Home namma chikmagalur chikamagalur ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶ ವಿಗ್ರಹ ಬಳಸದಿರಲು ಡಿಸಿ ಸೂಚನೆ
chikamagalurHomeLatest Newsnamma chikmagalur

ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶ ವಿಗ್ರಹ ಬಳಸದಿರಲು ಡಿಸಿ ಸೂಚನೆ

Share
Share

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಗಣೇಶ ವಿಗ್ರಹಗಳ ತಯಾರಿಕೆ, ಮಾರಾಟ, ಸಂಗ್ರಹಣೆ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಸಂಜೆ ೨೦೨೬ನೇ ಸಾಲಿನ ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಮತ್ತು ರಾಸಾಯನಿಕ ಬಣ್ಣ ಬಳಸಿದ ಗಣೇಶ ಮೂರ್ತಿಗಳ ತಯಾರಿಕೆ, ಸಂಗ್ರಹಣೆ, ಮಾರಾಟ, ಬಳಕೆ ಮತ್ತು ವಿಸರ್ಜನೆ ಹಾಗೂ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಉತ್ತೇಜಿಸುವ ಸಂಬಂಧ ಅನುಸರಿಸಬೇಕಾದ ಕ್ರಮಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ವಿಗ್ರಹಗಳನ್ನು ಮಾರಾಟ ಮಾಡಲು ಅವಕಾಶವಿಲ್ಲ. ಇದು ಕಾನೂನು ಬಾಹಿರ. ಅಧಿಕಾರಿಗಳು ನಗರದಾದ್ಯಂತ ತಪಾಸಣೆ ನಡೆಸಿ ಅಂತಹ ವಿಗ್ರಹಗಳು ಪತ್ತೆಯಾದಲ್ಲಿ ತಕ್ಷಣ ವಶಪಡಿಸಿಕೊಳ್ಳಬೇಕು. ಮತ್ತು ಮಾರಾಟಗಾರರಿಗೆ ದಂಡ ವಿಧಿಸಬೇಕು. ಗಣಪತಿ ವಿಗ್ರಹ ತಯಾರಕರು ಮಣ್ಣಿನ ಗಣಪತಿಗಳನ್ನು ಮಾತ್ರ ತಯಾರಿಸಬೇಕು ಎಂದರು.

ಹಬ್ಬ ಆಚರಿಸುವುದು ನಮ್ಮ ಸಂಸ್ಕೃತಿಯ ಹೆಮ್ಮೆ. ಆದರೆ ಅದು ಪರಿಸರ ಸ್ನೇಹಿಯಾಗಿರಬೇಕು. ಮಣ್ಣಿನ ನೈಸರ್ಗಿಕ ಬಣ್ಣಗಳಿಂದ ಮಾಡಿದ, ಸುಲಭವಾಗಿ ನೀರಿನಲ್ಲಿ ಕರಗುವ ಗಣೇಶನ ವಿಗ್ರಹಗಳನ್ನೇ ಪೂಜಿಸಿ ಈಗಾಗಲೇ ಪರಿಸರ ಸ್ನೇಹಿ ಗಣೇಶನಿಗೆ ಆದ್ಯತೆ ನೀಡುತ್ತಿರುವುದು ಅತ್ಯಂತ ಶ್ಲಾಘನೀಯ ವಿಷಯವಾಗಿದೆ. ನಮ್ಮ ಹಬ್ಬ, ನಮ್ಮ ಪರಿಸರ ನಮ್ಮ ಜವಾಬ್ದಾರಿ, ಜಿಲ್ಲಾಡಳಿತದ ಈ ಕಾರ್ಯವು ಸಾರ್ವಜನಿಕರ ಸಹಕಾರವಿಲ್ಲದೆ ಸಂಪೂರ್ಣ ಯಶಸ್ವಿಯಾಗಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಜಿಲ್ಲಾಡಳಿತವು ಪೊಲೀಸ್ ಇಲಾಖೆ, ಸ್ಥಳೀಯ ಸಂಸ್ಥೆಗಳು ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಯ ಅನಿರೀಕ್ಷಿತ ಭೇಟಿಯ ಮೂಲಕ ಜಿಲ್ಲೆಯಾದ್ಯಂತ ಕಾರ್ಯಾಚರಣೆ ನಡೆಸಿ ಪಿಒಪಿ ವಿಗ್ರಹಗಳ ಬಳಕೆಯನ್ನು ತಡೆಗಟ್ಟಲು ಕ್ರಮ ವಹಿಸಬೇಕು ಎಂದು ಹೇಳಿದರು.

ಸಾರ್ವಜನಿಕರು ಮಣ್ಣಿನ ಗಣಪತಿಯನ್ನು ಪೂಜಿಸುವ ಮೂಲಕ ಪರಿಸರ ಸ್ನೇಹಿ ಗಣೇಶ ಚತುರ್ಥಿಯನ್ನು ಆಚರಿಸಬೇಕು. ನೆಲ, ಜಲ, ವಾಯು ಸೇರಿದಂತೆ ನಮ್ಮ ಪರಿಸರವನ್ನು ಕಾಪಾಡಬೇಕೆಂದು ಮತ್ತು ಜಿಲ್ಲಾಡಳಿತ, ನಗರ ಸ್ಥಳೀಯ ಸಂಸ್ಥೆಗಳು ನೀಡುವ ನಿರ್ದೇಶನವನ್ನು ಪಾಲಿಸಬೇಕೆಂದು ಅವರು ತಿಳಿಸಿದರು.

ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆಯ ಕಾಲಕ್ಕೆ ಮೆರವಣಿಗೆಯ ಮಾರ್ಗವನ್ನು ಮುಂಚಿತವಾಗಿ ಪೊಲೀಸ್ ಠಾಣೆಗೆ ತಿಳಿಸುವುದು ಮತ್ತು ಮಾರ್ಗ ಬದಲಾವಣೆ ಮಾಡುವುದಿದ್ದಲ್ಲಿ ಕೂಡಲೇ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆಯ ಕಾಲಕ್ಕೆ ಸಾರ್ವಜನಿಕರು ಹಾಗೂ ಸಂಚಾರಕ್ಕೆ ಅಡೆತಡೆಯಾಗದಂತೆ ನೋಡಿಕೊಳ್ಳುವುದು ಅಗತ್ಯ ಎಂದ ಅವರು, ನಮ್ಮ ಪೂಜೆ ಮುಂದಿನ ಪೀಳಿಗೆಗೆ ಶಾಪವಾಗಬಾರದು. ಆಚರಣೆಗಳ ಪರಿಣಾಮದಿಂದಾಗಿ ಆರೋಗ್ಯ ಹಾಳಾಗದಂತೆ ಕಾಪಾಡಿಕೊಳ್ಳುವುದು ನಮ್ಮೆಲ್ಲರ ಹೊಣೆ. ಈ ನಿಟ್ಟಿನಲ್ಲಿ ಎಲ್ಲರೂ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸುವಂತೆ ತಿಳಿಸಿದರು.

ಸಾಂಪ್ರದಾಯಿಕವಾಗಿ ತಯಾರಿಸುವ ಮಣ್ಣಿನ ಗಣೇಶ ಮೂರ್ತಿಗಳನ್ನು ಮಾಡಿ, ಪೂಜಿಸಿ ಮತ್ತು ಮೂರ್ತಿ ವಿಸರ್ಜನೆಯನ್ನು ಮನೆಯಲ್ಲಿ ಒಂದು ಬಕೆಟ್ ನೀರಿನಲ್ಲಿ ವಿಸರ್ಜನೆ ಮಾಡುವ ಬಗ್ಗೆ ಹಾಗೂ ಆ ಮಣ್ಣಿನಿಂದ ಗಿಡಗಳನ್ನು, ಸಸಿಗಳನ್ನು ಬೆಳೆಸುವುದರ ಕುರಿತು ಜನಸಾಮಾನ್ಯರಿಗೆ ಅರಿವು ಮೂಡಿಸಬೇಕು ಎಂದು ಹೇಳಿದರು.

ಬೇರೆ ಜಿಲ್ಲೆಗಳಿಂದ ನಮ್ಮ ಜಿಲ್ಲೆಗೆ ಪಿಒಪಿ ವಿಗ್ರಹಗಳು ಬರದಂತೆ ತಡೆಯಲು ಜಿಲ್ಲೆಯ ಗಡಿ ಭಾಗಗಳಲ್ಲಿ ಹಾಗೂ ನಗರಗಳ ಗಡಿಯಲ್ಲಿ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿ ಕಟ್ಟುನಿಟ್ಟಿನ ತಪಾಸಣೆ ನಡೆಸಬೇಕು. ನಿಯಮ ಉಲ್ಲಂಘಿಸಿ ಸಾಗಾಟ ಮಾಡುವ ವಾಹನಗಳು ಮತ್ತು ಪಿಒಪಿ ವಿಗ್ರಹಗಳನ್ನು ವಶಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಗಣೇಶ ಮೂರ್ತಿಯನ್ನು ನಗರ ಸ್ಥಳೀಯ ಸಂಸ್ಥೆಗಳು ನಿಯೋಜಿಸಿದ ಸಾರ್ವಜನಿಕ ನೀರಿನ ತೊಟ್ಟಿಯಲ್ಲಿ ಕಡ್ಡಾಯವಾಗಿ ವಿಸರ್ಜಿಸಬೇಕು. ವಿಸರ್ಜನೆ ಸಂದರ್ಭದಲ್ಲಿ ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ ಇತ್ಯಾದಿಗಳನ್ನು ಪ್ರತ್ಯೇಕಿಸಿ ಮೂರ್ತಿಯೊಂದಿಗೆ ವಿಸರ್ಜಿಸದೆ ಪ್ರತ್ಯೇಕವಾಗಿ ವಿಲೇವಾರಿ ಮಾಡಬೇಕು ಎಂದರು.

ಉತ್ಸವ ಮೂರ್ತಿ ವಿಸರ್ಜಿಸುವ ಕೆರೆ, ಕಲ್ಯಾಣಿ ಮತ್ತು ಸ್ಥಳದಲ್ಲಿ ಅಗತ್ಯ ವ್ಯವಸ್ಥೆಗಳಾದ ಬೆಳಕು, ರಕ್ಷಣೆ, ಸಹಾಯಕ ಸಿಬ್ಬಂದಿ, ಕುಡಿಯುವ ನೀರು, ಶೌಚಾಲಯ ಸಾಲಾಗಿ ಬರಲು ಬ್ಯಾರಿಕೇಡ್ ವ್ಯವಸ್ಥೆ, ರಸ್ತೆ ಸಂಚಾರ ನಿಯಂತ್ರಣ ಸೂಚನೆ ನೀಡಲು ಧ್ವನಿವರ್ಧಕ, ಆಂಬುಲೆನ್ಸ್ ಮತ್ತು ಪ್ರಥಮ ಚಿಕಿತ್ಸೆ, ದೊಡ್ಡ ಗಣಪತಿ ವಿಗ್ರಹಗಳನ್ನು ವಿಸರ್ಜಿಸಲುಸಸ ಕಲ್ಯಾಣಿಗಳಲ್ಲಿ ನೀರಿನ ವ್ಯವಸ್ಥೆ, ಬೃಹತ್ ಕ್ರೇನ್‌ಗಳು, ಕಾಲ ಕಾಲಕ್ಕೆ ಕಲ್ಯಾಣಿಯ ಸ್ವಚ್ಚತೆಗಾಗಿ ಜೆಸಿಬಿಗಳು ಹಾಗೂ ತುರ್ತು ನಿರ್ವಹಣಾ ಸುರಕ್ಷಾ ಪಡೆಗಳ ವ್ಯವಸ್ಥೆ ಕಲ್ಪಿಸುವಂತೆ ಸ್ಥಳೀಯ ಸಂಸ್ಥೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ನಂಜುಂಡೇಗೌಡ, ಎಎಸ್‌ಪಿ ಸಿ.ಟಿ.ಜಯಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಹೆಚ್.ಕೆ.ಮಂಜುನಾಥ್, ಪೌರಾಯುಕ್ತ ಬಿ.ಸಿ.ಬಸವರಾಜು, ಜಿಪಂ ಉಪ ಕಾರ್ಯದರ್ಶಿ ಪೂರ್ಣಿಮಾ ಮುಂತಾದ ಅಧಿಕಾರಿಗಳು ಹಾಜರಿದ್ದರು.

DC issues notice not to use plaster of Paris Ganesh idols

Share

Leave a comment

Leave a Reply

Your email address will not be published. Required fields are marked *

Don't Miss

ಲಾರಿ ಡಿಕ್ಕಿಗೆ ಪಶುವೈದ್ಯಕೀಯ ಇಲಾಖೆ ಸಿಬ್ಬಂದಿ ಸಾವು

ಅಜ್ಜಂಪುರ: ಕರ್ತವ್ಯಕ್ಕೆ ತೆರಳುತ್ತಿದ್ದ ಸ್ಕೂಟಿಗೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಪಶುವೈದ್ಯಕೀಯ ಇಲಾಖೆಯ ಅಟೆಂಡರ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗಿರಿಯಾಪುರದ ಜ್ಞಾನ ದೀಪ ಶಾಲೆ...

ವಿದ್ಯುತ್ ಸ್ಪರ್ಶ: ಬೇಲಿ ಕಟಾವು ಮಾಡುತ್ತಿದ್ದ ವಾಚ್‌ಮನ್ ಸಾವು

ತರೀಕೆರೆ: ತೋಟದ ಬೇಲಿ ಕಟಾವು ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಾಚ್‌ಮನ್ ಮೃತಪಟ್ಟಿರುವ ಘಟನೆ ತರೀಕೆರೆ ಪಟ್ಟಣದ ಗಾಳಿಹಳ್ಳಿ ಕ್ರಾಸ್‌ನಲ್ಲಿ ಆ.20ರಂದು ನಡೆದಿದೆ. ಮೃತರನ್ನು ಲಿಂಗದಹಳ್ಳಿ ಕಾವಲ್ ಆರ್.ಸಿ. ಕಾಲೋನಿ...

Related Articles

ಕಾಫಿನಾಡಿನಲ್ಲಿ ಎಚ್1ಎನ್1 ಪ್ರಕರಣ ಏರಿಕೆ: 24 ಮಂದಿಗೆ ಸೋಂಕು ದೃಢ

ಚಿಕ್ಕಮಗಳೂರು:  ಕಾಫಿನಾಡಿನಲ್ಲಿ ಕಳೆದೊಂದು ವಾರದಿಂದ ವೈರಲ್ ಫೀವರ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜ್ವರ, ನೆಗಡಿ, ಕೆಮ್ಮು ಹಾಗೂ...

ಉಪ ಪೊಲೀಸ್ ಠಾಣೆಗಳ ತೆರೆಯುವಂತೆ ಗೃಹ ಸಚಿವರಿಗೆ ಒತ್ತಾಯ

ಚಿಕ್ಕಮಗಳೂರು:  ಜಿಲ್ಲೆಯ ಕೆಲವು ಕಡೆ ಉಪ ಪೊಲೀಸ್ ಠಾಣೆಗಳನ್ನು ತೆರೆಯುವಂತೆ ಕಾಂಗ್ರೆಸ್ ಮುಖಂಡ ಉಪ್ಪಳ್ಳಿ ಕೆ.ಭರತ್...

ಆಲ್ದೂರಿನಲ್ಲಿ ಟೈಲ್ಸ್ ಮೇಲೆ ಜಾರಿ ಬಿದ್ದ ರೈತ ಸಾವು

ಆಲ್ದೂರು: ಅಡುಗೆ ಮನೆಯ ನೆಲದ ಮೇಲೆ ಬಿದ್ದಿದ್ದ ನೀರನ್ನು ಗಮನಿಸದೆ ಟೈಲ್ಸ್ ಮೇಲೆ ಕಾಲಿಟ್ಟು ಜಾರಿ...

ಕಲ್ಯಾಣನಗರ 5ನೇ ಕ್ರಾಸ್‌ನಲ್ಲಿ ಮಹಿಳೆಯ ಮಾಂಗಲ್ಯ ಸರ ಕಳವು

ಚಿಕ್ಕಮಗಳೂರು: ಭಜನೆ ಮುಗಿಸಿಕೊಂಡು ಸ್ನೇಹಿತೆಯೊಂದಿಗೆ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಗೃಹಿಣಿಯೊಬ್ಬರ ಕುತ್ತಿಗೆಯಿಂದ ಬೈಕ್‌ನಲ್ಲಿ ಬಂದ ಇಬ್ಬರು...