ಚಿಕ್ಕಮಗಳೂರು: ಪತ್ನಿಯನ್ನು ಕತ್ತು ಹಿಸುಕಿ ಹಾಗೂ ಮೂಗು–ಬಾಯಿ ಮುಚ್ಚಿ ಉಸಿರುಗಟ್ಟಿಸಿ ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ ಚಿಕ್ಕಮಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ₹10,000 ದಂಡ ವಿಧಿಸಿದೆ.
ಕೊಪ್ಪ ತಾಲ್ಲೂಕಿನ ಮೇಗುಂದಾ ಹೋಬಳಿಯ ಹೊನ್ನಗುಂಡಿ ಗ್ರಾಮದ ಸದಾನಂದ ಬಿನ್ ಲೇಟ್ ಗುರುವ (49) ಶಿಕ್ಷೆಗೆ ಗುರಿಯಾದ ಆರೋಪಿ.
ಪ್ರಕರಣದ ಹಿನ್ನೆಲೆ: 2022ರ ನವೆಂಬರ್ 15ರಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಮೃತ ಯಶೋಧಾ ಅವರು ಸದಾನಂದನಿಗೆ ಬೇರೆ ಮಹಿಳೆಯೊಂದಿಗೆ ಸಂಬಂಧ ಹೊಂದಿರುವ ಬಗ್ಗೆ ಪ್ರಶ್ನಿಸಿದ್ದರು. ಈ ವೇಳೆ ಆರೋಪಿ ಕೋಲಿನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಅದೇ ದಿನ ರಾತ್ರಿ 11 ಗಂಟೆ ಸುಮಾರಿಗೆ ಮಗ ಮಲಗಿದ ಬಳಿಕ ಯಶೋಧಾಳ ಕತ್ತು ಹಿಸುಕಿ, ಮೂಗು ಮತ್ತು ಬಾಯಿ ಮುಚ್ಚಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿತ್ತು.
ಈ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಮೊ.ನಂ.50/2022ರಂತೆ ಭಾರತೀಯ ದಂಡ ಸಂಹಿತೆ (IPC) ಕಲಂ 302ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ನ್ಯಾಯಾಲಯದ ತೀರ್ಪು: ಪ್ರಕರಣದ ವಿಚಾರಣೆ ನಡೆಸಿದ ಚಿಕ್ಕಮಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 2026ರ ಆಗಸ್ಟ್ 31ರಂದು ತೀರ್ಪು ಪ್ರಕಟಿಸಿದ್ದು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಸದಾನಂದನಿಗೆ IPC ಕಲಂ 302ರ ಅಡಿಯಲ್ಲಿ ಜೀವಾವಧಿ ಶಿಕ್ಷೆ ಹಾಗೂ ₹10,000 ದಂಡ ವಿಧಿಸಿದೆ.
ತನಿಖೆ ಮತ್ತು ವಾದ ಮಂಡನೆ: ಪ್ರಕರಣದ ತನಿಖಾಧಿಕಾರಿ ಸಿ.ಪಿ.ಐ. ಜೆ. ಮಂಜು ಅವರು ತನಿಖೆ ಪೂರ್ಣಗೊಳಿಸಿ ಆರೋಪಿಯ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಸರ್ಕಾರದ ಪರ ಸರ್ಕಾರಿ ಅಭಿಯೋಜಕರಾದ ಭಾವನ ಅವರು ಸಾಕ್ಷಿದಾರರನ್ನು ವಿಚಾರಣೆ ನಡೆಸಿ ಸಮರ್ಥವಾಗಿ ವಾದ ಮಂಡಿಸಿದ್ದರು.
ಜಯಪುರ ಪೊಲೀಸ್ ಠಾಣೆಯ ತನಿಖಾ ಸಹಾಯಕ ಹಾಗೂ ನ್ಯಾಯಾಲಯದ ಸಿಬ್ಬಂದಿಗಳಾದ ತಿಪ್ಪೇಶ್, ಸಿ.ಹೆಚ್.ಸಿ. ಮತ್ತು ಆಕಾಶ್ ಬಿ.ಸಿ., ಸಿ.ಪಿ.ಸಿ. ಅವರು ಸಾಕ್ಷಿದಾರರನ್ನು ಸಮರ್ಪಕವಾಗಿ ನ್ಯಾಯಾಲಯಕ್ಕೆ ಹಾಜರುಪಡಿಸುವ ಮೂಲಕ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆಯಾಗಲು ಸಹಕರಿಸಿದ್ದಾರೆ.
Murder accused gets life sentence
ಚಿಕ್ಕಮಗಳೂರು: ಪ್ರಸಿದ್ಧ ಶಕ್ತಿದೇವತೆ ಬಿಂಡಿಗ ದೇವೀರಮ್ಮನ ದರ್ಶನಕ್ಕಾಗಿ ಬೆಟ್ಟ ಏರುತ್ತಿದ್ದ ಭಕ್ತರೊಬ್ಬರು ತೀವ್ರ ಹೃದಯಾಘಾತದಿಂದ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸಮೀಪದ ಕನ್ಯಾಡಿ ಗ್ರಾಮದ...
ByN Raju Chief EditorNovember 8, 2026ಕಡೂರು: ಬರದ ಬೇಗುದಿ, ಕೃಷಿ ನಷ್ಟ ಹಾಗೂ ಸಾಲದ ಹೊರೆ ತಾಳಲಾರದೆ ರೈತರ ಆತ್ಮಹತ್ಯೆ ಪ್ರಕರಣಗಳು ಮುಂದುವರಿದಿದ್ದು, ದೀಪಾವಳಿಯ ಸಂಭ್ರಮದ ನಡುವೆಯೇ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ಮತ್ತೊಬ್ಬ ರೈತ ಆತ್ಮಹತ್ಯೆಗೆ...
ByN Raju Chief EditorNovember 8, 2026ಚಿಕ್ಕಮಗಳೂರು: ಹಿಂದಿನ ಕಾಲದಲ್ಲಿ ಕುಂಬಾರರು ತಯಾರಿಸಿದ ಮಣ್ಣಿನ ಮಡಿಕೆ, ದೀಪದ ಹಣತೆ ಸೇರಿದಂತೆ ಪ್ರತಿಯೊಂದು ವಸ್ತುಗಳು...
ByN Raju Chief EditorNovember 15, 2026ಚಿಕ್ಕಮಗಳೂರು: ಸೈಬರ್ ವಂಚನೆ ಮೂಲಕ ಸಾರ್ವಜನಿಕರಿಂದ ಹಣ ಪಡೆದು, ಅದನ್ನು ತರೀಕೆರೆಯ ಕೆನರಾ ಬ್ಯಾಂಕ್ ಖಾತೆಯೊಂದಕ್ಕೆ...
ByN Raju Chief EditorNovember 15, 2026ಚಿಕ್ಕಮಗಳೂರು: ನಗರದ ಹೊರವಲಯದ ಕಲ್ಲುದೊಡ್ಡಿ ಗ್ರಾಮದ ಶನೇಶ್ವರ ಸ್ವಾಮಿ ದೇವಸ್ಥಾನದ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು,...
ByN Raju Chief EditorNovember 15, 2026ಚಿಕ್ಕಮಗಳೂರು: ಗ್ರಾಹಕರಿಗೆ ಹೋಟೆಲ್ ಕೊಠಡಿಗಳನ್ನು ಕಾಯ್ದಿರಿಸಿ ವಸತಿ ಸೇರಿದಂತೆ ವಿವಿಧ ಸೇವೆಗಳನ್ನು ಒದಗಿಸಿದರೂ, ಸೇವಾ ಶುಲ್ಕದ...
ByN Raju Chief EditorNovember 15, 2026Excepteur sint occaecat cupidatat non proident
Leave a comment