Home namma chikmagalur chikamagalur ಮನ್ ಕಿ ಬಾತ್‌ನಲ್ಲಿ ಚಿಕ್ಕಮಗಳೂರು ರೈತರ ಕೃಷಿ ವೈವಿಧ್ಯತೆಗೆ ಪ್ರಧಾನಿ ಮೋದಿ ಮೆಚ್ಚುಗೆ
chikamagalurHomeLatest Newsnamma chikmagalur

ಮನ್ ಕಿ ಬಾತ್‌ನಲ್ಲಿ ಚಿಕ್ಕಮಗಳೂರು ರೈತರ ಕೃಷಿ ವೈವಿಧ್ಯತೆಗೆ ಪ್ರಧಾನಿ ಮೋದಿ ಮೆಚ್ಚುಗೆ

Share
Share

ಚಿಕ್ಕಮಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮ 137ನೇ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚಿಕ್ಕಮಗಳೂರಿನ ರೈತರ ಕೃಷಿ ವೈವಿಧ್ಯತೆ ಹಾಗೂ ನಾವೀನ್ಯತೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

ಚಿಕ್ಕಮಗಳೂರಿನ ಕಾಫಿ ಬೆಳೆಗಾರರು ಸಾಂಪ್ರದಾಯಿಕ ಕಾಫಿ ತೋಟಗಳ ನಡುವೆ ಉಪಬೆಳೆಯಾಗಿ ‘ಅವಕಾಡೊ’ ಅಥವಾ ‘ಬಟರ್‌ಫೂಟ್’ (ಬೆಣ್ಣೆಹಣ್ಣು) ಗಿಡಗಳನ್ನು ಬೆಳೆಸಿ ಯಶಸ್ವಿಯಾಗುತ್ತಿರುವುದನ್ನು ಪ್ರಧಾನಿ ನರೇಂದ್ರ ಮೋದಿ ವಿಶೇಷವಾಗಿ ಪ್ರಸ್ತಾಪಿಸಿದರು.

ಕಾಫಿ ತೋಟಗಳಲ್ಲಿ ಉಪಬೆಳೆಯಾಗಿ ಬೆಣ್ಣೆಹಣ್ಣಿನ ಕೃಷಿ ಕೈಗೊಳ್ಳುವುದರಿಂದ ರೈತರಿಗೆ ಹೆಚ್ಚುವರಿ ಆದಾಯ ದೊರೆಯುತ್ತಿದ್ದು, ಇದು ಅವರ ಆರ್ಥಿಕ ಸಬಲೀಕರಣಕ್ಕೆ ಹೊಸ ಅವಕಾಶವನ್ನು ಕಲ್ಪಿಸಿದೆ ಎಂದು ಪ್ರಧಾನಿ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಮೂಲಕ ಮಲೆನಾಡಿನ ರೈತರು ಸಾಂಪ್ರದಾಯಿಕ ಕೃಷಿಯೊಂದಿಗೆ ಹೊಸ ಬೆಳೆಗಳನ್ನು ಅಳವಡಿಸಿಕೊಂಡು ಆದಾಯದ ಮೂಲಗಳನ್ನು ವೈವಿಧ್ಯಗೊಳಿಸುತ್ತಿರುವುದು ದೇಶದ ಇತರ ರೈತರಿಗೆ ಮಾದರಿಯಾಗಿದೆ ಎಂಬ ಸಂದೇಶವೂ ರಾಷ್ಟ್ರಮಟ್ಟದಲ್ಲಿ ಮೂಡಿದೆ.

ಚಿಕ್ಕಮಗಳೂರಿನ ಸಾಧನೆ ‘ಮನ್ ಕಿ ಬಾತ್’ನಲ್ಲಿ ಪ್ರಸ್ತಾಪವಾಗುತ್ತಿರುವುದು ಇದೇ ಮೊದಲಲ್ಲ. ಈ ಹಿಂದಿನ ಸಂಚಿಕೆಗಳಲ್ಲಿಯೂ ಚಿಕ್ಕಮಗಳೂರಿನ ಕಾಫಿ ಹಾಗೂ ಬಾಹ್ಯಾಕಾಶ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿರುವ, ಚಿಕ್ಕಮಗಳೂರು ತಾಲೂಕಿನ ಆಲ್ದೂರು ಮೂಲದ ಯುವ ವಿಜ್ಞಾನಿ ಅವೈಜ್ ಅಹಮದ್ ಅವರ ಪ್ರತಿಭೆಯನ್ನು ಪ್ರಧಾನಿ ದೇಶದ ಜನತೆಗೆ ಪರಿಚಯಿಸಿದ್ದರು.

ಇದೀಗ ಮತ್ತೊಮ್ಮೆ ಮಲೆನಾಡಿನ ರೈತರ ಕೃಷಿ ಸಾಧನೆ ಪ್ರಧಾನಿಯವರ ‘ಮನ್ ಕಿ ಬಾತ್’ನಲ್ಲಿ ಪ್ರಶಂಸೆಗೆ ಪಾತ್ರವಾಗಿದ್ದು, ಚಿಕ್ಕಮಗಳೂರು ಜಿಲ್ಲೆಯ ಕೀರ್ತಿಯನ್ನು ರಾಷ್ಟ್ರಮಟ್ಟದಲ್ಲಿ ಮತ್ತಷ್ಟು ಹೆಚ್ಚಿಸಿದೆ.

PM Modi praises Chikmagalur farmers for their agricultural diversification in Mann Ki Baat

Share

Leave a comment

Leave a Reply

Your email address will not be published. Required fields are marked *

Don't Miss

ಬಿಡದಿ ರೈತರ ಹೋರಾಟ ಬೆಂಬಲಿಸಿ ಆ.25ರಂದು ವಿಧಾನಸೌಧ ಚಲೋ

ಚಿಕ್ಕಮಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ಕ್ರಮವನ್ನು ವಿರೋಧಿಸಿ ಹಾಗೂ ರೈತರ ಭೂಮಿ ರಕ್ಷಣೆಗೆ ಆಗ್ರಹಿಸಿ ಆ.25ರಂದು ಬೆಂಗಳೂರಿನಲ್ಲಿ ಬೃಹತ್ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ ಎಂದು...

ಮುಂಗಾರು ಋತುವಿನಲ್ಲಿ ಜಿಲ್ಲೆಯಲ್ಲಿ ಶೇ.35 ಮಳೆ ಕೊರತೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಋತುವಿನಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗದೆ ಶೇ.೩೫ರಷ್ಟು ಮಳೆ ಕೊರತೆ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ...

Related Articles

ಕುದುರೆಮುಖ ಭಾಗದಲ್ಲಿ ವಾಸಿಗರ ವಿಶೇಷ ಗಮನ ಸೆಳೆದ ನೀಲಕುರಿಂಜಿ

ಚಿಕ್ಕಮಗಳೂರು:  ಪಶ್ಚಿಮ ಘಟ್ಟಗಳ ನೈಸರ್ಗಿಕ ಸೌಂದರ್ಯಕ್ಕೆ ಮತ್ತೊಂದು ವಿಶೇಷ ಮೆರುಗು ನೀಡುವಂತೆ ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖ...

‘ರಾಷ್ಟ್ರದ ಸುರಕ್ಷತೆಗಾಗಿ ಎಲ್ಲರೂ ಒಂದಾಗಬೇಕು’

ಚಿಕ್ಕಮಗಳೂರು: ರಾಷ್ಟ್ರದ ಸುರಕ್ಷತೆ ಹಾಗೂ ದೇಶದ ಹಿತಾಸಕ್ತಿಗಾಗಿ ವೈಯಕ್ತಿಕ ಮತ್ತು ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಎಲ್ಲರೂ...

ಆರೋಪಿಯಿಂದ ₹11.30 ಲಕ್ಷ ಮೌಲ್ಯದ 71 ಗ್ರಾಂ ಚಿನ್ನಾಭರಣ ವಶ

ಎನ್.ಆ‌ರ್. ಪುರ: ಮನೆಯ ಹಂಚು ತೆಗೆದು ಒಳನುಗ್ಗಿ, ಮಲಗಿದ್ದ ಮಹಿಳೆಯ ಕೊರಳಿನಿಂದ ಮಾಂಗಲ್ಯ ಸರ ಎಗರಿಸಿದ್ದ...

ಅಜ್ಜಂಪುರ ಸುತ್ತಮುತ್ತ ಕರಡಿ ಹಾವಳಿ

ಅಜ್ಜಂಪುರ: ಅಜ್ಜಂಪುರ ಸುತ್ತಮುತ್ತಲಿನ ಗ್ರಾಮಗಳಲ್ಲಿ ಇತ್ತೀಚಿನ ದಿನಗಳಲ್ಲಿ ಕರಡಿ ಹಾವಳಿ ಹೆಚ್ಚಾಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಹಗಲು-ರಾತ್ರಿ...