Home namma chikmagalur chikamagalur ಆರನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಎಐಟಿಯುಸಿ ಬೃಹತ್ ಪ್ರತಿಭಟನೆ
chikamagalurHomeLatest Newsnamma chikmagalur

ಆರನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಎಐಟಿಯುಸಿ ಬೃಹತ್ ಪ್ರತಿಭಟನೆ

Share
Share

ಚಿಕ್ಕಮಗಳೂರು:  ಆರನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯ ರು ಮತ್ತು ಸಹಾಯಕಿಯರ ಫೆಡೆರೇಷನ್‌ನ ಜಿಲ್ಲಾ ಘಟಕವು ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ನೂರಾ ರು ಮಹಿಳೆಯರು ಮಂಗಳವಾರ ಪ್ರತಿಭಟಿಸುವ ಮೂಲಕ ಭರವಸೆ ಈಡೇರಿಕೆಗೆ ಒತ್ತಾಯಿಸಿದರು.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಎಐಟಿಯುಸಿ ರಾಜ್ಯಾಧ್ಯಕ್ಷ ಬಿ.ಅಮ್ಜದ್ ರಾಜ್ಯಸರ್ಕಾರ ಆರನೇ ಗ್ಯಾರಂಟಿಯನ್ನು ಚುನಾವಣಾ ಪ್ರಣಾಳಿಕೆಯ ಭರವಸೆಯಮತೆ ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿ ಕ ರೂ.೧೫ ಸಾವಿರ ರೂ. ಹಾಗೂ ಸಹಾಯಕಿಯರಿಗೆ ೧೦ ಸಾವಿರ ರೂ. ಗೌರವಧನ ಕೂಡಲೇ ಜಾರಿಗೊಳಿ ಸಬೇಕು ಎಂದು ಒತ್ತಾಯಿಸಿದರು.

ಅಂಗನವಾಡಿ ಕೇಂದ್ರಗಳ ಕೆಲಸಗಳ ಜವಾಬ್ದಾರಿಯೊಂದಿಗೆ ಹೆಚ್ಚುವರಿಯಾಗಿ ಹಾಗೂ ಬಲವಂತವಾ ಗಿ ಬಿಎಲ್‌ಓ ಜವಾಬ್ದಾರಿ ಹೊರೆಸುತ್ತಿರುವುದನ್ನು ನಿಲ್ಲಿಸಬೇಕು ಹಾಗೂ ಬಿಎಲ್‌ಓ ಜವಾಬ್ದಾರಿ ನಿರಾಕರಿಸು ವ ಕಾರ್ಯಕರ್ತೆಯರ ವಿರುದ್ಧ ಕ್ರಮ ಜರುಗಿಸಿ ಅಮಾನತ್ತುಗೊಳಿಸುವುದನ್ನು ತಡೆಗಟ್ಟಬೇಕು ಎಂದರು.

ಎಸ್‌ಐಆರ್ ಸಮೀಕ್ಷೆ ಮಾಡುವವರಿಗೆ ಕಾರ್ಯಕರ್ತೆಯರಿಗೆ ಗೌರವ ಧನ ಹೆಚ್ಚಳ ಜೊತೆಗೆ ಸಮೀಕ್ಷೆ ಪೂರ್ಣವಾಗುವುದರೊಳಗೆ ಖಾತೆಗೆ ಹಣ ಸಂದಾಯಿಸಬೇಕು. ಸಮೀಕ್ಷೆ ಸಮಯದಲ್ಲಿ ಕಾರ್ಯಕರ್ತೆಯ ರು ಅನಾರೋಗ್ಯದಿಂದ ಆಸ್ಪತ್ರೆಗೆ ಸೇರಿದವರಿಗೆ ವೈದ್ಯಕೀಯ ವೆಚ್ಚವು ಸರ್ಕಾರವೇ ಭರಿಸಬೇಕು ಅಥವಾ ಮೃ ತರಾದವರಿಗೆ ಕನಿಷ್ಟ ೩೦ ಲಕ್ಷ ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದರು.

ಎಐಟಿಯುಸಿ ಜಿಲ್ಲಾಧ್ಯಕ್ಷೆ ಗ್ರೇಟಾ ಫರ್ನಾಂಡೀಸ್ ಮಾತನಾಡಿ ಆಂಗ್ಲಭಾಷೆ ಅಭ್ಯಾಸವಿಲ್ಲದ ಮತ್ತು ಮೊಬೈಲ್‌ನಲ್ಲಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲದ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ತಂತ್ರ ಜ್ಞಾನ ಅನುಭವವುಳ್ಳ ಓರ್ವರನ್ನು ನೇಮಿಸಬೇಕು. ೨೦೦೨ರ ಮಾಹಿತಿ ಸಿಗದಿರುವವರೆಗೆ ದೃಢೀಕೃತ ಅಂಚೆ ಮೂಲಕ ಅವರ ವಿಳಾಸಕ್ಕೆ ಕಳುಹಿಸಬೇಕು ಎಂದು ಆಗ್ರಹಿಸಿದರು.

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಡಿಎ ರೂ.೩೦ ರೂ.ಗಳು ಬೆಲೆ ಏರಿಕೆಗೆ ಅನುಗುಣವಾಗಿ ಹೆಚ್ಚಿಸಬೇಕು. ಅಲ್ಲದೇ ನಗರ ಪ್ರದೇಶ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸುವವರಿಗೂ ವಿಸ್ತರಿಸ ಬೇಕು. ಮಾತೃವಂದನ, ಭಾಗ್ಯಲಕ್ಷ್ಮೀ ಪ್ರೋತ್ಸಾಹ ಧನ ಬಿಡುಗಡೆಗೊಳಿಸಬೇಕು ಎಂದು ತಿಳಿಸಿದರು.

ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಷ್ಪ ಬಸವರಾಜ್ ಮಾತನಾಡಿ ಕಾರ್ಯಕರ್ತೆಯರ ಪ್ರಭಾರ ಮಾಸಿಕ ಭತ್ಯೆ ಹೆಚ್ಚಿಸಬೇಕು. ಮೊಟ್ಟೆಯ ದರ ಏರುಪೇರಾಗುತ್ತಿದ್ದು ಮಾರುಕಟ್ಟೆ ದರದ ಹೆಚ್ಚಳಕ್ಕೆ ಅನುಗುಣವಾಗಿ ಮೊಟ್ಟೆ ಹಣವನ್ನು ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲೆಯ ಸುಮಾರು ೫೦೦ ಕ್ಕೂ ಹೆಚ್ಚು ಕಾರ್ಯಕರ್ತೆರು, ಸಹಾಯಕಿಯರು ಭಾಗಿ ಯಾಗಿದ್ದರು. ಈ ಸಂದರ್ಭದಲ್ಲಿ ಎಐಟಿಯುಸಿ ಅಜ್ಜಂಪುರ ತಾಲ್ಲೂಕು ಅಧ್ಯಕ್ಷೆ ಕೆ.ಸಿ.ವಿಜಯಕುಮಾರಿ, ವಿವಿ ಧ ತಾಲ್ಲೂಕು ಆಧ್ಯಕ್ಷರಾದ ಕಲಾ, ಪಾರ್ವತಿ, ಶೈಲಾ ಬಸವರಾಜ್, ಕೆ.ಆರ್.ಶೈಲಾ, ಅನಿತಾ ಪೆರೇರಾ ಇದ್ದರು

AITUC holds massive protest demanding implementation of Sixth Guarantee

Share

Leave a comment

Leave a Reply

Your email address will not be published. Required fields are marked *

Don't Miss

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ ಆರ್‌ಸಿಸಿ ಬಾಕ್ಸ್ ಕಾಮಗಾರಿಗೆ ಸಂಬಂಧಿಸಿದಂತೆ ಲೈನ್ ಬ್ಲಾಕ್ ಹಾಗೂ ಪವರ್ ಬ್ಲಾಕ್ ಕೈಗೊಳ್ಳುತ್ತಿರುವುದರಿಂದ ಚಿಕ್ಕಮಗಳೂರು...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಆಘಾತಕಾರಿ ಘಟನೆ ತರೀಕೆರೆ ತಾಲೂಕಿನ ಲಿಂಗದಹಳ್ಳಿ ಪೊಲೀಸ್ ಠಾಣಾ...

Related Articles

ಎನ್.ಐ.ಏ ತನಿಖೆಗೆ ಹಿಂದೂ ಹಿತರಕ್ಷಣಾ ವೇದಿಕೆ ಆಗ್ರಹ

ಚಿಕ್ಕಮಗಳೂರು: ನಗರದ ಟಿಪ್ಪುನಗರದಲ್ಲಿ ಈದ್-ಮಿಲಾದ್ ಹಿನ್ನೆಲೆಯಲ್ಲಿ ಅಳವಡಿಸಲಾಗಿದ್ದ ಟಿಪ್ಪು ಸುಲ್ತಾನ್ ಅವರ ಬೃಹತ್ ಬ್ಯಾನರ್‌ಗೆ ಪಾಕಿಸ್ತಾನಕ್ಕೆ...

ರಾಜ್ಯಾದ್ಯಂತ ಆಗಸ್ಟ್ 26 ರಿಂದ ಸೀರತ್ ಅಭಿಯಾನ

ಚಿಕ್ಕಮಗಳೂರು: ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ವತಿಯಿಂದ ಪ್ರವಾದಿ ಮುಹಮ್ಮದ್(ಸ) ಅವರ ಜನ್ಮದಿನದ ಅಂಗವಾಗಿ ಆಗಸ್ಟ್...

3 ಟನ್ ಕಬ್ಬಿಣದ ಸರಳು ಕಳವು

ಚಿಕ್ಕಮಗಳೂರು: ನಿರ್ಮಾಣ ಹಂತದಲ್ಲಿದ್ದ ಅಂಬೇಡ್ಕರ್ ವಸತಿ ನಿಲಯ ಕಟ್ಟಡ ಕಾಮಗಾರಿಗೆ ಸಂಗ್ರಹಿಸಿಟ್ಟಿದ್ದ ಸುಮಾರು 3 ಟನ್...

ಎಪಿಕೆ ಫೈಲ್ ಡೌನ್‌ಲೋಡ್ – ಖಾತೆಯಿಂದ ₹1.27 ಲಕ್ಷ ವಂಚನೆ

ಚಿಕ್ಕಮಗಳೂರು: ಮೊಬೈಲ್‌ಗೆ ಅಪರಿಚಿತ ಎಪಿಕೆ (APK) ಫೈಲ್ ಡೌನ್‌ಲೋಡ್ ಆಗುವ ಮೂಲಕ ವೈಯಕ್ತಿಕ ಬ್ಯಾಂಕಿಂಗ್ ವಿವರಗಳನ್ನು...