Home namma chikmagalur chikamagalur ಸಚಿವ ಕೆ.ಜೆ. ಜಾರ್ಜ್ ಬೆಂಗಾವಲು ವಾಹನ ಅಪಘಾತ
chikamagalurHomeLatest Newsnamma chikmagalur

ಸಚಿವ ಕೆ.ಜೆ. ಜಾರ್ಜ್ ಬೆಂಗಾವಲು ವಾಹನ ಅಪಘಾತ

Share
Share

ಚಿಕ್ಕಮಗಳೂರು : ಅಜ್ಜಂಪುರ ಜಿಲ್ಲೆಯ ಬಯಲುಸೀಮೆ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ವೀಕ್ಷಣೆಗಾಗಿ ಪ್ರವಾಸದಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಗಾವಲು (Escort) ವಾಹನ ಅಪಘಾತಕ್ಕೀಡಾದ ಘಟನೆ ಅಜ್ಜಂಪುರ ಪಟ್ಟಣದಲ್ಲಿ ನಡೆದಿದೆ.

ಸಚಿವರು ಅಮೃತ ಮಹಲ್ ತಳಿ ಸಂವರ್ಧನ ಕೇಂದ್ರಕ್ಕೆ ಭೇಟಿ ನೀಡಲು ತೆರಳುತ್ತಿದ್ದಾಗ, ಅವರ ಕಾರಿನ ಮುಂಭಾಗದಲ್ಲಿ ಚಲಿಸುತ್ತಿದ್ದ ಪೊಲೀಸ್ ಜೀಪಿನ ಚಾಲಕ ತಿರುವಿನಲ್ಲಿ ಏಕಾಏಕಿ ದಿಢೀರ್ ಬ್ರೇಕ್ ಹಾಕಿದ್ದಾನೆ. ಈ ವೇಳೆ ವಾಹನವು ಚಾಲಕನ ನಿಯಂತ್ರಣಕ್ಕೆ ಸಿಗದೇ ನೇರವಾಗಿ ಅಮೃತ ಮಹಲ್ ಸಂವರ್ಧನ ಕೇಂದ್ರದ ಮುಖ್ಯ ದ್ವಾರಕ್ಕೆ (ಗೇಟ್‌ಗೆ) ಭೀಕರವಾಗಿ ಡಿಕ್ಕಿಯಾಗಿದೆ.

ಡಿಕ್ಕಿಯ ರಭಸಕ್ಕೆ ಪೊಲೀಸ್ ಜೀಪಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಆದರೆ, ವಾಹನದಲ್ಲಿದ್ದ ಪೊಲೀಸರು ಹಾಗೂ ಸಿಬ್ಬಂದಿಗೆ ಯಾವುದೇ ರೀತಿಯ ಗಂಭೀರ ಗಾಯಗಳಾಗದೇ ಅಪಾಯದಿಂದ ಪಾರಾಗಿದ್ದು, ಭಾರಿ ಅನಾಹುತವೊಂದು ತಪ್ಪಿದಂತಾಗಿದೆ.

Minister K.J. George convoy accident

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ ಸಮೇತ ಪರಾರಿಯಾಗಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಬುಕ್ಕಾಂಬೂದಿ ಗ್ರಾಮದ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು ಬರ ಪಟ್ಟಿಯಿಂದ ಕೈಬಿಟ್ಟಿರುವುದು ಸರಿಯಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ...

Related Articles

ಎರಡು ತಿಂಗಳ ಸುದೀರ್ಘ ವಿರಾಮದ ಬಳಿಕ ಜಿಲ್ಲೆಯಾದ್ಯಂತ ಭರ್ಜರಿ ಮಳೆ

ಚಿಕ್ಕಮಗಳೂರು: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕಂಗಾಲಾಗಿದ್ದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಜನರಿಗೆ...

ನೀಲಕುರಿಂಜಿ ಅಲ್ಲ, ಚಂದ್ರದ್ರೋಣದಲ್ಲಿ ಅರಳಿದ್ದು ಗುರಿಂಜೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ–ಬಾಬಾಬುಡನ್‌ಗಿರಿ ಪ್ರದೇಶದಲ್ಲಿ ನೇರಳೆ ಬಣ್ಣದ ಹೂವುಗಳು ಅರಳಿ...

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ

ಚಿಕ್ಕಮಗಳೂರು: ವಿದ್ಯುತ್ ಪೂರೈಕೆಯಲ್ಲಿ ಇತ್ತೀಚೆಗೆ ಉಂಟಾದ ತಾತ್ಕಾಲಿಕ ವ್ಯತ್ಯಯವನ್ನು ದೊಡ್ಡ ಸಮಸ್ಯೆಯಾಗಿ ಬಿಂಬಿಸುವ ಅಗತ್ಯವಿಲ್ಲ. ಮುಂದಿನ...

ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು

ಚಿಕ್ಕಮಗಳೂರು: ಬರಗಾಲದ ಸಂದರ್ಭದಲ್ಲಿ ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು. ನಿಯಮಾವಳಿ...