರಿದ್ದರು.
ಈ ರಸ್ತೆ ನಿರ್ಮಾಣವಾದರೆ ಧರ್ಮಸ್ಥಳ ಹಾಗೂ ಲಕ್ಷದೀಪೋತ್ಸವಕ್ಕೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲಿದೆ. ಅಲ್ಲದೆ, ಗಡಿ ಭಾಗದ ಬುಡಕಟ್ಟು ಸಮುದಾಯಕ್ಕೆ ಆರೋಗ್ಯ, ಶಿಕ್ಷಣ ಹಾಗೂ ಮಾರುಕಟ್ಟೆ ಸಂಪರ್ಕ ಸುಲಭವಾಗುವುದರ ಜೊತೆಗೆ ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ನಡುವಿನ ಅಂತರ ಕಡಿಮೆಯಾಗುವುದರಿಂದ ರೈತರು ಮತ್ತು ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಪರಿಶೀಲನಾ ತಂಡ ಅಭಿಪ್ರಾಯಪಟ್ಟಿತು.
ಪ್ರಸ್ತುತ ಮಳೆಗಾಲದಲ್ಲಿ ಈ ಕಚ್ಚಾ ರಸ್ತೆ ಅತ್ಯಂತ ಅಸುರಕ್ಷಿತವಾಗಿರುವುದರಿಂದ PMGSY ಗುಣಮಟ್ಟದ ಪಕ್ಕಾ ರಸ್ತೆ ನಿರ್ಮಾಣ ಅತ್ಯಗತ್ಯ ಎಂಬುದನ್ನು ಅಧಿಕಾರಿಗಳು ಒತ್ತಿ ಹೇಳಿದರು.
ಜಂಟಿ ಸ್ಥಳ ಪರಿಶೀಲನೆಯ ವರದಿಯನ್ನು ಸಿದ್ಧಪಡಿಸಿ PMGSY–4 ಅಥವಾ ರಾಜ್ಯ ಸರ್ಕಾರದ ಯೋಜನೆಯಡಿ ಅನುಮೋದನೆಗಾಗಿ ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆ ಹಾಗೂ ಬುಡಕಟ್ಟು ಕಲ್ಯಾಣ ಸಚಿವಾಲಯಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಲಾಯಿತು.
Joint site inspection under PMGSY on Shirila-Bairapura road
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದ ಮಹತ್ವದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಇಂದು ಐತಿಹಾಸಿಕ ತೀರ್ಪು ನೀಡಿದೆ. ನ್ಯಾಯಮೂರ್ತಿ ಎಸ್.ಜಿ. ಪಂಡಿತ್ ಅವರಿದ್ದ ಏಕಸದಸ್ಯ...
ByN Raju Chief EditorAugust 1, 2026ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ, ಪ್ರವಾಹ ಹಾಗೂ ಭೂಕುಸಿತದ ಆತಂಕದ ಹಿನ್ನೆಲೆಯಲ್ಲಿ ಜಿಲ್ಲೆಯ ನರಸಿಂಹರಾಜಪುರ, ಶೃಂಗೇರಿ ಮತ್ತು ಕೊಪ್ಪ ತಾಲ್ಲೂಕುಗಳ ಎಲ್ಲ ಅಂಗನವಾಡಿ ಕೇಂದ್ರಗಳು,...
ByN Raju Chief EditorJuly 31, 2026ಚಿಕ್ಕಮಗಳೂರು: ಪೆಟ್ರೋಲ್ ಬಂಕ್ನಲ್ಲಿ ಗ್ರಾಹಕರಿಗೆ ಅಳತೆಯಲ್ಲಿ ಮೋಸ ಮಾಡುತ್ತಿರುವ ಆರೋಪ ಚಿಕ್ಕಮಗಳೂರು ಕೆಎಸ್ಆರ್ಟಿಸಿ (KSRTC) ಬಸ್...
ByN Raju Chief EditorAugust 7, 2026ಚಿಕ್ಕಮಗಳೂರು: ಜಿಲ್ಲಾಡಳಿತ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳ ಕಾರ್ಯಾಲಯವು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯ...
ByN Raju Chief EditorAugust 7, 2026ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ...
ByN Raju Chief EditorAugust 7, 2026ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ...
ByN Raju Chief EditorAugust 6, 2026Excepteur sint occaecat cupidatat non proident
Leave a comment