Home namma chikmagalur chikamagalur ಕರ್ನಾಟಕ ರಾಜ್ಯ ರೈತ ಸಂಘ-ಹಸಿರು ಸೇನೆಯಿಂದ ಪ್ರತಿಭಟನೆ
chikamagalurHomeLatest Newsnamma chikmagalur

ಕರ್ನಾಟಕ ರಾಜ್ಯ ರೈತ ಸಂಘ-ಹಸಿರು ಸೇನೆಯಿಂದ ಪ್ರತಿಭಟನೆ

Share
Share

ಚಿಕ್ಕಮಗಳೂರು: ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಕಡೂರು ಹಾಗೂ ಚಿಕ್ಕಮಗಳೂರು ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳ ಪಟ್ಟಿಗೆ ಸೇರ್ಪಡೆಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಗ್ರಹಿಸಿದೆ.

ನಗರದ ಆಜಾದ್ ಪಾರ್ಕ್‌ನಲ್ಲಿ ಬುಧವಾರ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲಾಗಿದ್ದು, ಚಿಕ್ಕಮಗಳೂರು ಜಿಲ್ಲೆಯ ಕಡೂರು ಹಾಗೂ ಚಿಕ್ಕಮಗಳೂರು ತಾಲ್ಲೂಕುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಈ ಎರಡೂ ತಾಲ್ಲೂಕುಗಳಲ್ಲೂ ಮಳೆ ಕೊರತೆಯಿಂದ ಕೃಷಿ ಹಾಗೂ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ವಾಸ್ತವ ಪರಿಸ್ಥಿತಿಯನ್ನು ಪರಿಗಣಿಸಿ ಕೂಡಲೇ ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಮುಂಗಾರು ಮಳೆ ಸಮರ್ಪಕವಾಗಿ ಆಗದ ಪರಿಣಾಮ ಬಿತ್ತನೆ ಮಾಡಿರುವ ಬೆಳೆಗಳಿಗೆ ನೀರಿನ ಕೊರತೆ ಎದುರಾಗಿದೆ. ಹಲವು ಭಾಗಗಳಲ್ಲಿ ಕೆರೆ-ಕಟ್ಟೆಗಳು ಬತ್ತಿದ್ದು, ಅಂತರ್ಜಲ ಮಟ್ಟ ಕುಸಿದಿದೆ. ಕೃಷಿಗೆ ಅಗತ್ಯ ನೀರು ದೊರೆಯದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ ನಷ್ಟದ ಭೀತಿಯಲ್ಲಿರುವ ರೈತರಿಗೆ ಸರ್ಕಾರ ತಕ್ಷಣ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಗ್ರಾಮವಾರು ಬರ ಪರಿಸ್ಥಿತಿಯ ಸಮೀಕ್ಷೆ ನಡೆಸಬೇಕು. ಬರಪೀಡಿತ ತಾಲ್ಲೂಕುಗಳ ಪಟ್ಟಿಗೆ ಕಡೂರು ಹಾಗೂ ಚಿಕ್ಕಮಗಳೂರನ್ನು ಸೇರಿಸಿ, ರೈತರಿಗೆ ಅಗತ್ಯ ಪರಿಹಾರ ನೀಡಬೇಕು. ಕೃಷಿ ಸಾಲದ ಮೇಲಿನ ಬಡ್ಡಿ ಸೇರಿದಂತೆ ರೈತರ ಆರ್ಥಿಕ ಹೊರೆಯನ್ನು ಕಡಿಮೆ ಮಾಡಬೇಕು. ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು ಎಂದು ಮನವಿ ಮಾಡಿದರು.

ಬೆಳೆ ನಷ್ಟಕ್ಕೊಳಗಾದ ರೈತರಿಗೆ ಸೂಕ್ತ ಪರಿಹಾರ, ಬೆಳೆ ವಿಮೆ ಹಣ ದೊರೆಯುವಂತೆ ಕ್ರಮ, ಬರಪರಿಹಾರ ಕಾಮಗಾರಿಗಳ ಮೂಲಕ ಉದ್ಯೋಗ ಹಾಗೂ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗಳಿಗೆ ವೇಗ ನೀಡಬೇಕು ಎಂದು ರೈತ ಸಂಘ ಒತ್ತಾಯಿಸಿತು.

ಕಡೂರು ಮತ್ತು ಚಿಕ್ಕಮಗಳೂರು ತಾಲ್ಲೂಕುಗಳ ವಾಸ್ತವ ಬರ ಪರಿಸ್ಥಿತಿಯನ್ನು ಪರಿಗಣಿಸಿ ತಕ್ಷಣ ಬರಪೀಡಿತ ಪಟ್ಟಿಗೆ ಸೇರಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಮುಖಂಡರು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ಮುಖಂಡ ಗುರುಶಾಂತಪ್ಪ, ರೈತ ಸಂಘದ ಜಿಲ್ಲಾಧ್ಯಕ್ಷ ಡಿ. ಮಹೇಶ್, ಗೌರವಾಧ್ಯಕ್ಷ ಎಂ.ಸಿ. ಬಸವರಾಜ, ಪ್ರಧಾನ ಕಾರ್ಯದರ್ಶಿ ಎಂ.ಬಿ. ಭದ್ರಕವರ್, ಉಪಾಧ್ಯಕ್ಷ ದೇವರಾಜೇಗೌಡ, ಸಂಚಾಲಕ/ಕಾರ್ಯದರ್ಶಿ ಮಧುಶೇಖರ್, ಜಿಲ್ಲಾ ವಕ್ತಾರ ಶಿವಣ್ಣ ಜೆ.ಎಸ್., ತಾಲ್ಲೂಕು ಅಧ್ಯಕ್ಷ ಭದ್ರೇಗೌಡ, ತಾಲ್ಲೂಕು ವಕ್ತಾರ ಕೆ.ಟಿ. ಸುನೀಲ್ ಕುಮಾರ್, ಉಪಾಧ್ಯಕ್ಷ ದಯಾನಂದ್ ಜಿ., ಸಂಚಾಲಕ ಸಿದ್ದೇಗೌಡ, ತಾಲ್ಲೂಕು ಸಂಚಾಲಕಿ ನಿರ್ಮಲ, ಸಿ.ಎನ್. ಈಶ್ವರಪ್ಪ, ಯುವ ರೈತ ಸಂಘದ ಜಿಲ್ಲಾಧ್ಯಕ್ಷ ಯುವರಾಜ್, ಸಂಚಾಲಕಿ ರಾಧಮ್ಮ ಜಿ., ಉಪಾಧ್ಯಕ್ಷ ಶಿವಕುಮಾರ್, ಉಪಾಧ್ಯಕ್ಷ ಚಂದ್ರಶೇಖರ್ ಸೇರಿದಂತೆ ರೈತ ಸಂಘದ ಪದಾಧಿಕಾರಿಗಳು ಹಾಗೂ ರೈತರು ಭಾಗವಹಿಸಿದ್ದರು.

Protest by Karnataka State Farmers’ Association-Green Army

Share

Leave a comment

Leave a Reply

Your email address will not be published. Required fields are marked *

Don't Miss

ರೈಲ್ವೆ ಕಾಮಗಾರಿಗೆ ಜಮೀನು ಬಳಕೆ: ಪರಿಹಾರ ನೀಡುವಂತೆ ರೈತ ಸಂಘ ಒತ್ತಾಯ

ಚಿಕ್ಕಮಗಳೂರು: ರೈಲ್ವೆ ಕಾಮಗಾರಿಗಾಗಿ ರೈತರ ಜಮೀನು ಹಾಗೂ ವಾಸದ ಮನೆಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದ್ದು, ಸಂತ್ರಸ್ತ ರೈತರಿಗೆ ಸೂಕ್ತ ಪರಿಹಾರ ನೀಡಬೇಕು. ಪರಿಹಾರ ನೀಡುವವರೆಗೆ ಕಾಮಗಾರಿ ಸ್ಥಗಿತಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ರೈತ...

ಬಿಎಫ್‌ಐಎಲ್‌ ಸಂಸ್ಥೆಯಲ್ಲಿ ₹5.50 ಲಕ್ಷ ದುರುಪಯೋಗ: ಇಬ್ಬರು ಸಿಬ್ಬಂದಿ ವಿರುದ್ಧ ಪ್ರಕರಣ

ನರಸಿಂಹರಾಜಪುರ: ಭಾರತ್ ಫೈನಾನ್ಸಿಯಲ್ ಇನ್‌ಕ್ಲೂಶನ್ ಲಿಮಿಟೆಡ್‌ (ಬಿಎಫ್‌ಐಎಲ್‌) ಸಂಸ್ಥೆಯ ಸೇಫ್‌ ಲಾಕರ್‌ನಲ್ಲಿದ್ದ ಚೆಕ್‌ಗಳನ್ನು ಮೇಲಾಧಿಕಾರಿಗಳ ಗಮನಕ್ಕೆ ಬಾರದಂತೆ ತೆಗೆದುಕೊಂಡು ₹5.50 ಲಕ್ಷ ಹಣವನ್ನು ಬಿಡಿಸಿಕೊಂಡು ದುರುಪಯೋಗಪಡಿಸಿಕೊಂಡ ಆರೋಪದಡಿ ಇಬ್ಬರು ಸಿಬ್ಬಂದಿ ವಿರುದ್ಧ...

Related Articles

ಆನ್‌ಲೈನ್ ಟ್ರೇಡಿಂಗ್ ಹೂಡಿಕೆ ಹೆಸರಿನಲ್ಲಿ ವಿದ್ಯಾರ್ಥಿನಿಗೆ ₹4.77 ಲಕ್ಷ ವಂಚನೆ

ಚಿಕ್ಕಮಗಳೂರು: ಆನ್‌ಲೈನ್ ಟ್ರೇಡಿಂಗ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಕೆಲವೇ ನಿಮಿಷಗಳಲ್ಲಿ ಭಾರಿ ಲಾಭ ನೀಡುವುದಾಗಿ ನಂಬಿಸಿ...

ಯುವತಿ ಮೇಲೆ ಅತ್ಯಾಚಾರ-ಕೊಲೆ ಬೆದರಿಕೆ ಆರೋಪ

ಚಿಕ್ಕಮಗಳೂರು: ಯುವತಿಗೆ ಅತ್ಯಾಚಾರ ಎಸಗಿದ ಆರೋಪ ಹಾಗೂ ಬಳಿಕ ಕೊಲೆ ಬೆದರಿಕೆ ಹಾಕಿದ ಆರೋಪದಡಿ ಪಂಚನಹಳ್ಳಿ...

ಮನೆಯ ಹಿಂಭಾಗದಲ್ಲಿ ಬೆಳೆದಿದ್ದ 12.250 ಕೆ.ಜಿ. ಹಸಿ ಗಾಂಜಾ ವಶ

ತರೀಕೆರೆ: ತಾಲ್ಲೂಕಿನ ಬೆಟ್ಟತಾವರೆಕೆರೆ ಗ್ರಾಮದ ನಿವಾಸಿ ದಿನೇಶ್ ಎಂಬುವವರು ತಮ್ಮ ಮನೆಯ ಹಿಂಭಾಗದಲ್ಲಿ ಬೆಳೆದಿದ್ದ ಸುಮಾರು...

ಪತ್ನಿ ಕೊಲೆ ಮಾಡಿದ ಗಂಡನಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು: ಪತ್ನಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ 1ನೇ ಹೆಚ್ಚುವರಿ ಜಿಲ್ಲಾ...