Home namma chikmagalur chikamagalur ಅಜ್ಜಂಪುರದಲ್ಲಿ ಟಿಟಿ ವಾಹನ ಡಿಕ್ಕಿಗೆ ವೃದ್ದೆ ಸ್ಥಳದಲ್ಲೇ ಸಾವು
chikamagalurCrime NewsHomeLatest Newsnamma chikmagalur

ಅಜ್ಜಂಪುರದಲ್ಲಿ ಟಿಟಿ ವಾಹನ ಡಿಕ್ಕಿಗೆ ವೃದ್ದೆ ಸ್ಥಳದಲ್ಲೇ ಸಾವು

Share
Share

ಅಜ್ಜಂಪುರ: ಹಿಂದಿನಿಂದ ಬಂದ ಟಿಟಿ ವಾಹನ ಟಿವಿಎಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ವೃದ್ಧೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸೋಮೇನಹಳ್ಳಿ ಸಮೀಪ ಮಧ್ಯರಾತ್ರಿ ನಡೆದಿದೆ.

ಮೃತರನ್ನು ಮಂಜುಳ (65) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಅವರ ಪುತ್ರ ರವಿ (45) ತೀವ್ರವಾಗಿ ಗಾಯಗೊಂಡಿದ್ದು, ಮತ್ತೊಬ್ಬ ಸವಾರ ಚಿದಾನಂದ ಅವರಿಗೆ ಯಾವುದೇ ಗಾಯಗಳಾಗಿಲ್ಲ.

ಘಟನೆ ವಿವರ: ಚಿದಾನಂದ ಅವರು ಚಿಕ್ಕಮಗಳೂರು ನ್ಯಾಯಾಲಯಕ್ಕೆ ತೆರಳಬೇಕಿದ್ದ ಹಿನ್ನೆಲೆಯಲ್ಲಿ ತಮ್ಮ ಅಜ್ಜಿ ಮಂಜುಳ ಅವರೊಂದಿಗೆ ಮಂಗಳೂರಿನಿಂದ ರೈಲಿನಲ್ಲಿ ಹೊರಟಿದ್ದರು. ಆಗಸ್ಟ್ 30ರ ಮಧ್ಯರಾತ್ರಿ ಸುಮಾರು 1 ಗಂಟೆಗೆ ಬೀರೂರು ರೈಲು ನಿಲ್ದಾಣಕ್ಕೆ ತಲುಪಿದ ಬಳಿಕ ಬಗ್ಗವಳ್ಳಿಗೆ ತೆರಳಲು ಬಸ್ ಸೌಲಭ್ಯ ಇಲ್ಲದ ಕಾರಣ, ಮೊದಲೇ ಮಾಹಿತಿ ನೀಡಿದ್ದ ಹಿನ್ನೆಲೆಯಲ್ಲಿ ತಂದೆ ರವಿ ಅವರು ಕೆಎ-66-ಜೆ-2770 ನೋಂದಣಿಯ ಟಿವಿಎಸ್‌ನಲ್ಲಿ ಬೀರೂರಿಗೆ ಬಂದು ಕಾಯುತ್ತಿದ್ದರು.

ಬಳಿಕ ಮೂವರು ಒಂದೇ ದ್ವಿಚಕ್ರ ವಾಹನದಲ್ಲಿ ಬಗ್ಗವಳ್ಳಿ ಕಡೆಗೆ ತೆರಳುತ್ತಿದ್ದಾಗ, ಸುಮಾರು 1.30ರ ವೇಳೆಗೆ ಸೋಮೇನಹಳ್ಳಿ ಸಮೀಪ ಹಿಂದಿನಿಂದ ಬಂದ ಬಿಳಿ ಬಣ್ಣದ ಟಿಟಿ ವಾಹನ ಟಿವಿಎಸ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮೂವರೂ ರಸ್ತೆಗೆ ಬಿದ್ದಿದ್ದು, ಮಂಜುಳ ಅವರಿಗೆ ತೀವ್ರ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರವಿ ಅವರಿಗೆ ಗಂಭೀರ ಗಾಯಗಳಾಗಿವೆ.

ಅಪಘಾತದ ಬಳಿಕ ಟಿಟಿ ವಾಹನದ ಚಾಲಕ ವಾಹನ ನಿಲ್ಲಿಸದೆ, ಗಾಯಾಳುಗಳಿಗೆ ನೆರವು ನೀಡದೇ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಬಳಿಕ ಸ್ಥಳಕ್ಕೆ ಬಂದ ಸಾರ್ವಜನಿಕರು ಗಾಯಾಳುಗಳಿಗೆ ನೆರವು ನೀಡಿ, ರವಿ ಅವರನ್ನು ಹಾಗೂ ಮಂಜುಳ ಅವರ ಮೃತದೇಹವನ್ನು ಬೀರೂರು ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ.

ಅಪಘಾತದಲ್ಲಿ ಜಖಂಗೊಂಡ ಟಿವಿಎಸ್‌ನ್ನು ಅಜ್ಜಂಪುರ ಪೊಲೀಸ್ ಠಾಣೆಗೆ ತಂದು ನಿಲ್ಲಿಸಿ, ಚಿದಾನಂದ ಅವರು ದೂರು ನೀಡಿದ್ದಾರೆ. ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಮೊ.ನಂ. 227/2026ರಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಟಿಟಿ ವಾಹನ ಹಾಗೂ ಅದರ ಚಾಲಕನ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

Elderly woman dies on the spot after being hit by a TT vehicle in Ajjampura

Share

Leave a comment

Leave a Reply

Your email address will not be published. Required fields are marked *

Don't Miss

ರೈಲ್ವೆ ಕಾಮಗಾರಿಗೆ ಜಮೀನು ಬಳಕೆ: ಪರಿಹಾರ ನೀಡುವಂತೆ ರೈತ ಸಂಘ ಒತ್ತಾಯ

ಚಿಕ್ಕಮಗಳೂರು: ರೈಲ್ವೆ ಕಾಮಗಾರಿಗಾಗಿ ರೈತರ ಜಮೀನು ಹಾಗೂ ವಾಸದ ಮನೆಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದ್ದು, ಸಂತ್ರಸ್ತ ರೈತರಿಗೆ ಸೂಕ್ತ ಪರಿಹಾರ ನೀಡಬೇಕು. ಪರಿಹಾರ ನೀಡುವವರೆಗೆ ಕಾಮಗಾರಿ ಸ್ಥಗಿತಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ರೈತ...

ಬಿಎಫ್‌ಐಎಲ್‌ ಸಂಸ್ಥೆಯಲ್ಲಿ ₹5.50 ಲಕ್ಷ ದುರುಪಯೋಗ: ಇಬ್ಬರು ಸಿಬ್ಬಂದಿ ವಿರುದ್ಧ ಪ್ರಕರಣ

ನರಸಿಂಹರಾಜಪುರ: ಭಾರತ್ ಫೈನಾನ್ಸಿಯಲ್ ಇನ್‌ಕ್ಲೂಶನ್ ಲಿಮಿಟೆಡ್‌ (ಬಿಎಫ್‌ಐಎಲ್‌) ಸಂಸ್ಥೆಯ ಸೇಫ್‌ ಲಾಕರ್‌ನಲ್ಲಿದ್ದ ಚೆಕ್‌ಗಳನ್ನು ಮೇಲಾಧಿಕಾರಿಗಳ ಗಮನಕ್ಕೆ ಬಾರದಂತೆ ತೆಗೆದುಕೊಂಡು ₹5.50 ಲಕ್ಷ ಹಣವನ್ನು ಬಿಡಿಸಿಕೊಂಡು ದುರುಪಯೋಗಪಡಿಸಿಕೊಂಡ ಆರೋಪದಡಿ ಇಬ್ಬರು ಸಿಬ್ಬಂದಿ ವಿರುದ್ಧ...

Related Articles

ಕರ್ನಾಟಕ ರಾಜ್ಯ ರೈತ ಸಂಘ-ಹಸಿರು ಸೇನೆಯಿಂದ ಪ್ರತಿಭಟನೆ

ಚಿಕ್ಕಮಗಳೂರು: ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಕಡೂರು ಹಾಗೂ ಚಿಕ್ಕಮಗಳೂರು ತಾಲ್ಲೂಕುಗಳನ್ನು...

ಆನ್‌ಲೈನ್ ಟ್ರೇಡಿಂಗ್ ಹೂಡಿಕೆ ಹೆಸರಿನಲ್ಲಿ ವಿದ್ಯಾರ್ಥಿನಿಗೆ ₹4.77 ಲಕ್ಷ ವಂಚನೆ

ಚಿಕ್ಕಮಗಳೂರು: ಆನ್‌ಲೈನ್ ಟ್ರೇಡಿಂಗ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಕೆಲವೇ ನಿಮಿಷಗಳಲ್ಲಿ ಭಾರಿ ಲಾಭ ನೀಡುವುದಾಗಿ ನಂಬಿಸಿ...

ಯುವತಿ ಮೇಲೆ ಅತ್ಯಾಚಾರ-ಕೊಲೆ ಬೆದರಿಕೆ ಆರೋಪ

ಚಿಕ್ಕಮಗಳೂರು: ಯುವತಿಗೆ ಅತ್ಯಾಚಾರ ಎಸಗಿದ ಆರೋಪ ಹಾಗೂ ಬಳಿಕ ಕೊಲೆ ಬೆದರಿಕೆ ಹಾಕಿದ ಆರೋಪದಡಿ ಪಂಚನಹಳ್ಳಿ...

ಮನೆಯ ಹಿಂಭಾಗದಲ್ಲಿ ಬೆಳೆದಿದ್ದ 12.250 ಕೆ.ಜಿ. ಹಸಿ ಗಾಂಜಾ ವಶ

ತರೀಕೆರೆ: ತಾಲ್ಲೂಕಿನ ಬೆಟ್ಟತಾವರೆಕೆರೆ ಗ್ರಾಮದ ನಿವಾಸಿ ದಿನೇಶ್ ಎಂಬುವವರು ತಮ್ಮ ಮನೆಯ ಹಿಂಭಾಗದಲ್ಲಿ ಬೆಳೆದಿದ್ದ ಸುಮಾರು...