Home namma chikmagalur chikamagalur ಜಲಜೀವನ್ ಮಿಷನ್ ಕಾಮಗಾರಿ ಸ್ಥಳದಿಂದ ಜನರೇಟರ್, ಪೈಪ್ ಕಳವು
chikamagalurCrime NewsHomeLatest Newsnamma chikmagalur

ಜಲಜೀವನ್ ಮಿಷನ್ ಕಾಮಗಾರಿ ಸ್ಥಳದಿಂದ ಜನರೇಟರ್, ಪೈಪ್ ಕಳವು

Share
Share

ಚಿಕ್ಕಮಗಳೂರು: ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಪೈಪ್‌ಲೈನ್ ಕಾಮಗಾರಿಗೆ ಬಳಸುತ್ತಿದ್ದ 10 ಕೆವಿಎ ಡೀಸೆಲ್ ಜನರೇಟರ್ ಹಾಗೂ 150 ಮೀಟರ್ 63 ಎಂಎಂ ಎಚ್‌ಡಿಪಿಇ ಪೈಪ್ ಕಳವು ಮಾಡಿರುವ ಘಟನೆ ಜಾಗರ ಹೋಬಳಿಯ ಮೇಲಿನ ಹುಲುವತ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.

ಜಾಗರ ಗ್ರಾಮದ ಮಳಲೂರಮ್ಮ ದೇವಸ್ಥಾನದ ಸಮುದಾಯ ಭವನದ ಪಕ್ಕದಲ್ಲಿರುವ ಓಪನ್ ಶೆಡ್‌ನಲ್ಲಿ ಕಾಮಗಾರಿಗೆ ಸಂಬಂಧಿಸಿದ ಸಾಮಗ್ರಿಗಳನ್ನು ಸಂಗ್ರಹಿಸಿಡಲಾಗಿತ್ತು. ಜುಲೈ 26ರಂದು ಕಾಮಗಾರಿ ಮುಗಿಸಿ ಸೈಟ್ ಎಂಜಿನಿಯರ್ ಪ್ರಕಾಶ್ ಅವರು ಜನರೇಟರ್ ಹಾಗೂ ಪೈಪ್‌ಗಳನ್ನು ಶೆಡ್‌ನಲ್ಲೇ ಇಟ್ಟು ತೆರಳಿದ್ದರು ಎನ್ನಲಾಗಿದೆ.

ಜುಲೈ 27ರಂದು ಭಾರಿ ಮಳೆಯ ಹಿನ್ನೆಲೆಯಲ್ಲಿ ಕಾಮಗಾರಿ ಸ್ಥಗಿತಗೊಂಡಿತ್ತು. ಜುಲೈ 28ರಂದು ಬೆಳಗ್ಗೆ ಕೆಲಸಕ್ಕೆ ಬಂದಾಗ 10 ಕೆವಿಎ ಕಿರ್ಲೋಸ್ಕರ್ ಡೀಸೆಲ್ ಜನರೇಟರ್ ಮತ್ತು ಸುಪ್ರೀಂ ಕಂಪನಿಯ 150 ಮೀಟರ್ ಎಚ್‌ಡಿಪಿಇ ಪೈಪ್ ಕಾಣೆಯಾಗಿರುವುದು ಬೆಳಕಿಗೆ ಬಂದಿದೆ.

ಕಾಮಗಾರಿ ಗುತ್ತಿಗೆದಾರರು ಆಗ ಬೆಂಗಳೂರಿನಲ್ಲಿದ್ದ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗಲೂ ವಸ್ತುಗಳು ಪತ್ತೆಯಾಗಿಲ್ಲ. ಸುತ್ತಮುತ್ತ ಹುಡುಕಾಟ ನಡೆಸಿದರೂ ಸುಳಿವು ಸಿಗದ ಹಿನ್ನೆಲೆಯಲ್ಲಿ ಆಗಸ್ಟ್ 7ರಂದು ಮಲ್ಲಂದೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಕಳವಾಗಿರುವ ವಸ್ತುಗಳ ಒಟ್ಟು ಅಂದಾಜು ಮೌಲ್ಯ ₹98 ಸಾವಿರ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ಮಲ್ಲಂದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಳವು ಮಾಡಿರುವ ಆರೋಪಿಗಳ ಪತ್ತೆ ಹಾಗೂ ಕಳವಾದ ಸಾಮಗ್ರಿಗಳಿಗಾಗಿ ತನಿಖೆ ಕೈಗೊಂಡಿದ್ದಾರೆ.

Generator pipes stolen from Jaljeevan Mission work site

Share

Leave a comment

Leave a Reply

Your email address will not be published. Required fields are marked *

Don't Miss

ಪೊಲೀಸ್ ಕಾನ್‌ಸ್ಟೇಬಲ್ ಲಿಖಿತ ಪರೀಕ್ಷೆಗೆ 451 ಅಭ್ಯರ್ಥಿಗಳ ಗೈರು

ಚಿಕ್ಕಮಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವತಿಯಿಂದ ಭಾನುವಾರ ರಾಜ್ಯಾದ್ಯಂತ ನಡೆದ ಪೊಲೀಸ್ ಕಾನ್‌ಸ್ಟೇಬಲ್ (ಸಿವಿಲ್) ಹುದ್ದೆಗಳ ಲಿಖಿತ ಪರೀಕ್ಷೆಯು ಚಿಕ್ಕಮಗಳೂರು ಜಿಲ್ಲೆಯ ೧೬ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಡೆತಡೆ ಇಲ್ಲದೆ...

ವಿಧಾನ ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಇಂದು ಪ್ರಮಾಣ ವಚನ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ನೂತನ ಸದಸ್ಯೆಯಾಗಿ ನೇಮಕಗೊಂಡಿರುವ ಶ್ರೀಮತಿ ಗಾಯತ್ರಿ ಶಾಂತೇಗೌಡ ಅವರು ಸೋಮವಾರ (ಆಗಸ್ಟ್ 3) ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ...

Related Articles

ದೇವಸ್ಥಾನ ಪ್ರವೇಶದ ವಿಚಾರಕ್ಕೆ ಬಾಲಕನ ಮೇಲೆ ಕತ್ತಿಯಿಂದ ಹಲ್ಲೆಗೆ ಯತ್ನ

ಚಿಕ್ಕಮಗಳೂರು: ದೇವಸ್ಥಾನ ಪ್ರವೇಶದ ವಿಚಾರಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿಗೆ ಸೇರಿದ 16 ವರ್ಷದ ಬಾಲಕನಿಗೆ ಅವಾಚ್ಯವಾಗಿ...

ಸ್ಕೂಟರ್ ಮರದ ಬಿಳಲಿಗೆ ಡಿಕ್ಕಿಗೆ ಮಹಿಳೆ ಸ್ಥಳದಲ್ಲೇ ಸಾವು

ಕಡೂರು: ಸ್ಕೂಟರ್ ನಿಯಂತ್ರಣ ತಪ್ಪಿ ಆಲದ ಮರದ ಬಿಳಲಿಗೆ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಕುಳಿತಿದ್ದ...

ಬೀರೂರಿನ ಫೈನಾನ್ಸ್ ಕಂಪನಿಗೆ ₹9.91 ಲಕ್ಷ ವಂಚನೆ

ಬೀರೂರು: ಬೇರೊಬ್ಬ ವ್ಯಕ್ತಿಯಂತೆ ನಟಿಸಿ ಫೈನಾನ್ಸ್‌ನಲ್ಲಿ ಗಿರವಿ ಇಟ್ಟಿರುವ ಚಿನ್ನ ಬಿಡಿಸಿಕೊಡುವುದಾಗಿ ನಂಬಿಸಿ ನವರತ್ನ ಗೋಲ್ಡ್...

ಅಜ್ಜಂಪುರದ ಇಲಿಗೆ ‘ಹಣದ ಮೋಹ’

ಚಿಕ್ಕಮಗಳೂರು : ತುಮಕೂರಿನಲ್ಲಿ ಇತ್ತೀಚೆಗೆ ಇಲಿಯೊಂದು ಚಿನ್ನದ ಆಭರಣಗಳನ್ನು ಎಗರಿಸಿ ಸುದ್ದಿಯಾಗಿದ್ದರೆ, ಇತ್ತ ಚಿಕ್ಕಮಗಳೂರಿನಲ್ಲಿ ಮತ್ತೊಂದು...