Home namma chikmagalur chikamagalur ಚಿಕ್ಕಮಗಳೂರಿನಲ್ಲಿ 30 ಕೆ.ಜಿಗೂ ಅಧಿಕ ನಕಲಿ ನಾಟಿ ತುಪ್ಪ ಪತ್ತೆ
chikamagalurCrime NewsLatest Newsnamma chikmagalur

ಚಿಕ್ಕಮಗಳೂರಿನಲ್ಲಿ 30 ಕೆ.ಜಿಗೂ ಅಧಿಕ ನಕಲಿ ನಾಟಿ ತುಪ್ಪ ಪತ್ತೆ

Share
Share

ಚಿಕ್ಕಮಗಳೂರು: ನಗರದ ಮಾರ್ಕೆಟ್ ರಸ್ತೆಯಲ್ಲಿ ಆಹಾರ ಇಲಾಖೆಯ ಅಧಿಕಾರಿಗಳು ಹಾಗೂ ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಜಂಟಿಯಾಗಿ ದಾಳಿ ನಡೆಸಿ 30 ಕೆ.ಜಿಗೂ ಅಧಿಕ ನಕಲಿ ನಾಟಿ ತುಪ್ಪವನ್ನು ಪತ್ತೆಹಚ್ಚಿದ್ದಾರೆ.

ಮನೆಯೊಂದರಲ್ಲಿ ಡಾಲ್ಡಾ ಹಾಗೂ ವಿವಿಧ ರಾಸಾಯನಿಕ ಪದಾರ್ಥಗಳನ್ನು ಬಳಸಿ ತುಪ್ಪ ತಯಾರಿಸಿ, ಅದನ್ನು ‘ನಾಟಿ ತುಪ್ಪ’ ಎಂದು ಹೆಸರಿಸಿ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದರೆ ಅಧಿಕಾರಿಗಳು ಆಗಮಿಸುತ್ತಿದ್ದಂತೆ ದಂಧೆ ನಡೆಸುತ್ತಿದ್ದವರು ಮನೆಯ ಬಾಗಿಲಿಗೆ ಬೀಗ ಹಾಕಿಕೊಂಡು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ದಾಳಿ ವೇಳೆ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ 30 ಕೆ.ಜಿಗೂ ಅಧಿಕ ನಕಲಿ ತುಪ್ಪ ಪತ್ತೆಯಾಗಿದ್ದು, ಆಹಾರ ಇಲಾಖೆಯ ಅಧಿಕಾರಿಗಳು ಮಾದರಿಗಳನ್ನು ಸಂಗ್ರಹಿಸಿ ಮುಂದಿನ ಕ್ರಮಕ್ಕೆ ಮುಂದಾಗಿದ್ದಾರೆ.

ಬಳ್ಳಾರಿ ಮೂಲದ ತಂಡದಿಂದ ನಿರಂತರ ದಂಧೆ?

ಚಿಕ್ಕಮಗಳೂರು ನಗರದಲ್ಲಿ ಇದೇ ತಂಡದಿಂದ ನಕಲಿ ತುಪ್ಪ ತಯಾರಿಸಿ ಮಾರಾಟ ಮಾಡುತ್ತಿರುವ ಶಂಕೆ ವ್ಯಕ್ತವಾಗಿದೆ. ಬಳ್ಳಾರಿ ಮೂಲದ ಒಂದೇ ತಂಡ ನಗರದಲ್ಲಿ ನಿರಂತರವಾಗಿ ಈ ದಂಧೆ ನಡೆಸುತ್ತಿದೆ ಎನ್ನಲಾಗಿದ್ದು, ಈ ಹಿಂದೆ ಕೂಡ ಅಧಿಕಾರಿಗಳು ಕ್ರಮ ಕೈಗೊಂಡಿದ್ದರು.

ಕಳೆದ ವಾರವಷ್ಟೇ ನಗರದ ಮತ್ತೊಂದು ಪಾಳುಬಿದ್ದ ಮನೆಯೊಂದರ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ನಕಲಿ ತುಪ್ಪ ತಯಾರಿಕೆಗೆ ಸಂಬಂಧಿಸಿದ ವಸ್ತುಗಳನ್ನು ಪತ್ತೆಹಚ್ಚಿದ್ದರು ಎನ್ನಲಾಗಿದೆ.

ನಕಲಿ ತುಪ್ಪ ತಯಾರಿಸಿ ‘ನಾಟಿ ತುಪ್ಪ’ ಎಂದು ಗ್ರಾಹಕರಿಗೆ ಮಾರಾಟ ಮಾಡುತ್ತಿರುವ ಜಾಲದ ವಿರುದ್ಧ ಆಹಾರ ಇಲಾಖೆ ಹಾಗೂ ಪೊಲೀಸರು ತನಿಖೆ ಕೈಗೊಂಡಿದ್ದು, ಪರಾರಿಯಾಗಿರುವ ದಂಧೆಕೋರರ ಪತ್ತೆಗೆ ಕ್ರಮ ಮುಂದುವರಿದಿದೆ. ಘಟನೆ ಚಿಕ್ಕಮಗಳೂರು ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

More than 30 kg of fake ghee found in Chikkamagaluru

Share

Leave a comment

Leave a Reply

Your email address will not be published. Required fields are marked *

Don't Miss

ಟಿಪ್ಪು ಸುಲ್ತಾನ್ ಕಟೌಟ್ ಗೆ ದೇಶದ್ರೋಹಿ ಹಾಡು-7 ಜನ ಪೊಲೀಸರ ವಶಕ್ಕೆ

ಚಿಕ್ಕಮಗಳೂರು: ಕಾಫಿನಾಡಲ್ಲಿ ಪಾಕ್ ಪ್ರೇಮಿಗಳು ಮತ್ತೆ ಮುನ್ನೆಲೆಗೆ ಬಂದಿದ್ದಾರೆ. ಈದ್ ಮಿಲಾದ್ ಆಚರಣೆಗೆ ಟಿಪ್ಪು ಸುಲ್ತಾನ್ ಕಟೌಟ್ ಹಾಕಿರುವ ಯುವಕರು, ಕಟೌಟ್ ಬ್ಯಾಕ್ ಗ್ರೌಂಡ್ ಗೆ ದೇಶದ್ರೋಹಿ ಸಾಂಗ್ ಹಾಕಿ ವಿವಾದ...

ಕಾಫಿಕಿಂಗ್ ಸಿದ್ಧಾರ್ಥಹೆಗ್ಗಡೆ ಹೆಸರು ಶಾಶ್ವತವಾಗಿ ಉಳಿಸುವ ಕಾರ್ಯ ಮಾಡಬೇಕಿದೆ

ಮೂಡಿಗೆರೆ: ಕಾಫಿ ಡೇ ಮಾಲೀಕ ದಿವಂಗತ ವಿ.ಜಿ.ಸಿದ್ಧಾರ್ಥ ಹೆಗ್ಗಡೆ ಅವರು ತಮ್ಮ ಸಂಪೂರ್ಣ ಜೀವನವನ್ನು ಕಾಫಿ ಬೆಳೆಗಾರರ ಮತ್ತು ಕಾರ್ಮಿಕರ ಹಿತಕ್ಕಾಗಿ ಸವಿಸಿದ್ದಾರೆಂದು ಮಾಜಿ ಸಚಿವ ಬಿ.ಬಿ.ನಿಂಗಯ್ಯ ಹೇಳಿದರು. ಅವರು ಭಾನುವಾರ...

Related Articles

ಅಜ್ಜಂಪುರ ಸುತ್ತಮುತ್ತ ಕರಡಿ ಹಾವಳಿ

ಅಜ್ಜಂಪುರ: ಅಜ್ಜಂಪುರ ಸುತ್ತಮುತ್ತಲಿನ ಗ್ರಾಮಗಳಲ್ಲಿ ಇತ್ತೀಚಿನ ದಿನಗಳಲ್ಲಿ ಕರಡಿ ಹಾವಳಿ ಹೆಚ್ಚಾಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಹಗಲು-ರಾತ್ರಿ...

ಪೊಲೀಸರ ದಾಳಿಗೆ ಹೆದರಿ ಓಡುವಾಗ ಜಾರಿ ಬಿದ್ದು ಯವಕ ಸಾವು

ಚಿಕ್ಕಮಗಳೂರು: ಪೊಲೀಸರ ದಾಳಿಗೆ ಹೆದರಿ ಓಡುವಾಗ ಜಾರಿ ಬಿದ್ದು ತಲೆ ಬಂಡೆಗೆ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟಿರುವ...

ಮನ್ ಕಿ ಬಾತ್‌ನಲ್ಲಿ ಚಿಕ್ಕಮಗಳೂರು ರೈತರ ಕೃಷಿ ವೈವಿಧ್ಯತೆಗೆ ಪ್ರಧಾನಿ ಮೋದಿ ಮೆಚ್ಚುಗೆ

ಚಿಕ್ಕಮಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮ 137ನೇ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚಿಕ್ಕಮಗಳೂರಿನ ರೈತರ...

ಸರಿಯಾದ ಸಮಯಕ್ಕೆ ಆಂಬುಲೆನ್ಸ್ ಸಿಗದೆ ಮಹಿಳೆ ಸಾವು

ತರೀಕೆರೆ: ಸರಿಯಾದ ಸಮಯಕ್ಕೆ ಆಂಬುಲೆನ್ಸ್ ಹಾಗೂ ಸೂಕ್ತ ಚಿಕಿತ್ಸೆ ಸಿಗದೆ ಮಹಿಳೆ ಸಾವನ್ನಪ್ಪಿರುವ ದಾರುಣ ಘಟನೆ...