Home namma chikmagalur chikamagalur ಅಕ್ರಮ ಮರಳು ಸಾಗಾಟ: 407 ಲಾರಿ ವಶ, ಚಾಲಕ ಪೊಲೀಸ್ ವಶಕ್ಕೆ
chikamagalurCrime NewsHomeLatest Newsnamma chikmagalur

ಅಕ್ರಮ ಮರಳು ಸಾಗಾಟ: 407 ಲಾರಿ ವಶ, ಚಾಲಕ ಪೊಲೀಸ್ ವಶಕ್ಕೆ

Share
Share

ಶೃಂಗೇರಿ: ಪರವಾನಗಿ ಇಲ್ಲದೆ 407 ಲಾರಿಯಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಆರೋಪದ ಮೇಲೆ ಶೃಂಗೇರಿ ಪೊಲೀಸರು ಲಾರಿಯನ್ನು ಮರಳು ಸಮೇತ ವಶಪಡಿಸಿಕೊಂಡು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಆ.21ರಂದು ಸಂಜೆ ಶೃಂಗೇರಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಅಭಿಷೇಕ್.ಕೆ. ಅವರು ನಗರ ಗಸ್ತಿನಲ್ಲಿದ್ದಾಗ ಆಗುಂಬೆ ರಸ್ತೆಯಿಂದ ಶೃಂಗೇರಿ ಕಡೆಗೆ 407 ಲಾರಿಯಲ್ಲಿ ಅಕ್ರಮವಾಗಿ ಮರಳು ಸಾಗಿಸಲಾಗುತ್ತಿದೆ ಎಂಬ ಬಗ್ಗೆ ಭಾತ್ಮೀದಾರರಿಂದ ಮಾಹಿತಿ ಬಂದಿದೆ.

ಮಾಹಿತಿ ಆಧರಿಸಿ ಪೊಲೀಸ್ ಸಿಬ್ಬಂದಿ ಹಾಗೂ ಪಂಚರೊಂದಿಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಶೃಂಗೇರಿ-ಜಯಪುರ ರಾಜ್ಯ ಹೆದ್ದಾರಿ-27ರಲ್ಲಿ ಶಾರದಾ ಕಂಫರ್ಟ್ ಸಮೀಪ ಕೆಎ-18-ಎ-4964 ನೋಂದಣಿಯ ನೀಲಿ ಬಣ್ಣದ 407 ಲಾರಿಯನ್ನು ತಡೆದು ಪರಿಶೀಲಿಸಿದ್ದಾರೆ. ಲಾರಿಯ ಹಿಂಭಾಗದಲ್ಲಿ ಮರಳು ತುಂಬಿರುವುದು ಪತ್ತೆಯಾಗಿದೆ.

ಮರಳು ಸಾಗಾಟಕ್ಕೆ ಅಗತ್ಯ ಪರವಾನಗಿ ಇದೆಯೇ ಎಂದು ಚಾಲಕನನ್ನು ವಿಚಾರಿಸಿದಾಗ ಯಾವುದೇ ಪರವಾನಗಿ ಇಲ್ಲವೆಂದು ತಿಳಿಸಿದ್ದಾನೆ. ವಿಚಾರಣೆ ವೇಳೆ ಲಾರಿ ಮಾಲೀಕ ಆನೆಗುಂದ ಕುಮಾರ್ ಅವರ ಸೂಚನೆಯಂತೆ ಮೀಗಾದ ಮಾಲತಿ ಹಳ್ಳದಿಂದ ಮರಳನ್ನು ಅಕ್ರಮವಾಗಿ ತುಂಬಿಕೊಂಡು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಸಾಗಿಸುತ್ತಿದ್ದುದಾಗಿ ಚಾಲಕ ತಿಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಲಾರಿ ಚಾಲಕನನ್ನು ತಿಮ್ಮೇಶ್ (34) ಎಂದು ಗುರುತಿಸಲಾಗಿದೆ. ಪೊಲೀಸರು ಲಾರಿ ಹಾಗೂ ಅದರಲ್ಲಿದ್ದ ಮರಳನ್ನು ಪಂಚರ ಸಮಕ್ಷಮ ಮಹಜರ್ ಮೂಲಕ ಅಮಾನತುಗೊಳಿಸಿ, ಲಾರಿಯನ್ನು ಪೊಲೀಸ್ ವಸತಿ ಗೃಹದ ಆವರಣದಲ್ಲಿ ನಿಲ್ಲಿಸಿದ್ದಾರೆ. ಚಾಲಕ ತಿಮ್ಮೇಶ್‌ನನ್ನು ವಶಕ್ಕೆ ಪಡೆದು ಠಾಣೆಗೆ ಕರೆತರಲಾಗಿದೆ.

ಈ ಸಂಬಂಧ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ತಿಮ್ಮೇಶ್ ಹಾಗೂ ಮರಳನ್ನು ಅಕ್ರಮವಾಗಿ ತುಂಬಿಸಿಕೊಂಡು ಬರಲು ಸೂಚಿಸಿದ ಆರೋಪದ ಮೇರೆಗೆ ಕುಮಾರ್ ವಿರುದ್ಧ ಮುಂದಿನ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Illegal sand transportation: 407 lorries seized driver taken into police custody

Share

Leave a comment

Leave a Reply

Your email address will not be published. Required fields are marked *

Don't Miss

‘ದೇಶ ಮೊದಲು’ ಎಂಬ ಭಾವನೆಯೊಂದಿಗೆ ಕರ್ತವ್ಯ ನಿರ್ವಹಿಸಿ

ಚಿಕ್ಕಮಗಳೂರು:  ಸ್ವಾತಂತ್ರ್ಯದ ೮೦ನೇ ವರ್ಷದ ಸಂಭ್ರಮ ಕೇವಲ ಹಬ್ಬದ ಆಚರಣೆಯಾಗದೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಕೃತಜ್ಞತೆ ಸಲ್ಲಿಸುವ, ದೇಶದ ಸಾಧನೆಗಳನ್ನು ಸ್ಮರಿಸುವ, ಸ್ವಾತಂತ್ರ್ಯದ ಮೌಲ್ಯಗಳನ್ನು ಅರಿತು ಉತ್ತಮ ಭವಿಷ್ಯ ರೂಪಿಸಿಕೊಳ್ಳುವ ಸಂಕಲ್ಪದ ದಿನವಾಗಬೇಕು...

ಕಸ್ತೂರಿ ರಂಗನ್ ವರದಿ ಮರುಪರಿಶೀಲಿಸಲು ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮುಂಗಾರು ವೈಫಲ್ಯದಿಂದ ಉಂಟಾಗಿರುವ ಬರ ಪರಿಸ್ಥಿತಿಯನ್ನು ತಕ್ಷಣವೇ ಬರಗಾಲವೆಂದು ಘೋಷಿಸಿ ಪರಿಹಾರ ಕ್ರಮ ಕೈಗೊಳ್ಳಬೇಕು. ಮಲೆನಾಡಿನ 137 ಗ್ರಾಮಗಳಿಗೆ ಕಂಟಕವಾಗಿರುವ ಕಸ್ತೂರಿ ರಂಗನ್ ವರದಿಯನ್ನು ಪುನಃ ಪರಿಶೀಲಿಸಿ ಜನವಸತಿ...

Related Articles

ಅಧಿಕಾರ ಎಂಬ ಮಾಯಾ ಜಿಂಕೆ ಮರೆಯಾಗಿದ್ದು ಏಕೆ ?

ಚಿಕ್ಕಮಗಳೂರು: ಕಳೆದ ನಾಲ್ಕು ವರೆ ವರ್ಷಗಳ ಹಿಂದೆಯೇ ವಿಧಾನ ಪರಿಷತ್ ಸದಸ್ಯರಾಗ ಬೇಕಿದ್ದ ಗಾಯಿತ್ರಿ ಶಾಂತೇಗೌಡ...

ಕಾಂಗ್ರೆಸ್ ಆಡಳಿತದಲ್ಲಿ ಭ್ರಷ್ಟಾಚಾರ-ಲೂಟಿಗಾಗಿ ಪೈಪೋಟಿ

ಚಿಕ್ಕಮಗಳೂರು: ಬಿಜೆಪಿ ಸರ್ಕಾರದಲ್ಲಿ ಶಾಸಕರ ನಡುವೆ ಕ್ಷೇತ್ರದ ಅಭಿವೃದ್ಧಿಗೆ ಪೈಪೋಟಿ ನಡೆದರೆ, ಕಾಂಗ್ರೆಸ್ ಆಡಳಿತದಲ್ಲಿ ಭ್ರಷ್ಟಾಚಾರ,ಲೂಟಿಗಾಗಿ...

ಸ್ವಾವಲಂಬನೆ-ಸಮಾಜ ಅವಕಾಶವೇ ಸಹಕಾರಿ ಚಳುವಳಿ ಉದ್ದೇಶ

ಚಿಕ್ಕಮಗಳೂರು: ಸಹಕಾರಿ ಚಳುವಳಿಯ ಮೂಲತತ್ವವೇ ಸ್ವಾವಲಂಬನೆ, ಪರಸ್ಪರ ಸಹ ಕಾರ, ಸಮಾನ ಅವಕಾಶ ಹಾಗೂ ಸಾಮಾಜಿಕ...

₹1.16 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ನಗದು ಕಳವು

ಚಿಕ್ಕಮಗಳೂರು: ಮನೆಯ ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಸುಮಾರು ₹80 ಸಾವಿರ ಮೌಲ್ಯದ ಚಿನ್ನಾಭರಣ,...