Home namma chikmagalur chikamagalur ಕಾಫಿನಾಡಿನಲ್ಲಿ ಎಚ್1ಎನ್1 ಪ್ರಕರಣ ಏರಿಕೆ: 24 ಮಂದಿಗೆ ಸೋಂಕು ದೃಢ
chikamagalurHomeLatest Newsnamma chikmagalur

ಕಾಫಿನಾಡಿನಲ್ಲಿ ಎಚ್1ಎನ್1 ಪ್ರಕರಣ ಏರಿಕೆ: 24 ಮಂದಿಗೆ ಸೋಂಕು ದೃಢ

Share
Share

ಚಿಕ್ಕಮಗಳೂರು:  ಕಾಫಿನಾಡಿನಲ್ಲಿ ಕಳೆದೊಂದು ವಾರದಿಂದ ವೈರಲ್ ಫೀವರ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜ್ವರ, ನೆಗಡಿ, ಕೆಮ್ಮು ಹಾಗೂ ಶೀತದ ಲಕ್ಷಣಗಳಿಂದ ಬಳಲುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿದೆ. ಇದರ ನಡುವೆ ಜಿಲ್ಲೆಯಲ್ಲಿ ಈವರೆಗೆ *24 ಮಂದಿಯಲ್ಲಿ ಎಚ್1ಎನ್1 (H1N1) ಸೋಂಕು ದೃಢಪಟ್ಟಿರುವುದು* ಆರೋಗ್ಯ ಇಲಾಖೆಯ ದೈನಂದಿನ ವರದಿಯಿಂದ ತಿಳಿದುಬಂದಿದೆ.

ಆಗಸ್ಟ್ 28ರ ವರದಿ ಪ್ರಕಾರ ಜಿಲ್ಲೆಯಲ್ಲಿ ಒಟ್ಟು *107 ಮಂದಿಯನ್ನು ಎಚ್1ಎನ್1 ಪರೀಕ್ಷೆಗೆ ಒಳಪಡಿಸಲಾಗಿದ್ದು, 24 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ಪೈಕಿ 20 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.* ಇಂದಿನ ದಿನ ಯಾವುದೇ ಹೊಸ ಪ್ರಕರಣ ವರದಿಯಾಗಿಲ್ಲ. ನಾಲ್ವರು ಚಿಕಿತ್ಸೆ ಅಥವಾ ನಿಗಾದಲ್ಲಿದ್ದಾರೆ.

ತಾಲೂಕುವಾರು ಅಂಕಿ-ಅಂಶಗಳ ಪ್ರಕಾರ *ಕೊಪ್ಪದಲ್ಲಿ ಅತಿ ಹೆಚ್ಚು 8 ಎಚ್1ಎನ್1 ಪ್ರಕರಣಗಳು* ಪತ್ತೆಯಾಗಿವೆ. ತಾಲೂಕಿನಲ್ಲಿ 19 ಮಂದಿಯನ್ನು ಪರೀಕ್ಷಿಸಲಾಗಿದ್ದು, ಸೋಂಕು ದೃಢಪಟ್ಟ 8 ಮಂದಿಯಲ್ಲಿ 7 ಮಂದಿ ಗುಣಮುಖರಾಗಿದ್ದಾರೆ.

*ತರೀಕೆರೆ ತಾಲೂಕಿನಲ್ಲಿ* 18 ಮಂದಿಯನ್ನು ಪರೀಕ್ಷಿಸಲಾಗಿದ್ದು, 6 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ಪೈಕಿ ಐವರು ಗುಣಮುಖರಾಗಿದ್ದಾರೆ. *ಎನ್.ಆರ್.ಪುರದಲ್ಲಿ* 27 ಮಂದಿಯನ್ನು ಪರೀಕ್ಷಿಸಲಾಗಿದ್ದು, 5 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಎಲ್ಲರೂ ಗುಣಮುಖರಾಗಿದ್ದಾರೆ.

*ಚಿಕ್ಕಮಗಳೂರು ತಾಲೂಕಿನಲ್ಲಿ* 28 ಮಂದಿಯನ್ನು ಪರೀಕ್ಷಿಸಲಾಗಿದ್ದು, ಇಬ್ಬರಲ್ಲಿ ಸೋಂಕು ದೃಢಪಟ್ಟಿದ್ದು, ಇಬ್ಬರೂ ಗುಣಮುಖರಾಗಿದ್ದಾರೆ. *ಕಡೂರಿನಲ್ಲಿ* 9 ಮಂದಿಯ ಪರೀಕ್ಷೆಯಲ್ಲಿ ಒಬ್ಬರಿಗೆ ಸೋಂಕು ಪತ್ತೆಯಾಗಿದೆ. *ಮೂಡಿಗೆರೆಯಲ್ಲಿ* ಇಬ್ಬರನ್ನು ಪರೀಕ್ಷಿಸಲಾಗಿದ್ದು, ಒಬ್ಬರಲ್ಲಿ ಸೋಂಕು ದೃಢಪಟ್ಟಿದೆ. *ಶೃಂಗೇರಿಯಲ್ಲಿ* ನಾಲ್ವರನ್ನು ಪರೀಕ್ಷಿಸಲಾಗಿದ್ದು, ಒಬ್ಬರಿಗೆ ಸೋಂಕು ಪತ್ತೆಯಾಗಿದ್ದು, ಅವರು ಗುಣಮುಖರಾಗಿದ್ದಾರೆ.

ಜಿಲ್ಲಾಸ್ಪತ್ರೆಯಲ್ಲಿ ವಿಶೇಷ ವಾರ್ಡ್

ಎಚ್1ಎನ್1 ಸೋಂಕು ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕ *ಎಚ್1ಎನ್1 ವಿಶೇಷ ವಾರ್ಡ್* ತೆರೆಯಲಾಗಿದೆ. ಜ್ವರದ ಜೊತೆಗೆ ತೀವ್ರ ಉಸಿರಾಟದ ತೊಂದರೆ ಸೇರಿದಂತೆ ಸೋಂಕಿನ ಲಕ್ಷಣಗಳೊಂದಿಗೆ ಆಸ್ಪತ್ರೆಗೆ ಬರುವವರಿಗೆ ಅಗತ್ಯ ಪರೀಕ್ಷೆ ನಡೆಸಲು ಸೂಚಿಸಲಾಗಿದೆ. ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಅಗತ್ಯ ಔಷಧಗಳ ದಾಸ್ತಾನು ಮಾಡಿಕೊಳ್ಳಲಾಗಿದೆ.

ಸದ್ಯ ಜಿಲ್ಲೆಯಲ್ಲಿ ಯಾವುದೇ ಗಂಭೀರ ಪ್ರಕರಣಗಳು ದಾಖಲಾಗಿಲ್ಲ. ಹೀಗಾಗಿ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಮಕ್ಕಳ ಬಗ್ಗೆ ಹೆಚ್ಚಿನ ಎಚ್ಚರಿಕೆ

ಮಕ್ಕಳಲ್ಲಿ ವೈರಲ್ ಸೋಂಕುಗಳು ವೇಗವಾಗಿ ಹರಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಪೋಷಕರು ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸಲಹೆ ನೀಡಿದೆ. *ಜ್ವರ, ನೆಗಡಿ ಅಥವಾ ಕೆಮ್ಮಿನ ಲಕ್ಷಣಗಳಿರುವ ಮಕ್ಕಳನ್ನು ಸಂಪೂರ್ಣ ಗುಣಮುಖರಾಗುವವರೆಗೆ ಶಾಲೆಗೆ ಕಳುಹಿಸದಂತೆ* ಸೂಚಿಸಲಾಗಿದೆ. ಪದೇಪದೇ ಶೀತ-ಜ್ವರದಿಂದ ಬಳಲುವ ಮಕ್ಕಳಿಗೆ ವೈದ್ಯರ ಸಲಹೆಯಂತೆ *ಫ್ಲೂ (ಇನ್‌ಫ್ಲುಯೆನ್ಸಾ) ಲಸಿಕೆ* ನೀಡಿಸುವುದು ಸೂಕ್ತ ಎಂದು ತಜ್ಞರು ತಿಳಿಸಿದ್ದಾರೆ.

ಮಾಸ್ಕ್, ಕೈ ಸ್ವಚ್ಛತೆಗೆ ಆದ್ಯತೆ

ಸಾರ್ವಜನಿಕರು ಮುನ್ನೆಚ್ಚರಿಕಾ ಕ್ರಮವಾಗಿ ಅಗತ್ಯವಿದ್ದಲ್ಲಿ ಮಾಸ್ಕ್ ಧರಿಸುವುದು, ನಿಯಮಿತವಾಗಿ ಸಾಬೂನಿನಿಂದ ಕೈ ತೊಳೆಯುವುದು ಹಾಗೂ ಕೆಮ್ಮುವಾಗ ಅಥವಾ ಸೀನುವಾಗ ಬಾಯಿ-ಮೂಗನ್ನು ಕರವಸ್ತ್ರದಿಂದ ಮುಚ್ಚಿಕೊಳ್ಳುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ.

ಸೋಂಕಿನ ಲಕ್ಷಣಗಳು ಕಂಡುಬಂದಲ್ಲಿ *ಸ್ವಯಂ ಚಿಕಿತ್ಸೆ ಮಾಡಿಕೊಳ್ಳದೆ, ತಕ್ಷಣ ಸಮೀಪದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರ ಸಲಹೆ ಪಡೆಯುವಂತೆ* ಸೂಚಿಸಲಾಗಿದೆ.

H1N1 cases rise in Coffee Country: 24 people test positive for the infection

 

Share

Leave a comment

Leave a Reply

Your email address will not be published. Required fields are marked *

Don't Miss

ಲಾರಿ ಡಿಕ್ಕಿಗೆ ಪಶುವೈದ್ಯಕೀಯ ಇಲಾಖೆ ಸಿಬ್ಬಂದಿ ಸಾವು

ಅಜ್ಜಂಪುರ: ಕರ್ತವ್ಯಕ್ಕೆ ತೆರಳುತ್ತಿದ್ದ ಸ್ಕೂಟಿಗೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಪಶುವೈದ್ಯಕೀಯ ಇಲಾಖೆಯ ಅಟೆಂಡರ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗಿರಿಯಾಪುರದ ಜ್ಞಾನ ದೀಪ ಶಾಲೆ...

ವಿದ್ಯುತ್ ಸ್ಪರ್ಶ: ಬೇಲಿ ಕಟಾವು ಮಾಡುತ್ತಿದ್ದ ವಾಚ್‌ಮನ್ ಸಾವು

ತರೀಕೆರೆ: ತೋಟದ ಬೇಲಿ ಕಟಾವು ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಾಚ್‌ಮನ್ ಮೃತಪಟ್ಟಿರುವ ಘಟನೆ ತರೀಕೆರೆ ಪಟ್ಟಣದ ಗಾಳಿಹಳ್ಳಿ ಕ್ರಾಸ್‌ನಲ್ಲಿ ಆ.20ರಂದು ನಡೆದಿದೆ. ಮೃತರನ್ನು ಲಿಂಗದಹಳ್ಳಿ ಕಾವಲ್ ಆರ್.ಸಿ. ಕಾಲೋನಿ...

Related Articles

ಉಪ ಪೊಲೀಸ್ ಠಾಣೆಗಳ ತೆರೆಯುವಂತೆ ಗೃಹ ಸಚಿವರಿಗೆ ಒತ್ತಾಯ

ಚಿಕ್ಕಮಗಳೂರು:  ಜಿಲ್ಲೆಯ ಕೆಲವು ಕಡೆ ಉಪ ಪೊಲೀಸ್ ಠಾಣೆಗಳನ್ನು ತೆರೆಯುವಂತೆ ಕಾಂಗ್ರೆಸ್ ಮುಖಂಡ ಉಪ್ಪಳ್ಳಿ ಕೆ.ಭರತ್...

ಆಲ್ದೂರಿನಲ್ಲಿ ಟೈಲ್ಸ್ ಮೇಲೆ ಜಾರಿ ಬಿದ್ದ ರೈತ ಸಾವು

ಆಲ್ದೂರು: ಅಡುಗೆ ಮನೆಯ ನೆಲದ ಮೇಲೆ ಬಿದ್ದಿದ್ದ ನೀರನ್ನು ಗಮನಿಸದೆ ಟೈಲ್ಸ್ ಮೇಲೆ ಕಾಲಿಟ್ಟು ಜಾರಿ...

ಕಲ್ಯಾಣನಗರ 5ನೇ ಕ್ರಾಸ್‌ನಲ್ಲಿ ಮಹಿಳೆಯ ಮಾಂಗಲ್ಯ ಸರ ಕಳವು

ಚಿಕ್ಕಮಗಳೂರು: ಭಜನೆ ಮುಗಿಸಿಕೊಂಡು ಸ್ನೇಹಿತೆಯೊಂದಿಗೆ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಗೃಹಿಣಿಯೊಬ್ಬರ ಕುತ್ತಿಗೆಯಿಂದ ಬೈಕ್‌ನಲ್ಲಿ ಬಂದ ಇಬ್ಬರು...

ಕಡೂರು ತಾಲ್ಲೂಕು ಬರಪೀಡಿತ ಘೋಷಣೆಗೆ ಆಗ್ರಹಿಸಿ ಪಾದಯಾತ್ರೆ ಆರಂಭ

ಕಡೂರು: ತಾಲ್ಲೂಕನ್ನು ಬರಪೀಡಿತ ಎಂದು ಘೋಷಣೆ ಮಾಡಲು ಸರ್ಕಾರದ ಗಮನ ಸೆಳೆಯಲು ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ...