Home namma chikmagalur chikamagalur ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಹೆಸರಿನಲ್ಲಿಯೂ ನಕಲಿ ವಾಟ್ಸಪ್ ಖಾತೆ
chikamagalurHomeLatest Newsnamma chikmagalur

ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಹೆಸರಿನಲ್ಲಿಯೂ ನಕಲಿ ವಾಟ್ಸಪ್ ಖಾತೆ

Share
Share

ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಹ್ಯಾಕರ್‌ಗಳು ಮತ್ತು ವಂಚಕರು ವಾಟ್ಸಪ್, ಫೇಸ್‌ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಮುಖರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಜನರನ್ನು ವಂಚಿಸಲು ಹೊಸ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ.

ಇದೇ ಮಾದರಿಯಲ್ಲಿ, ಈಗ ಚಿಕ್ಕಮಗಳೂರು ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅವರ ಹೆಸರಿನಲ್ಲಿಯೂ ನಕಲಿ ವಾಟ್ಸಪ್ ಖಾತೆ ತೆರೆದು ವಂಚಿಸಲು ಯತ್ನಿಸುತ್ತಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ವಂಚಕರು ಥೈಲ್ಯಾಂಡ್ ದೇಶದ ಕಂಟ್ರಿ ಕೋಡ್ ಹೊಂದಿರುವ +66 650318692 ಎಂಬ ನಂಬರ್‌ನಿಂದ ವಾಟ್ಸಪ್ ಬಿಸಿನೆಸ್ ಖಾತೆಯನ್ನು ಸೃಷ್ಟಿಸಿದ್ದಾರೆ.

ಅದಕ್ಕೆ ‘ಡೆಪ್ಯುಟಿ ಕಮಿಷನರ್ ಅಂಡ್ ಡಿಸ್ಟ್ರಿಕ್ಟ್ ಮ್ಯಾಜಿಸ್ಟ್ರೇಟ್’ ಎಂದು ಶೀರ್ಷಿಕೆ ನೀಡಿ, ಜಿಲ್ಲಾಧಿಕಾರಿಗಳ ಅಧಿಕೃತ ಭಾವಚಿತ್ರವನ್ನು ಪ್ರೊಫೈಲ್ ಚಿತ್ರವನ್ನಾಗಿ ಬಳಸಿಕೊಂಡಿದ್ದಾರೆ. ಈ ನಕಲಿ ಖಾತೆಯಿಂದ ವಿವಿಧ ಜನರಿಗೆ ‘ಹೇಗಿದ್ದೀರಿ?’, ‘ಪ್ರಸ್ತುತ ಎಲ್ಲಿದ್ದೀರಿ?’ ಎಂದು ಮೆಸೇಜ್‌ಗಳನ್ನು ಕಳುಹಿಸಿ ಸಂಭಾಷಣೆ ಬೆಳೆಸಲು ಮತ್ತು ನಂಬಿಕೆ ಹುಟ್ಟಿಸಿ ಹಣ ಪಡೆದು ಮೋಸ ಮಾಡಲು ಯತ್ನಿಸಲಾಗುತ್ತಿದೆ.

ಇದು “ಇಂಪರ್ಸನೇಷನ್ ಸ್ಮಾಮ್’ (Impersonation Scam) ಆಗಿದ್ದು, ಈ ನಂಬರ್‌ನಿಂದ ಬರುವ ಯಾವುದೇ ಮೆಸೇಜ್ ಅಥವಾ ಕರೆಗಳಿಗೆ ಸಾರ್ವಜನಿಕರು ಹಾಗೂ ಅಧಿಕಾರಿಗಳು ಪ್ರತಿಕ್ರಿಯಿಸದೇ ಅಥವಾ ವೈಯಕ್ತಿಕ ವಿವರಗಳನ್ನು ಹಂಚಿಕೊಳ್ಳಬಾರದಾಗಿದೆ.

Fake WhatsApp account in the name of District Magistrate Bhanwar Singh Meena

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ ಸಮೇತ ಪರಾರಿಯಾಗಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಬುಕ್ಕಾಂಬೂದಿ ಗ್ರಾಮದ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು ಬರ ಪಟ್ಟಿಯಿಂದ ಕೈಬಿಟ್ಟಿರುವುದು ಸರಿಯಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ...

Related Articles

ಎರಡು ತಿಂಗಳ ಸುದೀರ್ಘ ವಿರಾಮದ ಬಳಿಕ ಜಿಲ್ಲೆಯಾದ್ಯಂತ ಭರ್ಜರಿ ಮಳೆ

ಚಿಕ್ಕಮಗಳೂರು: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕಂಗಾಲಾಗಿದ್ದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಜನರಿಗೆ...

ನೀಲಕುರಿಂಜಿ ಅಲ್ಲ, ಚಂದ್ರದ್ರೋಣದಲ್ಲಿ ಅರಳಿದ್ದು ಗುರಿಂಜೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ–ಬಾಬಾಬುಡನ್‌ಗಿರಿ ಪ್ರದೇಶದಲ್ಲಿ ನೇರಳೆ ಬಣ್ಣದ ಹೂವುಗಳು ಅರಳಿ...

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ

ಚಿಕ್ಕಮಗಳೂರು: ವಿದ್ಯುತ್ ಪೂರೈಕೆಯಲ್ಲಿ ಇತ್ತೀಚೆಗೆ ಉಂಟಾದ ತಾತ್ಕಾಲಿಕ ವ್ಯತ್ಯಯವನ್ನು ದೊಡ್ಡ ಸಮಸ್ಯೆಯಾಗಿ ಬಿಂಬಿಸುವ ಅಗತ್ಯವಿಲ್ಲ. ಮುಂದಿನ...

ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು

ಚಿಕ್ಕಮಗಳೂರು: ಬರಗಾಲದ ಸಂದರ್ಭದಲ್ಲಿ ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು. ನಿಯಮಾವಳಿ...