Home namma chikmagalur chikamagalur ರಾಜ್ಯ ರೈತಸಂಘದ ಪದಾಧಿಕಾರಿಗಳ ಪ್ರತಿಭಟನೆ
chikamagalurHomeLatest Newsnamma chikmagalur

ರಾಜ್ಯ ರೈತಸಂಘದ ಪದಾಧಿಕಾರಿಗಳ ಪ್ರತಿಭಟನೆ

Share
Share

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಬರಗಾಲದ ಛಾಯೆ ಇರುವುದರಿಂದ ಶಾಸಕರನ್ನೊಳಗೊಂಡು ರೈತ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ ಕರೆದು ಸಮಸ್ಯೆ ಹಾಗೂ ಪರಿಹಾರೋಪಾಯ ಚರ್ಚಿಸುವಂತೆ ಒತ್ತಾಯಿಸಿ ರಾಜ್ಯ ರೈತಸಂಘದ ಪದಾಧಿಕಾರಿಗಳು ಸೋಮವಾರ ನಗರದ ಆಜಾದ್‌ದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಜಿಲ್ಲೆ ಈಗಾಗಲೇ ಮುಂಗಾರು ವೈಫಲ್ಯದಿಂದ ಜಿಲ್ಲೆಯಲ್ಲಿ ಬರದ ಪರಿಸ್ಥಿತಿ ತಲೆದೂರಿದೆ. ಮಲೆನಾಡು, ಅರೆಮಲೆನಾಡು, ಬಯಲು ಪ್ರದೇಶಗಳಲ್ಲಿ ಸರಾಸರಿಗಿಂತ ಮಳೆ ಕಡಿಮೆಯಾಗಿದೆ. ಮಲೆನಾಡಿನಲ್ಲಿ ಸರಿಯಾದ ಮಳೆಯಾಗಿಲ್ಲ. ಬಯಲುಸೀಮೆ ಪ್ರದೇಶಗಳಲ್ಲಿ ಮುಂಗಾರು ಮಳೆಯ ವಿಫಲತೆಯ ಕಾರಣದಿಂದ ಬಿತ್ತನೆ ಮಾಡಲು ಸಾಧ್ಯವಾಗಿಲ್ಲ. ಅಕಾಲಿಕವಾಗಿ ಬಂದ ಮಳೆಗೆ ಅಲ್ಲಲ್ಲಿ ಬಿತ್ತನೆ ವಿಫಲವಾಗಿದೆ.

ಕೊಳವೆ ಬಾವಿ ಆಶ್ರಿತ ರೈತರು ಮಾತ್ರ ಅಲ್ಪಸ್ವಲ್ಪ ಬೆಳೆ ಬೆಳೆದಿದ್ದರು ಬೆಳೆಗೆ ಸರಿಯಾದ ಬೆಲೆ ಸಿಗದೆ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಮಳೆ ಅಭಾವದ ಕಾರಣ ಕೆರೆ ಕಟ್ಟೆಗಳು ನೀರಿಲ್ಲದೆ ಬಣಗುಡುತ್ತಿವೆ. ಕಡೆ ಕುಡಿಯುವ ನೀರಿಗೂ ತೊಂದರೆಯಾಗಿದೆ. ಜಾನುವಾರುಗಳಿಗೆ ಮೇವಿನ ಕೊರೆತೆ ಎದುರಾಗುವ ಸಾಧ್ಯತೆ ಇದೆ ಎಂದಿದ್ದಾರೆ.

ಸರ್ಕಾರ ಇದುವರೆಗೂ ಶಾಶ್ವತ ಬರಗಾಲ ಎದುರಿಸುವ ಯೋಜನೆಯನ್ನು ರೂಪಿಸಬೇಕು, ಬೆಳೆ ಕಳೆದುಕೊಂಡ ರೈತರರಿಗೆ ಕನಿಷ್ಠ ಮಟ್ಟದ ಬೆಳೆ ಪರಿಹಾರ ನೀಡಬೇಕು, ಶಾಶ್ವತನೀರಾವರಿ ಯೋಜನೆಗನ್ನು ರೂಪಿಸಬೇಕು, ಜಿಲ್ಲೆಯ ಎಲ್ಲಾ ನೀರಾವರಿ ಯೋಜನೆಗಳನ್ನು ಈ ವರ್ಷವೇ ಪೂರ್ಣಗೊಳಿಸಬೇಕು. ಭದ್ರ ಉಪಕಣಿವೆಯ ೧-೨ನೇ ಹಂತದ ೩ನೇ ಹಂತದ ಯೋಜನೆಯನ್ನು ಈ ವರ್ಷವೇ ಪೂರ್ಣಗೊಳಿಸಿಬೇಕೆಂದಿದ್ದಾರೆ.

ಫಸಲ್ ಭೀಮ ಯೋಜನೆ ಸೇರಿದಂತೆ ಬೆಳೆವಿಮೆ ಜಾರಿಯಲ್ಲಿ ರೈತರಿಗೆ ಮಾರಕವಾಗಿರುವ ನಿಯಮಗಳನ್ನು ಬದಲಾಯಿಸಿ ರೈತರಿಗೆ ಪೂರಕವಾದ ನಿಯಮಗಳನ್ನು ತರಬೇಕು.ಪರಿಸರ ಸೂಕ್ಷ್ಮ ವಲಯ ಘೋಷಣೆ ವಿರುದ್ಧ ಜಿಲ್ಲೆಯ ಮಲೆನಾಡಿನ ೧೩೭ ಗ್ರಾಮಗಳನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಣೆ ಮಾಡಲು ಸರ್ಕಾರ ಕಸ್ತೂರಿ ರಂಗನ್ ವರದಿ ಜಾರಿಗೆ ತರುವುದು ಮಲೆನಾಡಿಗರಿಗೆ ಮರಣ ಶಾಸನವಾಗುತ್ತದೆ ಎಂದಿದ್ದಾರೆ.

ಪ್ರತಿರೋಧಧ ನಡುವೆಯೂ ವಿಚಾರಣೆ ನಡೆಸದೆ ತೀರ್ಮಾನ ಕೈಗೊಳ್ಳದೆ ಪುನಃ ಸೂಕ್ಷ್ಮ ಪ್ರದೇಶ ಎಂದು ಘೋಷಣೆ ಮಾಡಲು ಕೇಂದ್ರ ಸರ್ಕಾರ ತನ್ನ ಹಠಮಾರಿ ಧೋರಣೆಯನ್ನು ಪ್ರದರ್ಶಿಸುತ್ತಿದ್ದು ಕೂಡಲೇ ಜನರ ಅಹವಾಲನ್ನು ಪರಿಗಣಿಸಿ ತೀರ್ಮಾನ ಕೈಗೊಳ್ಳಬೇಕೆಂದಿದ್ದಾರೆ.

ಈ ಎಲ್ಲಾ ಕಾರಣಗಳಿಗಾಗಿ ಜಿಲ್ಲೆಯ ಎಲ್ಲಾ ಶಾಸಕರು ಹಾಗೂ ರೈತ ಪ್ರತಿನಿಧಿಗಳನ್ನೊಳಗೊಂಡಂತೆ ಜಿಲ್ಲಾಧಿಕಾರಿಗಳು ಸಭೆ ಕರೆದು ಚರ್ಚಿಸಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕಾಗಿ ಈ ಮೂಲಕ ಒತ್ತಾಯಿಸಿದ್ದಾರೆ.

ಈಸಂದರ್ಭದಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಡಿ.ಮಹೇಶ್ ,ಜಿಲ್ಲಾ ಗೌರವಾಧ್ಯಕ್ಷಎಂ.ಸಿ.ಬಸವರಾಜು, ಪ್ರಧಾನಕಾರ್ಯದರ್ಶಿ ಎಂ.ಬಿ.ಚಂದ್ರಶೇಖರ್, ಉಪಾಧ್ಯಕ್ಷ ಕುಮಾರಸ್ವಾಮಿ ಮುಖಂಡರಾದ ದೇವರಾಜೇಗೌಡ, ಶಿವಕುಮಾರ್, ಜೆ.ಎಸ್.ಶಿವಣ್ಣ,ಭದ್ರೇಗೌಡ , ಜಯರಾಮ್, ವೆಂಕಟೇಶ್ ,ಸುನೀಲ್ ಕುಮಾರ್‌ಕೆ.ಟಿ, ಸಿದ್ದೇಗೌಡ, ಯುರಾಜ್ ಸೇರಿದಂತೆ ಹಲವರಿದ್ದರು.

Protest by state farmers’ association office bearers

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ ಸಮೇತ ಪರಾರಿಯಾಗಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಬುಕ್ಕಾಂಬೂದಿ ಗ್ರಾಮದ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು ಬರ ಪಟ್ಟಿಯಿಂದ ಕೈಬಿಟ್ಟಿರುವುದು ಸರಿಯಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ...

Related Articles

ಎರಡು ತಿಂಗಳ ಸುದೀರ್ಘ ವಿರಾಮದ ಬಳಿಕ ಜಿಲ್ಲೆಯಾದ್ಯಂತ ಭರ್ಜರಿ ಮಳೆ

ಚಿಕ್ಕಮಗಳೂರು: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕಂಗಾಲಾಗಿದ್ದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಜನರಿಗೆ...

ನೀಲಕುರಿಂಜಿ ಅಲ್ಲ, ಚಂದ್ರದ್ರೋಣದಲ್ಲಿ ಅರಳಿದ್ದು ಗುರಿಂಜೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ–ಬಾಬಾಬುಡನ್‌ಗಿರಿ ಪ್ರದೇಶದಲ್ಲಿ ನೇರಳೆ ಬಣ್ಣದ ಹೂವುಗಳು ಅರಳಿ...

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ

ಚಿಕ್ಕಮಗಳೂರು: ವಿದ್ಯುತ್ ಪೂರೈಕೆಯಲ್ಲಿ ಇತ್ತೀಚೆಗೆ ಉಂಟಾದ ತಾತ್ಕಾಲಿಕ ವ್ಯತ್ಯಯವನ್ನು ದೊಡ್ಡ ಸಮಸ್ಯೆಯಾಗಿ ಬಿಂಬಿಸುವ ಅಗತ್ಯವಿಲ್ಲ. ಮುಂದಿನ...

ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು

ಚಿಕ್ಕಮಗಳೂರು: ಬರಗಾಲದ ಸಂದರ್ಭದಲ್ಲಿ ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು. ನಿಯಮಾವಳಿ...