Home namma chikmagalur chikamagalur ಪ್ರವಾಸೋದ್ಯಮ ತಾಣಗಳಿಗೆ ಮೂಲಸೌಕರ್ಯಕ್ಕೆ ಆಗ್ರಹಿಸಿ ಕರವೇ ಧರಣಿ
chikamagalurHomeLatest Newsnamma chikmagalur

ಪ್ರವಾಸೋದ್ಯಮ ತಾಣಗಳಿಗೆ ಮೂಲಸೌಕರ್ಯಕ್ಕೆ ಆಗ್ರಹಿಸಿ ಕರವೇ ಧರಣಿ

Share
Share

ಚಿಕ್ಕಮಗಳೂರು:  ಮಲೆನಾಡಿನ ಪಶ್ಚಿಮ ಘಟ್ಟ ಪ್ರವಾಸೋದ್ಯಮದ ಹಲವಾರು ಸಮಸ್ಯೆಗಳ ನ್ನು ಪರಿಹರಿಸುವಲ್ಲಿ ವಿಫಲವಾಗಿರುವ ಜಿಲ್ಲಾಡಳಿತ ವಿರುದ್ಧ ಸೋಮವಾರ ಜಿಲ್ಲಾ ಕರವೇ (ಶಿವರಾಮೇ ಗೌಡ ಬಣ) ಮುಖಂಡರುಗಳು ಅರೆಬೆತ್ತಲಾಗಿ, ಬಾಯಿಗೆ ಕಪ್ಪುಪಟ್ಟಿ ಕಟ್ಟಿಕೊಂಡು, ಜಿಲ್ಲಾಡಳಿತ ಕಾಣಿಕೆ ಹು ಂಡಿ ತಯಾರಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.

ಈ ಕುರಿತು ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ಅಗ್ನಿ ಸುಮಂತ್ ಮುಳ್ಳಯ್ಯನಗಿರಿ, ಸೀತಾಳಯ್ಯಗಿರಿ, ಗಾಳಿಕೆರೆ ಹಾಗೂ ದತ್ತಪೀಠ ಪ್ರವಾಸಿ ತಾಣಗಳಿಗೆ ದೇಶ-ವಿದೇಶಗಳಿಗೆ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿ ಗರು ಬೇಟಿ ನೀಡುತ್ತಿದ್ದು, ಆದರೆ ಜಿಲ್ಲಾಡಳಿತ ಮೂಲಸೌಕರ್ಯ ಒದಗಿಸುತ್ತಿಲ್ಲ ಎಂದು ಆರೋಪಿಸಿದರು.

ಗಿರಿರಸ್ತೆ ಭಾಗದಲ್ಲಿ ತಡೆಗೋಡೆ ನಿರ್ಮಿಸಿಲ್ಲ, ಸುಲಭ ಶೌಚಾಲಯವಿಲ್ಲ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯಿಲ್ಲ. ಅಲ್ಲದೇ ಫಾಲ್ಸ್‌ಗಳಲ್ಲಿ ಹೆಣ್ಣು ಮಕ್ಕಳು ವಸ್ತ್ರ ಬದಲಿಸಲು ಸೂಕ್ತ ಕೊಠಡಿಗಳ ವ್ಯವಸ್ಥೆಯು ಇಲ್ಲ ದಂತಾಗಿದೆ. ಈ ಬಗ್ಗೆ ಕಳೆದ ಬಾರಿ ಜಿಲ್ಲಾಡಳಿತಕ್ಕೆ ದೂರು ನೀಡಲಾಗಿತ್ತು. ಆದರೆ ನಿರ್ಲಕ್ಷಿಸಿದ ಕಾರಣ ಇಂ ದು ಸಾಂಕೇತಿಕ ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು.

ಗಿರಿಭಾಗದಲ್ಲಿ ಪ್ರವಾಸಿಗರು ಸೇರಿದಂತೆ ಸ್ಥಳೀಯರಿಗೆ ಹಲವು ಸಮಸ್ಯೆ ಉಂಟಾಗುತ್ತಿದೆ. ಈ ಸಂಬಂಧ ಅನೇಕ ಬಾರಿ ಸಂಘಟನೆ ಮತ್ತು ಸಾರ್ವಜನಿಕರು ಅಧಿಕಾರಿಗಳ ಗಮನಕ್ಕೆ ತಂದರೂ ಇದುವರೆಗೂ ಯಾವು ದೇ ಪ್ರಯೋಜನವಾಗಿಲ್ಲ. ಪರಿಹಾರವು ಸಿಕ್ಕಿರುವುದಿಲ್ಲ ಎಂದು ದೂರಿದರು.

ಪ್ರವಾಸಿ ತಾಣಕ್ಕೆ ತೆರಳಲು ಮೊದಲೇ ಬುಕ್ಕಿಂಗ್ ಮಾಡಿ ಇಂತಿಷ್ಟು ಹಣ ನಿಗಧಿಪಡಿಸಿದೆ. ಆದರೆ ಅಲ್ಲಿ ನ ಚೆಕ್‌ಪೋಸ್ಟ್ ಸಿಬ್ಬಂದಿಗಳು ನಿಗಧಿತ ಮೊತ್ತಕ್ಕಿಂತ ಹೆಚ್ಚು ವಸೂಲಿ ಮಾಡಿ ವಾಹನಗಳನ್ನು ಬಿಡಲಾಗು ತ್ತಿದೆ. ಅಲ್ಲದೇ ಪ್ರವಾಸಿಗರನ್ನು ಪಿಕಪ್ ಮತ್ತು ಇತರೆ ವಾಹನಗಳು ಗಿರಿಭಾಗಕ್ಕೆ ಯಾವುದೇ ಸುರಕ್ಷತೆಯಿಲ್ಲದೇ ಕೊಂಡೊಯ್ಯುತ್ತಿದ್ದಾರೆ ಎಂದು ತಿಳಿಸಿದರು.

ಕಿರಿದಾದ ರಸ್ತೆಗಳಲ್ಲಿ ಪ್ರವಾಸಿಗರನ್ನು ಕರೆತರುವ ವಾಹನಗಳಿಂದ ವಿಪರೀತ ವಾಹನ ದಟ್ಟಣೆ ಉಂಟಾ ಗುತ್ತಿದೆ. ಈ ಪ್ರದೇಶದಲ್ಲಿ ಅನೇಕ ಧಾರ್ಮಿಕ ಕ್ಷೇತ್ರಗಳಿವೆ. ಇವುಗಳಿಗೆ ಸ್ಥಳೀಯರು ಕೂಡಾ ಹಲವಾರು ವ ರ್ಷಗಳಿಂದ ಭಾಗವಹಿಸುತ್ತಿದ್ದು ಸ್ಥಳೀಯರಿಗೂ ಚೆಕ್‌ಪೋಸ್ಟ್‌ಗಳಲ್ಲಿ ಶುಲ್ಕ ವಿಧಿಸದೇ ಪ್ರವೇಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಕೂಡಲೇ ಜಿಲ್ಲಾಡಳಿತ ಪ್ರಮುಖ ಬೇಡಿಕೆ ಈಡೇರಿಸುವಲ್ಲಿ ವಿಫಲರಾದರೆ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಟೋಲ್ ಸೇರಿದಂತೆ ಅಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಸಿದರು. ಈ ಸಂದರ್ಭ ದಲ್ಲಿ ಕರವೇ ಜಿಲ್ಲಾ ಖಜಾಂಚಿ ನವೀನ್, ಕರವೇ ತಾ.ಅಧ್ಯಕ್ಷ ತೇಜಸ್‌ನಾಯ್ಕ್, ಮುಖಂಡರಾದ ಭಾರ್ಗವ್, ಅಭಿ, ವಿವೇಕ್‌ಶೆಟ್ಟಿ, ಲಿಖಿನ್, ವರುಣ್, ಜೋಶ್ವಾ, ಮಣಿ, ಶಕ್ತಿ, ನಿತಿನ್ ಮುಂತಾದವರು ಉಪಸ್ಥಿತರಿದ್ದರು.

Karave Dharani demanding infrastructure for tourism destinations

Share

Leave a comment

Leave a Reply

Your email address will not be published. Required fields are marked *

Don't Miss

‘ರಾಷ್ಟ್ರದ ಸುರಕ್ಷತೆಗಾಗಿ ಎಲ್ಲರೂ ಒಂದಾಗಬೇಕು’

ಚಿಕ್ಕಮಗಳೂರು: ರಾಷ್ಟ್ರದ ಸುರಕ್ಷತೆ ಹಾಗೂ ದೇಶದ ಹಿತಾಸಕ್ತಿಗಾಗಿ ವೈಯಕ್ತಿಕ ಮತ್ತು ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಎಲ್ಲರೂ ಒಂದಾಗಬೇಕು ಎಂದು ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಕರೆ ನೀಡಿದರು. ನಗರದಲ್ಲಿ ಸೋಮವಾರ ಟಿಪ್ಪು...

ಆರೋಪಿಯಿಂದ ₹11.30 ಲಕ್ಷ ಮೌಲ್ಯದ 71 ಗ್ರಾಂ ಚಿನ್ನಾಭರಣ ವಶ

ಎನ್.ಆ‌ರ್. ಪುರ: ಮನೆಯ ಹಂಚು ತೆಗೆದು ಒಳನುಗ್ಗಿ, ಮಲಗಿದ್ದ ಮಹಿಳೆಯ ಕೊರಳಿನಿಂದ ಮಾಂಗಲ್ಯ ಸರ ಎಗರಿಸಿದ್ದ ಆರೋಪಿಯನ್ನು ಎನ್.ಆ‌ರ್.ಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ₹11.30 ಲಕ್ಷ ಮೌಲ್ಯದ 71 ಗ್ರಾಂ...

Related Articles

ಜನರ ಗಮನ ಸೆಳೆದ ಪ್ರಾಜೆಕ್ಟ್ ಪಂಚತಂತ್ರ ನಾಟಕ

ಚಿಕ್ಕಮಗಳೂರು: ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಿಂದ ನಗರದ ಕುವೆಂಪು ಕಲಾಮಂದಿರದಲ್ಲಿ ನಡೆದ ಪ್ರಾಜೆಕ್ಟ್ ಪಂಚತಂತ್ರ ನಾಟಕ...

ತುಂಗಾನದಿಯಲ್ಲಿ ಕಾಲು ಜಾರಿ ಬಿದ್ದು ಪ್ರಾಣ ಯವಕನ ಸಾವು

ಶೃಂಗೇರಿ : ನದಿಯ ಸೌಂದರ್ಯವನ್ನು ಕ್ಯಾಮೆರಾದಲ್ಲಿ ಸೆರಹಿಡಿಯಲು ಹೋದ ಯುವಕನೊಬ್ಬ ಕಾಲು ಜಾರಿ ನದಿಗೆ ಬಿದ್ದು...

ಮಲ್ಲೇಗೌಡ ಆಸ್ಪತ್ರೆ ಆರೋಗ್ಯ ಸೇವೆ ಬಲಪಡಿಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ನಗರದ ಮಲ್ಲೇಗೌಡ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅವರು ಸೋಮವಾರ...

ನೂತನ ಪಶ್ಚಿಮ ವಲಯ ಡಿಐಜಿ ಆರ್. ಚೇತನ್ ಭೇಟಿ

ಚಿಕ್ಕಮಗಳೂರು: ನೂತನ ಪಶ್ಚಿಮ ವಲಯದ ಪೊಲೀಸ್ ಉಪ ಮಹಾ ನಿರೀಕ್ಷಕರಾಗಿ (ಡಿಐಜಿ) ಅಧಿಕಾರ ವಹಿಸಿಕೊಂಡಿರುವ ಆರ್....