Home namma chikmagalur chikamagalur ಬ್ಯಾಂಕಿಂಗ್ ಏಜೆಂಟ್ ಸೋಗಿನಲ್ಲಿ ಸೈಬರ್ ವಂಚನೆ
chikamagalurHomeLatest Newsnamma chikmagalur

ಬ್ಯಾಂಕಿಂಗ್ ಏಜೆಂಟ್ ಸೋಗಿನಲ್ಲಿ ಸೈಬರ್ ವಂಚನೆ

Share
Share

ಚಿಕ್ಕಮಗಳೂರು: ಬ್ಯಾಂಕಿಂಗ್ ಏಜೆಂಟ್‌ಗಳಂತೆ ನಟಿಸಿ ಮೊಬೈಲ್ ಸಿಮ್ ಹಾಗೂ ಬ್ಯಾಂಕ್ ಖಾತೆಯ ಮಾಹಿತಿಯನ್ನು ವಂಚನೆಯಿಂದ ಪಡೆದು, ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ ಒಟ್ಟು ₹2.73 ಲಕ್ಷ ವರ್ಗಾವಣೆ ಮಾಡಿಕೊಂಡಿರುವ ಪ್ರಕರಣ ಚಿಕ್ಕಮಗಳೂರು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ದೂರಿನ ಪ್ರಕಾರ, ಜುಲೈ 30ರಂದು ಮಧ್ಯರಾತ್ರಿ 1.30ರ ಸುಮಾರಿಗೆ ಅನಾಮದೇಯ ಸಂಖ್ಯೆಯಿಂದ ದೂರುದಾರರ ಮೊಬೈಲ್‌ಗೆ ಕರೆ ಬಂದಿತ್ತು. ಕರೆ ವೇಳೆ ಕಂಪ್ಯೂಟರ್ ರೆಕಾರ್ಡಿಂಗ್ (IVR) ಧ್ವನಿಯಲ್ಲಿ ಮಾತನಾಡಿದ ವ್ಯಕ್ತಿ, ಫೋನ್‌ಪೇ ಅನ್ನು ಮತ್ತೊಂದು ಡ್ರೈವ್‌ಗೆ ಇನ್‌ಸ್ಟಾಲ್ ಮಾಡಲು ಅನುಮತಿ ಇದೆಯೇ ಎಂದು ಪ್ರಶ್ನಿಸಿದ್ದಾನೆ. ದೂರುದಾರರು ‘ಇಲ್ಲ’ ಎಂದು ಉತ್ತರಿಸಿ ಕರೆ ಕಡಿತಗೊಳಿಸಿ, ಮೊಬೈಲ್ ಇಂಟರ್‌ನೆಟ್‌ನ್ನು ಆಫ್ ಮಾಡಿ ಮಲಗಿದ್ದರು.

ಮರುದಿನ ಬೆಳಗ್ಗೆ ಮೊಬೈಲ್ ಪರಿಶೀಲಿಸಿದಾಗ ಜಿಯೋ ಸಿಮ್ ಕಾರ್ಯನಿರ್ವಹಿಸದಿರುವುದು ಗಮನಕ್ಕೆ ಬಂದಿದೆ. ಜಿಯೋ ಕಚೇರಿಗೆ ತೆರಳಿ ವಿಚಾರಿಸಿದಾಗ ಗ್ರಾಹಕ ಸೇವಾ ಕೇಂದ್ರವನ್ನು ಸಂಪರ್ಕಿಸುವಂತೆ ತಿಳಿಸಲಾಯಿತು. 198ಕ್ಕೆ ಕರೆ ಮಾಡಿ ವಿಚಾರಿಸಿದಾಗ, ದೂರುದಾರರೇ ತಮ್ಮ ಸಂಖ್ಯೆಯನ್ನು ಬ್ಲಾಕ್ ಮಾಡಿರುವುದಾಗಿ ಮಾಹಿತಿ ನೀಡಲಾಗಿದೆ. ಆದರೆ ತಾವು ಯಾವುದೇ ರೀತಿಯಲ್ಲೂ ಮೊಬೈಲ್ ಸಂಖ್ಯೆಯನ್ನು ಬ್ಲಾಕ್ ಮಾಡುವಂತೆ ಸೂಚಿಸಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ನಂತರ ಖಾತೆ ಹೊಂದಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗೆ ತೆರಳಿ, ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ಹ್ಯಾಕ್ ಆಗಿರುವ ಬಗ್ಗೆ ಮಾಹಿತಿ ನೀಡಲಾಗಿತ್ತು. ಬ್ಯಾಂಕ್ ಸಿಬ್ಬಂದಿಯಿಂದ ಸೂಕ್ತ ಮಾಹಿತಿ ದೊರೆಯದ ಹಿನ್ನೆಲೆಯಲ್ಲಿ ಹಲವು ಬಾರಿ ಬ್ಯಾಂಕ್‌ಗೆ ತೆರಳಿದರೂ ಖಾತೆಯನ್ನು ತಕ್ಷಣ ಫ್ರೀಜ್ ಮಾಡಿರಲಿಲ್ಲ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಆಗಸ್ಟ್ 13ರಂದು ಬ್ಯಾಂಕ್ ಖಾತೆಯ ಸ್ಟೇಟ್‌ಮೆಂಟ್ ಪರಿಶೀಲಿಸಿದಾಗ, ಖಾತೆಯಿಂದ ಮೂರು ಹಂತಗಳಲ್ಲಿ ₹99,000, ₹50,000 ಹಾಗೂ ₹1,24,000 ಸೇರಿದಂತೆ ಒಟ್ಟು *₹2,73,000 ಹಣ ಕಡಿತವಾಗಿರುವುದು* ಬೆಳಕಿಗೆ ಬಂದಿದೆ. ಈ ಕುರಿತು ಬ್ಯಾಂಕ್ ಅಧಿಕಾರಿಗಳನ್ನು ವಿಚಾರಿಸಿದಾಗ, ಖಾತೆಯನ್ನು ಹ್ಯಾಕ್ ಮಾಡಿ ಹಣ ವರ್ಗಾವಣೆ ಮಾಡಿರುವ ಸಾಧ್ಯತೆಯಿದ್ದು, ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡುವಂತೆ ಸೂಚಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ದೂರುದಾರರು ಸೈಬರ್ ಸಹಾಯವಾಣಿ *1930ಕ್ಕೆ ಕರೆ ಮಾಡಿ ದೂರು ದಾಖಲಿಸಿದ್ದು, ಸ್ವೀಕೃತಿ ಸಂಖ್ಯೆ **31608260142690* ನೀಡಲಾಗಿದೆ.

ದೂರಿನ ಆಧಾರದ ಮೇಲೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ *ಠಾಣಾ ಮೊ.ನಂ. 44/2026ರಂತೆ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಕಲಂ **66(C), 66(D)* ಹಾಗೂ *ಭಾರತೀಯ ನ್ಯಾಯ ಸಂಹಿತೆ (BNS) ಕಲಂ 318(4)* ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

Cyber ​​fraud in the guise of banking agent

Share

Leave a comment

Leave a Reply

Your email address will not be published. Required fields are marked *

Don't Miss

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು ಬರ ಪಟ್ಟಿಯಿಂದ ಕೈಬಿಟ್ಟಿರುವುದು ಸರಿಯಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ...

ಜ್ಞಾನೇಶ್ ಕುಮಾರ್ ವಜಾಗೊಳಿಸಿ ಬಂಧಕ್ಕೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರ ಧರಣಿ

ಚಿಕ್ಕಮಗಳೂರು: ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ. ಜೊತೆಗೆ ಬಿಜೆಪಿ ಏಜೆಂಟ್ ರೀತಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದ ತಾಲೂಕು ಕಚೇರಿಯಿಂದ ಆಜಾದ್...

Related Articles

ನೀಲಕುರಿಂಜಿ ಅಲ್ಲ, ಚಂದ್ರದ್ರೋಣದಲ್ಲಿ ಅರಳಿದ್ದು ಗುರಿಂಜೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ–ಬಾಬಾಬುಡನ್‌ಗಿರಿ ಪ್ರದೇಶದಲ್ಲಿ ನೇರಳೆ ಬಣ್ಣದ ಹೂವುಗಳು ಅರಳಿ...

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ

ಚಿಕ್ಕಮಗಳೂರು: ವಿದ್ಯುತ್ ಪೂರೈಕೆಯಲ್ಲಿ ಇತ್ತೀಚೆಗೆ ಉಂಟಾದ ತಾತ್ಕಾಲಿಕ ವ್ಯತ್ಯಯವನ್ನು ದೊಡ್ಡ ಸಮಸ್ಯೆಯಾಗಿ ಬಿಂಬಿಸುವ ಅಗತ್ಯವಿಲ್ಲ. ಮುಂದಿನ...

ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು

ಚಿಕ್ಕಮಗಳೂರು: ಬರಗಾಲದ ಸಂದರ್ಭದಲ್ಲಿ ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು. ನಿಯಮಾವಳಿ...

ಹಣಕ್ಕಾಗಿ ಪೀಡಿಸಿ ಬ್ಯಾಕ್ಮೇಲ್-ಮನನೊಂದ ಯುವತಿ ಆತ್ಮಹತ್ಯೆ

ಕೊಪ್ಪ : ಪ್ರೀತಿಯ ನಾಟಕವಾಡಿ ಲೈಂಗಿಕವಾಗಿ ಬಳಸಿಕೊಂಡು, ಖಾಸಗಿ ವಿಡಿಯೋ ಮುಂದಿಟ್ಟುಕೊಂಡು ಹಣಕ್ಕಾಗಿ ಪೀಡಿಸಿ ಬ್ಯಾಕ್ಮೇಲ್...