Home namma chikmagalur chikamagalur ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು
chikamagalurHomeLatest Newsnamma chikmagalur

ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು

Share
Share

ಚಿಕ್ಕಮಗಳೂರು: ಈಜಲು ತೆರಳಿದ್ದ 23 ವರ್ಷದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಭೈರನಕಟ್ಟೆ ಸಮೀಪದ ಭದ್ರಾ ಬ್ಯಾಕ್‌ವಾಟರ್‌ನಲ್ಲಿ ನಡೆದಿದೆ.

ಮೃತ ಯುವಕನನ್ನು ಶಿವಮೊಗ್ಗ ಜಿಲ್ಲೆಯ ಬೊಮ್ಮನಕಟ್ಟೆ ಆಶ್ರಯ ಬಡಾವಣೆ ನಿವಾಸಿ ನಿಖಿಲ್ ಆರ್. ಸಿಂಗ್ (23) ಎಂದು ಗುರುತಿಸಲಾಗಿದೆ.

ನಿಖಿಲ್ ನಿನ್ನೆ ಸಂಜೆ ಇಬ್ಬರು ಸ್ನೇಹಿತರೊಂದಿಗೆ ಪಾರ್ಟಿ ನಡೆಸಿ ಬಳಿಕ ಭೈರನಕಟ್ಟೆ ಸಮೀಪದ ಭದ್ರಾ ಬ್ಯಾಕ್‌ವಾಟರ್‌ಗೆ ಈಜಲು ತೆರಳಿದ್ದ ಎನ್ನಲಾಗಿದೆ. ಈ ವೇಳೆ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾನೆ.

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಶೋಧ ಕಾರ್ಯಾಚರಣೆ ನಡೆಸಿ ಬ್ಯಾಕ್‌ವಾಟರ್‌ನಿಂದ ನಿಖಿಲ್‌ನ ಮೃತದೇಹವನ್ನು ಹೊರತೆಗೆದಿದ್ದಾರೆ.

ಘಟನೆ ಸಂಬಂಧ ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

A young man who had gone swimming drowned and died.

Share

Leave a comment

Leave a Reply

Your email address will not be published. Required fields are marked *

Don't Miss

ದೇವೀರಮ್ಮನ ಬೆಟ್ಟ ಏರುವಾಗ ಹೃದಯಾಘಾತದಿಂದ ಭಕ್ತನ ಸಾವು

ಚಿಕ್ಕಮಗಳೂರು: ಪ್ರಸಿದ್ಧ ಶಕ್ತಿದೇವತೆ ಬಿಂಡಿಗ ದೇವೀರಮ್ಮನ ದರ್ಶನಕ್ಕಾಗಿ ಬೆಟ್ಟ ಏರುತ್ತಿದ್ದ ಭಕ್ತರೊಬ್ಬರು ತೀವ್ರ ಹೃದಯಾಘಾತದಿಂದ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸಮೀಪದ ಕನ್ಯಾಡಿ ಗ್ರಾಮದ...

ಸಾಲಬಾಧೆ ತಾಳಲಾರದೆ ಅಡಿಕೆ ತೋಟದಲ್ಲೇ ರೈತ ಆತ್ಮಹತ್ಯೆ

ಕಡೂರು: ಬರದ ಬೇಗುದಿ, ಕೃಷಿ ನಷ್ಟ ಹಾಗೂ ಸಾಲದ ಹೊರೆ ತಾಳಲಾರದೆ ರೈತರ ಆತ್ಮಹತ್ಯೆ ಪ್ರಕರಣಗಳು ಮುಂದುವರಿದಿದ್ದು, ದೀಪಾವಳಿಯ ಸಂಭ್ರಮದ ನಡುವೆಯೇ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ಮತ್ತೊಬ್ಬ ರೈತ ಆತ್ಮಹತ್ಯೆಗೆ...

Related Articles

ಕುಂಬಾರ ನೂತನ ಸಮುದಾಯ ಭವನ ಲೋಕಾರ್ಪಣೆ

ಚಿಕ್ಕಮಗಳೂರು:  ಹಿಂದಿನ ಕಾಲದಲ್ಲಿ ಕುಂಬಾರರು ತಯಾರಿಸಿದ ಮಣ್ಣಿನ ಮಡಿಕೆ, ದೀಪದ ಹಣತೆ ಸೇರಿದಂತೆ ಪ್ರತಿಯೊಂದು ವಸ್ತುಗಳು...

ತರೀಕೆರೆಯ ವ್ಯಕ್ತಿಯ ಬ್ಯಾಂಕ್ ಖಾತೆ ವಿರುದ್ಧ ಪ್ರಕರಣ ದಾಖಲು

ಚಿಕ್ಕಮಗಳೂರು: ಸೈಬರ್ ವಂಚನೆ ಮೂಲಕ ಸಾರ್ವಜನಿಕರಿಂದ ಹಣ ಪಡೆದು, ಅದನ್ನು ತರೀಕೆರೆಯ ಕೆನರಾ ಬ್ಯಾಂಕ್ ಖಾತೆಯೊಂದಕ್ಕೆ...

ಕಲ್ಲುದೊಡ್ಡಿ ಶನೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ

ಚಿಕ್ಕಮಗಳೂರು: ನಗರದ ಹೊರವಲಯದ ಕಲ್ಲುದೊಡ್ಡಿ ಗ್ರಾಮದ ಶನೇಶ್ವರ ಸ್ವಾಮಿ ದೇವಸ್ಥಾನದ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು,...

ಟ್ರಾವೆಲ್ ಏಜೆಂಟ್ ನಿಂದ ಬಿಂಡಿಗಾ ಪೀಕ್ ರೆಸಾರ್ಟ್‌ಗೆ ₹8.28 ಲಕ್ಷ ವಂಚನೆ

ಚಿಕ್ಕಮಗಳೂರು: ಗ್ರಾಹಕರಿಗೆ ಹೋಟೆಲ್ ಕೊಠಡಿಗಳನ್ನು ಕಾಯ್ದಿರಿಸಿ ವಸತಿ ಸೇರಿದಂತೆ ವಿವಿಧ ಸೇವೆಗಳನ್ನು ಒದಗಿಸಿದರೂ, ಸೇವಾ ಶುಲ್ಕದ...