Home namma chikmagalur chikamagalur ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ
chikamagalurHomeLatest Newsnamma chikmagalur

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

Share
Share

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು ಜಿಲ್ಲಾಡಳಿತಕ್ಕೆ ಸೋಮವಾರ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ದಸಂಸ ಜಿಲ್ಲಾ ಸಂಚಾಲಕ ಎಲ್.ಎಸ್.ಶ್ರೀಕಾಂತ್ ಶೋಷಿತರು, ದೌರ್ಜನ್ಯ ಕ್ಕೆ ಒಳಗಾದವರ ಪರವಾಗಿ ಹೋರಾಟ ಮಾಡಿದ ಭೂಮಾನಂದ ಅವರ ಹತ್ಯೆ ಅತ್ಯಂತ ಶೋಚನೀಯ. ಇದು ಹೋರಾಟಗಾರರ ಹತ್ತಿಕ್ಕುವ ಕೆಲಸ ಕಾಣದ ಕೈಗಳು ಮಾಡುತ್ತಿವೆ ಎಂದು ದೂರಿದರು.

ಪ್ರಸ್ತುತ ಕಾಲಮಾನದಲ್ಲಿ ಸಾರ್ವಜನಿಕ ಹೋರಾಟ ರೂಪಿಸುವವರಿಗೆ ಬರ್ಬರವಾಗಿ ಹತ್ಯೆಗೈದಿರುವು ದು ಸಮಾಜ ತಲೆತಗ್ಗಿಸುವ ಕೆಲಸವಾಗಿದೆ. ಹೀಗಾಗಿ ಸರ್ಕಾರಗಳು ಸಾಮಾಜಿಕ ಹೋರಾಟಗಾರರಿಗೆ ಸೂಕ್ತ ಭದ್ರತೆ ಒದಗಿಸಬೇಕು. ಹತ್ಯೆಗೈದ ಆರೋಪಿಗಳ ವಿರುದ್ಧ ಸೂಕ್ತ ತನಿಖೆ ನಡೆಸಿ ಮರಣ ದಂಡನೆ ಶಿಕ್ಷೆ ವಿಧಿ ಸಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿವೆ. ಹೋರಾಟಗಾರರನ್ನು ಬೆದರಿಸುವ ವಾತಾವ ರಣ ಸೃಷ್ಟಿಯಾಗಿದೆ. ಈ ಪ್ರಕರಣದ ಹಿಂದೆ ಪ್ರಭಾವಿ ವ್ಯಕ್ತಿಗಳ ಕೈವಾಡವಿದ್ದು ಆರೋಪಿಗಳ ವಿರುದ್ಧ ಯಾ ವುದೇ ಒತ್ತಡಗಳಿಗೆ ಮಣಿಯದೇ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಈಗಾಗಲೇ ಭೂಮಾನಂದ ಕುಟುಂಬವು ಅತ್ಯಂತ ದುಃಖದ ಕಡಲಲ್ಲಿ ಮುಳುಗಿದೆ. ಆದ್ದರಿಂದ ರಾಜ್ಯ ಸರ್ಕಾರ ಕುಟುಂಬದ ಓರ್ವರಿಗೆ ಸರ್ಕಾರಿ ಹುದ್ದೆ ಹಾಗೂ ೨೫ ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸ ಬೇಕು ಎಂದು ಶಿರಸ್ತೇದಾರ್ ಮನು ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಎನ್.ಆರ್.ಪುರ ರಾಮು, ಮಹೇಂದ್ರ ಸ್ವಾಮಿ, ಮಹಿಳಾ ಒಕ್ಕೂಟದ ಜಿಲ್ಲಾ ಸಂಚಾಲಕಿ ಪವಿತ್ರ, ಮುಖಂಡರುಗಳಾದ ಗೋಪಾಲ್, ನಾಗೇಶ್, ಚಂ ದ್ರು, ಮಹೇಶ್, ಸುನೀಲ್, ಅಭಿಷೇಕ್, ಚೇತನ, ಅರುಣಾಕ್ಷಿ, ಸರೋಜಾ, ನಾಗಪ್ಪ ಮುಂತಾದವರಿದ್ದರು.

Appeal for severe punishment for those accused of murdering social activist

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ ಸಮೇತ ಪರಾರಿಯಾಗಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಬುಕ್ಕಾಂಬೂದಿ ಗ್ರಾಮದ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು ಬರ ಪಟ್ಟಿಯಿಂದ ಕೈಬಿಟ್ಟಿರುವುದು ಸರಿಯಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ...

Related Articles

ಎರಡು ತಿಂಗಳ ಸುದೀರ್ಘ ವಿರಾಮದ ಬಳಿಕ ಜಿಲ್ಲೆಯಾದ್ಯಂತ ಭರ್ಜರಿ ಮಳೆ

ಚಿಕ್ಕಮಗಳೂರು: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕಂಗಾಲಾಗಿದ್ದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಜನರಿಗೆ...

ನೀಲಕುರಿಂಜಿ ಅಲ್ಲ, ಚಂದ್ರದ್ರೋಣದಲ್ಲಿ ಅರಳಿದ್ದು ಗುರಿಂಜೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ–ಬಾಬಾಬುಡನ್‌ಗಿರಿ ಪ್ರದೇಶದಲ್ಲಿ ನೇರಳೆ ಬಣ್ಣದ ಹೂವುಗಳು ಅರಳಿ...

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ

ಚಿಕ್ಕಮಗಳೂರು: ವಿದ್ಯುತ್ ಪೂರೈಕೆಯಲ್ಲಿ ಇತ್ತೀಚೆಗೆ ಉಂಟಾದ ತಾತ್ಕಾಲಿಕ ವ್ಯತ್ಯಯವನ್ನು ದೊಡ್ಡ ಸಮಸ್ಯೆಯಾಗಿ ಬಿಂಬಿಸುವ ಅಗತ್ಯವಿಲ್ಲ. ಮುಂದಿನ...

ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು

ಚಿಕ್ಕಮಗಳೂರು: ಬರಗಾಲದ ಸಂದರ್ಭದಲ್ಲಿ ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು. ನಿಯಮಾವಳಿ...