Home namma chikmagalur chikamagalur ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ
chikamagalurHomeLatest Newsnamma chikmagalur

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

Share
Share

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ 50ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಬಳಿಕ ಬಿಡುಗಡೆಗೊಳಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ ಹಾಗೂ ವಿಧಾನ ಪರಿಷತ್ ಮಾಜಿ ಉಪಸಭಾಪತಿ ಎಂ.ಕೆ. ಪ್ರಾಣೇಶ್ ಅವರ ನೇತೃತ್ವದಲ್ಲಿ ತಾಲ್ಲೂಕು ಕಚೇರಿ ಆವರಣದಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಯಿತು. ಕಾರ್ಯಕರ್ತರು ಆಜಾದ್ ಪಾರ್ಕ್ ವೃತ್ತದ ಬಳಿ ಜಮಾಯಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಸಚಿವ ನಾಗೇಂದ್ರ ಅವರನ್ನು ಕೂಡಲೇ ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿದರು.

ನಂತರ ಪ್ರತಿಭಟನಾಕಾರರು ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿಗಳ ಕಚೇರಿ ಮುಂಭಾಗ ತೆರಳಿ ಪ್ರತಿಭಟನೆ ನಡೆಸಲು ಮುಂದಾದರು. ಮಾರ್ಗಮಧ್ಯೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದರೂ, ಪೊಲೀಸರ ಸೂಚನೆಯನ್ನು ಲೆಕ್ಕಿಸದೆ ಮಹಿಳೆಯರು ಸೇರಿದಂತೆ 50ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಎಸ್‌ಪಿ ಕಚೇರಿ ಕಡೆಗೆ ತೆರಳಲು ಮುಂದಾದರು.

ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ, ಬಳಿಕ ಬಿಡುಗಡೆಗೊಳಿಸಿದರು. ಯಾವುದೇ ಮುನ್ನೆಚ್ಚರಿಕೆ ಇಲ್ಲದೆ ಬಿಜೆಪಿ ಕಾರ್ಯಕರ್ತರು ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ ನಡೆಸಲು ಮುಂದಾದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣಗೊಂಡಿತ್ತು.

ಪ್ರತಿಭಟನೆಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ದೇವರಾಜ ಶೆಟ್ಟಿ, ನಗರಾಧ್ಯಕ್ಷ ಪುಷ್ಪರಾಜ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಸಂತೋಷ್ ಕೋಟ್ಯಾನ್, ಜಿಲ್ಲಾ ಎಸ್ಸಿ ಮೋರ್ಚಾ ಅಧ್ಯಕ್ಷ ಕೆ.ಪಿ. ವೆಂಕಟೇಶ್, ಗ್ರಾಮಾಂತರ ಮಂಡಲ ಅಧ್ಯಕ್ಷ ವಿಜಯಕುಮಾರ್, ಜಿಲ್ಲಾ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ, ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಚ್.ಸಿ. ಕಲ್ಮರುಡಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪುಣ್ಯಪಾಲ್, ಬೆಳವಾಡಿ ರವೀಂದ್ರ, ನರೇಂದ್ರ ಸೇರಿದಂತೆ ಮುಖಂಡರಾದ ವಿನೋದ್ ಬೊಗಸೆ, ಪ್ರದೀಪ್ ಕೋಟೆ, ಹಿರೇಮಗಳೂರು ಕೇಶವ, ನಂದೀಶ್ ಮದಕರಿ, ಕಬೀರ್ ಹಾಗೂ ಹಲವು ಕಾರ್ಯಕರ್ತರು ಪಾಲ್ಗೊಂಡಿದ್ದರು.

BJP protests demanding Minister Nagendra’s resignation

Share

Leave a comment

Leave a Reply

Your email address will not be published. Required fields are marked *

Don't Miss

ಗ್ರಾಮ ಪಂಚಾಯಿತಿ ನೌಕರರ ಬೇಡಿಕೆ ಈಡೇರಿಸಲು ಸೆ.29ರಂದು ಧರಣಿ

ಚಿಕ್ಕಮಗಳೂರು: ಗ್ರಾಮ ಪಂಚಾಯಿತಿ ನೌಕರರಿಗೆ ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಫೆಡರೇಶನ್ (AITUC) ವತಿಯಿಂದ ಸೆ.29ರಂದು...

ಮ್ಯಾಟ್ರಿಮೋನಿಯಲ್ ಸೈಟ್‌ನಲ್ಲಿ ಸುಳ್ಳು ಮಾಹಿತಿ ನೀಡಿ ₹2.20 ಲಕ್ಷ ವಂಚನೆ

ಚಿಕ್ಕಮಗಳೂರು: ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ನಲ್ಲಿ ಸುಳ್ಳು ವೈಯಕ್ತಿಕ ಮಾಹಿತಿ ನೀಡಿ ಮದುವೆಯಾಗುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ಹಂತ ಹಂತವಾಗಿ *₹2.20 ಲಕ್ಷ ಹಣ ಹಾಗೂ ಮೊಬೈಲ್ ಫೋನ್ ಪಡೆದು ವಂಚಿಸಿರುವ ಆರೋಪ* ಕೇಳಿಬಂದಿದೆ. ಈ...

Related Articles

12 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಚಿಕ್ಕಮಗಳೂರು: ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೇ ಜಿಲ್ಲೆಯ 12...

ಕಳಸದಲ್ಲಿ ಬೃಹತ್ ಕಾಳಿಂಗ ಸರ್ಪ ಪ್ರತ್ಯಕ್ಷ

ಕಳಸ : ಮನೆಯಂಗಳದಲ್ಲೇ ಬೃಹತ್ ಕಾಳಿಂಗ ಸರ್ಪ ಪ್ರತ್ಯಕ್ಷವಾಗಿ ಸ್ಥಳೀಯರನ್ನು ಬೆಚ್ಚಿಬೀಳಿಸಿದ ಘಟನೆ ಕಳಸ ತಾಲೂಕಿನ...

ಕೆಎಸ್‌ಆರ್‌ಟಿಸಿ ಬಸ್–ಟ್ರ್ಯಾಕ್ಟರ್ ಇಂಜಿನ್ ಡಿಕ್ಕಿಗೆ ಚಾಲಕ ಸಾವು

ತರೀಕೆರೆ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಟ್ರ್ಯಾಕ್ಟರ್ ಇಂಜಿನ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಟ್ರ್ಯಾಕ್ಟರ್...

ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಪ್ರಜಾಸೇವ ಆಂದೋಲನದ ಉದ್ದೇಶ

ಚಿಕ್ಕಮಗಳೂರು:  ಜನರ ಸಮಸ್ಯೆಗಳನ್ನು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಒಗ್ಗೂಡಿ ಆಲಿಸಿ, ಸಾಧ್ಯವಾದಷು ಶೀಘ್ರವಾಗಿ ಇತ್ಯರ್ಥ ಪಡಿಸುವ...