Home namma chikmagalur chikamagalur ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿಗೆ ಸೆ.6ಕ್ಕೆ ಲಿಖಿತ ಪರೀಕ್ಷೆ
chikamagalurHomeLatest Newsnamma chikmagalur

ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿಗೆ ಸೆ.6ಕ್ಕೆ ಲಿಖಿತ ಪರೀಕ್ಷೆ

Share
Share

ಚಿಕ್ಕಮಗಳೂರು : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಿಎಆರ್ ಹಾಗೂ ಡಿಎಆರ್ ವೃಂದದ ಒಟ್ಟು 1,600 ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ಸೆಪ್ಟೆಂಬರ್ 6ರಂದು ಲಿಖಿತ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ಚಿಕ್ಕಮಗಳೂರು ಜಿಲ್ಲಾಡಳಿತ ಬಿಗಿ ಮುಂಜಾಗ್ರತಾ ಕ್ರಮ ಕೈಗೊಂಡಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುತ್ತಿರುವ ಈ ಪರೀಕ್ಷೆಯು ಸೆಪ್ಟೆಂಬರ್ 6ರ ಭಾನುವಾರ ಬೆಳಿಗ್ಗೆ 10:30ರಿಂದ ಮಧ್ಯಾಹ್ನ 12:00ರವರೆಗೆ ನಗರದ ಮೂರು ಪ್ರಮುಖ ಕೇಂದ್ರಗಳಲ್ಲಿ ವ್ಯವಸ್ಥಿತವಾಗಿ ಆಯೋಜಿಸಲಾಗಿದೆ.

ಪರೀಕ್ಷೆಯ ಪಾವಿತ್ರತೆ, ಶಿಸ್ತು ಹಾಗೂ ಗೌಪ್ಯತೆಯನ್ನು ಕಾಪಾಡುವ ದೃಷ್ಟಿಯಿಂದ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅವರು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್) 2023ರ ಕಲಂ 163ರ ಅನ್ವಯ ನಿಷೇಧಾಜ್ಞೆ ಹೊರಡಿಸಿದ್ದಾರೆ.

ಈ ಆದೇಶದನ್ವಯ ಪರೀಕ್ಷಾ ದಿನದಂದು ಬೆಳಿಗ್ಗೆ 9:00 ಗಂಟೆಯಿಂದ ಮಧ್ಯಾಹ್ನ 3:00 ಗಂಟೆಯವರೆಗೆ ನಗರದ ಬೇಲೂರು ರಸ್ತೆಯ ಎಸ್.ಟಿ.ಜೆ. ಮಹಿಳಾ ಪಿಯು ಕಾಲೇಜು, ಸರ್ಕಾರಿ ಪದವಿಪೂರ್ವ ಕಾಲೇಜು ಹಾಗೂ ಬಸವನಹಳ್ಳಿಯ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಲಾಗಿದೆ.

ನಿರ್ಬಂಧಿತ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಕಡ್ಡಾಯವಾಗಿ ಮುಚ್ಚಲು ಸೂಚಿಸಲಾಗಿದ್ದು, ವ್ಯಾಪ್ತಿಯಲ್ಲಿ ಬರುವ ಶೈಕ್ಷಣಿಕ ಸಂಸ್ಥೆಗಳಲ್ಲಿ ಈ ಪರೀಕ್ಷೆಯನ್ನು ಹೊರತುಪಡಿಸಿ ಇತರೆ ಯಾವುದೇ ತರಗತಿ ಅಥವಾ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ.

ಅಲ್ಲದೆ, ಪರೀಕ್ಷಾರ್ಥಿಗಳು ಹಾಗೂ ಕರ್ತವ್ಯನಿರತ ಸಿಬ್ಬಂದಿಗೆ ಮೊಬೈಲ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ಒಯ್ಯುವುದಕ್ಕೆ ಸಂಪೂರ್ಣ ಕಡಿವಾಣ ಹಾಕಲಾಗಿದ್ದು, ಅಧಿಕೃತ ಗುರುತಿನ ಚೀಟಿ ಹೊಂದಿರುವವರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗುವುದು ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

Written exam for police constable recruitment on September 6

Share

Leave a comment

Leave a Reply

Your email address will not be published. Required fields are marked *

Don't Miss

ಚಿಕ್ಕಮಗಳೂರು ಜಿಲ್ಲಾಸ್ಪತ್ರೆ ವೈದ್ಯನ ಡಬಲ್ ಡ್ಯೂಟಿ.!

ಚಿಕ್ಕಮಗಳೂರು : ಸರ್ಕಾರದ ಬೊಕ್ಕಸದಿಂದ ಕೈತುಂಬಾ ಸಂಬಳ ಪಡೆಯುತ್ತಾ, ಕರ್ತವ್ಯದ ಸ್ಥಳದಲ್ಲಿ ರೋಗಿಗಳನ್ನು ಸತಾಯಿಸಿ ನೆರೆಯ ಕೇರಳದ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಗಂಭೀರ ಆರೋಪ...

ಶಾಸಕರುಗಳಿಗೆ ಅಧಿಕಾರದ ಹಠ-ರೈತರಿಗೆ ಬರಗಾಲದ ಭಯ

ಕಡೂರು ಬರಪೀಡಿತ ತಾಲೂಕು ಪಟ್ಟಿಯಿಂದ ಹೊರಕ್ಕೆ: ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ ಕಡೂರು: ಕಡೂರು ತಾಲ್ಲೂಕು ಪ್ರತಿ ವರ್ಷವೂ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದರೂ, ಪ್ರಸಕ್ತ ಸಾಲಿನ ಬರಪೀಡಿತ ತಾಲೂಕುಗಳ ಪಟ್ಟಿಯಿಂದ...

Related Articles

ಕಾಡಾನೆ-ಕಾಡುಕೋಣ ದಾಳಿಯಿಂದ ಭೀತಿಯಲ್ಲಿ ಕಾರ್ಮಿಕರು

ಮೂಡಿಗೆರೆ: ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು, ಬೆಳೆಗಾರರು ಹಾಗೂ ಕಾರ್ಮಿಕರು ಆತಂಕದಲ್ಲಿ ದಿನದೂಡುತ್ತಿದ್ದಾರೆ. ಒಂದೆಡೆ...

ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಹಪ್ರಾಧ್ಯಾಪಕರ ಹಾಜರಾತಿ ತಿದ್ದುಪಡಿ ಆರೋಪ

ಚಿಕ್ಕಮಗಳೂರು: ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (CIMS)ಯಲ್ಲಿ ಸಹಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಾ. ಗಣೇಶ್ ಪಿ....

ನೂತನ ಜಿಲ್ಲಾಡಳಿತ ಸಂಕೀರ್ಣ ಮಾರ್ಚ್-ಏಪ್ರಿಲ್ ವೇಳೆಗೆ ಲೋಕಾರ್ಪಣೆ

ಚಿಕ್ಕಮಗಳೂರು: ಕಾಫಿನಾಡಿನ ಸಮಗ್ರ ಅಭಿವೃದ್ಧಿ ನೀಲನಕ್ಷೆಯ ಭಾಗವಾಗಿ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ ನೂತನ ಜಿಲ್ಲಾಡಳಿತ ಸಂಕೀರ್ಣದ (ಡಿಸಿ...

ತರೀಕೆರೆಯಲ್ಲಿ ಖಾಸಗಿ ಬಸ್ ಏಜೆಂಟ್‌ರ ನಡುರಸ್ತೆಯಲ್ಲೇ ಪುಂಡಾಟ

ತರೀಕೆರೆ: ಸರ್ಕಾರಿ ಬಸ್ ಚಾಲಕನ ಮೇಲೆ ಖಾಸಗಿ ಬಸ್ ಏಜೆಂಟ್‌ಗಳು ನಡುರಸ್ತೆಯಲ್ಲೇ ಪುಂಡಾಟ ನಡೆಸಿ, ರಕ್ತ...