Home namma chikmagalur chikamagalur ಸ್ವಾತಂತ್ರ್ಯೋತ್ಸವದಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ 
chikamagalurHomeLatest Newsnamma chikmagalur

ಸ್ವಾತಂತ್ರ್ಯೋತ್ಸವದಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ 

Share
Share

ಚಿಕ್ಕಮಗಳೂರು: ನಗರದ ನೇತಾಜಿ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಮುಗಿದ ಬೆನ್ನಲ್ಲೇ ದಲಿತ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ದಿಢೀರ್ ಪ್ರತಿಭಟನೆ ನಡೆಸಿ, ಅಂಬೇಡ್ಕರ್ ಅಧ್ಯಯನ ಕೇಂದ್ರ ಹಾಗೂ ಬೌದ್ಧ ವಿಹಾರ ನಿರ್ಮಾಣಕ್ಕೆ ಗವನಹಳ್ಳಿ ಸರ್ವೇ ನಂಬರ್ 93ರಲ್ಲೇ ಜಾಗ ಮಂಜೂರು ಮಾಡಬೇಕೆಂದು ಆಗ್ರಹಿಸಿದರು.

ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ನಡೆದ ಸ್ಥಳದಲ್ಲೇ ಪ್ರತಿಭಟನೆಗೆ ಕುಳಿತ ದಲಿತ ಸಂಘಟನೆಗಳ ಮುಖಂಡರು, ಹಲವು ವರ್ಷಗಳಿಂದ ಜಾಗ ನೀಡುವುದಾಗಿ ಸರ್ಕಾರ ಭರವಸೆ ನೀಡುತ್ತಲೇ ಬಂದಿದ್ದರೂ ಈವರೆಗೆ ಯಾವುದೇ ಸ್ಪಷ್ಟ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಸರ್ಕಾರದ ವಿಳಂಬ ಧೋರಣೆಯನ್ನು ಖಂಡಿಸಿದರು.

ಅಂಬೇಡ್ಕರ್ ಅಧ್ಯಯನ ಕೇಂದ್ರ ಹಾಗೂ ಬೌದ್ಧ ವಿಹಾರ ನಿರ್ಮಾಣಕ್ಕೆ ಬೇರೆ ಯಾವುದೇ ಸ್ಥಳದಲ್ಲಿ ಜಾಗ ನೀಡುವುದು ನಮಗೆ ಒಪ್ಪಿಗೆಯಿಲ್ಲ. ಗವನಹಳ್ಳಿ ಸರ್ವೇ ನಂಬರ್ 93ರಲ್ಲೇ ಜಾಗ ಮಂಜೂರು ಮಾಡಬೇಕು ಎಂದು ಪ್ರತಿಭಟನಾಕಾರರು ಸ್ಪಷ್ಟಪಡಿಸಿದರು.

ಈ ಜಾಗದ ವಿಚಾರ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದು, ಪ್ರತಿಬಾರಿಯೂ ಜಾಗ ನೀಡುವುದಾಗಿ ಭರವಸೆ ನೀಡಲಾಗುತ್ತಿದೆ. ಆದರೆ ಭರವಸೆ ಕಾರ್ಯರೂಪಕ್ಕೆ ಬರುತ್ತಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು. ನಿಗದಿತ ಸ್ಥಳದಲ್ಲೇ ಶೀಘ್ರವಾಗಿ ಜಾಗ ಮಂಜೂರು ಮಾಡುವ ಮೂಲಕ ಸರ್ಕಾರ ತನ್ನ ಭರವಸೆಯನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.

ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ನಡೆದ ಭಾಷಣದಲ್ಲಿ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರು ಜಾಗದ ವಿಚಾರದಲ್ಲಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿರುವುದನ್ನು ಪ್ರತಿಭಟನಾಕಾರರು ಉಲ್ಲೇಖಿಸಿದರು. ಕಾರ್ಯಕ್ರಮದ ಬಳಿಕ ಸಚಿವ ಜಾರ್ಜ್ ಅವರನ್ನು ಭೇಟಿ ಮಾಡಿ ಈ ಕುರಿತು ನೇರವಾಗಿ ಚರ್ಚಿಸಲು ಅವಕಾಶ ನೀಡಬೇಕೆಂದು ದಲಿತ ಸಂಘಟನೆಗಳ ಮುಖಂಡರು ಮನವಿ ಮಾಡಿದರು.

ಸರ್ಕಾರ ಇನ್ನು ವಿಳಂಬ ಮಾಡದೆ ಗವನಹಳ್ಳಿ ಸರ್ವೇ ನಂಬರ್ 93ರಲ್ಲೇ ಅಂಬೇಡ್ಕರ್ ಅಧ್ಯಯನ ಕೇಂದ್ರ ಹಾಗೂ ಬೌದ್ಧ ವಿಹಾರ ನಿರ್ಮಾಣಕ್ಕೆ ಅಗತ್ಯ ಜಾಗವನ್ನು ಶೀಘ್ರ ಮಂಜೂರು ಮಾಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಮಾರ್ಲೆ ಅಣ್ಣಯ್ಯ, ಬಾಚೇನಹಳ್ಳಿ ಮಂಜಯ್ಯ, ಶ್ರೀನಿವಾಸ್, ಗಣೇಶ, ಹೇಮಂತ, ರಾಕೇಶ್, ನಾಗೇಶ, ಶೇಖರ್, ಅಶೋಕ, ಚಂದ್ರು ಹಾಗೂ ಚಿದಾನಂದ ಸೇರಿದಂತೆ ದಲಿತ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Dalit organizations protest on Independence Day

Share

Leave a comment

Leave a Reply

Your email address will not be published. Required fields are marked *

Don't Miss

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು ಬರ ಪಟ್ಟಿಯಿಂದ ಕೈಬಿಟ್ಟಿರುವುದು ಸರಿಯಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ...

ಜ್ಞಾನೇಶ್ ಕುಮಾರ್ ವಜಾಗೊಳಿಸಿ ಬಂಧಕ್ಕೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರ ಧರಣಿ

ಚಿಕ್ಕಮಗಳೂರು: ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ. ಜೊತೆಗೆ ಬಿಜೆಪಿ ಏಜೆಂಟ್ ರೀತಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದ ತಾಲೂಕು ಕಚೇರಿಯಿಂದ ಆಜಾದ್...

Related Articles

ನೀಲಕುರಿಂಜಿ ಅಲ್ಲ, ಚಂದ್ರದ್ರೋಣದಲ್ಲಿ ಅರಳಿದ್ದು ಗುರಿಂಜೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ–ಬಾಬಾಬುಡನ್‌ಗಿರಿ ಪ್ರದೇಶದಲ್ಲಿ ನೇರಳೆ ಬಣ್ಣದ ಹೂವುಗಳು ಅರಳಿ...

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ

ಚಿಕ್ಕಮಗಳೂರು: ವಿದ್ಯುತ್ ಪೂರೈಕೆಯಲ್ಲಿ ಇತ್ತೀಚೆಗೆ ಉಂಟಾದ ತಾತ್ಕಾಲಿಕ ವ್ಯತ್ಯಯವನ್ನು ದೊಡ್ಡ ಸಮಸ್ಯೆಯಾಗಿ ಬಿಂಬಿಸುವ ಅಗತ್ಯವಿಲ್ಲ. ಮುಂದಿನ...

ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು

ಚಿಕ್ಕಮಗಳೂರು: ಬರಗಾಲದ ಸಂದರ್ಭದಲ್ಲಿ ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು. ನಿಯಮಾವಳಿ...

ಹಣಕ್ಕಾಗಿ ಪೀಡಿಸಿ ಬ್ಯಾಕ್ಮೇಲ್-ಮನನೊಂದ ಯುವತಿ ಆತ್ಮಹತ್ಯೆ

ಕೊಪ್ಪ : ಪ್ರೀತಿಯ ನಾಟಕವಾಡಿ ಲೈಂಗಿಕವಾಗಿ ಬಳಸಿಕೊಂಡು, ಖಾಸಗಿ ವಿಡಿಯೋ ಮುಂದಿಟ್ಟುಕೊಂಡು ಹಣಕ್ಕಾಗಿ ಪೀಡಿಸಿ ಬ್ಯಾಕ್ಮೇಲ್...