Home namma chikmagalur chikamagalur ಪ್ರತ್ಯೇಕ ಭೀಕರ ರಸ್ತೆ ಅಪಘಾತ-9 ಕ್ಕೂ ಹೆಚ್ಚು ಮಂದಿ ಗಾಯ
chikamagalurCrime NewsHomeLatest Newsnamma chikmagalur

ಪ್ರತ್ಯೇಕ ಭೀಕರ ರಸ್ತೆ ಅಪಘಾತ-9 ಕ್ಕೂ ಹೆಚ್ಚು ಮಂದಿ ಗಾಯ

Share
Share

ಚಿಕ್ಕಮಗಳೂರು:  ಜಿಲ್ಲೆಯ ವಿವಿಧೆಡೆ ಸಂಭವಿಸಿದ ಮೂರು ಪ್ರತ್ಯೇಕ ಭೀಕರ ರಸ್ತೆ ಅಪಘಾತಗಳಲ್ಲಿ ಶಾಲಾ ವಿದ್ಯಾರ್ಥಿನಿ ಹಾಗೂ ಬೈಕ್ ಸವಾರ ಸೇರಿದಂತೆ ಒಟ್ಟು 9ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆಗಳು ವರದಿಯಾಗಿವೆ.

ಮೂಡಿಗೆರೆ ಹ್ಯಾಂಡ್ ಪೋಸ್ಟ್ ಬಳಿಯ ಎನ್‌ಹೆಚ್-73 ರಸ್ತೆಯಲ್ಲಿ ಶಾಲೆಗೆ ತೆರಳಲು ರಸ್ತೆ ದಾಟುತ್ತಿದ್ದ 10ನೇ ತರಗತಿ ವಿದ್ಯಾರ್ಥಿನಿ ಫಾತಿಮಾ ಸಿಮ್ರಾ ಎಂಬುವವರಿಗೆ ಗೋಣಿಬೀಡು ಕಡೆಯಿಂದ ಬಂದ ಓಮ್ಮಿ ಕಾರು ಅಜಾಗರೂಕತೆಯಿಂದ ಡಿಕ್ಕಿ ಹೊಡೆದಿದೆ ಎಂದು ಆರೋಪಿಸಲಾಗಿದೆ. ಗಂಭೀರ ಗಾಯಗೊಂಡ ವಿದ್ಯಾರ್ಥಿನಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತೊಂದೆಡೆ ಬೀರೂರು ವ್ಯಾಪ್ತಿಯ ಎನ್‌ಹೆಚ್-69 ರಸ್ತೆಯ ಶಿವಪುರ ಇಟ್ಟಿಗೆ ಫ್ಯಾಕ್ಟರಿ ಬಳಿ ತೋಟದ ಕೆಲಸಕ್ಕೆ ತೆರಳುತ್ತಿದ್ದ ಮಹಿಳಾ ಕೂಲಿ ಕಾರ್ಮಿಕರಿದ್ದ ಆಟೋಗೆ ಹಿಂಬದಿಯಿಂದ ಅತಿವೇಗವಾಗಿ ಬಂದ ಬುಲೆಟ್ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಆಟೋ ಪಲ್ಟಿಯಾಗಿದೆ ಎಂದು ಹೇಳಲಾಗಿದೆ. ಈ ದುರ್ಘಟನೆಯಲ್ಲಿ ಆಟೋದಲ್ಲಿದ್ದ 8 ಮಂದಿ ಮಹಿಳಾ ಕಾರ್ಮಿಕರು, ಆಟೋ ಚಾಲಕ ಹಾಗೂ ಬೈಕ್ ಸವಾರನಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಬೀರೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಇದೇ ಬೀರೂರು ಸಮೀಪದ ಕೊರಟಿಕೆರೆ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ಚಂದ್ರಶೇಖರ್ ಎಂಬುವವರಿಗೆ ಅಶೋಕ್ ಲೈಲ್ಯಾಂಡ್ ಗೂಡ್ಸ್ ವಾಹನವು ಯಾವುದೇ ಮುನ್ಸೂಚನೆ ನೀಡದೆ ಅಡ್ಡಲಾಗಿ ಬಂದು ಡಿಕ್ಕಿ ಹೊಡೆದಿದೆ ಎಂದು ದೂರಲಾಗಿದೆ. ಅಪಘಾತದಲ್ಲಿ ಮುಖ ಹಾಗೂ ತಲೆಗೆ ತೀವ್ರ ಪೆಟ್ಟು ಬಿದ್ದ ಹಿನ್ನೆಲೆಯಲ್ಲಿ ಬೈಕ್‌ ಸವಾರನನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದ್ದು, ಈ ಸಂಬಂಧ ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Separate horrific road accident- More than 9 injured

Share

Leave a comment

Leave a Reply

Your email address will not be published. Required fields are marked *

Don't Miss

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು ಜಾನುವಾರುಗಳು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವ ಘಟನೆ ನರಸಿಂಹರಾಜಪುರ ತಾಲೂಕಿನ ಗದ್ದೆಮನೆ ಕಾನೂರು ಗ್ರಾಮದಲ್ಲಿ ನಡೆದಿದೆ....

ಜಿಲ್ಲೆಯಲ್ಲಿ ಮಂತ್ರಿಯಾಗಲಿಲ್ಲ ರಗಳೆ ಬಿಟ್ಟಿಲ್ಲ

ಚಿಕ್ಕಮಗಳೂರು; ಮದುವೆ ಆಗಲಿಲ್ಲ, ಹುಚ್ಚು ಬಿಡಲಿಲ್ಲ ಎಂಬ ಸ್ಥಿತಿ ಮಂತ್ರಿ ಆಗಲಿಲ್ಲ, ಓಡಾಡುವುದು ತಪ್ಪಲಿಲ್ಲ.ಎಂಬ ದುಸ್ಥಿತಿ ಕಾಂಗ್ರೆಸ್ ಚುನಾಯಿತ ಪ್ರತಿನಿಧಿಗಳದ್ದು. ಜಿಲ್ಲೆಗೆ ಯಾವುದೇ ಕಾರಣಕ್ಕೂ ಮಂತ್ರಿಗಿರಿ ಸಿಗುವುದಿಲ್ಲ ಎಂಬುದಕ್ಕೆ ಕಾರಣ ನೀಡಿ...

Related Articles

ಆಗಸ್ಟ್ 21ರಿಂದ 25ರವರೆಗೆ ವಿಶ್ವ ಬಂಧುತ್ವದ ರಕ್ತದಾನ ಮಹಾ ಅಭಿಯಾನ

ಚಿಕ್ಕಮಗಳೂರು: ಬ್ರಹ್ಮಾಕುಮಾರೀಸ್ ಸಂಸ್ಥೆಯ ಪೂರ್ವ ಮುಖ್ಯ ಆಡಳಿತಾಧಿಕಾರಿಣಿ ರಾಜಯೋಗಿನಿ ಡಾ. ದಾದೀ ಪ್ರಕಾಶಮಣೀಜೀಯವರ 19ನೇ ಪುಣ್ಯಸ್ಮೃತಿ...

ಆಗಸ್ಟ್ 25ರಂದು ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಚಿಕ್ಕಮಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 25ರಂದು ರಾಜ್ಯದ...

ಸೆಪ್ಟೆಂಬರ್ 10ಕ್ಕೆ ಟಿ.ಡಿ. ರಾಜೇಗೌಡ-ಡಿ.ಎನ್. ಜೀವರಾಜ್ ಅಂತಿಮ ವಿಚಾರಣೆ

ಚಿಕ್ಕಮಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ...

ಮಾಲಿನ್ಯದಿಂದ ನಾರುತ್ತಿರುವ ಮುಳ್ಳಯ್ಯನಗಿರಿ–ಸೀತಾಳಯ್ಯನಗಿರಿ

ಚಿಕ್ಕಮಗಳೂರು: ಪುರಾಣ ಪ್ರಸಿದ್ಧ, ಧಾರ್ಮಿಕ ಹಾಗೂ ಪರಿಸರದ ದೃಷ್ಟಿಯಿಂದ ಮಹತ್ವ ಪಡೆದಿರುವ ಮುಳ್ಳಯ್ಯನಗಿರಿ–ಸೀತಾಳಯ್ಯನಗಿರಿ ಪ್ರದೇಶ ಪ್ರವಾಸಿಗರ...