Home namma chikmagalur chikamagalur ನಗರದಲ್ಲಿ ಅವಿಧಿ ಮುಗಿದ ಚಾಕೊಲೇಟ್ ಸಾಸ್ ಬಳಸಿ ಕೇಕ್ ….?
chikamagalurHomeLatest Newsnamma chikmagalur

ನಗರದಲ್ಲಿ ಅವಿಧಿ ಮುಗಿದ ಚಾಕೊಲೇಟ್ ಸಾಸ್ ಬಳಸಿ ಕೇಕ್ ….?

Share
Share

ಚಿಕ್ಕಮಗಳೂರು: ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್‌ ಹಾಗೂ ಬೇಕರಿಗಳ ಮೇಲೆ ಕ್ಷಿಪ್ರ ಕಾರ್ಯಾಚರಣೆ ನಡೆಸುತ್ತಿರುವ ಬೆನ್ನಲ್ಲೇ, ‘ಕಾಫಿನಾಡು’ ಚಿಕ್ಕಮಗಳೂರಿನಲ್ಲಿ ಕೇವಲ ಮೂರು ದಿನಗಳ ಅಂತರದಲ್ಲಿ ಎರಡು ಆಘಾತಕಾರಿ ಪ್ರಕರಣಗಳು ಪತ್ತೆಯಾಗಿವೆ.

ಒಂದೆಡೆ ಕಳಸದ ಹೋಟೆಲ್‌ನಲ್ಲಿ ವಡೆಯಲ್ಲಿ ಸತ್ತ ಹಲ್ಲಿ ಪತ್ತೆಯಾಗಿದ್ದರೆ, ಇನ್ನೊಂದೆಡೆ ಚಿಕ್ಕಮಗಳೂರು ನಗರದ ಪ್ರಸಿದ್ಧ ಬೇಕರಿಯಲ್ಲಿ ಎಕ್ಸ್‌ಪೈರಿ ದಿನಾಂಕ ಮುಗಿದ ಚಾಕೊಲೇಟ್ ಸಾಸ್ ಬಳಸಿ ಕೇಕ್ ತಯಾರಿಸುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

“ಈ ಕೇಕ್ ಅನ್ನು ಸಣ್ಣ ಮಕ್ಕಳು ತಿಂದಿದ್ದಾರೆ. ಒಂದು ವೇಳೆ ವಿಷಪೂರಿತವಾಗಿ ಮಕ್ಕಳಿಗೆ ಏನಾದರೂ ಹೆಚ್ಚು ಕಮ್ಮಿಯಾಗಿ ಆಸ್ಪತ್ರೆ ಸೇರಿದರೆ ಜವಾಬ್ದಾರಿ ಯಾರು? ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದೀರಾ?” ಎಂದು ಗ್ರಾಹಕರು ಬೇಕರಿ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಕ್ಲಾಸ್ ತಗೆದುಕೊಂಡಿದ್ದಾರೆ. “ಕೊಳೆತ ಕೇಕ್‌ಗೆ ಒಂದು ರೂಪಾಯಿಯನ್ನೂ ಕೊಡಲ್ಲ, ಈ ವಿಚಾರವನ್ನು ಇಲ್ಲಿಗೆ ಬಿಡುವುದಿಲ್ಲ” ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

Cake made using expired chocolate sauce in the city…?
Share

Leave a comment

Leave a Reply

Your email address will not be published. Required fields are marked *

Don't Miss

ಗ್ರಾಮ ಪಂಚಾಯಿತಿ ನೌಕರರ ಬೇಡಿಕೆ ಈಡೇರಿಸಲು ಸೆ.29ರಂದು ಧರಣಿ

ಚಿಕ್ಕಮಗಳೂರು: ಗ್ರಾಮ ಪಂಚಾಯಿತಿ ನೌಕರರಿಗೆ ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಫೆಡರೇಶನ್ (AITUC) ವತಿಯಿಂದ ಸೆ.29ರಂದು...

ಮ್ಯಾಟ್ರಿಮೋನಿಯಲ್ ಸೈಟ್‌ನಲ್ಲಿ ಸುಳ್ಳು ಮಾಹಿತಿ ನೀಡಿ ₹2.20 ಲಕ್ಷ ವಂಚನೆ

ಚಿಕ್ಕಮಗಳೂರು: ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ನಲ್ಲಿ ಸುಳ್ಳು ವೈಯಕ್ತಿಕ ಮಾಹಿತಿ ನೀಡಿ ಮದುವೆಯಾಗುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ಹಂತ ಹಂತವಾಗಿ *₹2.20 ಲಕ್ಷ ಹಣ ಹಾಗೂ ಮೊಬೈಲ್ ಫೋನ್ ಪಡೆದು ವಂಚಿಸಿರುವ ಆರೋಪ* ಕೇಳಿಬಂದಿದೆ. ಈ...

Related Articles

12 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಚಿಕ್ಕಮಗಳೂರು: ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೇ ಜಿಲ್ಲೆಯ 12...

ಕಳಸದಲ್ಲಿ ಬೃಹತ್ ಕಾಳಿಂಗ ಸರ್ಪ ಪ್ರತ್ಯಕ್ಷ

ಕಳಸ : ಮನೆಯಂಗಳದಲ್ಲೇ ಬೃಹತ್ ಕಾಳಿಂಗ ಸರ್ಪ ಪ್ರತ್ಯಕ್ಷವಾಗಿ ಸ್ಥಳೀಯರನ್ನು ಬೆಚ್ಚಿಬೀಳಿಸಿದ ಘಟನೆ ಕಳಸ ತಾಲೂಕಿನ...

ಕೆಎಸ್‌ಆರ್‌ಟಿಸಿ ಬಸ್–ಟ್ರ್ಯಾಕ್ಟರ್ ಇಂಜಿನ್ ಡಿಕ್ಕಿಗೆ ಚಾಲಕ ಸಾವು

ತರೀಕೆರೆ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಟ್ರ್ಯಾಕ್ಟರ್ ಇಂಜಿನ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಟ್ರ್ಯಾಕ್ಟರ್...

ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಪ್ರಜಾಸೇವ ಆಂದೋಲನದ ಉದ್ದೇಶ

ಚಿಕ್ಕಮಗಳೂರು:  ಜನರ ಸಮಸ್ಯೆಗಳನ್ನು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಒಗ್ಗೂಡಿ ಆಲಿಸಿ, ಸಾಧ್ಯವಾದಷು ಶೀಘ್ರವಾಗಿ ಇತ್ಯರ್ಥ ಪಡಿಸುವ...