Home namma chikmagalur chikamagalur ಹಗ್ಗದಿಂದ ಕಟ್ಟಿ ಜಾನುವಾರುಗಳ ಹಿಂಸಾತ್ಮಕ ಸಾಗಾಟ: ಇಬ್ಬರ ಬಂಧನ
chikamagalurCrime NewsHomeLatest Newsnamma chikmagalur

ಹಗ್ಗದಿಂದ ಕಟ್ಟಿ ಜಾನುವಾರುಗಳ ಹಿಂಸಾತ್ಮಕ ಸಾಗಾಟ: ಇಬ್ಬರ ಬಂಧನ

Share
Share

ಕೊಪ್ಪ: ಹಿಂಸಾತ್ಮಕವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪದ ಮೇರೆಗೆ ಕೊಪ್ಪ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು, ನಾಲ್ಕು ಜಾನುವಾರುಗಳು ಹಾಗೂ ಸಾಗಾಟಕ್ಕೆ ಬಳಸಿದ್ದ ಮಿನಿ ಗೂಡ್ಸ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಆ.10ರಂದು ಬೆಳಿಗ್ಗೆ ಕೊಪ್ಪ ಠಾಣೆ ಪೊಲೀಸರು ವಿಶೇಷ ಗಸ್ತಿನಲ್ಲಿದ್ದ ವೇಳೆ, ಎನ್‌.ಆರ್‌.ಪುರ ಕಡೆಯಿಂದ ಮಿನಿ ಗೂಡ್ಸ್ ವಾಹನದಲ್ಲಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ದೊರೆತಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಬಾಳಗಡಿ ಫೈರಿಂಗ್ ರೇಂಜ್ ಬಳಿ KA-36-C-0100 ನೋಂದಣಿ ಸಂಖ್ಯೆಯ ಮಾರುತಿ ಸುಜುಕಿ ಸೂಪರ್ ಕ್ಯಾರಿ ಮಿನಿ ಗೂಡ್ಸ್ ವಾಹನವನ್ನು ತಡೆದು ಪರಿಶೀಲಿಸಿದ್ದಾರೆ.

ವಾಹನದಲ್ಲಿ ಎರಡು ಹೆಣ್ಣು ದನಗಳು ಹಾಗೂ ಎರಡು ಗಂಡು ದನಗಳು ಪತ್ತೆಯಾಗಿವೆ. ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಿಂಸಾತ್ಮಕ ರೀತಿಯಲ್ಲಿ ಸಾಗಿಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ವಾಹನದಲ್ಲಿದ್ದ ಎನ್‌.ಆರ್‌.ಪುರ ತಾಲ್ಲೂಕಿನ ಕಡುಹಿನಬೈಲು ಗ್ರಾಮದ ಬದ್ರುದ್ದೀನ್ ಬಿನ್ ಅಹಮ್ಮದ್ ಬ್ಯಾರಿ (35) ಹಾಗೂ ಹನೀಫ್.ಐ ಬಿನ್ ಇಬ್ರಾಹಿಂ (35) ಅವರನ್ನು ವಿಚಾರಿಸಿದಾಗ, ಜಾನುವಾರುಗಳನ್ನು ಶೃಂಗೇರಿ ತಾಲ್ಲೂಕಿನ ಕುಂಚೇಬೈಲು ಗ್ರಾಮದ ಉಮೇಶ್ ಎಂಬುವವರಿಂದ ಖರೀದಿಸಿ ಶೆಟ್ಟಿಕೊಪ್ಪಕ್ಕೆ ಕೊಂಡೊಯ್ಯುತ್ತಿರುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

ಜಾನುವಾರುಗಳ ಸಾಗಾಟಕ್ಕೆ ಯಾವುದೇ ಪರವಾನಗಿ ಇಲ್ಲದಿರುವುದು ಹಾಗೂ ಅವುಗಳನ್ನು ಯಾವ ಉದ್ದೇಶಕ್ಕಾಗಿ ಕೊಂಡೊಯ್ಯಲಾಗುತ್ತಿದೆ ಎಂಬುದಕ್ಕೆ ಸಮರ್ಪಕ ಉತ್ತರ ನೀಡದ ಹಿನ್ನೆಲೆಯಲ್ಲಿ ಪೊಲೀಸರು ಇಬ್ಬರನ್ನು ಹಾಗೂ ವಾಹನ ಮತ್ತು ನಾಲ್ಕು ಜಾನುವಾರುಗಳನ್ನು ವಶಕ್ಕೆ ಪಡೆದಿದ್ದಾರೆ.

ಈ ಕುರಿತು ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗಿದೆ.

Violent transportation of cattle tied with ropes

Share

Leave a comment

Leave a Reply

Your email address will not be published. Required fields are marked *

Don't Miss

ನಲಪಾಡ್ ಹೇಳಿಕೆ ಖಂಡಿಸಿ ಜೆಡಿಎಸ್ ಅಲ್ಪಸಂಖ್ಯಾತ ಘಟಕ ಆಕ್ರೋಶ

ಚಿಕ್ಕಮಗಳೂರು: ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ವಿರುದ್ಧ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ ನೀಡಿರುವ ಹೇಳಿಕೆಯನ್ನು...

ಮಳಲೂರು ಏತ ನೀರಾವರಿ ಯೋಜನೆ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಮಳಲೂರು ಏತ ನೀರಾವರಿ ಅನುಷ್ಠಾನ ಮತ್ತು ಅರಸನ ನಾಲೆ ಪುನಶ್ಚೇತನ ಯೋಜನೆಗಳ ಕಾಮಗಾರಿಗಳಿಗೆ ಉಂಟಾಗಿರುವ ತಾಂತ್ರಿಕ ಅಡಚಣೆಗಳನ್ನು ಪರಿಶೀಲಿಸಿ ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್...

Related Articles

ಭದ್ರೆಯ ಕೃಪೆಯಿಂದ ಕೋಡಿಬಿದ್ದ ಕುಕ್ಕಸಮುದ್ರ ಕೆರೆ

ಚಿಕ್ಕಮಗಳೂರು: ಭದ್ರಾ ಮೇಲ್ದಂಡೆಯ ಚಿತ್ರದುರ್ಗ ಶಾಖಾ ಕಾಲುವೆ ಮೂಲಕ ಹರಿದು ಬಂದ ಭದ್ರಾ ನೀರು ಕಡೂರು...

ಮಹೇಶ್ ಜೋಷಿಗೆ ಹಿನ್ನೆಡೆ-ಮತ್ತೆ ಕೋರ್ಟ್ ನಲ್ಲಿ ಹೋರಾಟಕ್ಕೆ ಜಯ

ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ನಡೆದಿದೆ ಎನ್ನಲಾದ ಆಡಳಿತಾತ್ಮಕ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಕುರಿತು ಹಿರಿಯ ಸಾಹಿತಿಗಳು,...

ಅ.8ರಂದು ಚಿಕ್ಕಮಗಳೂರಿನಲ್ಲಿ ದಲಿತ ಸಂಘರ್ಷ ಸಮಿತಿಯ ಮಹಿಳಾ ಮಹಾಸಭೆ

ಚಿಕ್ಕಮಗಳೂರು:  ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ರಾಜ್ಯ ಸಮಿತಿ ಹಾಗೂ ಚಿಕ್ಕಮಗಳೂರು ಜಿಲ್ಲಾ ಸಮಿತಿ...

 ಅ.8ರಂದು ಚಿಕ್ಕಮಗಳೂರಿನಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ

ಚಿಕ್ಕಮಗಳೂರು: ದೇಶಾದ್ಯಂತ ನಡೆಯುತ್ತಿರುವ ‘ಪ್ರಜಾಪ್ರಭುತ್ವ ಉಳಿಸಿ, ಮತ ಬಚಾವೋ–ದೇಶ ಬಚಾವೋ’ ಚಳುವಳಿಯ ಭಾಗವಾಗಿ ಅ.8ರಂದು ಚಿಕ್ಕಮಗಳೂರು...