Home namma chikmagalur chikamagalur ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ
chikamagalurHomeLatest Newsnamma chikmagalur

ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

Share
Oplus_16908288
Share

ಚಿಕ್ಕಮಗಳೂರು: ನಗರದ ಟಿಪ್ಪುನಗರದಲ್ಲಿ ಈದ್ ಮಿಲಾದ್ ಹಿನ್ನೆಲೆಯಲ್ಲಿ ಅಳವಡಿಸಲಾಗಿದ್ದ ಟಿಪ್ಪು ಸುಲ್ತಾನ್ ಅವರ ಬೃಹತ್ ಕಟೌಟ್‌ಗೆ ಪಾಕಿಸ್ತಾನ ಪರವಾದ ಹಾಡನ್ನು ಅಳವಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದನ್ನು ಖಂಡಿಸಿ, ರಾಷ್ಟ್ರ ಸುರಕ್ಷಾ ಸಮಿತಿ ವತಿಯಿಂದ ಸೋಮವಾರ ನಗರದಲ್ಲಿ ಬೃಹತ್ ಪ್ರತಿಭಟನೆ ಹಾಗೂ ತ್ರಿವರ್ಣ ಧ್ವಜದೊಂದಿಗೆ ಮೆರವಣಿಗೆ ನಡೆಸಲು ನಿರ್ಧರಿಸಲಾಗಿದೆ.

ಈ ಕುರಿತು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಮುಖಂಡರು, ಆ.24ರ ರಾತ್ರಿ ಟಿಪ್ಪುನಗರದಲ್ಲಿ ಈದ್ ಮಿಲಾದ್ ಹಿನ್ನೆಲೆಯಲ್ಲಿ ಟಿಪ್ಪು ಸುಲ್ತಾನ್ ಅವರ ಕಟೌಟ್‌ ಅಳವಡಿಸಲಾಗಿತ್ತು. ಅದಕ್ಕೆ ಪಾಕಿಸ್ತಾನಕ್ಕೆ ಸಂಬಂಧಿಸಿದ ಹಾಡನ್ನು ಅಳವಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ ಎಂದು ಆರೋಪಿಸಿದರು.

ಈ ಕೃತ್ಯವು ರಾಷ್ಟ್ರ ವಿರೋಧಿ ಮನೋಭಾವವನ್ನು ಬಿಂಬಿಸುತ್ತದೆ ಎಂದು ಆರೋಪಿಸಿದ ಅವರು, ಹಾಡನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟವರ ವಿರುದ್ಧ ಯುಎಪಿಎ ಕಾಯ್ದೆ ಹಾಗೂ ಬಿಎನ್‌ಎಸ್ ಸೆಕ್ಷನ್ 152ರಡಿ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆ 11 ಗಂಟೆಗೆ ಚಿಕ್ಕಮಗಳೂರು ತಾಲ್ಲೂಕು ಕಚೇರಿ ಆವರಣದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ. ಸಭೆಯಲ್ಲಿ ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಭಾಗವಹಿಸಿ ಮಾತನಾಡಲಿದ್ದಾರೆ ಎಂದು ತಿಳಿಸಿದರು.

ಪ್ರತಿಭಟನಾ ಸಭೆಯ ಬಳಿಕ ತಾಲ್ಲೂಕು ಕಚೇರಿಯಿಂದ ಎಂ.ಜಿ. ರಸ್ತೆ ಮಾರ್ಗವಾಗಿ ಅಜಾದ್ ಪಾರ್ಕ್‌ವರೆಗೆ ತ್ರಿವರ್ಣ ಧ್ವಜದೊಂದಿಗೆ ಮೆರವಣಿಗೆ ನಡೆಸಲಾಗುವುದು. ಜಾತಿ, ಭಾಷೆ, ಪಕ್ಷ ಹಾಗೂ ಧರ್ಮದ ಭೇದವಿಲ್ಲದೆ ಎಲ್ಲ ಭಾರತೀಯರು ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಸಮಿತಿ ಮನವಿ ಮಾಡಿದೆ.

ಕಾರ್ಯಕ್ರಮಕ್ಕೆ ಮಾಧ್ಯಮ ಪ್ರತಿನಿಧರು ಆಗಮಿಸಿ ವರದಿ ಮಾಡಬೇಕೆಂದು ಮನವಿ ಮಾಡಲಾಗಿದೆ.

ಸುದ್ದಿಗೋಷ್ಠಿಯಲ್ಲಿ ರಾಷ್ಟ್ರ ಸುರಕ್ಷಾ ಸಮಿತಿಯ ಸಂತೋಷ್ ಕೋಟ್ಯಾನ್, ಭಗವಾನ್, ಮಂಜುನಾಥ್, ಸಚಿನ್ ಹಾಗೂ ಶ್ರೀರಾಮ ಸೇನೆಯ ರಂಜಿತ್ ಶೆಟ್ಟಿ ಉಪಸ್ಥಿತರಿದ್ದರು.

Massive protest demanding action against pro-Pakistan song for Tipu cutout

Share

Leave a comment

Leave a Reply

Your email address will not be published. Required fields are marked *

Don't Miss

ಅಧಿಕಾರ ಎಂಬ ಮಾಯಾ ಜಿಂಕೆ ಮರೆಯಾಗಿದ್ದು ಏಕೆ ?

ಚಿಕ್ಕಮಗಳೂರು: ಕಳೆದ ನಾಲ್ಕು ವರೆ ವರ್ಷಗಳ ಹಿಂದೆಯೇ ವಿಧಾನ ಪರಿಷತ್ ಸದಸ್ಯರಾಗ ಬೇಕಿದ್ದ ಗಾಯಿತ್ರಿ ಶಾಂತೇಗೌಡ ಅಧಿಕಾರ ಪಡೆಯಲು ಹೈಕೋರ್ಟ್, ಸುಪ್ರೀಂ ಕೋರ್ಟ್ ನಲ್ಲಿ ಕೋಟ್ಯಾಂತರ ಹಣ ಖರ್ಚು ಮಾಡಿ ನ್ಯಾಯಲಯದ...

ಕಾಂಗ್ರೆಸ್ ಆಡಳಿತದಲ್ಲಿ ಭ್ರಷ್ಟಾಚಾರ-ಲೂಟಿಗಾಗಿ ಪೈಪೋಟಿ

ಚಿಕ್ಕಮಗಳೂರು: ಬಿಜೆಪಿ ಸರ್ಕಾರದಲ್ಲಿ ಶಾಸಕರ ನಡುವೆ ಕ್ಷೇತ್ರದ ಅಭಿವೃದ್ಧಿಗೆ ಪೈಪೋಟಿ ನಡೆದರೆ, ಕಾಂಗ್ರೆಸ್ ಆಡಳಿತದಲ್ಲಿ ಭ್ರಷ್ಟಾಚಾರ,ಲೂಟಿಗಾಗಿ ಪೈಪೋಟಿ ನಡೆಯುತ್ತಿದೆ. ಇದೇ ಪರಿಸ್ಥಿತಿ ಮುಂದುವರೆದರೆ ರಾಜಕೀಯವಾಗಿ ರಸ್ತೆಬಿದ್ದಿರುವ ಗುಂಡಿಯಲ್ಲಿ ಮುಚ್ಚುತ್ತಾರೆಂದು ವಿಧಾನಪರಿಷತ್ ಸದಸ್ಯ...

Related Articles

ಮಲೆನಾಡಿನ ಮಡಿಲಲ್ಲಿ ಜ್ಞಾನದ ಎರಡು ದೀಪಗಳು

ಜಯಪುರದ ಶ್ರೀ ಸತ್ಯಸಾಯಿ ದಿವ್ಯ ನಿಕೇತನಂ ಮತ್ತು ಶ್ರೀ ಸತ್ಯಸಾಯಿ ಶ್ರೀ ನಿಕೇತನಂನಲ್ಲಿ ಉಚಿತ ಶಿಕ್ಷಣದೊಂದಿಗೆ...

ಕಡೂರು ತಾಲೂಕು ಸರ್ಕಾರದ ಬರಪಟ್ಟಿಗೆ ವೈ.ಎಸ್.ವಿ. ದತ್ತಾ ಆಗ್ರಹ

ಕಡೂರು: ಇಡೀ ಜಿಲ್ಲೆಯಲ್ಲಿ ಅತ್ಯಂತ ಬರಗಾಲಕ್ಕೆ ತುತ್ತಾಗಿರುವ ತಾಲೂಕು ಎಂದರೆ ಕಡೂರು ತಾಲೂಕು, ಈ ಸಾಲಿನಲ್ಲಿ...

ಕಡೂರು, ಚಿಕ್ಕಮಗಳೂರು ತಾಲ್ಲೂಕುಗಳನ್ನು ಬರಪಟ್ಟಿಗೆ ಸೇರಿಸಲು ರೈತ ಸಂಘ ಆಗ್ರಹ

ಚಿಕ್ಕಮಗಳೂರು: ರಾಜ್ಯ ಸರ್ಕಾರ ಬರಗಾಲ ಪೀಡಿತ ತಾಲ್ಲೂಕುಗಳ ಘೋಷಣೆಯಲ್ಲಿ ತಾರತಮ್ಯ ನೀತಿ ಅನುಸರಿಸಿದೆ ಎಂದು ಕರ್ನಾಟಕ...

ಬಸ್ ಹತ್ತುವ ವೇಳೆ ₹2.33 ಲಕ್ಷ ಮೌಲ್ಯದ ಚಿನ್ನದ ಬ್ರೇಸ್‌ಲೆಟ್ ಕಳವು

ಚಿಕ್ಕಮಗಳೂರು: ಬಸ್ ಹತ್ತುವ ವೇಳೆ ಉಂಟಾದ ಜನದಟ್ಟಣೆಯನ್ನೇ ದುರುಪಯೋಗಪಡಿಸಿಕೊಂಡು ವ್ಯಕ್ತಿಯೊಬ್ಬರ ಕೈಯಲ್ಲಿದ್ದ ₹2.33 ಲಕ್ಷ ಮೌಲ್ಯದ...