Home namma chikmagalur chikamagalur ಕುದುರೆಮುಖ ಭಾಗದಲ್ಲಿ ವಾಸಿಗರ ವಿಶೇಷ ಗಮನ ಸೆಳೆದ ನೀಲಕುರಿಂಜಿ
chikamagalurHomeLatest Newsnamma chikmagalur

ಕುದುರೆಮುಖ ಭಾಗದಲ್ಲಿ ವಾಸಿಗರ ವಿಶೇಷ ಗಮನ ಸೆಳೆದ ನೀಲಕುರಿಂಜಿ

Share
Share

ಚಿಕ್ಕಮಗಳೂರು:  ಪಶ್ಚಿಮ ಘಟ್ಟಗಳ ನೈಸರ್ಗಿಕ ಸೌಂದರ್ಯಕ್ಕೆ ಮತ್ತೊಂದು ವಿಶೇಷ ಮೆರುಗು ನೀಡುವಂತೆ ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖ ಭಾಗದ ಕೆಲವು ಚಾರಣದ ದಾರಿಗಳಲ್ಲಿ ನೀಲಕುರಿಂಜಿಯಂತಹ ನೀಲಿ-ನೇರಳೆ ಬಣ್ಣದ ಅಪರೂಪದ ಹೂವುಗಳು ಅರಳಿದ್ದು ಚಾರಣಪ್ರಿಯರು ಹಾಗೂ ಪ್ರಕೃತಿ ಪ್ರವಾಸಿಗರ ವಿಶೇಷ ಗಮನ ಸೆಳೆಯುತ್ತಿವೆ.

2022-23ನೆ ಸಾಲಿನಲ್ಲಿ ಕುದುರೆಮುಖದ ಕೆಲವು ಬೆಟ್ಟ ಪ್ರದೇಶಗಳಲ್ಲಿ ಈ ಹೂವುಗಳು ಹೆಚ್ಚಿನ ಪ್ರಮಾಣದಲ್ಲಿ ಕಂಡುಬಂದಿದ್ದರೆ, ಈ ಬಾರಿ ಸೀಮಿತ ಪ್ರಮಾಣದಲ್ಲಿ ಅರಳಿರುವುದು ಕಂಡುಬಂದಿದೆ. ಹಸಿರು ಬೆಟ್ಟಗಳ ನಡುವೆ ಅಲ್ಲಲ್ಲಿ ಅರಳಿರುವ ನೀಲಿ-ನೇರಳೆ ಹೂವುಗಳು ಕುದುರೆಮುಖದ ನೈಸರ್ಗಿಕ ಸೌಂದರ್ಯಕ್ಕೆ ಹೊಸ ಆಕರ್ಷಣೆ ನೀಡುತ್ತಿವೆ.

ಕುದುರೆಮುಖವು ಪಶ್ಚಿಮ ಘಟ್ಟಗಳ ಪ್ರಮುಖ ಜೀವವೈವಿಧ್ಯ ಪ್ರದೇಶವಾಗಿದ್ದು, ಚಾರಣ, ಪ್ರಕೃತಿ ವೀಕ್ಷಣೆ ಹಾಗೂ ಪರಿಸರ ಪ್ರವಾಸೋದ್ಯಮಕ್ಕೆ ಪ್ರಸಿದ್ದವಾಗಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ವಿವಿಧ ಚಾರಣ ಮಾರ್ಗಗಳಿದ್ದು, ಇಲ್ಲಿನ ಹುಲ್ಲುಗಾವಲು, ಶೋಲಾ ಕಾಡುಗಳು, ಜಲಧಾರೆಗಳು ಹಾಗೂ ಸಮೃದ್ಧ ಜೀವವೈವಿಧ್ಯ ಪ್ರವಾಸಿಗರಿಗೆ ವಿಶಿಷ್ಟ ಅನುಭವ ನೀಡುತ್ತವೆ.

ನೀಲಕುರಿಂಜಿಯ ನೀಲಿ ಲೋಕ: ಪಶ್ಚಿಮ ಘಟ್ಟಗಳ ಬೆಟ್ಟಗಳನ್ನು ನೀಲಿ-ನೇರಳೆ ಬಣ್ಣದಲ್ಲಿ ಕಂಗೊಳಿಸುವ ಅಪರೂಪದ ಹೂವುಗಳೆಂದೆ ನೀಲಕುರಿಂಜಿ ಜನಪ್ರಿಯವಾಗಿದೆ. ಹೂವುಗಳ ಅರಳುವಿಕೆ ಪ್ರಕೃತಿಯ ವಿಶಿಷ್ಟ ಎಕಲಾಜಿಕಲ್ ಸೈಕಲ್‌ನ ಭಾಗವಾಗಿದೆ. ಈ ಹೂವುಗಳನ್ನು ವೀಕ್ಷಿಸಲು ಬರುವ ಪ್ರವಾಸಿಗರು ಹೂವುಗಳನ್ನು ಕೀಳದಂತೆ, ಗಿಡಗಳಿಗೆ ಹಾನಿ ಮಾಡದಂತೆ ಹಾಗೂ ಪರಿಸರದ ಸ್ವಚ್ಛತೆ ಕಾಪಾಡುವಂತೆ ಪ್ರವಾಸೋದ್ಯಮ ಇಲಾಖೆ ಮನವಿ ಮಾಡಿದೆ.

ಕರ್ನಾಟಕ ಪ್ರವಾಸೋದ್ಯಮವೂ ಕುದುರೆಮುಖವನ್ನು ಪ್ರಕೃತಿ ಮತ್ತು ಪರಿಸರ ಆಧಾರಿತ ಪ್ರವಾಸೋದ್ಯಮ ತಾಣವಾಗಿ ಗುರುತಿಸಿದೆ. ಈ ನೈಸರ್ಗಿಕ ವಿದ್ಯಮಾನವನ್ನು ಪ್ರವಾಸೋದ್ಯಮದ ಅವಕಾಶವಾಗಿ ಬಳಸಿಕೊಳ್ಳುವ ಸಂದರ್ಭದಲ್ಲಿ ಪರಿಸರ ಸಂರಕ್ಷಣೆಗೆ ಮೊದಲ ಆದ್ಯತೆ ನೀಡುವ ಅಗತ್ಯವಿದೆ. ಕುದುರೆಮುಖದಂತಹ ಸೂಕ್ಷ್ಮ ಪರಿಸರ ಪ್ರದೇಶಗಳಲ್ಲಿ ಚಾರಣ ಮತ್ತು ಪ್ರವಾಸೋದ್ಯಮ ಚಟುವಟಿಕೆಗಳು ಸಂಬಂಧಪಟ್ಟ ಅರಣ್ಯ ಇಲಾಖೆ ಹಾಗೂ ಸ್ಥಳೀಯ ಆಡಳಿತದ ನಿಯಮಗಳು ಮತ್ತು ಅನುಮತಿಗಳಿಗೆ ಅನುಗುಣವಾಗಿಯೇ ನಡೆಯಬೇಕು.

ನೀಲಕುರಿಂಜಿಯಂತಹ ಅಪರೂಪದ ಹೂವುಗಳ ಅರಳುವಿಕೆ ಹಾಗೂ ಅವುಗಳ ಪರಿಸರ ಮಹತ್ವದ ಕುರಿತು ಪ್ರವಾಸಿಗರಿಗೆ ಸೂಕ್ತ ಮಾಹಿತಿ ಒದಗಿಸುವುದು, ನೈಸರ್ಗಿಕ ತಾಣಗಳಲ್ಲಿ ಜವಾಬ್ದಾರಿಯುತ ಪ್ರವಾಸೋದ್ಯಮವನ್ನು ಉತ್ತೇಜಿಸುವುದು ಹಾಗೂ ಪ್ರವಾಸಿಗರ ಅನುಭವವನ್ನು ಮತ್ತಷ್ಟು ಉತ್ತಮಗೊಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆ ತಿಳಿಸಿದೆ.

Neelakurinji has attracted special attention from residents in the Kudremukh area.

Share

Leave a comment

Leave a Reply

Your email address will not be published. Required fields are marked *

Don't Miss

ಬಿಡದಿ ರೈತರ ಹೋರಾಟ ಬೆಂಬಲಿಸಿ ಆ.25ರಂದು ವಿಧಾನಸೌಧ ಚಲೋ

ಚಿಕ್ಕಮಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ಕ್ರಮವನ್ನು ವಿರೋಧಿಸಿ ಹಾಗೂ ರೈತರ ಭೂಮಿ ರಕ್ಷಣೆಗೆ ಆಗ್ರಹಿಸಿ ಆ.25ರಂದು ಬೆಂಗಳೂರಿನಲ್ಲಿ ಬೃಹತ್ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ ಎಂದು...

ಮುಂಗಾರು ಋತುವಿನಲ್ಲಿ ಜಿಲ್ಲೆಯಲ್ಲಿ ಶೇ.35 ಮಳೆ ಕೊರತೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಋತುವಿನಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗದೆ ಶೇ.೩೫ರಷ್ಟು ಮಳೆ ಕೊರತೆ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ...

Related Articles

‘ರಾಷ್ಟ್ರದ ಸುರಕ್ಷತೆಗಾಗಿ ಎಲ್ಲರೂ ಒಂದಾಗಬೇಕು’

ಚಿಕ್ಕಮಗಳೂರು: ರಾಷ್ಟ್ರದ ಸುರಕ್ಷತೆ ಹಾಗೂ ದೇಶದ ಹಿತಾಸಕ್ತಿಗಾಗಿ ವೈಯಕ್ತಿಕ ಮತ್ತು ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಎಲ್ಲರೂ...

ಆರೋಪಿಯಿಂದ ₹11.30 ಲಕ್ಷ ಮೌಲ್ಯದ 71 ಗ್ರಾಂ ಚಿನ್ನಾಭರಣ ವಶ

ಎನ್.ಆ‌ರ್. ಪುರ: ಮನೆಯ ಹಂಚು ತೆಗೆದು ಒಳನುಗ್ಗಿ, ಮಲಗಿದ್ದ ಮಹಿಳೆಯ ಕೊರಳಿನಿಂದ ಮಾಂಗಲ್ಯ ಸರ ಎಗರಿಸಿದ್ದ...

ಅಜ್ಜಂಪುರ ಸುತ್ತಮುತ್ತ ಕರಡಿ ಹಾವಳಿ

ಅಜ್ಜಂಪುರ: ಅಜ್ಜಂಪುರ ಸುತ್ತಮುತ್ತಲಿನ ಗ್ರಾಮಗಳಲ್ಲಿ ಇತ್ತೀಚಿನ ದಿನಗಳಲ್ಲಿ ಕರಡಿ ಹಾವಳಿ ಹೆಚ್ಚಾಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಹಗಲು-ರಾತ್ರಿ...

ಚಿಕ್ಕಮಗಳೂರಿನಲ್ಲಿ 30 ಕೆ.ಜಿಗೂ ಅಧಿಕ ನಕಲಿ ನಾಟಿ ತುಪ್ಪ ಪತ್ತೆ

ಚಿಕ್ಕಮಗಳೂರು: ನಗರದ ಮಾರ್ಕೆಟ್ ರಸ್ತೆಯಲ್ಲಿ ಆಹಾರ ಇಲಾಖೆಯ ಅಧಿಕಾರಿಗಳು ಹಾಗೂ ಚಿಕ್ಕಮಗಳೂರು ನಗರ ಠಾಣೆ ಪೊಲೀಸರು...