Home Crime News ₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು
Crime NewsHomeLatest Newsnamma chikmagalurTarikere

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

Share
Share

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು ಹೋಗಿರುವ ಘಟನೆ ತರೀಕೆರೆ ತಾಲ್ಲೂಕಿನ ಶಿವಪುರ ಗ್ರಾಮದಲ್ಲಿ ನಡೆದಿದೆ. ಕಳವುಗೀಡಾದ ಶ್ರೀಗಂಧದ ಮರಗಳ ಅಂದಾಜು ಮೌಲ್ಯ ಸುಮಾರು ₹5 ಲಕ್ಷ ಎಂದು ತಿಳಿದುಬಂದಿದೆ.

ಶಿವಪುರ ಗ್ರಾಮದ ಟಿ.ಎನ್. ವಿಷುಕುಮಾರ್‌ ಎಂಬುವರಿಗೆ ಅಮೃತಾಪುರ ಹೋಬಳಿಯ ಶಿವಪುರ ಗ್ರಾಮದಲ್ಲಿ ಸರ್ವೆ ನಂಬರ್‌ 98 ಮತ್ತು 99ರಲ್ಲಿ ಒಟ್ಟು 18 ಎಕರೆ ಜಮೀನಿದ್ದು, ಕಳೆದ ಸುಮಾರು 9 ವರ್ಷಗಳಿಂದ ತೋಟಗಾರಿಕೆ ಬೆಳೆಗಳೊಂದಿಗೆ ಶ್ರೀಗಂಧದ ಮರಗಳನ್ನು ಬೆಳೆಸುತ್ತಿದ್ದರು.

ಆಗಸ್ಟ್‌ 13ರಂದು ಸಂಜೆ ಸುಮಾರು 5.30ಕ್ಕೆ ತೋಟಕ್ಕೆ ತೆರಳಿ ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್‌ ಬಂದಿದ್ದರು. ಮರುದಿನ ಆಗಸ್ಟ್‌ 14ರಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ಎಂದಿನಂತೆ ತೋಟಕ್ಕೆ ತೆರಳಿ ಪರಿಶೀಲಿಸಿದಾಗ ಸುಮಾರು 15 ಶ್ರೀಗಂಧದ ಮರಗಳನ್ನು ಯಾರೋ ಕಡಿದು ಕಳವು ಮಾಡಿಕೊಂಡು ಹೋಗಿರುವುದು ಬೆಳಕಿಗೆ ಬಂದಿದೆ.

ಕಳವುಗೀಡಾದ ಮರಗಳ ಅಂದಾಜು ಮೌಲ್ಯ ₹5 ಲಕ್ಷ ಎಂದು ದೂರಿನಲ್ಲಿ ತಿಳಿಸಲಾಗಿದೆ. ಬಳಿಕ ತಮ್ಮ ಸಂಘದಲ್ಲಿ ವಿಚಾರಣೆ ನಡೆಸಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಹುಡುಕಾಟ ನಡೆಸಿದರೂ ಮರಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ಆಗಸ್ಟ್‌ 15ರಂದು ಬೀರೂರು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ದೂರಿನ ಆಧಾರದ ಮೇಲೆ ಬೀರೂರು ಪೊಲೀಸ್‌ ಠಾಣೆಯಲ್ಲಿ ಮೊ.ನಂ.121/2026ರಂತೆ ಕರ್ನಾಟಕ ಅರಣ್ಯ ಕಾಯ್ದೆಯ ಕಲಂ 86, 87 ಹಾಗೂ ಬಿಎನ್‌ಎಸ್‌ ಕಲಂ 303(2)ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ಕಳವುಗೈದವರ ಪತ್ತೆ ಹಾಗೂ ಶ್ರೀಗಂಧದ ಮರಗಳ ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Sandalwood trees worth ₹5 lakh stolen

Share

Leave a comment

Leave a Reply

Your email address will not be published. Required fields are marked *

Don't Miss

ಗ್ರಾಮ ಪಂಚಾಯಿತಿ ನೌಕರರ ಬೇಡಿಕೆ ಈಡೇರಿಸಲು ಸೆ.29ರಂದು ಧರಣಿ

ಚಿಕ್ಕಮಗಳೂರು: ಗ್ರಾಮ ಪಂಚಾಯಿತಿ ನೌಕರರಿಗೆ ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಫೆಡರೇಶನ್ (AITUC) ವತಿಯಿಂದ ಸೆ.29ರಂದು...

ಮ್ಯಾಟ್ರಿಮೋನಿಯಲ್ ಸೈಟ್‌ನಲ್ಲಿ ಸುಳ್ಳು ಮಾಹಿತಿ ನೀಡಿ ₹2.20 ಲಕ್ಷ ವಂಚನೆ

ಚಿಕ್ಕಮಗಳೂರು: ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ನಲ್ಲಿ ಸುಳ್ಳು ವೈಯಕ್ತಿಕ ಮಾಹಿತಿ ನೀಡಿ ಮದುವೆಯಾಗುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ಹಂತ ಹಂತವಾಗಿ *₹2.20 ಲಕ್ಷ ಹಣ ಹಾಗೂ ಮೊಬೈಲ್ ಫೋನ್ ಪಡೆದು ವಂಚಿಸಿರುವ ಆರೋಪ* ಕೇಳಿಬಂದಿದೆ. ಈ...

Related Articles

12 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಚಿಕ್ಕಮಗಳೂರು: ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೇ ಜಿಲ್ಲೆಯ 12...

ಕಳಸದಲ್ಲಿ ಬೃಹತ್ ಕಾಳಿಂಗ ಸರ್ಪ ಪ್ರತ್ಯಕ್ಷ

ಕಳಸ : ಮನೆಯಂಗಳದಲ್ಲೇ ಬೃಹತ್ ಕಾಳಿಂಗ ಸರ್ಪ ಪ್ರತ್ಯಕ್ಷವಾಗಿ ಸ್ಥಳೀಯರನ್ನು ಬೆಚ್ಚಿಬೀಳಿಸಿದ ಘಟನೆ ಕಳಸ ತಾಲೂಕಿನ...

ಕೆಎಸ್‌ಆರ್‌ಟಿಸಿ ಬಸ್–ಟ್ರ್ಯಾಕ್ಟರ್ ಇಂಜಿನ್ ಡಿಕ್ಕಿಗೆ ಚಾಲಕ ಸಾವು

ತರೀಕೆರೆ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಟ್ರ್ಯಾಕ್ಟರ್ ಇಂಜಿನ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಟ್ರ್ಯಾಕ್ಟರ್...

ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಪ್ರಜಾಸೇವ ಆಂದೋಲನದ ಉದ್ದೇಶ

ಚಿಕ್ಕಮಗಳೂರು:  ಜನರ ಸಮಸ್ಯೆಗಳನ್ನು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಒಗ್ಗೂಡಿ ಆಲಿಸಿ, ಸಾಧ್ಯವಾದಷು ಶೀಘ್ರವಾಗಿ ಇತ್ಯರ್ಥ ಪಡಿಸುವ...