Home namma chikmagalur chikamagalur ಆಲ್ದೂರಿನಲ್ಲಿ ಟೈಲ್ಸ್ ಮೇಲೆ ಜಾರಿ ಬಿದ್ದ ರೈತ ಸಾವು
chikamagalurCrime NewsHomeLatest News

ಆಲ್ದೂರಿನಲ್ಲಿ ಟೈಲ್ಸ್ ಮೇಲೆ ಜಾರಿ ಬಿದ್ದ ರೈತ ಸಾವು

Share
Share

ಆಲ್ದೂರು: ಅಡುಗೆ ಮನೆಯ ನೆಲದ ಮೇಲೆ ಬಿದ್ದಿದ್ದ ನೀರನ್ನು ಗಮನಿಸದೆ ಟೈಲ್ಸ್ ಮೇಲೆ ಕಾಲಿಟ್ಟು ಜಾರಿ ಬಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯ ತೋರಣ ಮಾವು ಗ್ರಾಮದಲ್ಲಿ ನಡೆದಿದೆ.

ಮೃತರನ್ನು ತೋರಣ ಮಾವು ಗ್ರಾಮದ ಚಂದ್ರೇಗೌಡ ಎಂದು ಗುರುತಿಸಲಾಗಿದೆ. ಅವರ ಪತ್ನಿ ವನಜಾಕ್ಷಿ ಅವರು ನೀಡಿದ ದೂರಿನ ಆಧಾರದ ಮೇಲೆ ಆಲ್ದೂರು ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಾಗಿದೆ.

ದೂರಿನ ಪ್ರಕಾರ, ಚಂದ್ರೇಗೌಡ ಅವರು ಆಗಸ್ಟ್ 27ರಂದು ಬೆಳಗ್ಗೆ ತೋಟಕ್ಕೆ ತೆರಳಿ ಮಧ್ಯಾಹ್ನ ಸುಮಾರು 2 ಗಂಟೆಗೆ ಮನೆಗೆ ವಾಪಸ್ ಬಂದಿದ್ದರು. ಊಟ ಮಾಡಿದ ಬಳಿಕ ಸ್ನಾನ ಮಾಡಿ, ಒದ್ದೆಯಾದ ಟವಲ್‌ನ್ನು ಒಣಗಿಸಲು ಮಧ್ಯಾಹ್ನ ಸುಮಾರು 3.15ರ ವೇಳೆಗೆ ಅಡುಗೆ ಮನೆಯಲ್ಲಿದ್ದ ಒಲೆಯ ಬಳಿಗೆ ತೆರಳಿದ್ದರು.

ಅಡುಗೆ ಮನೆಯ ಟೈಲ್ಸ್ ನೆಲದ ಮೇಲೆ ನೀರು ಚೆಲ್ಲಿದ್ದುದನ್ನು ಗಮನಿಸದೆ ಅದರ ಮೇಲೆ ಕಾಲಿಟ್ಟಾಗ ಕಾಲು ಜಾರಿ ಹಿಂಭಾಗಕ್ಕೆ ಬಿದ್ದಿದ್ದಾರೆ. ಈ ವೇಳೆ ಅವರು ನೋವಿನಿಂದ ಕೂಗಿಕೊಂಡಿದ್ದು, ಮನೆಯಲ್ಲಿದ್ದ ಸೊಸೆಯರಾದ ರಶ್ಮಿ ಮತ್ತು ಸುಷ್ಮಿತಾ ಅವರು ಬಂದು ಅವರನ್ನು ಮೇಲಕ್ಕೆತ್ತಿ ಉಪಚರಿಸಿದ್ದಾರೆ.

ವಿಷಯ ತಿಳಿದು ಪುತ್ರ ಸಂತೋಷ್ ಅವರು ಸ್ಥಳಕ್ಕೆ ಬಂದು ತಂದೆಯನ್ನು ಕಾರಿನಲ್ಲಿ ಆಲ್ದೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ವೈದ್ಯರು ಸೂಚಿಸಿದ ಹಿನ್ನೆಲೆಯಲ್ಲಿ ಸಂತೋಷ್ ಹಾಗೂ ಸೊಸೆ ಸುಷ್ಮಾ ಅವರು ಆಂಬ್ಯುಲೆನ್ಸ್ ಮೂಲಕ ಚಿಕ್ಕಮಗಳೂರಿನ ಸರ್ಕಾರಿ ಮಲ್ಲೇಗೌಡ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆಸ್ಪತ್ರೆಯಲ್ಲಿ ವೈದ್ಯರು ಪರೀಕ್ಷಿಸಿದ ಬಳಿಕ ಚಂದ್ರೇಗೌಡ ಅವರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.

ಬಿದ್ದು ಉಂಟಾದ ಆಘಾತದಿಂದ ಹೃದಯಾಘಾತವಾಗಿರಬಹುದು ಅಥವಾ ಬೇರೆ ಯಾವುದಾದರೂ ಕಾರಣದಿಂದ ಮೃತಪಟ್ಟಿರಬಹುದು ಎಂದು ಕುಟುಂಬಸ್ಥರು ಶಂಕಿಸಿದ್ದು, ಸಾವಿನಲ್ಲಿ ಯಾವುದೇ ಅನುಮಾನವಿಲ್ಲ ಎಂದು ಪತ್ನಿ ವನಜಾಕ್ಷಿ ದೂರಿನಲ್ಲಿ ತಿಳಿಸಿದ್ದಾರೆ. ಮೃತರ ಅಂತ್ಯಕ್ರಿಯೆಗೆ ಅನುಮತಿ ನೀಡುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.

ದೂರಿನ ಆಧಾರದ ಮೇಲೆ ಆಲ್ದೂರು ಪೊಲೀಸ್ ಠಾಣೆಯಲ್ಲಿ ಯು.ಡಿ.ಆರ್. ಸಂಖ್ಯೆ 18/2026, ಕಲಂ 194 ಬಿಎನ್‌ಎಸ್‌ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Farmer dies after slipping on tiles in Aldur

Share

Leave a comment

Leave a Reply

Your email address will not be published. Required fields are marked *

Don't Miss

ಲಾರಿ ಡಿಕ್ಕಿಗೆ ಪಶುವೈದ್ಯಕೀಯ ಇಲಾಖೆ ಸಿಬ್ಬಂದಿ ಸಾವು

ಅಜ್ಜಂಪುರ: ಕರ್ತವ್ಯಕ್ಕೆ ತೆರಳುತ್ತಿದ್ದ ಸ್ಕೂಟಿಗೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಪಶುವೈದ್ಯಕೀಯ ಇಲಾಖೆಯ ಅಟೆಂಡರ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗಿರಿಯಾಪುರದ ಜ್ಞಾನ ದೀಪ ಶಾಲೆ...

ವಿದ್ಯುತ್ ಸ್ಪರ್ಶ: ಬೇಲಿ ಕಟಾವು ಮಾಡುತ್ತಿದ್ದ ವಾಚ್‌ಮನ್ ಸಾವು

ತರೀಕೆರೆ: ತೋಟದ ಬೇಲಿ ಕಟಾವು ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಾಚ್‌ಮನ್ ಮೃತಪಟ್ಟಿರುವ ಘಟನೆ ತರೀಕೆರೆ ಪಟ್ಟಣದ ಗಾಳಿಹಳ್ಳಿ ಕ್ರಾಸ್‌ನಲ್ಲಿ ಆ.20ರಂದು ನಡೆದಿದೆ. ಮೃತರನ್ನು ಲಿಂಗದಹಳ್ಳಿ ಕಾವಲ್ ಆರ್.ಸಿ. ಕಾಲೋನಿ...

Related Articles

ಕಾಫಿನಾಡಿನಲ್ಲಿ ಎಚ್1ಎನ್1 ಪ್ರಕರಣ ಏರಿಕೆ: 24 ಮಂದಿಗೆ ಸೋಂಕು ದೃಢ

ಚಿಕ್ಕಮಗಳೂರು:  ಕಾಫಿನಾಡಿನಲ್ಲಿ ಕಳೆದೊಂದು ವಾರದಿಂದ ವೈರಲ್ ಫೀವರ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜ್ವರ, ನೆಗಡಿ, ಕೆಮ್ಮು ಹಾಗೂ...

ಉಪ ಪೊಲೀಸ್ ಠಾಣೆಗಳ ತೆರೆಯುವಂತೆ ಗೃಹ ಸಚಿವರಿಗೆ ಒತ್ತಾಯ

ಚಿಕ್ಕಮಗಳೂರು:  ಜಿಲ್ಲೆಯ ಕೆಲವು ಕಡೆ ಉಪ ಪೊಲೀಸ್ ಠಾಣೆಗಳನ್ನು ತೆರೆಯುವಂತೆ ಕಾಂಗ್ರೆಸ್ ಮುಖಂಡ ಉಪ್ಪಳ್ಳಿ ಕೆ.ಭರತ್...

ಕಲ್ಯಾಣನಗರ 5ನೇ ಕ್ರಾಸ್‌ನಲ್ಲಿ ಮಹಿಳೆಯ ಮಾಂಗಲ್ಯ ಸರ ಕಳವು

ಚಿಕ್ಕಮಗಳೂರು: ಭಜನೆ ಮುಗಿಸಿಕೊಂಡು ಸ್ನೇಹಿತೆಯೊಂದಿಗೆ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಗೃಹಿಣಿಯೊಬ್ಬರ ಕುತ್ತಿಗೆಯಿಂದ ಬೈಕ್‌ನಲ್ಲಿ ಬಂದ ಇಬ್ಬರು...

ಕಡೂರು ತಾಲ್ಲೂಕು ಬರಪೀಡಿತ ಘೋಷಣೆಗೆ ಆಗ್ರಹಿಸಿ ಪಾದಯಾತ್ರೆ ಆರಂಭ

ಕಡೂರು: ತಾಲ್ಲೂಕನ್ನು ಬರಪೀಡಿತ ಎಂದು ಘೋಷಣೆ ಮಾಡಲು ಸರ್ಕಾರದ ಗಮನ ಸೆಳೆಯಲು ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ...