Home namma chikmagalur chikamagalur ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ
chikamagalurHomeLatest Newsnamma chikmagalur

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

Share
Share

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಜಿಲ್ಲಾ ಘಟಕದಿಂದ ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸುವ ಮೂಲಕ ರಾಜ್ಯಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಕರವೇ ಜಿಲ್ಲಾ ಉಸ್ತುವಾರಿ ಅಧ್ಯಕ್ಷ ದಿನೇಶ್ ಶಿವಪುರ ಮಾತನಾಡಿ ರಾಜ್ಯದ ನೂತನ ಮುಖ್ಯ ಮಂತ್ರಿಗಳು ವಿಧವಾ, ವೃದ್ದಾಪ್ಯ, ಅಂಗವಿಕಲ ಮಾಶಾಸನ ಬಿಡುಗಡೆ ಮಾಡುತ್ತಿಲ್ಲ. ಅಲ್ಲದೇ ಬಿಡದಿಯಲ್ಲಿ ರೈತರ ಜಮೀನನ್ನು ಟೌಪ್‌ಶಿಪ್ ಮಾಡುವ ಮುಖೇನಾ ಜನವಿರೋಧಿ ನಡೆ ಅನುಸರಿಸುತ್ತಿದೆ ಎಂದರು.

ರಾಜ್ಯದಲ್ಲಿ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿ ಕಾಲದಲ್ಲಿ ಯಾವುದೇ ಮಾಶಾಸನ ಬಂದ್‌ಗೊಳಿಸಿ ಲ್ಲ. ಬದಲಾಗಿ ರೈತರ ವಿರುದ್ಧವಾಗಿ ಯಾವುದೇ ನಿರ್ಣಯವು ಕೈಗೊಂಡಿರಲಿಲ್ಲ. ಆದರೆ ಡಿಕೆಶಿ ಮುಖ್ಯಮಂ ತ್ರಿಯಾದ ಮೇಲೆ ಗೃಹಲಕ್ಷ್ಮೀ ಸೇರಿದಂತೆ ಯಾವುದೇ ಮಾಶಾಸನ ಒದಗಿಸುತ್ತಿಲ್ಲ ಎಂದು ದೂರಿದರು.

ಈ ಸಂದರ್ಭದಲ್ಲಿ ಕರವೇ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಣ್ಣ, ತಾಲ್ಲೂಕು ಅಧ್ಯಕ್ಷ ವೇದಕುಮಾ ರ್, ಗೌರವಾಧ್ಯಕ್ಷ ರಾಜಣ್ಣ, ಮುಖಂಡರುಗಳಾದ ಪರಮೇಶ್, ನಿರಂಜನಮೂರ್ತಿ, ಗಿರೀಶ್, ನಿಂಗಪ್ಪ, ಗೋವಿಂದಪ್ಪ, ಶಿವು ಮುಂತಾದವರು ಉಪಸ್ಥಿತರಿದ್ದರು.

Karave (Praveen Shetty) faction protests demanding release of elderly people

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ ಸಮೇತ ಪರಾರಿಯಾಗಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಬುಕ್ಕಾಂಬೂದಿ ಗ್ರಾಮದ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು ಬರ ಪಟ್ಟಿಯಿಂದ ಕೈಬಿಟ್ಟಿರುವುದು ಸರಿಯಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ...

Related Articles

ಎರಡು ತಿಂಗಳ ಸುದೀರ್ಘ ವಿರಾಮದ ಬಳಿಕ ಜಿಲ್ಲೆಯಾದ್ಯಂತ ಭರ್ಜರಿ ಮಳೆ

ಚಿಕ್ಕಮಗಳೂರು: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕಂಗಾಲಾಗಿದ್ದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಜನರಿಗೆ...

ನೀಲಕುರಿಂಜಿ ಅಲ್ಲ, ಚಂದ್ರದ್ರೋಣದಲ್ಲಿ ಅರಳಿದ್ದು ಗುರಿಂಜೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ–ಬಾಬಾಬುಡನ್‌ಗಿರಿ ಪ್ರದೇಶದಲ್ಲಿ ನೇರಳೆ ಬಣ್ಣದ ಹೂವುಗಳು ಅರಳಿ...

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ

ಚಿಕ್ಕಮಗಳೂರು: ವಿದ್ಯುತ್ ಪೂರೈಕೆಯಲ್ಲಿ ಇತ್ತೀಚೆಗೆ ಉಂಟಾದ ತಾತ್ಕಾಲಿಕ ವ್ಯತ್ಯಯವನ್ನು ದೊಡ್ಡ ಸಮಸ್ಯೆಯಾಗಿ ಬಿಂಬಿಸುವ ಅಗತ್ಯವಿಲ್ಲ. ಮುಂದಿನ...

ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು

ಚಿಕ್ಕಮಗಳೂರು: ಬರಗಾಲದ ಸಂದರ್ಭದಲ್ಲಿ ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು. ನಿಯಮಾವಳಿ...