Home namma chikmagalur chikamagalur ಮಳೆಗಾಲದಲ್ಲಿ ಟಿಂಬರ್ ಸಾಗಣೆರಸ್ತೆಯಿಂದ ರಸ್ತೆ ಹಾಳು
chikamagalurLatest Newsnamma chikmagalur

ಮಳೆಗಾಲದಲ್ಲಿ ಟಿಂಬರ್ ಸಾಗಣೆರಸ್ತೆಯಿಂದ ರಸ್ತೆ ಹಾಳು

Share
Share

ಕೊಪ್ಪ: ತಾಲೂಕಿನ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಮಳೆಗಾಲದಲ್ಲಿಯೇ ಟಿಂಬರ್‌ಗಳನ್ನು ಕಡಿದು ಸಾಗಿಸುತ್ತಿರುವುದರಿಂದ ಗ್ರಾಮೀಣ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ಸಾರ್ವಜನಿಕರು ಹಾಗೂ ಭಕ್ತಾದಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕೂಡಲೇ ರಸ್ತೆ ದುರಸ್ತಿ ಕಾಮಗಾರಿ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.

ಅರಣ್ಯ ಪ್ರದೇಶದಲ್ಲಿ ಟಿಂಬರ್ ಕಡಿದು ಸಾಗಿಸುವ ಸಂದರ್ಭದಲ್ಲಿ ಭಾರಿ ವಾಹನಗಳ ಸಂಚಾರದಿಂದ ರಸ್ತೆಗಳು ಕೆಸರುಮಯವಾಗಿ, ಗುಂಡಿಗಳು ನಿರ್ಮಾಣಗೊಂಡಿವೆ. ಇದರಿಂದ ಗ್ರಾಮಸ್ಥರು ಸಂಚಾರ ನಡೆಸುವುದು ಕಷ್ಟಕರವಾಗಿದೆ. ವಿಶೇಷವಾಗಿ ಗ್ರಾಮದ ನೀರುಳ್ಳಿ ದೇವಸ್ಥಾನ ಹಾಗೂ ಚೌಡೇಶ್ವರಿ ದೇವಸ್ಥಾನಗಳಿಗೆ ತೆರಳುವ ಭಕ್ತಾದಿಗಳಿಗೆ ತೊಂದರೆಯಾಗುತ್ತಿದೆ.

ಅಲ್ಲದೆ, ಹೊಸಕೊಪ್ಪ ನ್ಯಾಯಬೆಲೆ ಅಂಗಡಿಗೆ ಪಡಿತರ ಪಡೆಯಲು ತೆರಳುವ ಗ್ರಾಮಸ್ಥರೂ ಹದಗೆಟ್ಟ ರಸ್ತೆಯಿಂದಾಗಿ ಸಮಸ್ಯೆ ಎದುರಿಸುತ್ತಿದ್ದಾರೆ. ವೃದ್ಧರು, ಮಹಿಳೆಯರು ಹಾಗೂ ದ್ವಿಚಕ್ರ ವಾಹನ ಸವಾರರು ಸಂಚರಿಸಲು ಆತಂಕಪಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಮಳೆಗಾಲದಲ್ಲಿ ಟಿಂಬರ್ ಕಡಿದು ಸಾಗಣೆ ಮಾಡುತ್ತಿರುವುದೇ ರಸ್ತೆಗಳು ಹದಗೆಡಲು ಪ್ರಮುಖ ಕಾರಣವಾಗಿದ್ದು, ಅರಣ್ಯ ಇಲಾಖೆಯು ಸಾರ್ವಜನಿಕರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಟಿಂಬರ್ ಸಾಗಣೆಯಿಂದ ಹಾನಿಗೊಳಗಾಗಿರುವ ರಸ್ತೆಯನ್ನು ತಕ್ಷಣ ದುರಸ್ತಿಪಡಿಸಿ, ಗ್ರಾಮಸ್ಥರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Road damage from timber transport during the rainy season

Share

Leave a comment

Leave a Reply

Your email address will not be published. Required fields are marked *

Don't Miss

ಗ್ರಾಮ ಪಂಚಾಯಿತಿ ನೌಕರರ ಬೇಡಿಕೆ ಈಡೇರಿಸಲು ಸೆ.29ರಂದು ಧರಣಿ

ಚಿಕ್ಕಮಗಳೂರು: ಗ್ರಾಮ ಪಂಚಾಯಿತಿ ನೌಕರರಿಗೆ ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಫೆಡರೇಶನ್ (AITUC) ವತಿಯಿಂದ ಸೆ.29ರಂದು...

ಮ್ಯಾಟ್ರಿಮೋನಿಯಲ್ ಸೈಟ್‌ನಲ್ಲಿ ಸುಳ್ಳು ಮಾಹಿತಿ ನೀಡಿ ₹2.20 ಲಕ್ಷ ವಂಚನೆ

ಚಿಕ್ಕಮಗಳೂರು: ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ನಲ್ಲಿ ಸುಳ್ಳು ವೈಯಕ್ತಿಕ ಮಾಹಿತಿ ನೀಡಿ ಮದುವೆಯಾಗುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ಹಂತ ಹಂತವಾಗಿ *₹2.20 ಲಕ್ಷ ಹಣ ಹಾಗೂ ಮೊಬೈಲ್ ಫೋನ್ ಪಡೆದು ವಂಚಿಸಿರುವ ಆರೋಪ* ಕೇಳಿಬಂದಿದೆ. ಈ...

Related Articles

12 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಚಿಕ್ಕಮಗಳೂರು: ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೇ ಜಿಲ್ಲೆಯ 12...

ಕಳಸದಲ್ಲಿ ಬೃಹತ್ ಕಾಳಿಂಗ ಸರ್ಪ ಪ್ರತ್ಯಕ್ಷ

ಕಳಸ : ಮನೆಯಂಗಳದಲ್ಲೇ ಬೃಹತ್ ಕಾಳಿಂಗ ಸರ್ಪ ಪ್ರತ್ಯಕ್ಷವಾಗಿ ಸ್ಥಳೀಯರನ್ನು ಬೆಚ್ಚಿಬೀಳಿಸಿದ ಘಟನೆ ಕಳಸ ತಾಲೂಕಿನ...

ಕೆಎಸ್‌ಆರ್‌ಟಿಸಿ ಬಸ್–ಟ್ರ್ಯಾಕ್ಟರ್ ಇಂಜಿನ್ ಡಿಕ್ಕಿಗೆ ಚಾಲಕ ಸಾವು

ತರೀಕೆರೆ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಟ್ರ್ಯಾಕ್ಟರ್ ಇಂಜಿನ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಟ್ರ್ಯಾಕ್ಟರ್...

ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಪ್ರಜಾಸೇವ ಆಂದೋಲನದ ಉದ್ದೇಶ

ಚಿಕ್ಕಮಗಳೂರು:  ಜನರ ಸಮಸ್ಯೆಗಳನ್ನು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಒಗ್ಗೂಡಿ ಆಲಿಸಿ, ಸಾಧ್ಯವಾದಷು ಶೀಘ್ರವಾಗಿ ಇತ್ಯರ್ಥ ಪಡಿಸುವ...