Home namma chikmagalur chikamagalur ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ
chikamagalurHomeLatest Newsnamma chikmagalur

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

Share
Share

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ ಆದಿವಾಸಿಗಳ ಕಲಾಮೇಳ, ಸಮಾವೇಶ ಹಾಗೂ ಪಾರಂಪರಿಕ ಆದಿವಾಸಿ ದಾದಿಯರಿಗೆ (ಸೂಲಗಿತ್ತಿಯರಿಗೆ) ‘ಆದಿವಾಸಿ ಸಿರಿ ಪ್ರಶಸ್ತಿ’ ಪ್ರದಾನ ಸಮಾರಂಭ ನಡೆಯಲಿದೆ ಎಂದು ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಪಿ. ರಾಜೇಶ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 9 ಗಂಟೆಗೆ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಬಳಿಕ ವಿವಿಧ ಬುಡಕಟ್ಟುಗಳ ಸಾಂಪ್ರದಾಯಿಕ ಕಲಾ ತಂಡಗಳೊಂದಿಗೆ ಬೃಹತ್ ಕಲಾಮೆರವಣಿಗೆ ರ್ಯಾಮಿನ್ ಟೌನ್ ರಸ್ತೆ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತ, ಕಿತ್ತೂರು ರಾಣಿ ಚೆನ್ನಮ್ಮ ವೃತ್ತ ಹಾಗೂ ಮಿನಿ ವಿಧಾನಸೌಧ ಮಾರ್ಗವಾಗಿ ಜೆಪಿ ನಗರದ ನೆಹರೂ ಕ್ರೀಡಾಂಗಣ ತಲುಪಲಿದೆ ಎಂದು ಹೇಳಿದರು.

ಬೆಳಗ್ಗೆ 11 ಗಂಟೆಗೆ ನೆಹರೂ ಕ್ರೀಡಾಂಗಣದಲ್ಲಿ ವೇದಿಕೆ ಕಾರ್ಯಕ್ರಮ ಆರಂಭವಾಗಲಿದ್ದು, ರಾಜ್ಯದ 49 ಬುಡಕಟ್ಟು ಸಮುದಾಯಗಳ ಸುಮಾರು 30 ಸಾವಿರಕ್ಕೂ ಹೆಚ್ಚು ಆದಿವಾಸಿಗಳು ಭಾಗವಹಿಸುವ ನಿರೀಕ್ಷೆಯಿದೆ. ಹುಬ್ಬಳ್ಳಿ, ಧಾರವಾಡ, ಗದಗ, ಬಾಗಲಕೋಟೆ, ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಸಾವಿರಾರು ಜನರು ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಕಲಾಮೇಳಕ್ಕೆ ನವಲಗುಂದ ಶಾಸಕ ಎನ್. ಕೋನರೆಡ್ಡಿ ಚಾಲನೆ ನೀಡಲಿದ್ದು, ಲೋಕೋಪಯೋಗಿ ಇಲಾಖೆ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಹುಬ್ಬಳ್ಳಿ-ಧಾರವಾಡ (ಪೂರ್ವ) ಶಾಸಕ ಪ್ರಸಾದ್ ಅಬ್ಬಯ್ಯ ಅವರು ‘ಆದಿವಾಸಿ ಸಿರಿ ಪ್ರಶಸ್ತಿ’ ಪ್ರದಾನ ಮಾಡಲಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಘನ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ತಿನ ರಾಜ್ಯಾಧ್ಯಕ್ಷ ಎಂ. ಕೃಷ್ಣಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಹಂಪಿ ವಿಶ್ವವಿದ್ಯಾಲಯದ ಬುಡಕಟ್ಟು ಅಧ್ಯಯನ ಸಂಸ್ಥೆಯ ನಿವೃತ್ತ ಮುಖ್ಯಸ್ಥ ಪ್ರೊ. ಕೆ.ಎಂ. ಮೇತ್ರಿ ಮುಖ್ಯ ಭಾಷಣ ಮಾಡಲಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ. ಪಲ್ಲವಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮಹಾಪೌರ ದುರ್ಗಮ್ಮ ಶಶಿಕಾಂತ್ ಬಿಜವಾಡ್, ಸಂಸ್ಕೃತಿ ಚಿಂತಕ ಪ್ರೊ. ಜಿ.ಎನ್. ದೇವಿ, ರಾಷ್ಟ್ರೀಯ ಆದಿವಾಸಿ ಸಮನ್ವಯ ಮಂಚ್ ಅಧ್ಯಕ್ಷ ಅಶೋಕಭಾಯಿ ಚೌಧರಿ, ಉಮೇದಸಿಂಗ್ ರಬಾರಿ, ಮಾಜಿ ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಬುಡ್ನಾ ಸಿದ್ದಿ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್., ಉಪನಿರ್ದೇಶಕ ಶಿವಕುಮಾರ ಸಿ., ಶಾಸಕರಾದ ಸಂತೋಷ್ ಲಾಡ್, ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ಈ ಬಾರಿಯ ವಿಶ್ವ ಆದಿವಾಸಿ ದಿನಾಚರಣೆಯನ್ನು “ಆದಿವಾಸಿ ಶುಶೂಷಕಿ (ದಾದಿ/ಸೂಲಗಿತ್ತಿ)ಯರನ್ನು ಗೌರವಿಸುವುದು: ಜೀವನ ಮತ್ತು ಯೋಗಕ್ಷೇಮವನ್ನು ರಕ್ಷಿಸುವುದು” ಎಂಬ ವಿಶ್ವಸಂಸ್ಥೆಯ ಘೋಷವಾಕ್ಯದಡಿ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಬುಡಕಟ್ಟು ಸಮುದಾಯಗಳಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿರುವ 28 ಮಂದಿ ಪಾರಂಪರಿಕ ಸೂಲಗಿತ್ತಿಯರನ್ನು ‘ಆದಿವಾಸಿ ಸಿರಿ ಪ್ರಶಸ್ತಿ’ ನೀಡಿ ಸನ್ಮಾನಿಸಲಾಗುವುದು ಎಂದು ಪಿ. ರಾಜೇಶ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಶಂಕರ್, ಕುಮಾರ್, ಪ್ರಕಾಶ್ ಹಾಗೂ ಶೋಭಾ ಉಪಸ್ಥಿತರಿದ್ದರು.

32nd State-level World Tribal Day celebration on August 9 in Hubballi

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ ಸಮೇತ ಪರಾರಿಯಾಗಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಬುಕ್ಕಾಂಬೂದಿ ಗ್ರಾಮದ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು ಬರ ಪಟ್ಟಿಯಿಂದ ಕೈಬಿಟ್ಟಿರುವುದು ಸರಿಯಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ...

Related Articles

ಎರಡು ತಿಂಗಳ ಸುದೀರ್ಘ ವಿರಾಮದ ಬಳಿಕ ಜಿಲ್ಲೆಯಾದ್ಯಂತ ಭರ್ಜರಿ ಮಳೆ

ಚಿಕ್ಕಮಗಳೂರು: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕಂಗಾಲಾಗಿದ್ದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಜನರಿಗೆ...

ನೀಲಕುರಿಂಜಿ ಅಲ್ಲ, ಚಂದ್ರದ್ರೋಣದಲ್ಲಿ ಅರಳಿದ್ದು ಗುರಿಂಜೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ–ಬಾಬಾಬುಡನ್‌ಗಿರಿ ಪ್ರದೇಶದಲ್ಲಿ ನೇರಳೆ ಬಣ್ಣದ ಹೂವುಗಳು ಅರಳಿ...

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ

ಚಿಕ್ಕಮಗಳೂರು: ವಿದ್ಯುತ್ ಪೂರೈಕೆಯಲ್ಲಿ ಇತ್ತೀಚೆಗೆ ಉಂಟಾದ ತಾತ್ಕಾಲಿಕ ವ್ಯತ್ಯಯವನ್ನು ದೊಡ್ಡ ಸಮಸ್ಯೆಯಾಗಿ ಬಿಂಬಿಸುವ ಅಗತ್ಯವಿಲ್ಲ. ಮುಂದಿನ...

ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು

ಚಿಕ್ಕಮಗಳೂರು: ಬರಗಾಲದ ಸಂದರ್ಭದಲ್ಲಿ ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು. ನಿಯಮಾವಳಿ...