Home namma chikmagalur chikamagalur ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ
chikamagalurHomeLatest Newsnamma chikmagalur

ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

Share
Share

ಚಿಕ್ಕಮಗಳೂರು: ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು.

ಕೊಪ್ಪ ಪಟ್ಟಣದ ಗುಣವಂತೆ ಗ್ರಾಮದಲ್ಲಿರುವ ಕಸ ಹಾಗೂ ಮಲ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು, ಸ್ವಚ್ಛ ಭಾರತ ಮಿಷನ್ ನಿಯಮ-೨೦೨೬ ರಂತೆ ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಟ್ರೋಮರ್‌ಗಳನ್ನು ಬಳಸುವ ಬಗ್ಗೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು.

ಕಗ್ಗ ಗ್ರಾಮದ ಸರ್ವೆ ನಂ ೩೪ ಮತ್ತು ೩೬ ರಲ್ಲಿ ಅರಣ್ಯ/ಕಂದಾಯ ಭೂಮಿ ಕುರಿತಾಗಿ ಜಂಟಿ ಸರ್ವೆ ಕಾರ್ಯದ ಬಗ್ಗೆ ಪರಿಶೀಲನೆ ನಡೆಸಿದ ಅವರು, ಸರ್ವೇ ಕಾರ್ಯವನ್ನು ಪೂರ್ಣಗೊಳಿಸುವಂತೆ ಹೇಳಿದರು.
ನಂತರ ಕೊಪ್ಪದ ಪ್ರಜಾ ಸೌಧ ಸಭಾಂಗಣದಲ್ಲಿ ಕೊಪ್ಪ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಬೆಳೆವಿಮೆ ಫಸಲು ಬಿಮಾ ಯೋಜನೆ ಪ್ರಗತಿ ಕುಂಟಿತವಾಗಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ, ಪ್ರಗತಿಯನ್ನು ಚುರುಕುಗೊಳಿಸುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿ, ತೋಟಗಾರಿಕೆ ಇಲಾಖೆ ವ್ಯಾಪ್ತಿಗೆ ಒಳಪಡುವ ಬೆಳೆಹಾನಿ ಸಮೀಕ್ಷೆ ವರದಿಯನ್ನು ಕೂಡಲೇ ಸಲ್ಲಿಸುವಂತೆ ಸೂಚಿಸಿ, ಕೊಪ್ಪದಿಂದ ಚಿಕ್ಕಮಗಳೂರು ರಸ್ತೆ ದುರಸ್ತಿ ಬಗ್ಗೆ ಅಗತ್ಯ ಕ್ರಮ ವಹಿಸುವಂತೆ ನಿರ್ದೇಶನ ನೀಡಿದರು.

ಮನೆ, ಸೇತುವೆ, ಶಾಲೆ ಹಾಗೂ ಅಂಗನವಾಡಿ ಕಟ್ಟಡಗಳ ಹಾನಿಯ ಕುರಿತು ಜಿಪಿಎಸ್ ಅಳವಡಿಸಿರುವ ಫೋಟೋಗಳ ಸಹಿತ ಅಂದಾಜು ಪಟ್ಟಿಯೊಂದಿಗೆ ವರದಿ ಮಾಡಲು ತಿಳಿಸಿದರು.

ಹೊಸದಾಗಿ ಕೆಪಿಎಸ್‌ಸಿ ಶಾಲೆಯನ್ನು ಇತರೆ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಶಾಲೆ ಪ್ರಾರಂಭ ಮಾಡುವ ಬಗ್ಗೆ ಕ್ರಮ ವಹಿಸುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಯನ್ನು ಕ್ರಮಬದ್ಧವಾಗಿ ನೀಡಬೇಕು. ದುರಸ್ತಿಯಲ್ಲಿರುವ ಶಾಲಾ ಕಟ್ಟಡಗಳ ಬಗ್ಗೆ ಪ್ರಸ್ತಾವನೆಯನ್ಜು ಸಂಬಂಧಪಟ್ಟ ಇಲಾಖೆಗೆ ಸಲ್ಲಿಸುವಂತೆ ತಿಳಿಸಿದರು

ಆರೋಗ್ಯ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ ಇರುವುದರ ಕುರಿತು ಪ್ರಸ್ತಾವನೆ ಮಂಡಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದ ಅವರು, ಈ ಕುರಿತು ಆರೋಗ್ಯ ಇಲಾಖೆಯ ಆಯುಕ್ತರೊಂದಿಗೆ ಚರ್ಚಿಸುವುದಾಗಿ ತಿಳಿಸಿದರು, ಕೊಪ್ಪ ತಾಲ್ಲೂಕು ಆಸ್ಪತ್ರೆಯ ವೈದ್ಯರ ಹುದ್ದೆ ಎಂ.ಬಿ,ಬಿ,ಎಸ್ ವೈದ್ಯರು ಪ್ರಸ್ತಾವನೆ ಸಲ್ಲಿಸಿದಲ್ಲಿ ನೇಮಕಾತಿ ಮಾಡುಕೊಳ್ಳಲು ಕ್ರಮವಹಿಸಲಾಗುವುದಾಗಿ
ವಿದ್ಯಾರ್ಥಿ ನಿಲಯದಲ್ಲಿ ಆರೋಗ್ಯ ತಪಾಸಣೆಯನ್ನು ಕಾಲ ಕಾಲಕ್ಕೆ ಮಾಡುವಂತೆ ಕ್ರಮ ವಹಿಸಬೇಕು. ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕು.

ಮಳೆ-ಗಾಳಿಯಿಂದ ವಿದ್ಯುತ್ ಕಂಬಗಳು ಹಾನಿಗೆ ಒಳಗಾದಲ್ಲಿ ತುರ್ತು ಕ್ರಮ ವಹಿಸಬೇಕು, ತಾಲ್ಲೂಕು ಪಂಚಾಯಿತಿಯ ಕಾರ್ಯ ನಿರ್ವಹಣಾಧಿಕಾರಿಗಳು ಭಾರತ್ ಜೋಡೋ ಕಾರ್ಯಕ್ರಮ ಸಂಘ ರಚನೆಗೆ ಕ್ರಮ ವಹಿಸಬೇಕು ಎಂದು ಸೂಚಿಸಿದರು. ಆರಣ್ಯ ಹಾಗೂ ಭೂ ದಾಖಲೆಗಳ ಇಲಾಖೆಗಳು ಅರಣ್ಯ/ಹಾಗೂ ಕಂದಾಯ ಭೂಮಿಯ ಜಂಟಿ ಸರ್ವೆ ಕಾರ್ಯದಲ್ಲಿ ಪ್ರಗತಿ ಸಾಧಿಸುವಂತೆ ಹೇಳಿದರು.

ಬೆಳಗೊಳ ಗ್ರಾಮ ಆರ್ಡಿ ಕೊಪ್ಪ, ನದಿ ಪ್ರವಾಹದಿಂದ ಭೂಮಿ ಕೊರೆತ ಉಂಟಾಗುತ್ತಿರುವ ಬಗ್ಗೆ ಸ್ಥಳ ಪರಿಶೀಲನೆ ನಡೆಸಿದ ಅವರು, ಈ ಸಂಬಂಧ ಪುಸ್ತಾವನೆ ಸಲ್ಲಿಸುವಂತೆ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಕೊಪ್ಪ ತಹಸೀಲ್ದಾರ್ ಲಿಖಿತಾ ಮೋಹನ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ದಿನೇಶ್ ಸೇರಿದಂತೆ ಕೊಪ್ಪ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

District Collector instructs to dispose of garbage in a scientific manner

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದ ಇಲಿಗೆ ‘ಹಣದ ಮೋಹ’

ಚಿಕ್ಕಮಗಳೂರು : ತುಮಕೂರಿನಲ್ಲಿ ಇತ್ತೀಚೆಗೆ ಇಲಿಯೊಂದು ಚಿನ್ನದ ಆಭರಣಗಳನ್ನು ಎಗರಿಸಿ ಸುದ್ದಿಯಾಗಿದ್ದರೆ, ಇತ್ತ ಚಿಕ್ಕಮಗಳೂರಿನಲ್ಲಿ ಮತ್ತೊಂದು ಚಾಣಾಕ್ಷ ಇಲಿ ಒಂದು ಹೆಜ್ಜೆ ಮುಂದೆ ಹೋಗಿ ನೇರವಾಗಿ ಹಣವನ್ನೇ ಕದ್ದು ತನ್ನ ಸಾಮ್ರಾಜ್ಯ...

ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಹೆಸರಿನಲ್ಲಿಯೂ ನಕಲಿ ವಾಟ್ಸಪ್ ಖಾತೆ

ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಹ್ಯಾಕರ್‌ಗಳು ಮತ್ತು ವಂಚಕರು ವಾಟ್ಸಪ್, ಫೇಸ್‌ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಮುಖರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಜನರನ್ನು...

Related Articles

ಮುಳ್ಳಯ್ಯನಗಿರಿ ಕ್ರಾಸ್ ಬಳಿ ಟಿಟಿ ವಾಹನ ಮರಕ್ಕೆ ಡಿಕ್ಕಿ

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ...

ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಸಮಗ್ರ ಗಿರಿಜನ ಕಲ್ಯಾಣ ಇಲಾಖೆ (ಐಟಿಡಿಪಿ) ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ...

ಮನೆಯ ಮೇಲ್ಛಾವಣಿಯ ಹೆಂಚು ತೆಗೆದು ನುಗ್ಗಿ ಸರಗಳ್ಳತನ

ನರಸಿಂಹರಾಜಪುರ: ಮನೆಯಲ್ಲಿ ದಂಪತಿ ಮಲಗಿದ್ದ ವೇಳೆ ಮೇಲ್ಛಾವಣಿಯ ಹೆಂಚು ತೆಗೆದು ಒಳನುಗ್ಗಿದ ಕಳ್ಳನೊಬ್ಬ ಮಹಿಳೆಯ ಕೊರಳಿನಲ್ಲಿದ್ದ...

ಕನಸು ಫೈನಾನ್ಸ್ ಹೆಸರಿನಲ್ಲಿ ₹1.60 ಲಕ್ಷ ವಂಚನೆ ಆರೋಪ

ಕಡೂರು: ಪ್ರತಿದಿನ ಉಳಿತಾಯದ ಹಣವನ್ನು ಸ್ವೀಕರಿಸಿ ಶೇ.7ರಷ್ಟು ಬಡ್ಡಿ ನೀಡುವುದಾಗಿ ನಂಬಿಸಿ, ಹಣವನ್ನು ವಾಪಸ್ ನೀಡದೆ...