Home namma chikmagalur chikamagalur ಚಿಕ್ಕೊಳಲೆ ಸುತ್ತ ಕುರುಡು ಕಾಡುಕೋಣದ ಉಪಟಳ
chikamagalurHomeLatest Newsnamma chikmagalur

ಚಿಕ್ಕೊಳಲೆ ಸುತ್ತ ಕುರುಡು ಕಾಡುಕೋಣದ ಉಪಟಳ

Share
Share

ಚಿಕ್ಕಮಗಳೂರು: ನಗರದ ಸಮೀಪದ ಚಿಕ್ಕೊಳಲೆ ಸುತ್ತಮುತ್ತ ಹಲವು ದಿನಗಳಿಂದ ಕಣ್ಣು ಕಾಣದ ಕಾಡುಕೋಣವೊಂದು ಸುತ್ತಾಡುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಕಾಡುಕೋಣದ ಉಪಟಳದ ಬಗ್ಗೆ ಅರಣ್ಯ ಇಲಾಖೆಗೆ ಹಲವು ಬಾರಿ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾಡುಕೋಣಕ್ಕೆ ಕಣ್ಣು ಕಾಣದಿರುವುದರಿಂದ ಹಗಲು-ರಾತ್ರಿ ಎನ್ನದೆ ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಲೆದಾಡುತ್ತಿದೆ. ಇದುವರೆಗೆ ಯಾರಿಗೂ ಯಾವುದೇ ಹಾನಿ ಮಾಡಿಲ್ಲವಾದರೂ, ಅದರ ವಿಚಿತ್ರ ವರ್ತನೆ ಜನರಲ್ಲಿ ಆತಂಕ ಮೂಡಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಕಣ್ಣು ಕಾಣದ ಕಾರಣ ಕಾಡುಕೋಣವು ಕೆಲವೊಮ್ಮೆ ಗೋಡೆಗಳಿಗೆ ಡಿಕ್ಕಿ ಹೊಡೆಯುತ್ತಿದ್ದು, ಬೇಲಿ ಹಾಗೂ ಮೆಳೆಗಳ ಮೇಲೆ ನುಗ್ಗುತ್ತಿದೆ. ಇದರಿಂದ ಸಾರ್ವಜನಿಕರು ಅದರ ಸಮೀಪ ಹೋಗಲು ಭಯಪಡುವಂತಾಗಿದೆ. ಅಲ್ಲದೆ, ಗ್ರಾಮದ ಮಿನಿ ವಾಟರ್ ಸಪ್ಲೈ ಘಟಕದ ಸಮೀಪವೇ ಆಗಾಗ್ಗೆ ನಿಲ್ಲುತ್ತಿರುವುದರಿಂದ ಕುಡಿಯುವ ನೀರು ಪಡೆಯಲು ಗ್ರಾಮಸ್ಥರಿಗೆ ತೊಂದರೆಯಾಗುತ್ತಿದೆ ಎಂದು ದೂರಿದ್ದಾರೆ.

ಕಾಡುಕೋಣದ ಚಲನವಲನವನ್ನು ಸ್ಥಳೀಯರು ವಿಡಿಯೋ ಮಾಡಿ ಅರಣ್ಯ ಇಲಾಖೆಗೆ ಕಳುಹಿಸಿ ಸಮಸ್ಯೆ ಬಗ್ಗೆ ಗಮನ ಸೆಳೆದಿದ್ದರೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಕೂಡಲೇ ಕಾರ್ಯಾಚರಣೆ ನಡೆಸಿ ಕಾಡುಕೋಣವನ್ನು ಸುರಕ್ಷಿತವಾಗಿ ಸೆರೆಹಿಡಿದು, ಪಶುವೈದ್ಯರಿಂದ ಚಿಕಿತ್ಸೆ ಕೊಡಿಸಬೇಕು. ಆ ಮೂಲಕ ಕಾಡುಕೋಣಕ್ಕೂ ರಕ್ಷಣೆ ಒದಗಿಸುವುದರ ಜೊತೆಗೆ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ಹಾಗೂ ಆತಂಕವನ್ನು ನಿವಾರಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Around the small pipe is a blind forest floor

Share

Leave a comment

Leave a Reply

Your email address will not be published. Required fields are marked *

Don't Miss

‘ರಾಷ್ಟ್ರದ ಸುರಕ್ಷತೆಗಾಗಿ ಎಲ್ಲರೂ ಒಂದಾಗಬೇಕು’

ಚಿಕ್ಕಮಗಳೂರು: ರಾಷ್ಟ್ರದ ಸುರಕ್ಷತೆ ಹಾಗೂ ದೇಶದ ಹಿತಾಸಕ್ತಿಗಾಗಿ ವೈಯಕ್ತಿಕ ಮತ್ತು ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಎಲ್ಲರೂ ಒಂದಾಗಬೇಕು ಎಂದು ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಕರೆ ನೀಡಿದರು. ನಗರದಲ್ಲಿ ಸೋಮವಾರ ಟಿಪ್ಪು...

ಆರೋಪಿಯಿಂದ ₹11.30 ಲಕ್ಷ ಮೌಲ್ಯದ 71 ಗ್ರಾಂ ಚಿನ್ನಾಭರಣ ವಶ

ಎನ್.ಆ‌ರ್. ಪುರ: ಮನೆಯ ಹಂಚು ತೆಗೆದು ಒಳನುಗ್ಗಿ, ಮಲಗಿದ್ದ ಮಹಿಳೆಯ ಕೊರಳಿನಿಂದ ಮಾಂಗಲ್ಯ ಸರ ಎಗರಿಸಿದ್ದ ಆರೋಪಿಯನ್ನು ಎನ್.ಆ‌ರ್.ಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ₹11.30 ಲಕ್ಷ ಮೌಲ್ಯದ 71 ಗ್ರಾಂ...

Related Articles

ಜನರ ಗಮನ ಸೆಳೆದ ಪ್ರಾಜೆಕ್ಟ್ ಪಂಚತಂತ್ರ ನಾಟಕ

ಚಿಕ್ಕಮಗಳೂರು: ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಿಂದ ನಗರದ ಕುವೆಂಪು ಕಲಾಮಂದಿರದಲ್ಲಿ ನಡೆದ ಪ್ರಾಜೆಕ್ಟ್ ಪಂಚತಂತ್ರ ನಾಟಕ...

ತುಂಗಾನದಿಯಲ್ಲಿ ಕಾಲು ಜಾರಿ ಬಿದ್ದು ಪ್ರಾಣ ಯವಕನ ಸಾವು

ಶೃಂಗೇರಿ : ನದಿಯ ಸೌಂದರ್ಯವನ್ನು ಕ್ಯಾಮೆರಾದಲ್ಲಿ ಸೆರಹಿಡಿಯಲು ಹೋದ ಯುವಕನೊಬ್ಬ ಕಾಲು ಜಾರಿ ನದಿಗೆ ಬಿದ್ದು...

ಪ್ರವಾಸೋದ್ಯಮ ತಾಣಗಳಿಗೆ ಮೂಲಸೌಕರ್ಯಕ್ಕೆ ಆಗ್ರಹಿಸಿ ಕರವೇ ಧರಣಿ

ಚಿಕ್ಕಮಗಳೂರು:  ಮಲೆನಾಡಿನ ಪಶ್ಚಿಮ ಘಟ್ಟ ಪ್ರವಾಸೋದ್ಯಮದ ಹಲವಾರು ಸಮಸ್ಯೆಗಳ ನ್ನು ಪರಿಹರಿಸುವಲ್ಲಿ ವಿಫಲವಾಗಿರುವ ಜಿಲ್ಲಾಡಳಿತ ವಿರುದ್ಧ...

ಮಲ್ಲೇಗೌಡ ಆಸ್ಪತ್ರೆ ಆರೋಗ್ಯ ಸೇವೆ ಬಲಪಡಿಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ನಗರದ ಮಲ್ಲೇಗೌಡ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅವರು ಸೋಮವಾರ...