ತರೀಕೆರೆ: ತೋಟದ ಬೇಲಿ ಕಟಾವು ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಾಚ್ಮನ್ ಮೃತಪಟ್ಟಿರುವ ಘಟನೆ ತರೀಕೆರೆ ಪಟ್ಟಣದ ಗಾಳಿಹಳ್ಳಿ ಕ್ರಾಸ್ನಲ್ಲಿ ಆ.20ರಂದು ನಡೆದಿದೆ.
ಮೃತರನ್ನು ಲಿಂಗದಹಳ್ಳಿ ಕಾವಲ್ ಆರ್.ಸಿ. ಕಾಲೋನಿ ನಿವಾಸಿ ಪ್ರಸನ್ನ ಎಂದು ಗುರುತಿಸಲಾಗಿದೆ. ಅವರು ಕಳೆದ 17 ವರ್ಷಗಳಿಂದ ಗಾಳಿಹಳ್ಳಿ ಕ್ರಾಸ್ನಲ್ಲಿರುವ ವಿಕಾಸನ ಸಂಸ್ಥೆಯಲ್ಲಿ ವಾಚ್ಮನ್ ಆಗಿ ಕೆಲಸ ಮಾಡುತ್ತಿದ್ದರು.
ಆ.20ರಂದು ಬೆಳಗ್ಗೆ ಎಂದಿನಂತೆ ಕೆಲಸಕ್ಕೆ ತೆರಳಿದ್ದ ಪ್ರಸನ್ನ ಅವರು ಸಂಜೆ ವಿಕಾಸನ ಸಂಸ್ಥೆಯ ಮುಖ್ಯಸ್ಥ ವರ್ಗಿಸ್ ಅವರ ಮನೆಯ ಸಮೀಪದ ತೋಟದ ಬೇಲಿ ಕಟಾವು ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಕ್ಕೆ ಒಳಗಾಗಿ ನೆಲಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.
ವರ್ಗಿಸ್ ಅವರು ಪ್ರಸನ್ನ ಅವರ ಕುಟುಂಬದವರಿಗೆ ದೂರವಾಣಿ ಮೂಲಕ ವಿಷಯ ತಿಳಿಸಿದ್ದು, ಬಳಿಕ ಪುತ್ರರಾದ ಸಾಗರ್ ಮತ್ತು ಕಾರ್ತಿಕ್ ಸ್ಥಳಕ್ಕೆ ತೆರಳಿ ತಂದೆಯನ್ನು ಅಂಬ್ಯುಲೆನ್ಸ್ ಮೂಲಕ ತರೀಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಪರಿಶೀಲಿಸಿದ ವೈದ್ಯರು ಪ್ರಸನ್ನ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ದೂರಿನಲ್ಲಿ, ತೋಟದ ಬೇಲಿಯ ಮೇಲೆಯೇ ವಿದ್ಯುತ್ ಮುಖ್ಯ ತಂತಿ ಹಾದು ಹೋಗಿರುವುದು ಗೊತ್ತಿದ್ದರೂ, ಯಾವುದೇ ಮುಂಜಾಗ್ರತಾ ಹಾಗೂ ಸುರಕ್ಷತಾ ಕ್ರಮ ಕೈಗೊಳ್ಳದೆ ಬೇಲಿ ಕಟಾವು ಕೆಲಸ ಮಾಡಿಸಿದ್ದರಿಂದ ವಿದ್ಯುತ್ ಸ್ಪರ್ಶಿಸಿ ತಂದೆ ಮೃತಪಟ್ಟಿದ್ದಾರೆ ಎಂದು ಮೃತರ ಪುತ್ರ ಆರೋಪಿಸಿದ್ದಾರೆ.
ಈ ಸಂಬಂಧ ಪ್ರಸನ್ನ ಅವರ ಸಾವಿಗೆ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಿ ವರ್ಗಿಸ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿದೆ. ತರೀಕೆರೆ ಪೊಲೀಸ್ ಠಾಣೆಯಲ್ಲಿ ಠಾಣಾ ಮೊ.ನಂ. 211/2026ರಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Watchman dies of electrocution while trimming fence
ಚಿಕ್ಕಮಗಳೂರು: ಸ್ವಾತಂತ್ರ್ಯದ ೮೦ನೇ ವರ್ಷದ ಸಂಭ್ರಮ ಕೇವಲ ಹಬ್ಬದ ಆಚರಣೆಯಾಗದೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಕೃತಜ್ಞತೆ ಸಲ್ಲಿಸುವ, ದೇಶದ ಸಾಧನೆಗಳನ್ನು ಸ್ಮರಿಸುವ, ಸ್ವಾತಂತ್ರ್ಯದ ಮೌಲ್ಯಗಳನ್ನು ಅರಿತು ಉತ್ತಮ ಭವಿಷ್ಯ ರೂಪಿಸಿಕೊಳ್ಳುವ ಸಂಕಲ್ಪದ ದಿನವಾಗಬೇಕು...
ByN Raju Chief EditorAugust 15, 2026ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮುಂಗಾರು ವೈಫಲ್ಯದಿಂದ ಉಂಟಾಗಿರುವ ಬರ ಪರಿಸ್ಥಿತಿಯನ್ನು ತಕ್ಷಣವೇ ಬರಗಾಲವೆಂದು ಘೋಷಿಸಿ ಪರಿಹಾರ ಕ್ರಮ ಕೈಗೊಳ್ಳಬೇಕು. ಮಲೆನಾಡಿನ 137 ಗ್ರಾಮಗಳಿಗೆ ಕಂಟಕವಾಗಿರುವ ಕಸ್ತೂರಿ ರಂಗನ್ ವರದಿಯನ್ನು ಪುನಃ ಪರಿಶೀಲಿಸಿ ಜನವಸತಿ...
ByN Raju Chief EditorAugust 15, 2026ಚಿಕ್ಕಮಗಳೂರು: ಕಳೆದ ನಾಲ್ಕು ವರೆ ವರ್ಷಗಳ ಹಿಂದೆಯೇ ವಿಧಾನ ಪರಿಷತ್ ಸದಸ್ಯರಾಗ ಬೇಕಿದ್ದ ಗಾಯಿತ್ರಿ ಶಾಂತೇಗೌಡ...
ByN Raju Chief EditorAugust 23, 2026ಚಿಕ್ಕಮಗಳೂರು: ಬಿಜೆಪಿ ಸರ್ಕಾರದಲ್ಲಿ ಶಾಸಕರ ನಡುವೆ ಕ್ಷೇತ್ರದ ಅಭಿವೃದ್ಧಿಗೆ ಪೈಪೋಟಿ ನಡೆದರೆ, ಕಾಂಗ್ರೆಸ್ ಆಡಳಿತದಲ್ಲಿ ಭ್ರಷ್ಟಾಚಾರ,ಲೂಟಿಗಾಗಿ...
ByN Raju Chief EditorAugust 23, 2026ಚಿಕ್ಕಮಗಳೂರು: ಸಹಕಾರಿ ಚಳುವಳಿಯ ಮೂಲತತ್ವವೇ ಸ್ವಾವಲಂಬನೆ, ಪರಸ್ಪರ ಸಹ ಕಾರ, ಸಮಾನ ಅವಕಾಶ ಹಾಗೂ ಸಾಮಾಜಿಕ...
ByN Raju Chief EditorAugust 23, 2026ಶೃಂಗೇರಿ: ಪರವಾನಗಿ ಇಲ್ಲದೆ 407 ಲಾರಿಯಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಆರೋಪದ ಮೇಲೆ ಶೃಂಗೇರಿ ಪೊಲೀಸರು...
ByN Raju Chief EditorAugust 22, 2026Excepteur sint occaecat cupidatat non proident
Leave a comment