Home namma chikmagalur chikamagalur ಎನ್.ಐ.ಏ ತನಿಖೆಗೆ ಹಿಂದೂ ಹಿತರಕ್ಷಣಾ ವೇದಿಕೆ ಆಗ್ರಹ
chikamagalurHomeLatest Newsnamma chikmagalur

ಎನ್.ಐ.ಏ ತನಿಖೆಗೆ ಹಿಂದೂ ಹಿತರಕ್ಷಣಾ ವೇದಿಕೆ ಆಗ್ರಹ

Share
Oplus_16908288
Share

ಚಿಕ್ಕಮಗಳೂರು: ನಗರದ ಟಿಪ್ಪುನಗರದಲ್ಲಿ ಈದ್-ಮಿಲಾದ್ ಹಿನ್ನೆಲೆಯಲ್ಲಿ ಅಳವಡಿಸಲಾಗಿದ್ದ ಟಿಪ್ಪು ಸುಲ್ತಾನ್ ಅವರ ಬೃಹತ್ ಬ್ಯಾನರ್‌ಗೆ ಪಾಕಿಸ್ತಾನಕ್ಕೆ ಸಂಬಂಧಿಸಿದ ಹಾಡು ಹಾಕಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಗೆ ವಹಿಸಬೇಕು ಹಾಗೂ UಂPಂ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಹಿಂದೂ ಹಿತರಕ್ಷಣಾ ವೇದಿಕೆ ಆಗ್ರಹಿಸಿದೆ.

ನಗರದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಆರ್.ಡಿ. ಮಹೇಂದ್ರ, ಚಿಕ್ಕಮಗಳೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ದೇಶವಿರೋಧಿ ಹಾಗೂ ಸಮಾಜಘಾತುಕ ಕೃತ್ಯಗಳು ಹೆಚ್ಚಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಹೇಳಿ ಟಿಪ್ಪುನಗರದಲ್ಲಿ ಹಾಕಲಾಗಿದ್ದ ಟಿಪ್ಪು ಸುಲ್ತಾನ್ ಅವರ ಬ್ಯಾನರ್‌ಗೆ ಪಾಕಿಸ್ತಾನಕ್ಕೆ ಸಂಬಂಧಿಸಿದ ಹಾಡನ್ನು ಹಾಕಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಈ ಕೃತ್ಯವನ್ನು ಕೇವಲ ಕಿಡಿಗೇಡಿಗಳ ಕೃತ್ಯ ಎಂದು ಪರಿಗಣಿಸದೆ ಸಮಗ್ರವಾಗಿ ತನಿಖೆ ನಡೆಸಬೇಕು. ಒಬ್ಬರು ಹಾಕಿದ ಪೋಸ್ಟ್ ಅನ್ನು ಹಲವು ಮಂದಿ ಹಂಚಿಕೊಂಡಿದ್ದು, ಲೈಕ್ ಮಾಡಿರುವುದರಿಂದ ಅವರ ಪಾತ್ರದ ಬಗ್ಗೆಯೂ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ದೇಶದ ವಿವಿಧೆಡೆ ನಡೆದಿರುವ ಭಯೋತ್ಪಾದಕ ಚಟುವಟಿಕೆಗಳಿಗೆ ಸಂಬಂಧಿಸಿದ ತನಿಖೆಗಳು ಹಾಗೂ ಬಂಧನಗಳ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ಕೇಳಿಬಂದಿರುವ ಪಾಕಿಸ್ತಾನ ಪರವಾದ ಘೋಷಣೆಗಳು ಮತ್ತು ಸಾಮಾಜಿಕ ಜಾಲತಾಣದ ಚಟುವಟಿಕೆಗಳನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣಕ್ಕೂ ದೇಶಾದ್ಯಂತ ನಡೆಯುತ್ತಿರುವ ದೇಶವಿರೋಧಿ ಚಟುವಟಿಕೆಗಳಿಗೂ ಯಾವುದೇ ಸಂಬಂಧವಿದೆಯೇ ಎಂಬುದನ್ನು ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಈ ಪ್ರಕರಣವನ್ನು UಂPಂ ಕಾಯ್ದೆಯಡಿ ದಾಖಲಿಸಿ, ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸುವಂತೆ ಹಿಂದೂ ಹಿತರಕ್ಷಣಾ ವೇದಿಕೆ ಒತ್ತಾಯಿಸುತ್ತಿದೆ ಎಂದು ತಿಳಿಸಿದರು. ಚಿಕ್ಕಮಗಳೂರಿನಲ್ಲಿ ನಡೆದಿರುವ ಪಾಕಿಸ್ತಾನ ಪರವಾದ ಕೃತ್ಯವನ್ನು ಖಂಡಿಸಿ ಹಾಗೂ ಘಟನೆಯ ಹಿನ್ನೆಲೆಯಲ್ಲಿ ಸಮಾಜದಲ್ಲಿ ಉಂಟಾಗಿರುವ ಆತಂಕದ ವಾತಾವರಣವನ್ನು ದೂರ ಮಾಡುವ ಉದ್ದೇಶದಿಂದ ಆಗಸ್ಟ್ ೨೬ರಂದು ‘ಚಿಕ್ಕಮಗಳೂರು ಚಲೋ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಶೃಂಗೇರಿ, ಕೊಪ್ಪ, ತರೀಕೆರೆ ಹಾಗೂ ಕಳಸದಿಂದ ಬೆಳಿಗ್ಗೆ ೯ ಗಂಟೆಗೆ ಪ್ರತಿಭಟನಾಕಾರರು ಹೊರಟು, ಕಡೂರು ಮತ್ತು ಮೂಡಿಗೆರೆ ಮೂಲಕ ಮಧ್ಯಾಹ್ನ ೧೨ ಗಂಟೆಗೆ ಚಿಕ್ಕಮಗಳೂರು ನಗರ ತಲುಪಲಿದ್ದಾರೆ. ಬಳಿಕ ನಗರದ ತಾಲೂಕು ಕಚೇರಿಯಿಂದ ಆಜಾದ್ ಪಾರ್ಕ್ ವೃತ್ತದವರೆಗೆ ತ್ರಿವರ್ಣ ಧ್ವಜಗಳೊಂದಿಗೆ ಮೆರವಣಿಗೆ ನಡೆಯಲಿದೆ. ಆಜಾದ್ ಪಾರ್ಕ್ ವೃತ್ತದಲ್ಲಿ ಬೃಹತ್ ರಾಷ್ಟ್ರಭಕ್ತರ ಸಭೆ ನಡೆಯಲಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಶ್ಯಾಮ್, ಸಂತೋಷ ಕೋಟ್ಯಯನ್, ಚೈತ್ರ ಗೌಡ, ರಾಜೇಂದ್ರ ಕುಮಾರ್, ರಂಜಿತ್ ಶೆಟ್ಟಿ ಹಾಗೂ ದೇವೇಂದ್ರ ಕುಮಾರ್ ಉಪಸ್ಥಿತರಿದ್ದರು.

Hindu Hitarakshan Vedike demands NIA investigation

Share

Leave a comment

Leave a Reply

Your email address will not be published. Required fields are marked *

Don't Miss

ಸೆಪ್ಟೆಂಬರ್ 10ಕ್ಕೆ ಟಿ.ಡಿ. ರಾಜೇಗೌಡ-ಡಿ.ಎನ್. ಜೀವರಾಜ್ ಅಂತಿಮ ವಿಚಾರಣೆ

ಚಿಕ್ಕಮಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 10ಕ್ಕೆ ಮುಂದೂಡಿದೆ. ​2023ರ...

ಮಾಲಿನ್ಯದಿಂದ ನಾರುತ್ತಿರುವ ಮುಳ್ಳಯ್ಯನಗಿರಿ–ಸೀತಾಳಯ್ಯನಗಿರಿ

ಚಿಕ್ಕಮಗಳೂರು: ಪುರಾಣ ಪ್ರಸಿದ್ಧ, ಧಾರ್ಮಿಕ ಹಾಗೂ ಪರಿಸರದ ದೃಷ್ಟಿಯಿಂದ ಮಹತ್ವ ಪಡೆದಿರುವ ಮುಳ್ಳಯ್ಯನಗಿರಿ–ಸೀತಾಳಯ್ಯನಗಿರಿ ಪ್ರದೇಶ ಪ್ರವಾಸಿಗರ ಅತಿಯಾದ ಹಾವಳಿಯಿಂದ ತ್ಯಾಜ್ಯಮಯವಾಗುತ್ತಿದ್ದು, ಪ್ಲಾಸ್ಟಿಕ್ ಮಾಲಿನ್ಯದಿಂದ ಗಿರಿ ಪ್ರದೇಶದ ನೈಸರ್ಗಿಕ ಸೌಂದರ್ಯಕ್ಕೆ ಧಕ್ಕೆ ಉಂಟಾಗಿದೆ....

Related Articles

ಸೀತಾಪುರದಲ್ಲಿ ಅಕ್ರಮ ಇಸ್ಪೀಟ್ ಜೂಜಾಟದಲ್ಲಿ ನಾಲ್ವರ ಬಂಧನ

ಕಡೂರು: ತಾಲೂಕಿನ ಯಗಟಿ ಪೊಲೀಸ್ ಠಾಣಾ ವ್ಯಾಪ್ತಿಯ ಸೀತಾಪುರ ಗ್ರಾಮದ ಶಿವಗನಾಯ್ಕ ಅವರ ತೋಟದಲ್ಲಿ ಅಕ್ರಮವಾಗಿ...

ತರೀಕೆರೆಯಲ್ಲಿ ಅಪಾಚಿ ಬೈಕ್ ಕಳವು

ತರೀಕೆರೆ: ಪಟ್ಟಣದ ಎಂಎಸ್‌ಐಎಲ್ ಅಂಗಡಿ ಮುಂಭಾಗ ನಿಲ್ಲಿಸಿದ್ದ ಅಪಾಚಿ ಬೈಕ್ ಕಳುವಾಗಿರುವ ಕುರಿತು ತರೀಕೆರೆ ಪೊಲೀಸ್...

ಬಿಜೆಪಿ-ಕಾಂಗ್ರೆಸ್‌ನ 200ಕ್ಕೂ ಹೆಚ್ಚು ಕಾರ್ಯಕರ್ತರು ಜೆಡಿಎಸ್‌ಗೆ ಸೇರ್ಪಡೆ

ಚಿಕ್ಕಮಗಳೂರು: ಚಿಕ್ಕಮಗಳೂರು ಹಾಗೂ ಮೂಡಿಗೆರೆ ಭಾಗದ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಪ್ರಮುಖ ಮುಖಂಡರು ಹಾಗೂ...

ಸಾವಿರಾರು ಮಂದಿಯಿಂದ ಬೃಹತ್ ಈದ್‌ಮಿಲಾದ್ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಪೈಗಂಬರ್ ೧೫೦೧ನೇ ಜನ್ಮದಿನದ ಅಂಗವಾಗಿ ಆಚರಿಸಲಾದ ಈದ್‌ಮಿಲಾದ್ ಹಬ್ಬದ ಪ್ರಯುಕ್ತ ನಗರದಲ್ಲಿ...