Home namma chikmagalur chikamagalur ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿದ ರೈತರ ಸ್ಥಿತಿ ಅವಲೋಕಿಸಿದ ಸಚಿವ ಜಾರ್ಜ್
chikamagalurLatest Newsnamma chikmagalur

ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿದ ರೈತರ ಸ್ಥಿತಿ ಅವಲೋಕಿಸಿದ ಸಚಿವ ಜಾರ್ಜ್

Share
Share

ಚಿಕ್ಕಮಗಳೂರು: ಸಕಾಲದಲ್ಲಿ ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿರುವ ರೈತರು, ಒಣಗಿ ನಿಂತಿರುವ ಭೂಮಿ, ಮಳೆಯ ನಿರೀಕ್ಷೆಯಲ್ಲಿ ಬಿತ್ತನೆ ಮಾಡಿದ್ದ ಬೀಜಗಳು ಮೊಳಕೆ ಒಡೆಯದೆ ಬಿಸಿಲಿನ ಝಳಕ್ಕೆ ಸಿಲುಕಿ ಸುಟ್ಟುಹೋಗಿರುವುದನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅವರು ಅವರು ಜಿಲ್ಲೆಯ ತರೀಕೆರೆ, ಕಡೂರು, ಅಜ್ಜಂಪುರ ಹಾಗೂ ಚಿಕ್ಕಮಗಳೂರು ತಾಲೂಕಿನ ಕೆಲ ಭಾಗಗಳಲ್ಲಿ ಶುಕ್ರವಾರ ಬರ ಸ್ಥಿತಿಯನ್ನು ಪರಿಶೀಲನೆ ನಡೆಸಿದರು.

ಜಿಲ್ಲೆಯ ಮಲೆನಾಡು ಭಾಗದಲ್ಲಿ ಸಾಧಾರಣ ಮಳೆಯಾಗುತ್ತಿದ್ದರೆ ಬಯಲು ಸೀಮೆ ಪ್ರದೇಶಗಳಾದ ಈ ನಾಲ್ಕು ತಾಲೂಕುಗಳಲ್ಲಿ ಮಳೆಯೇ ಇಲ್ಲದೆ ಜನ ತಲೆ ಮೇಲೆ ಕೈ ಹೊತ್ತು ಕೂರುವ ಪರಿಸ್ಥಿತಿ ನಿರ್ಮಾಣವಾಗಿದೆ. ಮೊದಲು ತರಿಕೆರೆ ತಾಲೂಕಿಗೆ ಭೇಟಿ ನೀಡಿದ ಸಚಿವರು ಅಲ್ಲಿನ ಬೆಳೆಗಳ ಸ್ಥಿತಿಗತಿ ಪರಿಶೀಲಿಸಿದರು. ಬಳಿಕ ಅಜ್ಜಂಪುರ ತಾಲೂಕಿನ ಬೇಗೂರು, ಮುದಿಗೆರೆ, ಕಲ್ಕೆರೆ ಭಾಗಕ್ಕೆ ಭೇಟಿ ನೀಡಿದರು. ಈ ಭಾಗದಲ್ಲಿ ಈರುಳ್ಳಿ ನಾಟಿ ಮಾಡಿದ ರೈತರು ಸಂಪೂರ್ಣವಾಗಿ ಬೆಳೆ ನಾಶವಾಗಿರುವುದು ಕಂಡು ಬಂದಿತು. ಕೆರೆಗಳಲ್ಲಿ ಒಂದು ಹನಿ ಸಹ ನೀರಿಲ್ಲದಿರುವುದು ಸಚಿವರು ಗಮನಕ್ಕೆ  ಬಂದಿತು.

ಕಡೂರು ತಾಲೂಕಿನ ಚಿಕ್ಕಬಳ್ಳೇಕೆರೆ ಕಾವಲು, ದೊಣ್ಣೆ ಕೋರನಹಳ್ಳಿ, ಅಣ್ಣೆಗೆರೆ ಭಾಗಕ್ಕೆ ಭೇಟಿ ನೀಡಿದ ಸಂದರ್ಭ ರೈತರು ಕನಿಷ್ಠ ಬಿತ್ತನೆ ಮಾಡಲು ಸಹ ಆಗದಿರುವಷ್ಟು ಕಡಿಮೆ ಮಳೆಯಾಗಿರುವುದು ಕಂಡು ಬಂತು. ಈ ಸಂದರ್ಭದಲ್ಲಿ ರೈತರಿಗೆ ಧೈರ್ಯ ತುಂಬಿದ ಸಚಿವರು, ಮುಂದಿನ ದಿನಗಳಲ್ಲಿ ನಿರೀಕ್ಷೆಯಂತೆ ಮಳೆಯಾದಲ್ಲಿ ಮಾತ್ರ ಬೆಳೆ ಬೆಳೆಯುವಂತೆಯೂ, ಇಲ್ಲದಿದ್ದಲ್ಲಿ ಕಡಿಮೆ ನೀರನ್ನು ಅವಲಂಬಿಸಿ ಬೆಳೆಯುವ ಬೆಳೆಗಳನ್ನು ಅವಲಂಬಿಸುವಂತೆ ಸಲಹೆ ನೀಡಿದರು.

ಮಳೆ ಹಾಗೂ ಬೆಳೆಯ ಬಗ್ಗೆ ಸಚಿವರು ಮಾಹಿತಿ ಬಯಸಿದಾಗ, ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ, ತರೀಕೆರೆಯ ಕೆಲಭಾಗ ಅಜ್ಜಂಪುರ ಹಾಗೂ ಕಡೂರು ತಾಲೂಕುಗಳಲ್ಲಿ ವಾಡಿಕೆಗಿಂತ ಶೇ. ೭೦ಕ್ಕೂ ಕಡಿಮೆ ಮಳೆಯಾಗಿದೆ. ರೈತರಿಗೆ ಇದುವರೆಗೆ ಯಾವುದೇ ಬೆಳೆ ಬೆಳೆಯಲು ಸಾಧ್ಯವಾಗಿಲ್ಲ. ಇದೇ ಪರಿಸ್ಥಿತಿ ಮುಂದುವರಿದಲ್ಲಿ ಈರುಳ್ಳಿ, ಆಲೂಗಡ್ಡೆ, ಹಸಿಮೆಣಸಿನ ಬೆಳೆಗಳ ಬದಲು ರಾಗಿ ಬೆಳೆಯುವಂತೆ ರೈತರಿಗೆ ಸೂಚನೆ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಶಾಸಕರಾದ ಜಿ.ಎಚ್.ಶ್ರೀನಿವಾಸ್, ಕೆ.ಎಸ್.ಆನಂದ್, ಹೆಚ್.ಡಿ.ತಮ್ಮಯ್ಯ, ಜಿಪಂ ಸಿಇಒ ಎಚ್.ಎಸ್.ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ, ಜಂಟಿ ಕೃಷಿ ನಿರ್ದೇಶಕ ತಿರುಮಲೇಶ್, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಮಂಗಳ ಮತ್ತಿತರ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Minister George reviewed the condition of farmers facing hardship due to lack of rain

Share

Leave a comment

Leave a Reply

Your email address will not be published. Required fields are marked *

Don't Miss

ದ್ವೇಷ ಭಾಷಣಗಳ ಆಧಾರಲ್ಲಿಯೇ ಸಂಘಟನೆ ಕಟ್ಟಲು ಹೊರಟಿರುವುದು ಖಂಡನೀಯ

ಚಿಕ್ಕಮಗಳೂರು : ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಮತ್ತು ಉಡುಪಿ ಕ್ಷೇತ್ರದ ಶಾಸಕ ಯಶ್ಪಾಲ್ ಸುವರ್ಣ ವಿಪರೀತವಾದ ದ್ವೇಷ ಭಾಷಣಗಳ ಆಧಾರಲ್ಲಿಯೇ ಸಂಘಟನೆಯನ್ನು ಕಟ್ಟಲು ಹೊರಟಿರುವುದು ಖಂಡನೀಯ ಎಂದು ಕೆ.ಪಿ.ಸಿ.ಸಿ...

ಕಾವೇರಿ ನೀರು ತಮಿಳುನಾಡಿಗೆ ಹರಿಸದಂತೆ ಒತ್ತಾಯಿಸಿ ಪ್ರತಿಭಟನೆ

ಚಿಕ್ಕಮಗಳೂರು:  ಕಾವೇರಿ ನೀರನ್ನು ನೆರೆರಾಜ್ಯ ತಮಿಳುನಾಡಿಗೆ ಹರಿಬಿಡದೇ ರಾಜ್ಯದ ಜನರಿಗೆ ಉಳಿಸಿಕೊಡಬೇಕು ಎಂದು ಆಗ್ರಹಿಸಿ ಶನಿವಾರ ಜಿಲ್ಲಾ ಕನ್ನಡಸೇನೆ ಕಾರ್ಯಕರ್ತರು ನಗರದ ಆ ಜಾದ್‌ಪಾರ್ಕ್ ವೃತ್ತದ ಸಮೀಪ ಪ್ರತಿಭಟನೆ ನಡೆಸಿ ಆಕ್ರೋಶ...

Related Articles

ಬಿಜೆಪಿ ಮುಖಂಡರಾದ ಸಿ. ಟಿ.ರವಿರವರ ಹೇಳಿಕೆ ಹಾಸ್ಯಸ್ಪದ

ಚಿಕ್ಕಮಗಳೂರು: ಜಿಲ್ಲೆಗೆ ಮಂತ್ರಿ ಸ್ಥಾನ ಡಿ.ಕೆ.ಶಿವಕುಮಾರ್ ರವರ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಸಿಕ್ಕಿಲ್ಲ ಎಂಬ ವಿಧಾನ ಪರಿಷತ್...

ಎಂಎಲ್‌ಸಿ ಆಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ

ಬೆಂಗಳೂರು: ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ಆಯ್ಕೆಯಾದ ಕಾಂಗ್ರೆಸ್‌ನ ಎ.ವಿ. ಗಾಯತ್ರಿ ಶಾಂತೇಗೌಡ...

ಕೊಟ್ಟಿಗೆಹಾರದಲ್ಲಿ ಭೀಕರ ಅಪಘಾತದಲ್ಲಿ ಮೂವರು ಸಾವು 

ಮೂಡಿಗೆರೆ: ತಾಲೂಕಿನ ಕೊಟ್ಟಿಗೆಹಾರದ ಪೆಟ್ರೋಲ್ ಪಂಪ್ ಮುಂಭಾಗ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ...

ನೀರಿನ ಸಮಸ್ಯೆ ತಲೆದೋರದಂತೆ ಭದ್ರಾ ಮೇಲ್ದಂಡೆ ನಾಲೆ ಮೂಲಕ ನೀರು ಹರಿಸಲು ಕ್ರಮ

ಚಿಕ್ಕಮಗಳೂರು:  ತರೀಕೆರೆ, ಕಡೂರು, ಅಜ್ಜಂಪುರ ತಾಲ್ಲೂಕಿನಲ್ಲಿ ಮಳೆ ಅಭಾವದಿಂದಾಗಿ ಬರಗಾಲದ ಸ್ಥಿತಿ ತಲೆದೋರಿದೆ. ಕುಡಿಯುವ ನೀರಿನ...