Home namma chikmagalur chikamagalur ಎಂಎಲ್‌ಸಿ ಆಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ
chikamagalurHomeLatest Newsnamma chikmagalur

ಎಂಎಲ್‌ಸಿ ಆಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ

Share
Share

ಬೆಂಗಳೂರು: ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ಆಯ್ಕೆಯಾದ ಕಾಂಗ್ರೆಸ್‌ನ ಎ.ವಿ. ಗಾಯತ್ರಿ ಶಾಂತೇಗೌಡ ಅವರು ಶುಕ್ರವಾರ ವಿಧಾನ ಪರಿಷತ್ ಸದಸ್ಯೆಯಾಗಿ ಪ್ರಮಾಣವಚನ ಸ್ವೀಕರಿಸಿದರು.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಕಚೇರಿಯಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉಪಸ್ಥಿತರಿದ್ದರು. ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಸಚಿವ ನರೇಂದ್ರಸ್ವಾಮಿ, ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹಮದ್, ಶಾಸಕ ಪ್ರಕಾಶ್ ಕೋಳಿವಾಡ್, ಪರಿಷತ್ ಸದಸ್ಯರಾದ ಎಸ್. ರವಿ, ಐವನ್ ಡಿಸೋಜಾ, ಎಚ್.ಪಿ. ಸುಧಾಮದಾಸ್ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.

ಗಾಯತ್ರಿ ಶಾಂತೇಗೌಡ ಅವರ ಎಂಎಲ್‌ಸಿ ಪಯಣ ಹಲವು ವರ್ಷಗಳ ಕಾನೂನು ಹೋರಾಟದ ಬಳಿಕ ಸಿಕ್ಕ ಜಯವಾಗಿದೆ. 2021ರ ಡಿಸೆಂಬರ್‌ನಲ್ಲಿ ನಡೆದ ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂ.ಕೆ. ಪ್ರಾಣೇಶ್ ಅವರು 1,188 ಮತಗಳನ್ನು ಪಡೆದು, ಗಾಯತ್ರಿ ಶಾಂತೇಗೌಡ ಅವರ 1,182 ಮತಗಳ ವಿರುದ್ಧ ಕೇವಲ ಆರು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಒಟ್ಟು 2,410 ಮತಗಳು ಚಲಾವಣೆಯಾಗಿದ್ದು, 39 ಮತಗಳು ಅಸಿಂಧುವಾಗಿದ್ದವು.

ಚುನಾವಣೆಯಲ್ಲಿ ಕೆಲವು ನಾಮನಿರ್ದೇಶಿತ ಸದಸ್ಯರು ಮತ ಚಲಾಯಿಸಿರುವುದನ್ನು ಪ್ರಶ್ನಿಸಿ ಗಾಯತ್ರಿ ಶಾಂತೇಗೌಡ ನ್ಯಾಯಾಲಯದ ಮೆಟ್ಟಿಲೇರಿದ್ದರು. ಹೈಕೋರ್ಟ್‌ನ ನಿರ್ದೇಶನದಂತೆ ಮರು ಮತ ಎಣಿಕೆ ನಡೆಸಲಾಗಿತ್ತು. ಈ ಆದೇಶವನ್ನು ಪ್ರಶ್ನಿಸಿ ಎಂ.ಕೆ. ಪ್ರಾಣೇಶ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಸರ್ವೋಚ್ಚ ನ್ಯಾಯಾಲಯವು ಅರ್ಜಿಯನ್ನು ವಜಾಗೊಳಿಸಿದ ಹಿನ್ನೆಲೆಯಲ್ಲಿ ಮರು ಮತ ಎಣಿಕೆಯ ಫಲಿತಾಂಶಕ್ಕೆ ದಾರಿ ಸುಗಮವಾಯಿತು.

ಮರು ಮತ ಎಣಿಕೆಯ ಬಳಿಕ ಗಾಯತ್ರಿ ಶಾಂತೇಗೌಡ ಅವರು 9 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದು, ಪ್ರಾಣೇಶ್ ಅವರ ಸದಸ್ಯತ್ವ ರದ್ದಾಗಿ, ಉಳಿದ ಅವಧಿಗೆ ಗಾಯತ್ರಿ ಅವರು ವಿಧಾನ ಪರಿಷತ್ ಸದಸ್ಯೆಯಾಗುವಂತಾಯಿತು. ಅವರ ಸದಸ್ಯತ್ವದ ಅವಧಿ 2028ರ ಜನವರಿ 5ರವರೆಗೆ ಇರಲಿದೆ ಎಂದು ವರದಿಯಾಗಿದೆ.

ಸಚಿವ ಸ್ಥಾನ ಕೈತಪ್ಪಿದ ಬೇಸರ

ಎಂಎಲ್‌ಸಿ ಆಗುವ ಸಂಭ್ರಮದ ನಡುವೆಯೇ ಗಾಯತ್ರಿ ಶಾಂತೇಗೌಡ ಅವರಿಗೆ ಮತ್ತೊಂದು ರಾಜಕೀಯ ಬೆಳವಣಿಗೆ ನಿರಾಸೆ ಮೂಡಿಸಿದೆ. ಇತ್ತೀಚಿನ ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಸಚಿವರ ಪಟ್ಟಿಯಲ್ಲಿ ಅವರ ಹೆಸರು ಕೇಳಿಬಂದಿತ್ತು. ಆದರೆ ಅಂತಿಮ ಹಂತದಲ್ಲಿ ಅವರ ಹೆಸರು ಪಟ್ಟಿಯಿಂದ ಕೈಬಿದ್ದ ಪರಿಣಾಮ ಸಚಿವ ಸ್ಥಾನದ ಅವಕಾಶ ಕೊನೆಯ ಕ್ಷಣದಲ್ಲಿ ಕೈತಪ್ಪಿತು. ಈ ಬೆಳವಣಿಗೆ ಅವರ ಬೆಂಬಲಿಗರಲ್ಲಿ ಬೇಸರ ಮೂಡಿಸಿತ್ತು.

ಆದರೂ ಸುದೀರ್ಘ ಕಾನೂನು ಹೋರಾಟದ ಬಳಿಕ ವಿಧಾನ ಪರಿಷತ್ ಪ್ರವೇಶಿಸಿರುವ ಗಾಯತ್ರಿ ಶಾಂತೇಗೌಡ ಅವರ ಪ್ರಮಾಣವಚನ ಸ್ವೀಕಾರವು ಚಿಕ್ಕಮಗಳೂರು ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿ ಗುರುತಿಸಿಕೊಂಡಿದೆ.

Gayatri Shantegowda takes oath as MLC

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ ಸಮೇತ ಪರಾರಿಯಾಗಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಬುಕ್ಕಾಂಬೂದಿ ಗ್ರಾಮದ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು ಬರ ಪಟ್ಟಿಯಿಂದ ಕೈಬಿಟ್ಟಿರುವುದು ಸರಿಯಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ...

Related Articles

ಎರಡು ತಿಂಗಳ ಸುದೀರ್ಘ ವಿರಾಮದ ಬಳಿಕ ಜಿಲ್ಲೆಯಾದ್ಯಂತ ಭರ್ಜರಿ ಮಳೆ

ಚಿಕ್ಕಮಗಳೂರು: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕಂಗಾಲಾಗಿದ್ದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಜನರಿಗೆ...

ನೀಲಕುರಿಂಜಿ ಅಲ್ಲ, ಚಂದ್ರದ್ರೋಣದಲ್ಲಿ ಅರಳಿದ್ದು ಗುರಿಂಜೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ–ಬಾಬಾಬುಡನ್‌ಗಿರಿ ಪ್ರದೇಶದಲ್ಲಿ ನೇರಳೆ ಬಣ್ಣದ ಹೂವುಗಳು ಅರಳಿ...

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ

ಚಿಕ್ಕಮಗಳೂರು: ವಿದ್ಯುತ್ ಪೂರೈಕೆಯಲ್ಲಿ ಇತ್ತೀಚೆಗೆ ಉಂಟಾದ ತಾತ್ಕಾಲಿಕ ವ್ಯತ್ಯಯವನ್ನು ದೊಡ್ಡ ಸಮಸ್ಯೆಯಾಗಿ ಬಿಂಬಿಸುವ ಅಗತ್ಯವಿಲ್ಲ. ಮುಂದಿನ...

ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು

ಚಿಕ್ಕಮಗಳೂರು: ಬರಗಾಲದ ಸಂದರ್ಭದಲ್ಲಿ ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು. ನಿಯಮಾವಳಿ...