Home namma chikmagalur chikamagalur ಮನೆಯ ಮೇಲ್ಛಾವಣಿಯ ಹೆಂಚು ತೆಗೆದು ನುಗ್ಗಿ ಸರಗಳ್ಳತನ
chikamagalurCrime NewsHomeLatest Newsnamma chikmagalur

ಮನೆಯ ಮೇಲ್ಛಾವಣಿಯ ಹೆಂಚು ತೆಗೆದು ನುಗ್ಗಿ ಸರಗಳ್ಳತನ

Share
Share

ನರಸಿಂಹರಾಜಪುರ: ಮನೆಯಲ್ಲಿ ದಂಪತಿ ಮಲಗಿದ್ದ ವೇಳೆ ಮೇಲ್ಛಾವಣಿಯ ಹೆಂಚು ತೆಗೆದು ಒಳನುಗ್ಗಿದ ಕಳ್ಳನೊಬ್ಬ ಮಹಿಳೆಯ ಕೊರಳಿನಲ್ಲಿದ್ದ ಸುಮಾರು ₹1.70 ಲಕ್ಷ ಮೌಲ್ಯದ ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ನರಸಿಂಹರಾಜಪುರ ತಾಲ್ಲೂಕಿನ ಮೆಣಸೂರು ಗ್ರಾಮದಲ್ಲಿ ನಡೆದಿದೆ.

ಮೆಣಸೂರು ಗ್ರಾಮದ ಲಕ್ಷ್ಮೀದೇವಿ (72) ಅವರು ನೀಡಿದ ದೂರಿನ ಆಧಾರದ ಮೇಲೆ ನರಸಿಂಹರಾಜಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಕ್ಷ್ಮೀದೇವಿ ಅವರು ಪತಿ ಗಣಪತಿ ಅವರೊಂದಿಗೆ ಮನೆಯಲ್ಲಿ ವಾಸವಾಗಿದ್ದು, ಗಣಪತಿ ನಿವೃತ್ತ ಶಿಕ್ಷಕರಾಗಿದ್ದಾರೆ. ಎಂದಿನಂತೆ ಬುಧವಾರ ರಾತ್ರಿ 10.30ರ ಸುಮಾರಿಗೆ ಊಟ ಮುಗಿಸಿ ದಂಪತಿ ತಮ್ಮ ಕೊಠಡಿಯಲ್ಲಿ ಮಲಗಿದ್ದರು.

ಗುರುವಾರ ಬೆಳಗಿನ ಜಾವ ಸುಮಾರು 12.30ರ ವೇಳೆಗೆ ಲಕ್ಷ್ಮೀದೇವಿ ಅವರ ಕೊರಳಿನಲ್ಲಿದ್ದ ಮಾಂಗಲ್ಯ ಸರವನ್ನು ಯಾರೋ ಕಿತ್ತುಕೊಳ್ಳಲು ಪ್ರಯತ್ನಿಸಿದ್ದಾರೆ. ನಿದ್ದೆಯಿಂದ ಎಚ್ಚರಗೊಂಡ ಅವರು ಸರವನ್ನು ಬಿಗಿಯಾಗಿ ಹಿಡಿದುಕೊಂಡು ಕಳ್ಳ, ಕಳ್ಳ ಎಂದು ಕೂಗಿಕೊಂಡಿದ್ದಾರೆ. ಈ ವೇಳೆ ಪತಿ ಎದ್ದು ನೋಡುವಷ್ಟರಲ್ಲಿ ಕಳ್ಳ ಸರದ ಅರ್ಧ ಭಾಗವನ್ನು ಕಿತ್ತುಕೊಂಡು ಮನೆಯ ಹಿಂಭಾಗದಿಂದ ಪರಾರಿಯಾಗಿದ್ದಾನೆ. ಬಳಿಕ ಮನೆಯ ಮುಂಭಾಗದ ರಸ್ತೆಯಲ್ಲಿ ಬೈಕ್‌ನಲ್ಲಿ ತೆರಳಿದ ಶಬ್ದ ಕೇಳಿಸಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಮನೆಯ ಪರಿಶೀಲನೆ ನಡೆಸಿದಾಗ ಅಡುಗೆ ಮನೆಯ ಮೇಲ್ಛಾವಣಿಯ ಹೆಂಚುಗಳನ್ನು ತೆಗೆದು ಕಳ್ಳ ಒಳನುಗ್ಗಿರುವುದು ಪತ್ತೆಯಾಗಿದೆ. ಬಳಿಕ ದಂಪತಿ ಮಲಗಿದ್ದ ಕೊಠಡಿಗೆ ತೆರಳಿ ಲಕ್ಷ್ಮೀದೇವಿ ಅವರ ಕೊರಳಿನಲ್ಲಿದ್ದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಹೋಗಿರುವುದು ಗೊತ್ತಾಗಿದೆ.

ಲಕ್ಷ್ಮೀದೇವಿ ಅವರು ಸರವನ್ನು ಬಿಗಿಯಾಗಿ ಹಿಡಿದುಕೊಂಡಿದ್ದರಿಂದ ಅದು ಅರ್ಧಕ್ಕೆ ತುಂಡಾಗಿದ್ದು, ಸುಮಾರು 17 ಗ್ರಾಂ ತೂಕದ ಬಂಗಾರದ ತಾಳಿ, ಎರಡು ಗುಂಡು ಹಾಗೂ ಎರಡು ಕಾಸು ಒಳಗೊಂಡ ಭಾಗವನ್ನು ಕಳ್ಳ ಕಿತ್ತುಕೊಂಡು ಹೋಗಿದ್ದಾನೆ. ಕಳವಾಗಿರುವ ಚಿನ್ನದ ಮೌಲ್ಯ ಅಂದಾಜು ₹1.70 ಲಕ್ಷ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಘಟನೆ ಕುರಿತು ನರಸಿಂಹರಾಜಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮನೆಗೆ ನುಗ್ಗಿದ ಕಳ್ಳನ ಪತ್ತೆ ಹಾಗೂ ಕಳವಾಗಿರುವ ಚಿನ್ನಾಭರಣ ವಶಪಡಿಸಿಕೊಳ್ಳಲು ತನಿಖೆ ಮುಂದುವರಿಸಿದ್ದಾರೆ.

Breaking and entering the house by removing the roof tiles

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ ಸಮೇತ ಪರಾರಿಯಾಗಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಬುಕ್ಕಾಂಬೂದಿ ಗ್ರಾಮದ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು ಬರ ಪಟ್ಟಿಯಿಂದ ಕೈಬಿಟ್ಟಿರುವುದು ಸರಿಯಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ...

Related Articles

ಎರಡು ತಿಂಗಳ ಸುದೀರ್ಘ ವಿರಾಮದ ಬಳಿಕ ಜಿಲ್ಲೆಯಾದ್ಯಂತ ಭರ್ಜರಿ ಮಳೆ

ಚಿಕ್ಕಮಗಳೂರು: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕಂಗಾಲಾಗಿದ್ದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಜನರಿಗೆ...

ನೀಲಕುರಿಂಜಿ ಅಲ್ಲ, ಚಂದ್ರದ್ರೋಣದಲ್ಲಿ ಅರಳಿದ್ದು ಗುರಿಂಜೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ–ಬಾಬಾಬುಡನ್‌ಗಿರಿ ಪ್ರದೇಶದಲ್ಲಿ ನೇರಳೆ ಬಣ್ಣದ ಹೂವುಗಳು ಅರಳಿ...

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ

ಚಿಕ್ಕಮಗಳೂರು: ವಿದ್ಯುತ್ ಪೂರೈಕೆಯಲ್ಲಿ ಇತ್ತೀಚೆಗೆ ಉಂಟಾದ ತಾತ್ಕಾಲಿಕ ವ್ಯತ್ಯಯವನ್ನು ದೊಡ್ಡ ಸಮಸ್ಯೆಯಾಗಿ ಬಿಂಬಿಸುವ ಅಗತ್ಯವಿಲ್ಲ. ಮುಂದಿನ...

ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು

ಚಿಕ್ಕಮಗಳೂರು: ಬರಗಾಲದ ಸಂದರ್ಭದಲ್ಲಿ ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು. ನಿಯಮಾವಳಿ...