Home namma chikmagalur chikamagalur ₹10.13 ಲಕ್ಷ ಮೌಲ್ಯದ HDPE ಪೈಪ್ ಬಂಡಲ್‌ಗಳ ಕಳವು
chikamagalurCrime NewsHomeLatest Newsnamma chikmagalur

₹10.13 ಲಕ್ಷ ಮೌಲ್ಯದ HDPE ಪೈಪ್ ಬಂಡಲ್‌ಗಳ ಕಳವು

Share
Share

ಚಿಕ್ಕಮಗಳೂರು: ಜಲ ಜೀವನ್ ಮಿಷನ್ ಕಾಮಗಾರಿಗಾಗಿ ಜಮೀನಿನಲ್ಲಿ ಸಂಗ್ರಹಿಸಿಟ್ಟಿದ್ದ ₹10.13 ಲಕ್ಷ ಮೌಲ್ಯದ 32 HDPE ಪೈಪ್ ಬಂಡಲ್‌ಗಳು ಕಳವಾಗಿರುವ ಘಟನೆ ಸಖರಾಯಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯ ಹುಲೀಕೆರೆ ಗ್ರಾಮದಲ್ಲಿ ನಡೆದಿದೆ.

ಹಾವೇರಿಯ ರಮೇಶ್ ಎಲೆಕ್ಟ್ರಿಕಲ್ಸ್ ಕಂಪನಿಯ ಮ್ಯಾನೇಜರ್ ನೀಡಿದ ದೂರಿನ ಆಧಾರದ ಮೇಲೆ ಸಖರಾಯಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಕಡೂರು ತಾಲ್ಲೂಕಿನ ಹುಲೀಕೆರೆ ಗ್ರಾಮದ ಜಲ ಜೀವನ್ ಮಿಷನ್ ಕಾಮಗಾರಿಯ ಟೆಂಡರ್ ರಮೇಶ್ ಎಲೆಕ್ಟ್ರಿಕಲ್ಸ್ ಸಂಸ್ಥೆಗೆ ದೊರೆತಿತ್ತು. ಕಾಮಗಾರಿಗಾಗಿ 2025ರ ಏಪ್ರಿಲ್ 6ರಂದು ಸುಪ್ರೀಮ್ ಕಂಪನಿಯ 63 ಎಂಎಂ ವ್ಯಾಸದ ತಲಾ 300 ಮೀಟರ್‌ನ 32 ಬಂಡಲ್‌ಗಳ HDPE ಪೈಪ್‌ಗಳನ್ನು ಹುಲೀಕೆರೆ ಗ್ರಾಮದ ಸಖರಾಯಪಟ್ಟಣ–ಜಾವಗಲ್ ರಸ್ತೆಯ ಕಬರಸ್ಥಾನದ ಸಮೀಪ, ಗ್ರಾಮದ ಕುಮಾರ ಬಿನ್ ಪುಟ್ಟೇಗೌಡ ಅವರ ಜಮೀನಿನಲ್ಲಿ ಸಂಗ್ರಹಿಸಲಾಗಿತ್ತು.

ಜನವರಿ 9ರಂದು ಸಂಜೆ ಸುಮಾರು 4 ಗಂಟೆಗೆ ಹುಲೀಕೆರೆ ಗ್ರಾಮ ಪಂಚಾಯಿತಿ ಸದಸ್ಯ ಆನಂದ್ ಅವರು ಜಮೀನಿನಲ್ಲಿದ್ದ HDPE ಪೈಪ್ ಬಂಡಲ್‌ಗಳು ಕಾಣಿಸುತ್ತಿಲ್ಲ ಎಂದು ಕಂಪನಿಯ ಮ್ಯಾನೇಜರ್‌ಗೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದರು. ಮರುದಿನ ಬೆಳಿಗ್ಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ 32 ಬಂಡಲ್‌ಗಳು ಕಳವಾಗಿರುವುದು ಬೆಳಕಿಗೆ ಬಂದಿದೆ.

ಸ್ಥಳೀಯರನ್ನು ವಿಚಾರಿಸಿದಾಗ ಪೈಪ್‌ಗಳನ್ನು ಯಾರು ತೆಗೆದುಕೊಂಡು ಹೋಗಿದ್ದಾರೆ ಎಂಬ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ. ಜನವರಿ 9ರಂದು ಬೆಳಿಗ್ಗೆ 7ರಿಂದ ಸಂಜೆ 4 ಗಂಟೆಯೊಳಗಿನ ಅವಧಿಯಲ್ಲಿ ಅಪರಿಚಿತರು ಪೈಪ್‌ಗಳನ್ನು ಕಳವು ಮಾಡಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದೆ.

ಕಳವಾಗಿರುವ 32 ಬಂಡಲ್‌ಗಳ ಒಟ್ಟು ಮೌಲ್ಯ ₹10,13,856 ಎಂದು ದೂರಿನಲ್ಲಿ ತಿಳಿಸಲಾಗಿದೆ. ಕಂಪನಿಯ ಸಿಬ್ಬಂದಿ ಅನುಮಾನ ಬಂದ ಸ್ಥಳಗಳಲ್ಲಿ ಹುಡುಕಾಟ ನಡೆಸಿದರೂ ಪೈಪ್‌ಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ತಡವಾಗಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಕಳವಾಗಿರುವ HDPE ಪೈಪ್‌ಗಳನ್ನು ಪತ್ತೆಹಚ್ಚಿ, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿದ್ದು, ಸಖರಾಯಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

HDPE pipe bundles worth ₹10.13 lakh stolen

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ ಸಮೇತ ಪರಾರಿಯಾಗಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಬುಕ್ಕಾಂಬೂದಿ ಗ್ರಾಮದ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು ಬರ ಪಟ್ಟಿಯಿಂದ ಕೈಬಿಟ್ಟಿರುವುದು ಸರಿಯಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ...

Related Articles

ಎರಡು ತಿಂಗಳ ಸುದೀರ್ಘ ವಿರಾಮದ ಬಳಿಕ ಜಿಲ್ಲೆಯಾದ್ಯಂತ ಭರ್ಜರಿ ಮಳೆ

ಚಿಕ್ಕಮಗಳೂರು: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕಂಗಾಲಾಗಿದ್ದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಜನರಿಗೆ...

ನೀಲಕುರಿಂಜಿ ಅಲ್ಲ, ಚಂದ್ರದ್ರೋಣದಲ್ಲಿ ಅರಳಿದ್ದು ಗುರಿಂಜೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ–ಬಾಬಾಬುಡನ್‌ಗಿರಿ ಪ್ರದೇಶದಲ್ಲಿ ನೇರಳೆ ಬಣ್ಣದ ಹೂವುಗಳು ಅರಳಿ...

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ

ಚಿಕ್ಕಮಗಳೂರು: ವಿದ್ಯುತ್ ಪೂರೈಕೆಯಲ್ಲಿ ಇತ್ತೀಚೆಗೆ ಉಂಟಾದ ತಾತ್ಕಾಲಿಕ ವ್ಯತ್ಯಯವನ್ನು ದೊಡ್ಡ ಸಮಸ್ಯೆಯಾಗಿ ಬಿಂಬಿಸುವ ಅಗತ್ಯವಿಲ್ಲ. ಮುಂದಿನ...

ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು

ಚಿಕ್ಕಮಗಳೂರು: ಬರಗಾಲದ ಸಂದರ್ಭದಲ್ಲಿ ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು. ನಿಯಮಾವಳಿ...