Home namma chikmagalur chikamagalur ಯುವತಿ ಮೇಲೆ ಅತ್ಯಾಚಾರ-ಕೊಲೆ ಬೆದರಿಕೆ ಆರೋಪ
chikamagalurHomeLatest Newsnamma chikmagalur

ಯುವತಿ ಮೇಲೆ ಅತ್ಯಾಚಾರ-ಕೊಲೆ ಬೆದರಿಕೆ ಆರೋಪ

Share
Share

ಚಿಕ್ಕಮಗಳೂರು: ಯುವತಿಗೆ ಅತ್ಯಾಚಾರ ಎಸಗಿದ ಆರೋಪ ಹಾಗೂ ಬಳಿಕ ಕೊಲೆ ಬೆದರಿಕೆ ಹಾಕಿದ ಆರೋಪದಡಿ ಪಂಚನಹಳ್ಳಿ ಪೊಲೀಸ್ ಠಾಣೆಯಲ್ಲಿ ಝೀರೋ ಎಫ್‌ಐಆರ್ ದಾಖಲಾಗಿದೆ.

ಹೊಸದುರ್ಗ ತಾಲ್ಲೂಕಿನ ಶ್ರೀರಾಂಪುರ ಹೋಬಳಿಯ ದ್ಯಾವಜ್ಜನಪಾಳ್ಯ ಗ್ರಾಮದ ಮೋಹನ ಕುಮಾರ್ ಡಿ.ಎಲ್. (ಲಕ್ಷ್ಮಣನಾಯ್ಕ ಪುತ್ರ) ವಿರುದ್ಧ ಪ್ರಕರಣ ದಾಖಲಾಗಿದೆ. ಸಂತ್ರಸ್ತೆ ನೀಡಿದ ದೂರಿನ ಪ್ರಕಾರ, ಆರೋಪಿಯು ಆಕೆಯ ಅತ್ತೆಯ ಮಗನಾಗಿದ್ದು, ಕಳೆದ ಒಂದು ವರ್ಷದಿಂದ ಮೊಬೈಲ್ ಮೂಲಕ ಸಂಪರ್ಕದಲ್ಲಿದ್ದು ಸಲಿಗೆಯಿಂದ ಮಾತನಾಡುತ್ತಿದ್ದ ಎನ್ನಲಾಗಿದೆ.

ಆಗಸ್ಟ್ 26ರಂದು ದೂರವಾಣಿ ಕರೆ ಮಾಡಿ ಚಿಕ್ಕಮಗಳೂರಿಗೆ ಬರುವಂತೆ ಒತ್ತಾಯಿಸಿದ್ದಾನೆ. ಅದರಂತೆ ಆಗಸ್ಟ್ 27ರಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಚಿಕ್ಕಮಗಳೂರಿನ ರಾಜ್ ಮಹಲ್ ಹೋಟೆಲ್‌ಗೆ ತೆರಳಿದ್ದ ಸಂದರ್ಭದಲ್ಲಿ ಒತ್ತಾಯಪೂರ್ವಕವಾಗಿ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಅಲ್ಲದೆ, ಆಗಸ್ಟ್ 28ರಂದು ಮತ್ತೆ ಬರುವಂತೆ ಒತ್ತಾಯಿಸಿ, ತನ್ನೊಂದಿಗೆ ವಿಕೃತವಾಗಿ ವರ್ತಿಸಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಚೀಟಿ ಬರೆದು ಇಡುವುದಾಗಿ ಹಾಗೂ ತನ್ನ ಮರ್ಯಾದೆಗೆ ಧಕ್ಕೆ ತಂದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಆರೋಪಿಯ ಬೆದರಿಕೆಯಿಂದಾಗಿ ಸಂತ್ರಸ್ತೆ ಆರಂಭದಲ್ಲಿ ಘಟನೆ ಕುರಿತು ಮನೆಯವರಿಗೆ ಮಾಹಿತಿ ನೀಡಿರಲಿಲ್ಲ. ಬಳಿಕ ಮನೆಯವರೊಂದಿಗೆ ಚರ್ಚಿಸಿ ಸೆಪ್ಟೆಂಬರ್ 2ರಂದು ತಡವಾಗಿ ಪೊಲೀಸ್ ಠಾಣೆಗೆ ಹಾಜರಾಗಿ ದೂರು ನೀಡಿದ್ದಾರೆ.

ದೂರಿನ ಆಧಾರದ ಮೇಲೆ ಪಂಚನಹಳ್ಳಿ ಪೊಲೀಸರು ಝೀರೋ ಎಫ್‌ಐಆರ್ ದಾಖಲಿಸಿಕೊಂಡಿದ್ದು, ಆರೋಪಿಯ ವಿರುದ್ಧ ಕಾನೂನು ಕ್ರಮಕ್ಕಾಗಿ ಪ್ರಕರಣದ ಮುಂದಿನ ತನಿಖೆ ಕೈಗೊಂಡಿದ್ದಾರೆ.

Young woman accused of rape and murder threats

Share

Leave a comment

Leave a Reply

Your email address will not be published. Required fields are marked *

Don't Miss

ರೈಲ್ವೆ ಕಾಮಗಾರಿಗೆ ಜಮೀನು ಬಳಕೆ: ಪರಿಹಾರ ನೀಡುವಂತೆ ರೈತ ಸಂಘ ಒತ್ತಾಯ

ಚಿಕ್ಕಮಗಳೂರು: ರೈಲ್ವೆ ಕಾಮಗಾರಿಗಾಗಿ ರೈತರ ಜಮೀನು ಹಾಗೂ ವಾಸದ ಮನೆಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದ್ದು, ಸಂತ್ರಸ್ತ ರೈತರಿಗೆ ಸೂಕ್ತ ಪರಿಹಾರ ನೀಡಬೇಕು. ಪರಿಹಾರ ನೀಡುವವರೆಗೆ ಕಾಮಗಾರಿ ಸ್ಥಗಿತಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ರೈತ...

ಬಿಎಫ್‌ಐಎಲ್‌ ಸಂಸ್ಥೆಯಲ್ಲಿ ₹5.50 ಲಕ್ಷ ದುರುಪಯೋಗ: ಇಬ್ಬರು ಸಿಬ್ಬಂದಿ ವಿರುದ್ಧ ಪ್ರಕರಣ

ನರಸಿಂಹರಾಜಪುರ: ಭಾರತ್ ಫೈನಾನ್ಸಿಯಲ್ ಇನ್‌ಕ್ಲೂಶನ್ ಲಿಮಿಟೆಡ್‌ (ಬಿಎಫ್‌ಐಎಲ್‌) ಸಂಸ್ಥೆಯ ಸೇಫ್‌ ಲಾಕರ್‌ನಲ್ಲಿದ್ದ ಚೆಕ್‌ಗಳನ್ನು ಮೇಲಾಧಿಕಾರಿಗಳ ಗಮನಕ್ಕೆ ಬಾರದಂತೆ ತೆಗೆದುಕೊಂಡು ₹5.50 ಲಕ್ಷ ಹಣವನ್ನು ಬಿಡಿಸಿಕೊಂಡು ದುರುಪಯೋಗಪಡಿಸಿಕೊಂಡ ಆರೋಪದಡಿ ಇಬ್ಬರು ಸಿಬ್ಬಂದಿ ವಿರುದ್ಧ...

Related Articles

ಕರ್ನಾಟಕ ರಾಜ್ಯ ರೈತ ಸಂಘ-ಹಸಿರು ಸೇನೆಯಿಂದ ಪ್ರತಿಭಟನೆ

ಚಿಕ್ಕಮಗಳೂರು: ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಕಡೂರು ಹಾಗೂ ಚಿಕ್ಕಮಗಳೂರು ತಾಲ್ಲೂಕುಗಳನ್ನು...

ಆನ್‌ಲೈನ್ ಟ್ರೇಡಿಂಗ್ ಹೂಡಿಕೆ ಹೆಸರಿನಲ್ಲಿ ವಿದ್ಯಾರ್ಥಿನಿಗೆ ₹4.77 ಲಕ್ಷ ವಂಚನೆ

ಚಿಕ್ಕಮಗಳೂರು: ಆನ್‌ಲೈನ್ ಟ್ರೇಡಿಂಗ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಕೆಲವೇ ನಿಮಿಷಗಳಲ್ಲಿ ಭಾರಿ ಲಾಭ ನೀಡುವುದಾಗಿ ನಂಬಿಸಿ...

ಮನೆಯ ಹಿಂಭಾಗದಲ್ಲಿ ಬೆಳೆದಿದ್ದ 12.250 ಕೆ.ಜಿ. ಹಸಿ ಗಾಂಜಾ ವಶ

ತರೀಕೆರೆ: ತಾಲ್ಲೂಕಿನ ಬೆಟ್ಟತಾವರೆಕೆರೆ ಗ್ರಾಮದ ನಿವಾಸಿ ದಿನೇಶ್ ಎಂಬುವವರು ತಮ್ಮ ಮನೆಯ ಹಿಂಭಾಗದಲ್ಲಿ ಬೆಳೆದಿದ್ದ ಸುಮಾರು...

ಪತ್ನಿ ಕೊಲೆ ಮಾಡಿದ ಗಂಡನಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು: ಪತ್ನಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ 1ನೇ ಹೆಚ್ಚುವರಿ ಜಿಲ್ಲಾ...