Home namma chikmagalur chikamagalur ಸೆಪ್ಟೆಂಬರ್ 10ಕ್ಕೆ ಟಿ.ಡಿ. ರಾಜೇಗೌಡ-ಡಿ.ಎನ್. ಜೀವರಾಜ್ ಅಂತಿಮ ವಿಚಾರಣೆ
chikamagalurHomeLatest Newsnamma chikmagalur

ಸೆಪ್ಟೆಂಬರ್ 10ಕ್ಕೆ ಟಿ.ಡಿ. ರಾಜೇಗೌಡ-ಡಿ.ಎನ್. ಜೀವರಾಜ್ ಅಂತಿಮ ವಿಚಾರಣೆ

Share
Share

ಚಿಕ್ಕಮಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 10ಕ್ಕೆ ಮುಂದೂಡಿದೆ.

​2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಅವರು ಬಿಜೆಪಿಯ ಡಿ.ಎನ್. ಜೀವರಾಜ್ ವಿರುದ್ಧ ಗೆಲುವು ಸಾಧಿಸಿದ್ದರು. ಈ ಫಲಿತಾಂಶವನ್ನು ಪ್ರಶ್ನಿಸಿ ಜೀವರಾಜ್ ಹೈಕೋರ್ಟ್ ಮೆಟ್ಟಿಲೇರಿದಾಗ, ನ್ಯಾಯಾಲಯದ ನಿರ್ದೇಶನದಂತೆ ಅಂಚೆ ಮತಗಳ ಮರು ಎಣಿಕೆ ನಡೆದು ಫಲಿತಾಂಶ ಬದಲಾಗಿತ್ತು. ಇದರ ಆಧಾರದ ಮೇಲೆ ಜೀವರಾಜ್ ಅವರು ಶಾಸಕರಾಗಿ ಪ್ರಮಾಣ ವಚನವನ್ನೂ ಸ್ವೀಕರಿಸಿದ್ದರು.

​ಆದರೆ ಮರು ಎಣಿಕೆಯಲ್ಲಿ ಗಂಭೀರ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಟಿ.ಡಿ. ರಾಜೇಗೌಡ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆ ನೀಡಿ, ರಾಜೇಗೌಡ ಅವರ ಶಾಸಕ ಸ್ಥಾನವನ್ನು ತಾತ್ಕಾಲಿಕವಾಗಿ ಮುಂದುವರಿಸಲು ಅನುಮತಿ ನೀಡಿತ್ತು.

​ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಮತ ಎಣಿಕೆಯ ಮೂಲ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದು, ದಾಖಲೆಗಳ ಕೂಲಂಕಷ ಪರಿಶೀಲನೆ ಹಾಗೂ ವಾದ-ಪ್ರತಿವಾದಗಳು ಬಾಕಿ ಇವೆ. ಈ ಹಿನ್ನೆಲೆಯಲ್ಲಿ ಅಂತಿಮ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 10ಕ್ಕೆ ನಿಗದಿಪಡಿಸಿದ್ದು, ಕ್ಷೇತ್ರದ ಭವಿಷ್ಯ ಹಾಗೂ ನ್ಯಾಯಾಲಯದ ಅಂತಿಮ ತೀರ್ಪಿನ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.

Final hearing of T.D. Rajegowda-D.N. Jeevaraj on September 10

Share

Leave a comment

Leave a Reply

Your email address will not be published. Required fields are marked *

Don't Miss

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು ಜಾನುವಾರುಗಳು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವ ಘಟನೆ ನರಸಿಂಹರಾಜಪುರ ತಾಲೂಕಿನ ಗದ್ದೆಮನೆ ಕಾನೂರು ಗ್ರಾಮದಲ್ಲಿ ನಡೆದಿದೆ....

ಜಿಲ್ಲೆಯಲ್ಲಿ ಮಂತ್ರಿಯಾಗಲಿಲ್ಲ ರಗಳೆ ಬಿಟ್ಟಿಲ್ಲ

ಚಿಕ್ಕಮಗಳೂರು; ಮದುವೆ ಆಗಲಿಲ್ಲ, ಹುಚ್ಚು ಬಿಡಲಿಲ್ಲ ಎಂಬ ಸ್ಥಿತಿ ಮಂತ್ರಿ ಆಗಲಿಲ್ಲ, ಓಡಾಡುವುದು ತಪ್ಪಲಿಲ್ಲ.ಎಂಬ ದುಸ್ಥಿತಿ ಕಾಂಗ್ರೆಸ್ ಚುನಾಯಿತ ಪ್ರತಿನಿಧಿಗಳದ್ದು. ಜಿಲ್ಲೆಗೆ ಯಾವುದೇ ಕಾರಣಕ್ಕೂ ಮಂತ್ರಿಗಿರಿ ಸಿಗುವುದಿಲ್ಲ ಎಂಬುದಕ್ಕೆ ಕಾರಣ ನೀಡಿ...

Related Articles

ಪ್ರತ್ಯೇಕ ಭೀಕರ ರಸ್ತೆ ಅಪಘಾತ-9 ಕ್ಕೂ ಹೆಚ್ಚು ಮಂದಿ ಗಾಯ

ಚಿಕ್ಕಮಗಳೂರು:  ಜಿಲ್ಲೆಯ ವಿವಿಧೆಡೆ ಸಂಭವಿಸಿದ ಮೂರು ಪ್ರತ್ಯೇಕ ಭೀಕರ ರಸ್ತೆ ಅಪಘಾತಗಳಲ್ಲಿ ಶಾಲಾ ವಿದ್ಯಾರ್ಥಿನಿ ಹಾಗೂ...

ಆಗಸ್ಟ್ 21ರಿಂದ 25ರವರೆಗೆ ವಿಶ್ವ ಬಂಧುತ್ವದ ರಕ್ತದಾನ ಮಹಾ ಅಭಿಯಾನ

ಚಿಕ್ಕಮಗಳೂರು: ಬ್ರಹ್ಮಾಕುಮಾರೀಸ್ ಸಂಸ್ಥೆಯ ಪೂರ್ವ ಮುಖ್ಯ ಆಡಳಿತಾಧಿಕಾರಿಣಿ ರಾಜಯೋಗಿನಿ ಡಾ. ದಾದೀ ಪ್ರಕಾಶಮಣೀಜೀಯವರ 19ನೇ ಪುಣ್ಯಸ್ಮೃತಿ...

ಆಗಸ್ಟ್ 25ರಂದು ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಚಿಕ್ಕಮಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 25ರಂದು ರಾಜ್ಯದ...

ಮಾಲಿನ್ಯದಿಂದ ನಾರುತ್ತಿರುವ ಮುಳ್ಳಯ್ಯನಗಿರಿ–ಸೀತಾಳಯ್ಯನಗಿರಿ

ಚಿಕ್ಕಮಗಳೂರು: ಪುರಾಣ ಪ್ರಸಿದ್ಧ, ಧಾರ್ಮಿಕ ಹಾಗೂ ಪರಿಸರದ ದೃಷ್ಟಿಯಿಂದ ಮಹತ್ವ ಪಡೆದಿರುವ ಮುಳ್ಳಯ್ಯನಗಿರಿ–ಸೀತಾಳಯ್ಯನಗಿರಿ ಪ್ರದೇಶ ಪ್ರವಾಸಿಗರ...